ಜಬಲ್ಪುರದಲ್ಲಿ RSS ಅಖಿಲ ಭಾರತೀಯ ಕಾರ್ಯಕಾರಿಣಿ ಬೈಠಕ್; ಹಿರಿಯರ ರಣತಂತ್ರ

ಜಬಲ್ಪುರ: ಜಬಲ್ಪುರ ಜಿಲ್ಲೆಯಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಅಖಿಲ ಭಾರತೀಯ ಕಾರ್ಯಕಾರಿ ಮಂಡಲಿಯ ವಾರ್ಷಿಕ ಸಭೆ ಆಯೋಜಿತವಾಗಿದೆ. ಈ ಸಭೆಯು ಅಕ್ಟೋಬರ್ 30 ರಿಂದ ನವೆಂಬರ್ 1, 2025 ರವರೆಗೆ ನಡೆಯಲಿದೆ. ಸಂಘದ ದೃಷ್ಟಿಕೋನದಿಂದ, ಭಾರತದ 46 ಪ್ರಾಂತಗಳಿಂದ 407 ಕಾರ್ಯಕರ್ತರು ಸಭೆಯಲ್ಲಿ ಭಾಗವಹಿಸುವ ನಿರೀಕ್ಷೆಯಿದೆ. ಸಭೆಯಲ್ಲಿ, ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಸಂಘಚಾಲಕ ಡಾ. ಮೋಹನ್ ಭಾಗವತ್, ಸರಕಾರ್ಯವಾಹ ದತ್ತಾತ್ರೇಯ ಹೊಸಬಾಳೆ ಮತ್ತು 06 ಮಂದಿ ಸಹ-ಸರಕಾರ್ಯವಾಹರು ಸೇರಿದಂತೆ ಅಖಿಲ ಭಾರತೀಯ ಕಾರ್ಯಕಾರಿಣಿ ಸಹಿತ 11 ಕ್ಷೇತ್ರಗಳ ಹಾಗೂ 46 ಪ್ರಾಂತಗಳ ಸಂಘಚಾಲಕರು, ಕಾರ್ಯವಾಹರು ಮತ್ತು ಪ್ರಚಾರಕರು ಉಪಸ್ಥಿತರಿರುತ್ತಾರೆ. ಈ ಕುರಿತಂತೆ ಕಚ್ನಾರ್ ನಗರದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ನೀಡಿದ ರಾಷ್ಟ್ರೀಯ ಸ್ವಯಂಸೇವಕ ಸಂಘದ ಅಖಿಲ ಭಾರತೀಯ ಪ್ರಚಾರ ಪ್ರಮುಖ್ ಸುನಿಲ್ ಅಂಬೇಕರ್, ದೇಶದ ವಿವಿಧೆಡೆಯಿಂದ ಪ್ರಮುಖರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು. ಅಕ್ಟೋಬರ್ 2, 2025 ರಂದು…

