ಬೆಂಗಳೂರು: RSS ಮೇಲಿನ ನಿರ್ಬಂಧ ಕುರಿತ ಖಾಸಗಿ ಚಾನೆಲ್ ಗೆ ಸಂದರ್ಶನ ನೀಡಿರುವ ನ್ಯಾಯಮೂರ್ತಿ ಸಂತೋಷ ಹೆಗ್ಡೆ ಹೊಸ ಚರ್ಚೆಯನ್ನು ಹುಟ್ಟು ಹಾಕಿದ್ದಾರೆ. RSS ಬ್ಯಾನ್ ಮಾಡುವುದಾದರೆ ಕಾಂಗ್ರೆಸ್ ಪಕ್ಷವನ್ನು ಬ್ಯಾನ್ ಮಾಡಬಹುದಲ್ಲವೇ ಎಂಬ ನ್ಯಾಯಮೂರ್ತಿ ಸಂತೋಷ ಹೆಗ್ಡೆಯವರ ಹೇಳಿಕೆಯು ಅವರ ದ್ವಂದ್ವ ವ್ಯಕ್ತಿತ್ವವನ್ನು ತೋರಿಸಿದಂತಿದೆ ಎಂದು ಕೆಪಿಸಿಸಿ ಮಾಧ್ಯಮ ವಿಭಾಗದ ಅಧ್ಯಕ್ಷರೂ ಆದ ವಿಧಾನ ಪರಿಷತ್ ಸದಸ್ಯ ರಮೇಶ್ ಪ್ರತಿಕ್ರಿಯಿಸಿದ್ದಾರೆ. ವಕೀಲರೂ ಆದ ರಮೇಶ್ ಬಾಬು ಶನಿವಾರ ಬೆಂಗಳೂರಿನಲ್ಲಿ ನಡೆಸಿದ ಸುದ್ದಿಗೋಷ್ಠಿ ಗಮನಸೆಳೆಯಿತು. ಸ್ವತಂತ್ರ ಪೂರ್ವದಲ್ಲಿ ಎರಡು ಬಾರಿ ಮತ್ತು ಸ್ವತಂತ್ರಾ ನಂತರ ಮೂರು ಬಾರಿ ಬ್ಯಾನ್ ಗೆ ಒಳಗಾಗಿದ್ದ ಸಂಘ ಪರಿವಾರದ ಪರವಾಗಿ ಸಮರ್ಥ ವಕ್ತಾರರಾಗಿ ಕೆಲಸ ಮಾಡುವ ಜವಾಬ್ದಾರಿಯನ್ನು ಸಂತೋಷ ಹೆಗ್ಡೆಯವರು ವಹಿಸಿಕೊಂಡಂತಿದೆ ಎಂದು ಟೀಕಿಸಿದರು. ಸರ್ವೋಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ಮೇಲೆ ಹಲ್ಲೆಗೆ ಯತ್ನಿಸಿದ ಸನಾತನಿಗಳ ಮೇಲೆ ಧ್ವನಿ ಎತ್ತದ ಸಂತೋಷ…
Month: October 2025
ಸುಪ್ರೀಂ ಕೋರ್ಟ್‌ನ ಅಯೋಧ್ಯಾ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿವಜಾ
ನವದೆಹಲಿ: ಸುಪ್ರೀಂ ಕೋರ್ಟ್‌ನ ಐತಿಹಾಸಿಕ ಅಯೋಧ್ಯಾ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ದೆಹಲಿಯ ಪಟಿಯಾಲ ಹೌಸ್ ಕೋರ್ಟ್ ವಜಾಗೊಳಿಸಿದೆ. ಸುಪ್ರೀಂ ಕೋರ್ಟ್‌ನ ಐದು ನ್ಯಾಯಾಧೀಶರ ಪೀಠದ 2019 ರ ತೀರ್ಪನ್ನು ಅಮಾನ್ಯ ಮತ್ತು ಅನೂರ್ಜಿತ ಎಂದು ಘೋಷಿಸಲು ವಕೀಲ ಮಹಮೂದ್ ಪ್ರಾಚ ಅರ್ಜಿ ಸಲ್ಲಿಸಿದ್ದರು. ತಮ್ಮ ಅರ್ಜಿಯಲ್ಲಿ, ವಕೀಲರು ತಮ್ಮ ಸಿವಿಲ್ ಮೊಕದ್ದಮೆಯನ್ನು ವಿಚಾರಣೆ ಮಾಡಲು ನಿರಾಕರಿಸಿದ ಕೆಳ ನ್ಯಾಯಾಲಯದ ಆದೇಶವನ್ನು ಸಹ ಪ್ರಶ್ನಿಸಿದರು. ಭಾರತದ ಮಾಜಿ ಮುಖ್ಯ ನ್ಯಾಯಮೂರ್ತಿ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಅವರು ಅಯೋಧ್ಯಾ ವಿವಾದವನ್ನು ತೀರ್ಮಾನಿಸಿದ ಐದು ನ್ಯಾಯಾಧೀಶರ ಪೀಠದ ಭಾಗವಾಗಿದ್ದರು ಎಂದು ಪ್ರಾಚ ತಮ್ಮ ಅರ್ಜಿಯಲ್ಲಿ ಹೇಳಿಕೊಂಡರು, ಆದರೆ ನ್ಯಾಯಮೂರ್ತಿ ಚಂದ್ರಚೂಡ್ ಅವರು ಕಳೆದ ವರ್ಷ ಭಾಷಣದಲ್ಲಿ ಅಯೋಧ್ಯಾ ತೀರ್ಪು ಭಗವಾನ್ ಶ್ರೀ ರಾಮ್ ಲಲ್ಲಾ ಕೃಪೆಯಂತೆಯೇ ಆಗಿದೆ ಎಂದಿದ್ದರು ಎಂದು ಅರ್ಜಿದಾರರು ಗಮನಸೆಳೆದಿದ್ದರು. ಪಟಿಯಾಲ ಹೌಸ್ ಕೋರ್ಟ್‌ನ ಜಿಲ್ಲಾ ನ್ಯಾಯಾಧೀಶ…
ರಾಣಿ ಚೆನ್ನಮ್ಮನವರ ಐಕ್ಯ ಸ್ಥಳವನ್ನು ರಾಷ್ಟ್ರೀಯ ಸ್ಮಾರಕ; ಸಿಎಂ
ಬೆಳಗಾವಿ: ರಾಣಿ ಚೆನ್ನಮ್ಮನವರ ಐಕ್ಯ ಸ್ಥಳವನ್ನು ರಾಷ್ಟ್ರೀಯ ಸ್ಮಾರಕ ಎಂದು ಘೋಷಿಸುವಂತೆ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದು ಕೂಡ ನಮ್ಮ ಸರ್ಕಾರವೇ. ಹಲವು ಮಹಾನ್ ವ್ಯಕ್ತಿಗಳ ಜಯಂತಿಯನ್ನು ಆಚರಣೆಗೆ ತಂದಿದ್ದು ಕೂಡ ನಾವೆ. ಇದು ನಮ್ಮ ಸಂಸ್ಕೃತಿ ಎಂದ ಸಿಎಂ ಸಿದ್ದರಾಮಯ್ಯ, ಬೆಳಗಾವಿ ವಿಮಾನ ನಿಲ್ದಾಣಕ್ಕೆ ವೀರ ರಾಣಿ ಚೆನ್ನಮ್ಮ ಅವರ ಹೆಸರಿಡುವಂತೆ ಕೇಂದ್ರಕ್ಕೆ ಪತ್ರ ಬರೆದಿದ್ದೇವೆ. ಕೇಂದ್ರ ಇನ್ನೂ ತೀರ್ಮಾನ ತೆಗೆದುಕೊಂಡಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು. ಕಿತ್ತೂರು ಅಭಿವೃದ್ಧಿ ಪ್ರಾಧಿಕಾರ ಆಯೋಜಿಸಿದ್ದ 201ನೇ ವರ್ಷದ ಕಿತ್ತೂರು ಉತ್ಸವದ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಂಡು, ಸ್ವಾತಂತ್ರ್ಯ ಹೋರಾಟದ ಇತಿಹಾಸವನ್ನು ಅವರು ಸ್ಮರಿಸಿದರು. 1857ರ ಸಿಪಾಯಿ ದಂಗೆಗೂ 33 ವರ್ಷಗಳ ಮೊದಲೇ ಬ್ರಿಟೀಷರನ್ನು ಕಿತ್ತೂರು ಚೆನ್ನಮ್ಮ ಸೋಲಿಸಿದರು. ಬ್ರಿಟೀಷರನ್ನು ಸೋಲಿಸಿ ಕಿತ್ತೂರಿನ ಸ್ವಾಭಿಮಾನವನ್ನು ಗೆಲ್ಲಿಸಿದ ದಿನವೇ ಕಿತ್ತೂರು ಉತ್ಸವದ ದಿನವಾಗಿದೆ. 2017 ರಲ್ಲಿ ಕಿತ್ತೂರು ಉತ್ಸವವನ್ನು ಮೊದಲ ಬಾರಿಗೆ ಆರಂಭಿಸಿದ್ದು…
‘ಹಿಟ್ ಅಂಡ್ ರನ್ ಪ್ರಕರಣ: ಬೆಂಗಳೂರು ಪೊಲೀಸರಿಂದ ದಿವ್ಯಾ ಸುರೇಶ್ ವಿಚಾರಣೆ?
