ಬೆಂಗಳೂರು: ಯಾವುದೇ ಜಾತಿಗಳಿಗೂ ರೋಸ್ಟರ್ನಲ್ಲಿ ಅನ್ಯಾಯವಾಗದಂತೆ ಖಾತ್ರಿಪಡಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧದಲ್ಲಿ ನಡೆದ ಸಭೆಯಲ್ಲಿ ಪರಿಶಿಷ್ಟ ಜಾತಿ ಒಳ ಮೀಸಲಾತಿಯ ಅನುಷ್ಠಾನದ ಕುರಿತಂತೆ ಚರ್ಚೆ ನಡೆದಿದೆ. ಒಳ ಮೀಸಲಾತಿ ಕುರಿತಾಗಿ ಸಚಿವ ಸಂಪುಟ ಸಭೆಯ ತೀರ್ಮಾನಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಲು ಕ್ರಮ ಕೈಗೊಳ್ಳಬೇಕು. ರೋಸ್ಟರ್ ಜಾರಿ ಕುರಿತಾಗಿ ಎಲ್ಲರ ಅಹವಾಲುಗಳನ್ನು ಆಲಿಸಬೇಕು. ಯಾವುದೇ ಜಾತಿಗಳಿಗೂ ರೋಸ್ಟರ್ನಲ್ಲಿ ಅನ್ಯಾಯವಾಗದಂತೆ ಖಾತ್ರಿಪಡಿಸಬೇಕು ಎಂದು ಸಿಎಂ ಅವರು ಅಧಿಕಾರಿಗಳಿಗೆ ಸೂಚಿಸಿದರು. ಜಾತಿ ಪ್ರಮಾಣ ಪತ್ರ ಯಾವ ರೀತಿಯಲ್ಲಿ ನೀಡಬೇಕು ಎಂಬ ಕುರಿತು ವಿವರವಾದ ಮಾರ್ಗಸೂಚಿಯನ್ನು ಬಿಡುಗಡೆಗೊಳಿಸಲಾಗಿದೆ. ನೇಮಕಾತಿಗೆ ಇದ್ದ ನಿರ್ಬಂಧವನ್ನು ತೆರವುಗೊಳಿಸಿದ ಬಳಿಕ ಅಭ್ಯರ್ಥಿಗಳ ವಯೋಮಿತಿಯನ್ನು ಒಂದು ಅವಧಿಗೆ ಹೆಚ್ಚಳ ಮಾಡಲಾಗಿದೆ. ಕೆಇಎಯಲ್ಲಿ ಈಗಾಗಲೇ ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ ಎಂದವರು ತಿಳಿಸಿದರು. ಒಳ ಮೀಸಲಾತಿ ಜಾರಿ ಕುರಿತಾಗಿ ಸುಪ್ರೀಂಕೋರ್ಟ್ ನಿರ್ದೇಶನಗಳ ಪ್ರಕಾರ…
Day: October 30, 2025
ಹಿಂಗಾರು ಹಂಗಾಮಿಗೆ ರಸಗೊಬ್ಬರದ ಕೊರತೆ ಇಲ್ಲ: ಚಲುವರಾಯಸ್ವಾಮಿ
ಬೆಂಗಳೂರು: ಪ್ರಸಕ್ತ ಸಾಲಿನ ಹಿಂಗಾರು ಹಂಗಾಮಿಗೆ ಬೇಡಿಕೆಗೆ ಅನುಗುಣವಾಗಿ ರಸಗೊಬ್ಬರ ದಾಸ್ತಾನಿದ್ದು, ರೈತರಿಗೆ ಅನಾನುಕೂಲವಾಗದಂತೆ ರಸಗೊಬ್ಬರ ವಿತರಣೆ ಮಾಡುವಂತೆ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ತಿಳಿಸಿದ್ದಾರೆ. ವಿಕಾಸಸೌಧದ ಸಮಿತಿ ಕೊಠಡಿಯಲ್ಲಿ ಬುಧವಾರ ಕೃಷಿ ಇಲಾಖೆ, ಜಲಾನಯನ ಅಭಿವೃದ್ಧಿ ಇಲಾಖೆ ಹಾಗು 5 ಕೃಷಿ ವಿಶ್ವವಿದ್ಯಾನಿಲಯಗಳ ಕುಲಪತಿಗಳೊಂದಿಗೆ ಪ್ರಗತಿ ಪರಿಶೀಲನೆ ನಡೆಸಿದ ಸಚಿವರು, ಸರ್ಕಾರದ ಆಶಯವನ್ನು ಅರಿತು ರೈತಾಪಿ ವರ್ಗದ ಶ್ರೇಯೋಭಿವೃದ್ಧಿಗೆ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಶ್ರಮಿಸಬೇಕು ಎಂದು ಕರೆ ನೀಡಿದರು. ಕರ್ನಾಟಕದಲ್ಲಿ ಕೃಷಿ ಬಹುಜನರ ಪ್ರಧಾನ ಕಾಯಕ, ಈ ಕ್ಷೇತ್ರದಲ್ಲಿ ತೊಡಗಿದ ರೈತರು ಹಾಗೂ ಕೃಷಿ ಕಾರ್ಮಿಕರ ಹಿತ ಕಾಯುವುದು ಸರ್ಕಾರ ಹಾಗೂ ಇಲಾಖೆಯ ಜವಾಬ್ದಾರಿ ಅವರನ್ನು ಅಲೆದಾಡಿಸದೆ ಮನೆ ಬಾಗಿಲಿಗೆ ಯೋಜನೆಗಳ ಫಲ ತಲುಪಿಸಿ ಎಂದು ಸಚಿವರು ನಿರ್ದೇಶನ ನೀಡಿದರು. ರಾಜ್ಯದಲ್ಲಿ ಕೃಷಿ ಬಹುತೇಕ ಮಳೆಯಾಶ್ರಿತವಾಗಿದೆ. ಹಾಗಾಗಿ ಬೆಳೆ ವಿಮೆ ಬಗ್ಗೆ ಹೆಚ್ಚಿನ ಅರಿವು ಮೂಡಿಸಿ ಎಲ್ಲಾ…
ಜಬಲ್ಪುರದಲ್ಲಿ RSS ಅಖಿಲ ಭಾರತೀಯ ಕಾರ್ಯಕಾರಿಣಿ ಬೈಠಕ್; ಹಿರಿಯರ ರಣತಂತ್ರ
ಜಬಲ್ಪುರ: ಜಬಲ್ಪುರ ಜಿಲ್ಲೆಯಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಅಖಿಲ ಭಾರತೀಯ ಕಾರ್ಯಕಾರಿ ಮಂಡಲಿಯ ವಾರ್ಷಿಕ ಸಭೆ ಆಯೋಜಿತವಾಗಿದೆ. ಈ ಸಭೆಯು ಅಕ್ಟೋಬರ್ 30 ರಿಂದ ನವೆಂಬರ್ 1, 2025 ರವರೆಗೆ ನಡೆಯಲಿದೆ. ಸಂಘದ ದೃಷ್ಟಿಕೋನದಿಂದ, ಭಾರತದ 46 ಪ್ರಾಂತಗಳಿಂದ 407 ಕಾರ್ಯಕರ್ತರು ಸಭೆಯಲ್ಲಿ ಭಾಗವಹಿಸುವ ನಿರೀಕ್ಷೆಯಿದೆ. ಸಭೆಯಲ್ಲಿ, ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಸಂಘಚಾಲಕ ಡಾ. ಮೋಹನ್ ಭಾಗವತ್, ಸರಕಾರ್ಯವಾಹ ದತ್ತಾತ್ರೇಯ ಹೊಸಬಾಳೆ ಮತ್ತು 06 ಮಂದಿ ಸಹ-ಸರಕಾರ್ಯವಾಹರು ಸೇರಿದಂತೆ ಅಖಿಲ ಭಾರತೀಯ ಕಾರ್ಯಕಾರಿಣಿ ಸಹಿತ 11 ಕ್ಷೇತ್ರಗಳ ಹಾಗೂ 46 ಪ್ರಾಂತಗಳ ಸಂಘಚಾಲಕರು, ಕಾರ್ಯವಾಹರು ಮತ್ತು ಪ್ರಚಾರಕರು ಉಪಸ್ಥಿತರಿರುತ್ತಾರೆ. ಈ ಕುರಿತಂತೆ ಕಚ್ನಾರ್ ನಗರದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ನೀಡಿದ ರಾಷ್ಟ್ರೀಯ ಸ್ವಯಂಸೇವಕ ಸಂಘದ ಅಖಿಲ ಭಾರತೀಯ ಪ್ರಚಾರ ಪ್ರಮುಖ್ ಸುನಿಲ್ ಅಂಬೇಕರ್, ದೇಶದ ವಿವಿಧೆಡೆಯಿಂದ ಪ್ರಮುಖರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು. ಅಕ್ಟೋಬರ್ 2, 2025 ರಂದು…