ಇಂದಿರಾ ಗಾಂಧಿ ವೃತ್ತಿ ಅಭಿವೃದ್ಧಿ ಕೇಂದ್ರ ಟೆಂಡರ್; ಅಕ್ರಮ ನಡೆದಿಲ್ಲ ಎಂದ ಸಚಿವ

ಬೆಂಗಳೂರು: ಇಂದಿರಾ ಗಾಂಧಿ ವೃತ್ತಿ ಅಭಿವೃದ್ಧಿ ಕೇಂದ್ರದಲ್ಲಿ ಹಗರಣ ನಡೆದಿದೆ ಎಂದು ಸುದ್ದಿ ಮಾಧ್ಯಮಗಳು ವರದಿ ಮಾಡಿದ್ದು ಅರ್ಹತೆ ಇಲ್ಲದ ಸಂಸ್ಥೆಗಳಿಗೆ ಟೆಂಡರ್‌ ನೀಡಲಾಗಿದೆ ಎಂಬ ಆರೋಪವನ್ನು ಸಚಿವ ಹೆಚ್.ಸಿ.ಮಹದೇವಪ್ಪ ಅಲ್ಲಗಳೆದಿದ್ದಾರೆ. ಆರೋಪ ಕುರಿತಂತೆ ಪ್ರತಿಕ್ರಿಯಿಸಿರುವ ಅವರು, ಇದು ವಾಸ್ತವಕ್ಕೆ ಸಂಪೂರ್ಣವಾಗಿ ವಿರುದ್ಧವಾಗಿರುವಂತಹ ಸಂಗತಿಯಾಗಿದ್ದು, ಮಾಧ್ಯಮಗಳ ಮೂಲಕ ತಪ್ಪಾದ ವಿವರಗಳನ್ನು ಸಾರ್ವಜನಿಕರಿಗೆ ನೀಡುವ ಪ್ರಯತ್ನ ಮಾಡಲಾಗಿದೆ ಎಂದಿದ್ದಾರೆ. ಆರೋಪ ಮಾಡುತ್ತಿರುವ ಜನರಿಗೆ ಸರ್ಕಾರದ ಯೋಜನೆಗಳಿಗೆ ನಿಗದಿ ಪಡಿಸಲಾದ ಅನುದಾನದ ಕುರಿತಾಗಿ ಮಾಹಿತಿಯೇ ಇಲ್ಲ ಎಂಬುದು ಸ್ಪಷ್ಟವಾಗಿದೆ. ಮುಖ್ಯವಾಗಿ ಇಲ್ಲಿ ನಿಯಮಾವಳಿಗಳ ಪ್ರಕಾರವೇ ಅರ್ಹ ಸಂಸ್ಥೆಗಳಿಗೆ ಟೆಂಡರ್ ನೀಡಲಾಗಿದ್ದು, ಟೆಂಡರ್ ನ ನಿಯಮಾವಳಿಗಳನ್ನು ಸರಿಯಾಗಿ ತಿಳಿಯದೇ ಯಾರೋ ಪಟ್ಟಭದ್ರ ಹಿತಾಸಕ್ತಿಗಳು ಮಾಡಿರುವ ಆಧಾರ ರಹಿತವಾದ ಆರೋಪಗಳನ್ನು ಆಧರಿಸಿ ಸುದ್ಧಿಯನ್ನು ಪ್ರಕಟಿಸಲಾಗಿದ್ದು, ದಯಮಾಡಿ ಮಾಧ್ಯಮಗಳು ಸರಿಯಾದ ಅಂಶಗಳನ್ನು ಪರಿಶೀಲನೆ ಮಾಡಿ ಸುದ್ದಿಯನ್ನು ಪ್ರಕಟಿಸುವ ಜವಾಬ್ದಾರಿ ತೋರಬೇಕೆಂದು ಅವರು ವಿನಂತಿಸಿದ್ದಾರೆ. ಇನ್ನು…

‘ಪ್ರತಿ ಕುಟುಂಬಕ್ಕೂ ಸರ್ಕಾರಿ ನೌಕರಿ’; ಇಂಡಿಯಾ ಬ್ಲಾಕ್ ಪ್ರಣಾಳಿಕೆಯಲ್ಲಿ ಭರವಸೆಯ ಹೊಳೆ

ಪಾಟ್ನಾ: ಬಿಹಾರ ವಿಧಾನಸಭಾ ಚುನಾವಣೆಗೆ ಸಜ್ಜಾಗುತ್ತಿರುವ ವಿರೋಧ ಪಕ್ಷಗಳ ಮೈತ್ರಿಕೂಟ ಇಂಡಿಯಾ ಬ್ಲಾಕ್ (ಮಹಾಘಟಬಂಧನ್) ಮಂಗಳವಾರ ತನ್ನ ಚುನಾವಣಾ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ. ‘ಬಿಹಾರ್ ಕಾ ತೇಜಸ್ವಿ ಪ್ರಾಣ್’ ಎಂಬ ಶೀರ್ಷಿಕೆಯೊಂದಿಗೆ ಪ್ರಕಟವಾದ ಈ ಪ್ರಣಾಳಿಕೆಯಲ್ಲಿ ಉದ್ಯೋಗ, ಹಳೆಯ ಪಿಂಚಣಿ ಯೋಜನೆ, ಮತ್ತು ಸಾಮಾಜಿಕ ಭದ್ರತೆಗೆ ಸಂಬಂಧಿಸಿದ ಹಲವು ಮಹತ್ವದ ಭರವಸೆಗಳಿವೆ. ಮಹಾಘಟಬಂಧನ್‌ನ ಮುಖ್ಯಮಂತ್ರಿ ಅಭ್ಯರ್ಥಿ ಹಾಗೂ ಆರ್‌ಜೆಡಿ ನಾಯಕ ತೇಜಸ್ವಿ ಯಾದವ್, ಪ್ರಣಾಳಿಕೆಯನ್ನು ಬಿಡುಗಡೆ ಮಾಡಿ, ರಾಜ್ಯದ ಪ್ರತೀ ಕುಟುಂಬದ ಕನಿಷ್ಠ ಒಬ್ಬ ಸದಸ್ಯನಿಗೆ ಸರ್ಕಾರಿ ಉದ್ಯೋಗ ನೀಡುವುದು ತಮ್ಮ ಸರ್ಕಾರದ ಮೊದಲ ಆದ್ಯತೆಯಾಗಿರುವುದಾಗಿ ಹೇಳಿದರು. “ನಾವು ಬಿಹಾರದಲ್ಲಿ ಕೇವಲ ಸರ್ಕಾರವನ್ನೇ ರಚಿಸುವುದಲ್ಲ, ಹೊಸ ಬಿಹಾರವನ್ನೂ ನಿರ್ಮಿಸಬೇಕೆಂದು ಬದ್ಧರಾಗಿದ್ದೇವೆ,” ಎಂದು ತೇಜಸ್ವಿ ಸ್ಪಷ್ಟಪಡಿಸಿದರು. ಇಂಡಿಯಾ ಬ್ಲಾಕ್ ಅಧಿಕಾರಕ್ಕೆ ಬಂದರೆ, 20 ತಿಂಗಳೊಳಗೆ ಈ ಉದ್ಯೋಗ ಯೋಜನೆ ರಾಜ್ಯದಾದ್ಯಂತ ಜಾರಿಗೆ ಬರಲಿದೆ. ಪ್ರಣಾಳಿಕೆಯಲ್ಲಿ ಹಳೆಯ ಪಿಂಚಣಿ ಯೋಜನೆಯನ್ನು…

ಭ್ರಷ್ಟಾಚಾರ ಸ್ಪೀಕರ್ ಕಚೇರಿಯವರೆಗೂ ಹರಡಿದೆ: ಬಿ.ವೈ.ವಿಜಯೇಂದ್ರ

ಬೆಂಗಳೂರು: ಕಾಂಗ್ರೆಸ್ ಸರ್ಕಾರವು ಕರ್ನಾಟಕವನ್ನು ಕಾಂಗ್ರೆಸ್ ಹೈಕಮಾಂಡ್‌ಗೆ “ಎಟಿಎಂ” ಆಗಿ ಪರಿವರ್ತಿಸಿದೆ, ಕಳೆದ ಎರಡೂವರೆ ವರ್ಷಗಳಲ್ಲಿ ಅಭಿವೃದ್ಧಿ ಶೂನ್ಯ ಮತ್ತು ಭ್ರಷ್ಟಾಚಾರ ಸ್ಪೀಕರ್ ಕಚೇರಿಯವರೆಗೂ ಹರಡಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಿಸಿದ್ದಾರೆ. The Congress Government has turned Karnataka into an “ATM" for the Congress high command with zero development in the last two and a half years and corruption spreading even to the Speaker’s office. The administration has collapsed due to the open power tussle between… pic.twitter.com/atnQvqxbq5 — BJP Karnataka (@BJP4Karnataka) October 28, 2025 ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ನಡುವಿನ ಮುಕ್ತ ಅಧಿಕಾರ ಜಗಳದಿಂದಾಗಿ ಆಡಳಿತವು ಕುಸಿದಿದೆ, ಆದರೆ ಜನರು ಬಳಲುತ್ತಿದ್ದಾರೆ. ರೈತರು…