ಬೆಂಗಳೂರು: ಬೆಂಗಳೂರಿನ ಬ್ಯಾಟರಾಯನಪುರ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವರದಿಯಾದ ಹಿಟ್ ಅಂಡ್ ರನ್ ಪ್ರಕರಣದ ಪೊಲೀಸ್ ತನಿಖೆಯಲ್ಲಿ ಕನ್ನಡ ನಟಿ ಮತ್ತು ಬಿಗ್ ಬಾಸ್ ಕನ್ನಡ ಸ್ಪರ್ಧಿ ದಿವ್ಯಾ ಸುರೇಶ್ ಭಾಗಿಯಾಗಿರುವುದು ಬೆಳಕಿಗೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆಯಲ್ಲಿ ಮೂವತ್ನಾಲ್ಕು ವರ್ಷದ ಅನಿತಾ ಅವರ ಕಾಲಿನ ಮೂಳೆ ಮುರಿತಕ್ಕೊಳಗಾಗಿದ್ದು, ಬೈಕ್‌ನಲ್ಲಿ ಪ್ರಯಾಣಿಸುತ್ತಿದ್ದ ಇತರ ಇಬ್ಬರು ಸವಾರರು ಘಟನೆಯಲ್ಲಿ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ ಎನ್ನಲಾಗಿದೆ. Weeks after a late-night hit-and-run accident in Bengaluru, the city traffic police on Friday identified ex Bigg Boss Kannada contestant Divya Suresh as the alleged driver of the car involved in the accident that left three people injured. The accident took place near…
ಎನ್‌ಡಿಎ ಗೆಲುವಿನ ವಿಶ್ವಾಸ ಬಲವಾದದ್ದು: ಆನಂದ್ ಮಿಶ್ರಾ
ಬಕ್ಸರ್: ಮುಂಬರುವ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಎನ್‌ಡಿಎ ಭರ್ಜರಿ ಗೆಲುವು ಸಾಧಿಸಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿರುವ ಬಿಜೆಪಿ ಅಭ್ಯರ್ಥಿ ಹಾಗೂ ಮಾಜಿ ಐಪಿಎಸ್ ಅಧಿಕಾರಿ ಆನಂದ್ ಮಿಶ್ರಾ, “ವಿಕ್ಷಿತ್ ಬಿಹಾರ ಮತ್ತು ವಿಕ್ಷಿತ್ ಬಕ್ಸರ್ ನಿರ್ಮಿಸುವುದು ನನ್ನ ದೃಢನಿಶ್ಚಯ” ಎಂದು ತಿಳಿಸಿದ್ದಾರೆ. ಶನಿವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ರಾಜ್ಯದ ಜನತೆ ಈಗ ಎನ್‌ಡಿಎ ಸರ್ಕಾರದ ಅಭಿವೃದ್ಧಿ ಮತ್ತು ಕಲ್ಯಾಣದ ಬದ್ಧತೆಯನ್ನು ಅರಿತುಕೊಂಡಿದ್ದಾರೆ. ಬಿಜೆಪಿ ‘ಸಬ್‌ಕಾ ಸಾಥ್, ಸಬ್‌ಕಾ ವಿಕಾಸ್’ ತತ್ವದ ಮೂಲಕ ಸಮಗ್ರ ಬಿಹಾರದ ನಿರ್ಮಾಣಕ್ಕೆ ಬದ್ಧವಾಗಿದೆ,” ಎಂದು ಹೇಳಿದರು. ಈ ಹೇಳಿಕೆಗಳು ಕೇಂದ್ರ ಗೃಹ ಸಚಿವ ಅಮಿತ್ ಶಾ ಸಿವಾನ್‌ನಲ್ಲಿ ನಡೆದ ಬೃಹತ್ ರ್ಯಾಲಿಯಲ್ಲಿ ಆರ್‌ಜೆಡಿ ಮುಖಂಡ ಲಾಲು ಪ್ರಸಾದ್ ಯಾದವ್ ನೇತೃತ್ವದ ಮಹಾಘಟಬಂಧನ್ ವಿರುದ್ಧ ತೀವ್ರ ಟೀಕೆ ಮಾಡಿದ ಬಳಿಕ ಬಂದಿವೆ. ಅಮಿತ್ ಶಾ ಅವರ ಬಕ್ಸರ್ ರ್ಯಾಲಿಯ ಕುರಿತು ಮಾತನಾಡಿದ ಮಿಶ್ರಾ, “ಗೃಹ…
ಗೃಹಲಕ್ಷ್ಮಿ ಫಲಾನುಭವಿಗಳಿಗಾಗಿ ಸಹಕಾರ ಸಂಘಗಳ ಸ್ಥಾಪನೆ
ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರವು ಮಹಿಳೆಯರ ಆರ್ಥಿಕ ಸಬಲೀಕರಣದತ್ತ ಮತ್ತೊಂದು ಮಹತ್ವದ ಹೆಜ್ಜೆ ಇಟ್ಟಿದೆ. ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗಾಗಿ ವಿವಿದೋದ್ದೇಶ ಸಹಕಾರ ಸಂಘಗಳನ್ನು ಸ್ಥಾಪಿಸಲು ಸರ್ಕಾರ ನಿರ್ಧರಿಸಿದೆ. ಮಹಿಳೆಯರನ್ನು ಆರ್ಥಿಕವಾಗಿ ಸದೃಢಗೊಳಿಸುವ ಗುರಿಯೊಂದಿಗೆ ಕೈಗೊಂಡಿರುವ ಈ ಕ್ರಮದಡಿ, ಗೃಹಲಕ್ಷ್ಮಿ ಫಲಾನುಭವಿಗಳಿಗೆ ಸಾಲ ಸೌಲಭ್ಯ ನೀಡುವುದು, ಅವರ ಆರ್ಥಿಕ ಸ್ಥಿತಿಯನ್ನು ಬಲಪಡಿಸುವುದು ಹಾಗೂ ಸ್ವ ಉದ್ಯೋಗಕ್ಕೆ ಪ್ರೋತ್ಸಾಹ ನೀಡುವುದು ಸಂಘಗಳ ಪ್ರಮುಖ ಉದ್ದೇಶವಾಗಲಿದೆ. “ಗೃಹಲಕ್ಷ್ಮಿಯರಿಗೆ ಆರ್ಥಿಕ ಬಲ – ಸ್ವ ಉದ್ಯೋಗಕ್ಕೆ ಬೆಂಬಲ” ಎಂಬ ಆಶಯದೊಂದಿಗೆ ಕಾಂಗ್ರೆಸ್ ಸರ್ಕಾರ ಮಹಿಳಾ ಸಬಲೀಕರಣದ ನವ ಅಧ್ಯಾಯವನ್ನು ಆರಂಭಿಸಿದೆ ಎಂದು ಪಕ್ಷದ ವಕ್ತಾರರು ತಿಳಿಸಿದ್ದಾರೆ. ರಾಜ್ಯ ಕಾಂಗ್ರೆಸ್ ಸರ್ಕಾರದಿಂದ ಮಹಿಳಾ ಸಬಲೀಕರಣಕ್ಕೆ ಮತ್ತೊಂದು ಮಹತ್ವದ ಹೆಜ್ಜೆ ಮಹಿಳೆಯರನ್ನು ಆರ್ಥಿಕವಾಗಿ ಸದೃಢಗೊಳಿಸುವ ಗುರಿಯೊಂದಿಗೆ ರಾಜ್ಯ ಕಾಂಗ್ರೆಸ್ ಸರ್ಕಾರ "ಗೃಹಲಕ್ಷ್ಮಿ ಯೋಜನೆ"ಯ ಫಲಾನುಭವಿಗಳಿಗಾಗಿ ವಿವಿದೋದ್ದೇಶ ಸಹಕಾರ ಸಂಘಗಳನ್ನು ಸ್ಥಾಪಿಸುವ ಮಹತ್ವದ ನಿರ್ಣಯ ಕೈಗೊಂಡಿದೆ.ಗೃಹಲಕ್ಷ್ಮಿ ಯೋಜನೆಯ…
ಸಂಪುಟದಿಂದ ಸಚಿವ ಜಮೀರ್ ಅಹ್ಮದ್ ವಜಾಕ್ಕೆ ಜೆಡಿಎಸ್ ಆಗ್ರಹ
ಬೆಂಗಳೂರು: ವಂಚಕ ಸಂಬಂಧಿಗೆ ಸಹಾಯ ಮಾಡಲು ಪೊಲೀಸರಿಗೆ ಸಚಿವ ಜಮೀರ್ ಅಹ್ಮದ್ ಅವರು ಒತ್ತಡ ಹೇರಿದ್ದಾರೆ ಎನ್ನಲಾದ ಆಡಿಯೋ ರಾಜ್ಯ ರಾಜಕೀಯದಲ್ಲಿ ಸಂಚಲನ ಸೃಷ್ಟಿಸಿದೆ. ವಂಚನೆ ಪ್ರಕರಣದಲ್ಲಿ ತಮ್ಮ ಸಂಬಂಧಿಕರ ಪರವಾಗಿ ಸಹಾಯ ಮಾಡುವಂತೆ ಪೊಲೀಸ್ ಅಧಿಕಾರಿಗೆ ಫೋನ್ ಮಾಡಿ ಶಿಫಾರಸ್ಸು ಮಾಡಿರುವ ಸಚಿವ ಬಿ.ಜೆಡ್.ಜಮೀರ್ ಅಹ್ಮದ್ ಅವರು, ಕರ್ನಾಟಕದ ಅನ್ನ ತಿಂದು, ಕನ್ನಡಿಗರ ಮತ ಪಡೆದು ಕನ್ನಡಿಗರಿಗೆ ದ್ರೋಹ ಬಗೆದಿದ್ದಾರೆ ಎಂದು ಜೆಡಿಎಸ್ ಪಕ್ಷ ಆರೋಪಿಸಿದೆ. ಕರ್ನಾಟಕದ ಅನ್ನ ತಿಂದು, ಕನ್ನಡಿಗರ ಮತ ಪಡೆದು ಕನ್ನಡಿಗರಿಗೆ ದ್ರೋಹ ಬಗೆಯುವ ಸಚಿವ @BZZameerAhmedK ನಿಮಗೆ ನಾಚಿಕೆಯಾಗಬೇಕು ! ರಾಜ್ಯದ ರೈತರಿಗೆ ವಂಚಿಸಿರುವ ನಿಮ್ಮ ಸಂಬಂಧಿಕರ ಪರವಾಗಿ ಸಹಾಯ ಮಾಡುವಂತೆ ಪೊಲೀಸ್ ಅಧಿಕಾರಿಗೆ ಫೋನ್ ಮಾಡಿ ಶಿಫಾರಸ್ಸು ಮಾಡಿರುವುದು ಅಕ್ಷಮ್ಯ. ರಾಜ್ಯದ ಜವಾಬ್ದಾರಿಯುತ ಸಚಿವರಾಗಿ ವಂಚಕರ ಪರ ವಹಿಸಿ,… pic.twitter.com/rNrq8xNbTV — Janata Dal Secular (@JanataDal_S) October…
ಖರ್ಗೆಯವರ ಕುಟುಂಬ ಯಾವುದೇ ದಲಿತರನ್ನು ಬೆಳೆಸಿಲ್ಲ; ಛಲವಾದಿ ನಾರಾಯಣ ಸ್ವಾಮಿ
ಬೆಂಗಳೂರು: ಮಲ್ಲಿಕಾರ್ಜುನ ಖರ್ಗೆಯವರ ಕುಟುಂಬ ಯಾವುದೇ ದಲಿತರನ್ನು ಬೆಳೆಸಿಲ್ಲ ಎಂದು ವಿಧಾನಪರಿಷತ್ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣ ಸ್ವಾಮಿ ಆರೋಪಿಸಿದ್ದಾರೆ. ಅದರಲ್ಲೂ ಪ್ರಿಯಾಂಕ್ ಖರ್ಗೆ ವಿರುದ್ಧ ಅವರು ಅಕ್ರೋಶ ವ್ಯಕ್ತಪಡಿಸಿರುವ ವೈಖರಿ ಗಮನಸೆಳೆದಿದೆ. ಪ್ರಿಯಾಂಕ್ ಖರ್ಗೆ ಅವರೇ, ನಿಮ್ಮ ಕುಟುಂಬ ಯಾವುದೇ ದಲಿತರನ್ನು ಬೆಳೆಸಿಲ್ಲ. ದಲಿತ ಸಮುದಾಯದ ಸಮಸ್ಯೆಗಳ ಕುರಿತು ಧ್ವನಿಯನ್ನೂ ಎತ್ತಿಲ್ಲ. ದಲಿತ ಸಮುದಾಯದ ಯಾವುದೇ ಹೋರಾಟಕ್ಕೂ ಕೈಜೋಡಿಸಿಲ್ಲ. ದಲಿತ ಸಮುದಾಯವನ್ನು ನಿಮ್ಮ ಸ್ವಾರ್ಥಕ್ಕಾಗಷ್ಟೇ ಬಳಸಿಕೊಂಡಿದ್ದೀರಿ. ನೂರು ವರ್ಷಗಳಿಂದ ದೇಶಕ್ಕಾಗಿ ಮತ್ತು ಸಮಾಜಕ್ಕಾಗಿ ಕೆಲಸ ಮಾಡಿರುವ… pic.twitter.com/oP5sHqdPU7 — BJP Karnataka (@BJP4Karnataka) October 24, 2025 ‘ಪ್ರಿಯಾಂಕ್ ಖರ್ಗೆ ಅವರೇ, ನಿಮ್ಮ ಕುಟುಂಬ ಯಾವುದೇ ದಲಿತರನ್ನು ಬೆಳೆಸಿಲ್ಲ. ದಲಿತ ಸಮುದಾಯದ ಸಮಸ್ಯೆಗಳ ಕುರಿತು ಧ್ವನಿಯನ್ನೂ ಎತ್ತಿಲ್ಲ. ದಲಿತ ಸಮುದಾಯದ ಯಾವುದೇ ಹೋರಾಟಕ್ಕೂ ಕೈಜೋಡಿಸಿಲ್ಲ. ದಲಿತ ಸಮುದಾಯವನ್ನು ನಿಮ್ಮ ಸ್ವಾರ್ಥಕ್ಕಾಗಷ್ಟೇ ಬಳಸಿಕೊಂಡಿದ್ದೀರಿ’ ಎಂದು ಛಲವಾದಿ ನಾರಾಯಣ…
ಮುಂಚಿನ ಋತುಬಂಧದಿಂದ ಬುದ್ಧಿಮಾಂದ್ಯತೆ ಅಪಾಯ?
ನವದೆಹಲಿ: ಮಹಿಳೆಯರಲ್ಲಿ ಮುಂಚಿನ ಋತುಬಂಧ (Early Menopause) ಉಂಟಾದರೆ, ಅದು ಹೃದಯದ ಕಾರ್ಯಕ್ಷಮತೆ ಹಾಗೂ ಮೆದುಳಿನ ಅರಿವಿನ ಸಾಮರ್ಥ್ಯದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ಹೊಸ ಅಧ್ಯಯನವೊಂದು ಬೆಳಕುಚೆಲ್ಲಿದೆ. ಹಿಂದಿನ ಹಲವು ಅಧ್ಯಯನಗಳು ಮುಂಚಿನ ಋತುಬಂಧವು ಆಲ್ಝೈಮರ್ ಬುದ್ಧಿಮಾಂದ್ಯತೆ ಹಾಗೂ ಸ್ಮರಣಶಕ್ತಿ ಕುಗ್ಗುವಿಕೆ ಅಪಾಯವನ್ನು ಹೆಚ್ಚಿಸುತ್ತದೆ ಎಂದು ತಿಳಿಸಿದ್ದರೂ, ಹೃದಯದ ಕಾರ್ಯಕ್ಷಮತೆಯ ಇಳಿಕೆ ಈ ಪ್ರಕ್ರಿಯೆಯಲ್ಲಿ ಯಾವ ರೀತಿಯಲ್ಲಿ ಪಾತ್ರವಹಿಸುತ್ತದೆ ಎಂಬುದು ಸ್ಪಷ್ಟವಾಗಿರಲಿಲ್ಲ. ವೈಜ್ಞಾನಿಕರು ಹೇಳುವಂತೆ, ಹೃದಯದ ಕಾರ್ಯ ಕುಂದಿದಾಗ ಮೆದುಳಿಗೆ ತಕ್ಕಮಟ್ಟಿನ ಆಮ್ಲಜನಕ ಮತ್ತು ಪೋಷಕಾಂಶಗಳು ತಲುಪುವುದಿಲ್ಲ. ಇದರ ಪರಿಣಾಮವಾಗಿ ಮೆದುಳಿನ ಅಂಗಾಂಶ ಹಾನಿಗೊಳಗಾಗುತ್ತದೆ, ಮೌನ ಪಾರ್ಶ್ವವಾಯುಗಳು (Silent