RSS ನಿರ್ಬಂಧ ಯತ್ನಕ್ಕೆ ಹಿನ್ನಡೆ; ಹೈಕೋರ್ಟ್ ಆದೇಶದಿಂದ ಸ್ವಯಂಸೇವಕರು ಖುಷ್

ಬೆಂಗಳೂರು: RSS ಮೇಲೆ ನಿರ್ಬಂಧ ವಿಧಿಸುವ ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಹೈಕೋರ್ಟ್ ಆಘಾತ ನೀಡಿದೆ. ಸಾರ್ವಜನಿಕ ಸ್ಥಳಗಳಲ್ಲಿ ಮತ್ತು ಸರ್ಕಾರಿ ಜಾಗಗಳಲ್ಲಿ ಚಟುವಟಿಕೆಗಳನ್ನು ನಿರ್ಬಂಧಿಸಿ ಸರ್ಕಾರ ಹೊರಡಿಸಿದ್ದ ಆದೇಶ ಆದೇಶಕ್ಕೆ ಹೈಕೋರ್ಟ್​ ತಡೆ ನೀಡಿದೆ.ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಪೀಠ ಮಂಗಳವಾರ ಮಧ್ಯಂತರ ತಡೆಯಾಜ್ಞೆ ನೀಡಿದೆ. ಸರ್ಕಾರದ ಆದೇಶ ಪ್ರಶ್ನಿಸಿ ಹೈಕೋರ್ಟ್​ನ ಧಾರವಾಡ ಪೀಠಕ್ಕೆ ಸಲ್ಲಿಸಲಾಗಿದ್ದ ದಾವೆ ಕುರಿತಂತೆ ವಿಚಾರಣೆ ನಡೆಸಿದ ನ್ಯಾ.ಎಂ. ನಾಗಪ್ರಸನ್ನ ಅವರಿದ್ದ ಪೀಠ ರಾಜ್ಯ ಸರ್ಕಾರ, ಗೃಹ ಇಲಾಖೆ, ಹುಬ್ಭಳ್ಳಿ ಕಮಿಷನರ್​ಗೆ ನೋಟಿಸ್ ನೀಡಿದೆ. ಅಕ್ಟೋಬರ್18 ರಂದು ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿತ್ತು. ರಸ್ತೆ, ಪಾರ್ಕ್, ಮೈದಾನ, ಕೆರೆ ಇತ್ಯಾದಿಗಳ ಪ್ರವೇಶಕ್ಕೆ ನಿರ್ಬಂಧ ವಿಧಿಸಿ ಹೊರಡಿಸಲಾಗಿದ್ದ ಆದೇಶವೂ RSS ನ ಶತಾಬ್ದಿ ಪಥಸಂಚಲನಕ್ಕೂ ಅಡ್ಡಿಯಾಗಿತ್ತು. ಈ ಆದೇಶ ಮೂಲಕ ಸಂವಿಧಾನದ ಆರ್ಟಿಕಲ್ 19 (1)A, B, ನೀಡಿರುವ ಹಕ್ಕನ್ನು…

ಕೇಂದ್ರ ಉಕ್ಕಿನ ಸಚಿವರ ಕ್ಷೇತ್ರದಲ್ಲೇ ಕಾಂಗ್ರೆಸ್ ಇತಿಹಾಸ ಸೃಷ್ಟಿಸಿದೆ: ಚೆಲುವರಾಯಸ್ವಾಮಿ

ಬೆಂಗಳೂರು: ಕೇಂದ್ರದ ಉಕ್ಕಿನ ಸಚಿವರ ಕ್ಷೇತ್ರದಲ್ಲಿ ಇತಿಹಾಸದಲ್ಲೇ ಮೊದಲ ಬಾರಿಗೆ ಡಿ.ಸಿ ಸಿ ಬ್ಯಾಂಕ್ ಚುನಾವಣೆಯಲ್ಲಿ 8 ಜನ ಕಾಂಗ್ರೆಸ್ ಬೆಂಬಲ 8 ಪ್ರತಿನಿಧಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಎನ್ ಚೆಲುವರಾಯಸ್ವಾಮಿ ಅವರು ಹೇಳಿದ್ದಾರೆ. ಸರ್ ಎಂ ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಪತ್ರಕರ್ತರ ಜೊತೆ ಮಾತನಾಡಿದ ಅವರು ಜಿಲ್ಲೆಯಲ್ಲಿ ಜೆ ಡಿಎಸ್ ಪಕ್ಷದವರು ಚೇಸ್ಟೆ ಬಿಟ್ಟು ಸೋಲು-ಗೆಲುವನ್ನ ಸಮವಾಗಿ ತೆಗೆದುಕೊಳ್ಳಬೇಕು. ಇಂದು ಕಾಂಗ್ರೆಸ್ ಬೆಂಬಲಿತ ಮತ್ತೋಬ್ಬ ಪ್ರತಿನಿಧಿ ಆಯ್ಕೆಯಾಗುವ ಸಾಧ್ಯತೆ ಇದೆ, ಉಳಿದ 3 ಸ್ಥಾನಕ್ಕೆ ಚುನಾವಣೆ ನಡೆಯಲಿದೆ. ಶಾಸಕರು, ಪಕ್ಷದ ಮುಖಂಡರು ಜವಾಬ್ದಾರಿ ತೆಗೆದುಕೊಂಡು ಚುನಾವಣೆ ಮಾಡಿದ್ದಾರೆ ಎಂದು ಹೇಳಿದರು. ಸಹಕಾರ ಕ್ಷೇತ್ರದ ಪರಿಕಲ್ಪನೆ ಕಟ್ಟಿದ್ದು ಶಂಕರೇಗೌಡರು, ನಾನು ಸಹ ಸಹಕಾರ ಕ್ಷೇತ್ರದಿಂದ ಬಂದಿಲ್ಲ ಸ್ಥಳಿಯ ಪಂಚಾಯತ್ ನಿಂದ ಬಂದವನು, ಸಹಕಾರ ಕ್ಷೇತ್ರ ಸಾರ್ವಜನಿಕರಿಗೆ ಅತ್ತಿರವಾಗಿದೆ ಎಂದು ತಿಳಿಸಿದರು. ನಮ್ಮ ಗೆಲುವಿಗೆ ಕಾರಣರಾದ ಕಾಂಗ್ರೆಸ್ ಕಾರ್ಯಕರ್ತರಿಗೆ ಶಕ್ತಿ…