RSS ನಿರ್ಬಂಧ ಯತ್ನಕ್ಕೆ ಹಿನ್ನಡೆ; ಹೈಕೋರ್ಟ್ ಆದೇಶದಿಂದ ಸ್ವಯಂಸೇವಕರು ಖುಷ್

ಬೆಂಗಳೂರು: RSS ಮೇಲೆ ನಿರ್ಬಂಧ ವಿಧಿಸುವ ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಹೈಕೋರ್ಟ್ ಆಘಾತ ನೀಡಿದೆ. ಸಾರ್ವಜನಿಕ ಸ್ಥಳಗಳಲ್ಲಿ ಮತ್ತು ಸರ್ಕಾರಿ ಜಾಗಗಳಲ್ಲಿ ಚಟುವಟಿಕೆಗಳನ್ನು ನಿರ್ಬಂಧಿಸಿ ಸರ್ಕಾರ ಹೊರಡಿಸಿದ್ದ ಆದೇಶ ಆದೇಶಕ್ಕೆ ಹೈಕೋರ್ಟ್​ ತಡೆ ನೀಡಿದೆ.ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಪೀಠ ಮಂಗಳವಾರ ಮಧ್ಯಂತರ ತಡೆಯಾಜ್ಞೆ ನೀಡಿದೆ. ಸರ್ಕಾರದ ಆದೇಶ ಪ್ರಶ್ನಿಸಿ ಹೈಕೋರ್ಟ್​ನ ಧಾರವಾಡ ಪೀಠಕ್ಕೆ ಸಲ್ಲಿಸಲಾಗಿದ್ದ ದಾವೆ ಕುರಿತಂತೆ ವಿಚಾರಣೆ ನಡೆಸಿದ ನ್ಯಾ.ಎಂ. ನಾಗಪ್ರಸನ್ನ ಅವರಿದ್ದ ಪೀಠ ರಾಜ್ಯ ಸರ್ಕಾರ, ಗೃಹ ಇಲಾಖೆ, ಹುಬ್ಭಳ್ಳಿ ಕಮಿಷನರ್​ಗೆ ನೋಟಿಸ್ ನೀಡಿದೆ. ಅಕ್ಟೋಬರ್18 ರಂದು ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿತ್ತು. ರಸ್ತೆ, ಪಾರ್ಕ್, ಮೈದಾನ, ಕೆರೆ ಇತ್ಯಾದಿಗಳ ಪ್ರವೇಶಕ್ಕೆ ನಿರ್ಬಂಧ ವಿಧಿಸಿ ಹೊರಡಿಸಲಾಗಿದ್ದ ಆದೇಶವೂ RSS ನ ಶತಾಬ್ದಿ ಪಥಸಂಚಲನಕ್ಕೂ ಅಡ್ಡಿಯಾಗಿತ್ತು. ಈ ಆದೇಶ ಮೂಲಕ ಸಂವಿಧಾನದ ಆರ್ಟಿಕಲ್ 19 (1)A, B, ನೀಡಿರುವ ಹಕ್ಕನ್ನು…

ಕೇಂದ್ರ ಉಕ್ಕಿನ ಸಚಿವರ ಕ್ಷೇತ್ರದಲ್ಲೇ ಕಾಂಗ್ರೆಸ್ ಇತಿಹಾಸ ಸೃಷ್ಟಿಸಿದೆ: ಚೆಲುವರಾಯಸ್ವಾಮಿ

ಬೆಂಗಳೂರು: ಕೇಂದ್ರದ ಉಕ್ಕಿನ ಸಚಿವರ ಕ್ಷೇತ್ರದಲ್ಲಿ ಇತಿಹಾಸದಲ್ಲೇ ಮೊದಲ ಬಾರಿಗೆ ಡಿ.ಸಿ ಸಿ ಬ್ಯಾಂಕ್ ಚುನಾವಣೆಯಲ್ಲಿ 8 ಜನ ಕಾಂಗ್ರೆಸ್ ಬೆಂಬಲ 8 ಪ್ರತಿನಿಧಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಎನ್ ಚೆಲುವರಾಯಸ್ವಾಮಿ ಅವರು ಹೇಳಿದ್ದಾರೆ. ಸರ್ ಎಂ ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಪತ್ರಕರ್ತರ ಜೊತೆ ಮಾತನಾಡಿದ ಅವರು ಜಿಲ್ಲೆಯಲ್ಲಿ ಜೆ ಡಿಎಸ್ ಪಕ್ಷದವರು ಚೇಸ್ಟೆ ಬಿಟ್ಟು ಸೋಲು-ಗೆಲುವನ್ನ ಸಮವಾಗಿ ತೆಗೆದುಕೊಳ್ಳಬೇಕು. ಇಂದು ಕಾಂಗ್ರೆಸ್ ಬೆಂಬಲಿತ ಮತ್ತೋಬ್ಬ ಪ್ರತಿನಿಧಿ ಆಯ್ಕೆಯಾಗುವ ಸಾಧ್ಯತೆ ಇದೆ, ಉಳಿದ 3 ಸ್ಥಾನಕ್ಕೆ ಚುನಾವಣೆ ನಡೆಯಲಿದೆ. ಶಾಸಕರು, ಪಕ್ಷದ ಮುಖಂಡರು ಜವಾಬ್ದಾರಿ ತೆಗೆದುಕೊಂಡು ಚುನಾವಣೆ ಮಾಡಿದ್ದಾರೆ ಎಂದು ಹೇಳಿದರು. ಸಹಕಾರ ಕ್ಷೇತ್ರದ ಪರಿಕಲ್ಪನೆ ಕಟ್ಟಿದ್ದು ಶಂಕರೇಗೌಡರು, ನಾನು ಸಹ ಸಹಕಾರ ಕ್ಷೇತ್ರದಿಂದ ಬಂದಿಲ್ಲ ಸ್ಥಳಿಯ ಪಂಚಾಯತ್ ನಿಂದ ಬಂದವನು, ಸಹಕಾರ ಕ್ಷೇತ್ರ ಸಾರ್ವಜನಿಕರಿಗೆ ಅತ್ತಿರವಾಗಿದೆ ಎಂದು ತಿಳಿಸಿದರು. ನಮ್ಮ ಗೆಲುವಿಗೆ ಕಾರಣರಾದ ಕಾಂಗ್ರೆಸ್ ಕಾರ್ಯಕರ್ತರಿಗೆ ಶಕ್ತಿ…

