ಬಿಹಾರ ಚುನಾವಣೆ ಫಲಿತಾಂಶ ಬಂದ ಬಳಿಕ ಮತಗಳ್ಳತನದ ಆರೋಪ ಮಾಡುತ್ತಾರೆ: ಆರ್.ಅಶೋಕ ಗೇಲಿ

ಬೆಂಗಳೂರು: ಬಿಹಾರ ಚುನಾವಣೆಯಲ್ಲಿ ಎನ್‌ಡಿಎ ಗೆಲ್ಲಲಿದೆ ಎಂದು ಸಮೀಕ್ಷೆಗಳು ಹೇಳುತ್ತಿವೆ. ಆದ್ದರಿಂದ ಫಲಿತಾಂಶ ಬಂದ ಬಳಿಕ ರಾಹುಲ್‌ ಗಾಂಧಿ ಮತಗಳ್ಳತನ ಆರೋಪ ಮಾಡುವುದು ಖಂಡಿತ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಹಾರದ ಚುನಾವಣೆ ಪ್ರತಿಷ್ಠಿತ ಚುನಾವಣೆಯಾಗಿದೆ. ಬಿಹಾರದಲ್ಲಿ ನಕ್ಸಲ್‌ ಚಟುವಟಿಕೆ ಹೆಚ್ಚಿದ್ದರೂ ಈ ಬಾರಿ ಉತ್ತಮವಾಗಿ ಮತದಾನ ನಡೆದಿದೆ. ಅಮಿತ್‌ ಶಾ ಗೃಹ ಸಚಿವರಾದ ಬಳಿಕ ನಕ್ಸಲ್‌ ಚಟುವಟಿಕೆಯನ್ನು ನಿಯಂತ್ರಣಕ್ಕೆ ತಂದಿದ್ದಾರೆ. 12 ಕ್ಕೂ ಹೆಚ್ಚು ಸಂಸ್ಥೆಗಳು ಸಮೀಕ್ಷೆ ಮಾಡಿದ್ದು, ಎನ್‌ಡಿಎ ಅಧಿಕಾರಕ್ಕೆ ಬರಲಿದೆ ಎಂದು ಅಂದಾಜಿಸಲಾಗಿದೆ. ಕಾಂಗ್ರೆಸ್‌ನ ಘಟಬಂಧನಕ್ಕೆ ಬೆಂಬಲ ಇಲ್ಲ ಎಂದು ಹೇಳಲಾಗಿದೆ ಎಂದರು. ಬಿಹಾರ ಚುನಾವಣೆಯ ಫಲಿತಾಂಶ ಬಂದ ಬಳಿಕ ರಾಹುಲ್‌ ಗಾಂಧಿ ಮತಗಳ್ಳತನದ ಆರೋಪ ಮಾಡುತ್ತಾರೆ. ರಾಹುಲ್‌ ಗಾಂಧಿ ನಾಯಕತ್ವದಲ್ಲಿ ಕಾಂಗ್ರೆಸ್‌ ಸರಣಿಯಾಗಿ ಸೋಲುತ್ತಿದೆ. ಲೋಕಸಭೆ, ವಿಧಾನಸಭಾ ಚುನಾವಣೆಗಳಲ್ಲಿ ರಾಹುಲ್‌ ಗಾಂಧಿ ಐರನ್‌ ಲೆಗ್‌ ಎಂದು…