Strokes) ಸಂಭವಿಸಬಹುದು ಹಾಗೂ ಬುದ್ಧಿಮಾಂದ್ಯತೆ ಅಪಾಯ ಹೆಚ್ಚಾಗುತ್ತದೆ. ಇದು ಹೃದಯ ಮತ್ತು ಮೆದುಳಿನ ಆರೋಗ್ಯದ ಮಧ್ಯೆ ಇರುವ ಆಳವಾದ ಸಂಬಂಧವನ್ನು ತೋರಿಸುತ್ತದೆ. ಕೆನಡಾದ ಟೊರೊಂಟೊ ವಿಶ್ವವಿದ್ಯಾಲಯದ ಪ್ರಮುಖ ಸಂಶೋಧಕಿ ಟ್ಯಾಲಿನ್ ಸ್ಪ್ಲಿಂಟರ್ ಹೇಳುವಂತೆ,…
ಸಿದ್ದರಾಮಯ್ಯ ಬದಲಾವಣೆ, ಜಾರಕಿಹೊಳಿಗೆ ನಾಯಕತ್ವ? ಯತೀಂದ್ರ ಹೇಳಿಕೆಯ ಅಚ್ಚರಿ
ಬೆಂಗಳೂರು: ರಾಜಕೀಯ ಜೀವನದ ಕೊನೆಯ ಹಂತದಲ್ಲಿದ್ದಾರೆ. ಮುಂದಿನ ದಿನಗಳಲ್ಲಿ ವೈಜ್ಞಾನಿಕ ಹಾಗೂ ಪ್ರಗತಿಪರ ಚಿಂತನೆ ಹೊಂದಿರುವ ಸತೀಶ್ ಜಾರಕಿಹೊಳಿ ಅವರು ನಾಯಕತ್ವ ವಹಿಸಬಹುದು ಎಂಬ ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ರಾಜ್ಯ ರಾಜಕಾರಣದಲ್ಲಿ ಸಂಚಲನ ಸೃಷ್ಟಿಸಿದೆ. ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಸನ್ನಿಹಿತವೇ ಎಂಬ ಪ್ರಶ್ನೆಯನ್ನು ಇದು ಹುಟ್ಟುಹಾಕಿದೆ. ಯತೀಂದ್ರರ ಈ ಹೇಳಿಕೆ ರಾಜ್ಯ ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿರುವಂತೆಯೇ, ಸ್ಪಷ್ಟನೆ ನೀಡಿರುವ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ‘ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆಯೇ ಇಲ್ಲ. ಹೈಕಮಾಂಡ್ ಇದನ್ನು ಸ್ಪಷ್ಟಪಡಿಸಿದೆ’ ಎಂದಿದ್ದಾರೆ. ರಾಜ್ಯ ನಾಯಕತ್ವ ಬದಲಾವಣೆಯ ಕುರಿತಂತೆ ಸಿದ್ದರಾಮಯ್ಯ ಅವರ ಪುತ್ರ ಹಾಗೂ ಕಾಂಗ್ರೆಸ್ ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ ಅವರ ಹೇಳಿಕೆಗೆ ಮಂತ್ರಾಲಯ ಪ್ರವಾಸದ ಸಂದರ್ಭದಲ್ಲಿ ಪ್ರತಿಕ್ರಿಯೆ ನೀಡಿರುವ ಡಿ.ಕೆ.ಶಿವಕುಮಾರ್, “ಯತೀಂದ್ರ ಏನು ಹೇಳಿದ್ದಾರೆ ಎನ್ನುವುದರ ಬಗ್ಗೆ ಮಾಹಿತಿ ಇಲ್ಲ” ಎಂದರು. “ಪಕ್ಷ ನನಗೆ ಎಲ್ಲವನ್ನೂ ನೀಡಿದೆ. ನಾನು ಪಕ್ಷದ…