ಗ್ರಾಮಗಳ ಬೆಳವಣಿಗೆಗೆ ಸರ್ಕಾರದಿಂದ ಮತ್ತೊಂದು ಮಹತ್ವದ ತೀರ್ಮಾನ

ಬೆಂಗಳೂರು: ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಸ್ಥಳೀಯ ಯೋಜನಾ ಪ್ರದೇಶವನ್ನು ಹೊರತುಪಡಿಸಿದ ಪ್ರದೇಶಗಳಲ್ಲಿನ ಭೂಪರಿವರ್ತಿತ ಜಮೀನುಗಳಲ್ಲಿ ಬಡಾವಣೆಗಳನ್ನು ನಿರ್ಮಿಸಲು ನಿಯಮಗಳ ಸುತ್ತೋಲೆಯನ್ನು ಸರ್ಕಾರ ಹೊರಡಿಸಿದೆ. ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ತಿದ್ದುಪಡಿ) ಅಧಿನಿಯಮ, 2025 ರ ಪ್ರಕರಣ 199(ಬಿ) ರಲ್ಲಿ ಕಟ್ಟಡ ನಿರ್ಮಾಣ ಉದ್ದೇಶಗಳಿಗಾಗಿ ಇರುವ ಕಟ್ಟಡ ನಿವೇಶನಗಳಿಗಾಗಿ ಹೊಸ ಖಾತಾ ಅಥವಾ ಪಿ.ಐ.ಡಿಯನ್ನು ನೀಡಲು, ಗ್ರಾಮ ಪಂಚಾಯತಿ ಅಥವಾ ಸರ್ಕಾರವು ಅಧಿಸೂಚನೆಯ ಮೂಲಕ ಗೊತ್ತುಪಡಿಸಲಾದ ಪ್ರಾಧಿಕಾರಗಳು, ಅಧಿಕಾರ ವ್ಯಾಪ್ತಿಯ ಯೋಜನಾ ಪ್ರಾಧಿಕಾರದ ಮೂಲಕ ಬಡಾವಣೆ ನಕ್ಷೆಗಾಗಿ ಪೂರ್ವಾನುಮೋದನೆಯನ್ನು ಪಡೆದುಕೊಳ್ಳಲು ಅಭಿವೃದ್ಧಿದಾರರು ನಮೂನೆ-1ರಲ್ಲಿ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ ಗ್ರಾಮ ಪಂಚಾಯತಿಗೆ ಸಲ್ಲಿಸಬೇಕು. ವಿನ್ಯಾಸ ನಕ್ಷೆಯ ಪ್ರಕಾರ ಬಡಾವಣೆಯ ಮಾಲೀಕರು ಸಂಬಂಧಿಸಿದ ಗ್ರಾಮ ಪಂಚಾಯತಿಗೆ ವಿನ್ಯಾಸ ನಕ್ಷೆಯ ಪ್ರಕಾರ ರಸ್ತೆಗಳ ಅಗಲೀಕರಣಕ್ಕೆ ಮೀಸಲಿರಿಸಿದ ರಸ್ತೆಗಳು ಸೇರಿದಂತೆ ರಸ್ತೆಗಳು, ಪಾರ್ಕ್ಗಳು, ವಾಹನ ನಿಲ್ದಾಣಗಳು, ನಾಗರೀಕ ಸೌಲಭ್ಯದ ಪ್ರದೇಶಗಳು, ಸಾರ್ವಜನಿಕ…

ಹೊಸ ಸಿಜೆಐ: ನ್ಯಾಯಮೂರ್ತಿ ಸೂರ್ಯಕಾಂತ್ ಅವರೇ ಗವಾಯಿ ಅವರ ಉತ್ತರಾಧಿಕಾರಿ

ನವದೆಹಲಿ: ಭಾರತದ ಮುಖ್ಯ ನ್ಯಾಯಮೂರ್ತಿ ಭೂಷಣ್ ರಾಮಕೃಷ್ಣ ಗವಾಯಿ ಅವರು ನವೆಂಬರ್‌ನಲ್ಲಿ ನಿವೃತ್ತಿ ಹೊಂದುತ್ತಿದ್ದು, ತಮ್ಮ ಉತ್ತರಾಧಿಕಾರಿಯಾಗಿ ನ್ಯಾಯಮೂರ್ತಿ ಸೂರ್ಯಕಾಂತ್ ಅವರನ್ನು ನಾಮನಿರ್ದೇಶನ ಮಾಡಿದ್ದಾರೆ. ಸಿಜೆಐ ಗವಾಯಿ ಅವರು ನವೆಂಬರ್ 23 ರಂದು ನಿವೃತ್ತಿಯಾಗಲಿದ್ದು, ನ್ಯಾಯಮೂರ್ತಿ ಸೂರ್ಯಕಾಂತ್ ಹಿರಿತನದ ಆಧಾರದ ಮೇಲೆ ಭಾರತದ 53ನೇ ಮುಖ್ಯ ನ್ಯಾಯಮೂರ್ತಿ ಆಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಸಿಜೆಐ ಗವಾಯಿ ಅವರು ನ್ಯಾಯಮೂರ್ತಿ ಕಾಂತ್ ಅವರ ಹೆಸರನ್ನು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿದ್ದಾರೆ. ಸರ್ಕಾರದಿಂದ ಶೀಘ್ರದಲ್ಲೇ ಅಧಿಕೃತ ಅಧಿಸೂಚನೆ ಹೊರಬರುವ ನಿರೀಕ್ಷೆಯಿದೆ. ನ್ಯಾಯಮೂರ್ತಿ ಕಾಂತ್ ಅವರು ಸುಮಾರು 14 ತಿಂಗಳುಗಳ ಕಾಲ ಈ ಹುದ್ದೆಯಲ್ಲಿ ಸೇವೆ ಸಲ್ಲಿಸಲಿದ್ದು, ಫೆಬ್ರವರಿ 9, 2027 ರಂದು ನಿವೃತ್ತರಾಗಲಿದ್ದಾರೆ. ಸಂಪ್ರದಾಯದಂತೆ, ಸಿಜೆಐ ಗವಾಯಿ ಅವರು ಶೀಘ್ರದಲ್ಲೇ ನ್ಯಾಯಮೂರ್ತಿ ಕಾಂತ್ ಅವರಿಗೆ ಶಿಫಾರಸು ಪತ್ರದ ಪ್ರತಿಯನ್ನು ಹಸ್ತಾಂತರಿಸಲಿದ್ದಾರೆ. ಕೇಂದ್ರ ಸರ್ಕಾರವು ಗವಾಯಿ ಅವರನ್ನೇ ತಮ್ಮ ಉತ್ತರಾಧಿಕಾರಿಯ ಹೆಸರನ್ನು ಸೂಚಿಸಲು…