ದಾವಣಗೆರೆ-KIA ನಡುವೆ ಫ್ಲೈಬಸ್ (ವೋಲ್ವೋ ಮಲ್ಟಿ ಆಕ್ಸೆಲ್) ಸೇವೆ ಪ್ರಾರಂಭ

ಬೆಂಗಳೂರು: ದಾವಣಗೆರೆ ಸುತ್ತಮುತ್ತಲ ಜನರಿಗೆ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಪ್ರಯಾಣ ಮತ್ತಷ್ಟು ಸುಲಭವಾಗಲಿದೆ. ದಾವಣಗೆರೆಯಿಂದ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ವಿಶೇಷ ಬಸ್ ಸೌಕರ್ಯ ಕಲ್ಪಿಸುವುದಾಗಿ ಸಾರಿಗೆ ಸಚಿವ ರಾಮಲೀಗಾ ರೆಡ್ಡಿ ನೀಡಿರುವ ಭರವಸೆ ಈಡೇರಿದೆ. ಹೊಸದಾಗಿ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಬೆಂಗಳೂರಿಂದ ದಾವಣಗೆರೆ ನಡುವೆ ನೇರ ಫ್ಲೈಬಸ್ (ವೋಲ್ವೋ ಮಲ್ಟಿ ಆಕ್ಸೆಲ್) ಸೇವೆ ಪ್ರಾರಂಭವಾಗಿದ್ದು, ಈ ಬಸ್ಸುಗಳಿಗೆ ಸಾರಿಗೆ ಹಾಗೂ ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ಅವರು ಬುಧವಾರ ಚಾಲನೆ ನೀಡಿದರು. ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಸ್ಸುಗಳಿಗೆ ಹಸಿರು ನಿಶಾನೆ ತೋರಿದ ಸಚಿವರು,ಫ್ಲೈ ಬಸ್ ಪ್ರಯಾಣಿಕರಿಗೆ ನಂದಿನಿ ಉತ್ಪನ್ನಗಳ ಸ್ಯ್ನಾಕ್ಸ್ ವಿತರಣೆ ಮಾಡಿ ನೂತನ ಕಾರ್ಯಕ್ರಮಗಳಿಗೆ ಮುನ್ನುಡಿ ಬರೆದರು. ಈ ಸಂದರ್ಭದಲ್ಲಿ ಮಾತನಾಡಿದ ರಾಮಲಿಂಗಾ ರೆಡ್ಡಿ, ಸಾರಿಗೆ ಸಚಿವರಾಗಿದ್ದ ತಮ್ಮ ಮೊದಲ ಅವಧಿಯಲ್ಲಿ ಮೊದಲ ಬಾರಿಗೆ ಕೆಂಪೇಗೌಡ…

ದೆಹಲಿ ಸ್ಫೋಟ; ಕಾಂಗ್ರೆಸ್ ನಾಯಕರು ಹೇಳಿಕೆಗಳನ್ನು ಹಿಂಪಡೆಯಬೇಕು

ಬೆಂಗಳೂರು: ದೆಹಲಿಯ ಕೆಂಪುಕೋಟೆ ಬಳಿ ಸಂಭವಿಸಿದ ಪ್ರಬಲ ಸ್ಫೋಟದಲ್ಲಿ ಕನಿಷ್ಠ 12 ನಾಗರಿಕರು ಮೃತಪಟ್ಟು, ಹಲವರು ಗಾಯಗೊಂಡ ಭಯೋತ್ಪಾದಕ ಕೃತ್ಯದ ಬಗ್ಗೆ ತನಿಖೆ ನಡೆಯುತ್ತಿರುವಾಗಲೇ ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ನವರ, ಮತ್ತಿತರ ಕಾಂಗ್ರೆಸ್ ನಾಯಕರ ಬೇಜವಾಬ್ದಾರಿ, ಅಸಂವೇದನೀಯ, ಕೀಳು ರಾಜಕೀಯ ಹೇಳಿಕೆಗಳು ಖಂಡನೀಯ ಮಾತ್ರವಲ್ಲ ಆತಂಕಕಾರಿಯೂ ಆಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ. ಕಾಂಗ್ರೆಸ್ ನಾಯಕರ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿರುವ ಅವರು, ದೇಶದ ವಿರುದ್ಧ ನಡೆದಿರಬಹುದಾದ ಭಯೋತ್ಪಾದಕ ದಾಳಿಯ ಸಂದರ್ಭದಲ್ಲಿ ಇಡೀ ದೇಶ ಒಂದು ಧ್ವನಿಯಲ್ಲಿ ಮಾತನಾಡಬೇಕಾದ ಸೂಕ್ಷ್ಮ ಸಂದರ್ಭದಲ್ಲೂ ಇವರುಗಳು ಕೀಳು ಮಟ್ಟದ ರಾಜಕೀಯ ಮಾಡುತ್ತಿರುವುದು ರಾಜ್ಯದ ದುರಂತ, ದೇಶದ ದೌರ್ಭಾಗ್ಯ. ಕಾಂಗ್ರೆಸ್ ಪಕ್ಷಕ್ಕೆ ದೇಶದ ಭದ್ರತೆ, ನಾಗರಿಕರ ಸಾವು-ನೋವುಗಳು, ನಮ್ಮ ಸೈನಿಕರ ತ್ಯಾಗ, ರಾಷ್ಟ್ರೀಯ ಗೌರವಗಳಂತಹ ವಿಷಯಗಳೂ ಕೂಡ ಕೇವಲ ರಾಜಕೀಯ ಅಸ್ತ್ರವಾಗಿರುವುದು ನಿಜಕ್ಕೂ ಆತಂಕಕಾರಿಯಾಗಿದೆ ಎಂದಿದ್ದಾರೆ. 2019ರ ಭೀಕರ ಪುಲ್ವಾಮಾ ದಾಳಿಯ…

