‘ಪ್ರತಿ ಕುಟುಂಬಕ್ಕೂ ಸರ್ಕಾರಿ ನೌಕರಿ’; ಇಂಡಿಯಾ ಬ್ಲಾಕ್ ಪ್ರಣಾಳಿಕೆಯಲ್ಲಿ ಭರವಸೆಯ ಹೊಳೆ

ಪಾಟ್ನಾ: ಬಿಹಾರ ವಿಧಾನಸಭಾ ಚುನಾವಣೆಗೆ ಸಜ್ಜಾಗುತ್ತಿರುವ ವಿರೋಧ ಪಕ್ಷಗಳ ಮೈತ್ರಿಕೂಟ ಇಂಡಿಯಾ ಬ್ಲಾಕ್ (ಮಹಾಘಟಬಂಧನ್) ಮಂಗಳವಾರ ತನ್ನ ಚುನಾವಣಾ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ. ‘ಬಿಹಾರ್ ಕಾ ತೇಜಸ್ವಿ ಪ್ರಾಣ್’ ಎಂಬ ಶೀರ್ಷಿಕೆಯೊಂದಿಗೆ ಪ್ರಕಟವಾದ ಈ ಪ್ರಣಾಳಿಕೆಯಲ್ಲಿ ಉದ್ಯೋಗ, ಹಳೆಯ ಪಿಂಚಣಿ ಯೋಜನೆ, ಮತ್ತು ಸಾಮಾಜಿಕ ಭದ್ರತೆಗೆ ಸಂಬಂಧಿಸಿದ ಹಲವು ಮಹತ್ವದ ಭರವಸೆಗಳಿವೆ. ಮಹಾಘಟಬಂಧನ್‌ನ ಮುಖ್ಯಮಂತ್ರಿ ಅಭ್ಯರ್ಥಿ ಹಾಗೂ ಆರ್‌ಜೆಡಿ ನಾಯಕ ತೇಜಸ್ವಿ ಯಾದವ್, ಪ್ರಣಾಳಿಕೆಯನ್ನು ಬಿಡುಗಡೆ ಮಾಡಿ, ರಾಜ್ಯದ ಪ್ರತೀ ಕುಟುಂಬದ ಕನಿಷ್ಠ ಒಬ್ಬ ಸದಸ್ಯನಿಗೆ ಸರ್ಕಾರಿ ಉದ್ಯೋಗ ನೀಡುವುದು ತಮ್ಮ ಸರ್ಕಾರದ ಮೊದಲ ಆದ್ಯತೆಯಾಗಿರುವುದಾಗಿ ಹೇಳಿದರು. “ನಾವು ಬಿಹಾರದಲ್ಲಿ ಕೇವಲ ಸರ್ಕಾರವನ್ನೇ ರಚಿಸುವುದಲ್ಲ, ಹೊಸ ಬಿಹಾರವನ್ನೂ ನಿರ್ಮಿಸಬೇಕೆಂದು ಬದ್ಧರಾಗಿದ್ದೇವೆ,” ಎಂದು ತೇಜಸ್ವಿ ಸ್ಪಷ್ಟಪಡಿಸಿದರು. ಇಂಡಿಯಾ ಬ್ಲಾಕ್ ಅಧಿಕಾರಕ್ಕೆ ಬಂದರೆ, 20 ತಿಂಗಳೊಳಗೆ ಈ ಉದ್ಯೋಗ ಯೋಜನೆ ರಾಜ್ಯದಾದ್ಯಂತ ಜಾರಿಗೆ ಬರಲಿದೆ. ಪ್ರಣಾಳಿಕೆಯಲ್ಲಿ ಹಳೆಯ ಪಿಂಚಣಿ ಯೋಜನೆಯನ್ನು…