ಭಾರತದ ಏಕತೆಯ ಹಿಂದೆ ನಿಂತಿರುವ ಉಕ್ಕಿನ ಇಚ್ಛಾಶಕ್ತಿಯ ಹೆಸರೇ ಸರ್ದಾರ್ ವಲ್ಲಭಭಾಯಿ ಪಟೇಲ್

ನವದೆಹಲಿ: ಭಾರತದ ಏಕತೆಯ ಹಿಂದೆ ನಿಂತಿರುವ ಉಕ್ಕಿನ ಇಚ್ಛಾಶಕ್ತಿಯ ಹೆಸರೇ ಸರ್ದಾರ್ ವಲ್ಲಭಭಾಯಿ ಪಟೇಲ್. 1947ರಲ್ಲಿ ಭಾರತ ಸ್ವಾತಂತ್ರ್ಯ ಹೊಂದಿದಾಗ “ಒಂದು ಭಾರತ” ಎಂಬ ಕಲ್ಪನೆ ಕೇವಲ ಕನಸಷ್ಟೇ ಆಗಿತ್ತು. ಬ್ರಿಟಿಷರ ಆಡಳಿತ ಪ್ರದೇಶಗಳ ಜೊತೆಗೆ 560 ಕ್ಕೂ ಹೆಚ್ಚು ರಾಜಪ್ರಭುತ್ವದ ರಾಜ್ಯಗಳು ಪ್ರತ್ಯೇಕ ಅಸ್ತಿತ್ವವನ್ನು ಹೊಂದಿದ್ದವು. ಈ ವಿಚ್ಛಿನ್ನ ಪರಿಸ್ಥಿತಿಯಲ್ಲಿ ಹೊಸ ಭಾರತದ ಗೃಹ ಸಚಿವ ಹಾಗೂ ಉಪಪ್ರಧಾನಿಯಾಗಿ ಪಟೇಲ್ ಅವರು ರಾಷ್ಟ್ರ ಏಕೀಕರಣದ ಶಿಲ್ಪಿಯಾಗಿ ಹೊರಹೊಮ್ಮಿದರು. ಅವರ ದೃಢ ಸಂಕಲ್ಪ, ರಾಜತಾಂತ್ರಿಕತೆ ಹಾಗೂ ದೂರದೃಷ್ಟಿಯು ನೂರಾರು ಸಣ್ಣ ರಾಜ್ಯಗಳನ್ನು ಒಂದೇ ರಾಷ್ಟ್ರದ ಮಡಿಲಿಗೆ ತಂದಿತು. “ಪಟೇಲ್ ಅವರ ಕಾರ್ಯದ ಹಿನ್ನೆಲೆ ಏಕತೆಯ ಸ್ಫೂರ್ತಿ, ಆಧುನಿಕ ಭಾರತದ ಅಡಿಪಾಯವಾಗಿ ಉಳಿದಿದೆ,” ಎಂದು ಇತಿಹಾಸಕಾರ ರಾಜಮೋಹನ್ ಗಾಂಧಿ ಉಲ್ಲೇಖಿಸಿದ್ದಾರೆ. “ಆದರ್ಶವಾದಕ್ಕಿಂತ ಪಟೇಲ್ ಅವರ ವಾಸ್ತವಿಕತೆ ದೇಶವನ್ನು ಒಟ್ಟಿಗೆ ಹಿಡಿದಿಟ್ಟುಕೊಂಡಿತು,” ಎಂದು ಅವರು ಹೇಳಿದ್ದಾರೆ. One vision. One…

ಟೀಮ್ ಇಂಡಿಯಾ ಉಪನಾಯಕ ಶ್ರೇಯಸ್ ಅಯ್ಯರ್ ದಿಢೀರ್ ಅಸ್ವಸ್ಥ; ಆಸ್ಪತ್ರೆಗೆ ದಾಖಲು

ಸಿಡ್ನಿ: ಭಾರತ-ಆಸ್ಟ್ರೇಲಿಯಾ ಸರಣಿಯ ವೇಳೆ ಗಾಯಗೊಂಡಿದ್ದ ಟೀಮ್ ಇಂಡಿಯಾ ಉಪನಾಯಕ ಶ್ರೇಯಸ್ ಅಯ್ಯರ್ ಅವರನ್ನು ಸಿಡ್ನಿಯ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಸಿಡ್ನಿಯಲ್ಲಿ ನಡೆದ ಮೂರನೇ ಏಕದಿನ ಪಂದ್ಯದಲ್ಲಿ ಕ್ಯಾಚ್ ಹಿಡಿಯುವಾಗ ಅಯ್ಯರ್ ಗಂಭೀರವಾಗಿ ಗಾಯಗೊಂಡಿದ್ದು, ಈಗ ಅವರನ್ನು ತೀವ್ರ ನಿಗಾದಲ್ಲಿರಿಸಲಾಗಿದೆ ಎಂದು ವರದಿಯಾಗಿದೆ. ಆಸ್ಟ್ರೇಲಿಯಾ ವಿರುದ್ಧದ ಪಂದ್ಯದಲ್ಲಿ ಹರ್ಷಿತ್ ರಾಣಾ ಎಸೆದ ಚೆಂಡಿಗೆ ಅಲೆಕ್ಸ್ ಕ್ಯಾರಿ ಬಲಾಢ್ಯ ಹಿಟ್‌ ಬಾರಿಸಿದ ವೇಳೆ ಬ್ಯಾಕ್‌ವರ್ಡ್ ಪಾಯಿಂಟ್‌ನಲ್ಲಿ ನಿಂತಿದ್ದ ಅಯ್ಯರ್ ಓಡಿ ಹೋಗಿ ಡೈವಿಂಗ್ ಕ್ಯಾಚ್ ಹಿಡಿದರು. ಈ ವೇಳೆ ಅವರ ಎಡ ಪಕ್ಕೆಲುಬುಗಳಿಗೆ ಗಂಭೀರ ಪೆಟ್ಟು ಬಿದ್ದಿದ್ದು, ತಕ್ಷಣವೇ ಮೈದಾನದಿಂದ ಹೊರಗೆ ಕರೆದೊಯ್ಯಲಾಯಿತು. ಆಸ್ಪತ್ರೆಯಲ್ಲಿ ವೈದ್ಯರು ಪ್ರಾಥಮಿಕ ಪರೀಕ್ಷೆ ನಡೆಸಿದ ಬಳಿಕ ಪೆಕ್ಕೆಲುಬು ಹತ್ತಿರದ ಅಂಗಾಂಗಗಳಲ್ಲಿ ಆಂತರಿಕ ರಕ್ತಸ್ರಾವವಾಗಿರುವುದು ಪತ್ತೆಯಾಗಿದೆ. ಇದರ ಹಿನ್ನೆಲೆಯಲ್ಲಿ ಅವರನ್ನು ಐಸಿಯುನಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ವೈದ್ಯಕೀಯ ಮೂಲಗಳ ಪ್ರಕಾರ, ಅಯ್ಯರ್ ಅವರ ಸ್ಥಿತಿ ಸ್ಥಿರವಾಗಿದ್ದರೂ ಮುಂದಿನ…