ದೆಹಲಿ ಸ್ಫೋಟದ ಪ್ರತಿಧ್ವನಿ; ಕಾಶ್ಮೀರದ 25 ಕ್ಕೂ ಹೆಚ್ಚು ಸ್ಥಳಗಳಲ್ಲಿ ಏಕಕಾಲದಲ್ಲಿ ಪೊಲೀಸ್ ದಾಳಿ

ಶ್ರೀನಗರ: ದೆಹಲಿಯ ಕೆಂಪು ಕೋಟೆ ಮೆಟ್ರೋ ನಿಲ್ದಾಣದ ಬಳಿ ನಡೆದ ಸ್ಫೋಟದಲ್ಲಿ ಎಂಟು ಜನರು ಮೃತಪಟ್ಟಿದ್ದು, ಅನೇಕರು ಗಾಯಗೊಂಡ ಘಟನೆ ಬಳಿಕ ಕಣಿವೆಯಲ್ಲಿ ನಿಷೇಧಿತ ಜಮಾತೆ-ಇ-ಇಸ್ಲಾಮಿ (ಜೆಇಐ) ಸಂಘಟನೆಯ ಕಾರ್ಯಕರ್ತರ ವಿರುದ್ಧ ವ್ಯಾಪಕ ಕ್ರಮ ಕೈಗೊಳ್ಳಲಾಗಿದೆ ಎಂದು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಬುಧವಾರ ತಿಳಿಸಿದ್ದಾರೆ. ಗುಪ್ತಚರ ಸಂಸ್ಥೆಗಳ ಪ್ರಾಥಮಿಕ ಮಾಹಿತಿ ಪ್ರಕಾರ, ಸ್ಫೋಟವು ಡಾ. ಮೊಹಮ್ಮದ್ ಉಮರ್ ಅವರ ಆತ್ಮಹತ್ಯಾ ದಾಳಿ ಅಲ್ಲ; ಅವರು ಐ-20 ಕಾರನ್ನು ಚಲಾಯಿಸುತ್ತಿದ್ದಾಗ ಸಂಭವಿಸಿದ ದುರಂತ ಎನ್ನಲಾಗಿದೆ. ಆದರೆ, ಅವರ ಪರಾರಿಯ ಹಿನ್ನೆಲೆ ಮತ್ತು ಬಂಧಿತ ಸಹೋದ್ಯೋಗಿಗಳ ವಿಚಾರಣೆಗಳು, ಸಂಘಟಿತ ಭಯೋತ್ಪಾದಕ ಪಿತೂರಿಯ ಸುಳಿವು ನೀಡುತ್ತಿವೆ ಎಂದು ಮೂಲಗಳು ಹೇಳಿವೆ. ಕುಲ್ಗಾಮ್ ಜಿಲ್ಲೆಯ ಪೊಲೀಸರು ಜೆಇಐ ವಿರುದ್ಧ ಕೈಗೊಂಡ ವಿಶೇಷ ಅಭಿಯಾನದಲ್ಲಿ ಜಿಲ್ಲೆಯಾದ್ಯಂತ 200 ಕ್ಕೂ ಹೆಚ್ಚು ಸ್ಥಳಗಳಲ್ಲಿ ಶೋಧ ಕಾರ್ಯಾಚರಣೆಗಳು ನಡೆದಿವೆ. ಭಯೋತ್ಪಾದನೆಗೆ ಬೆಂಬಲ ನೀಡುವ ಜಾಲವನ್ನು ಧ್ವಂಸಗೊಳಿಸಿ,…

ದೆಹಲಿ ಸ್ಫೋಟ ತನಿಖೆಗೆ ಎನ್‌ಐಎ 10 ಸದಸ್ಯರ ವಿಶೇಷ ತಂಡ

ನವದೆಹಲಿ: ದೆಹಲಿಯ ಕೆಂಪು ಕೋಟೆ ಮೆಟ್ರೋ ನಿಲ್ದಾಣದ ಬಳಿ ನಡೆದ ಸ್ಫೋಟ ಪ್ರಕರಣದ ತನಿಖೆಗಾಗಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) 10 ಸದಸ್ಯರ ವಿಶೇಷ ತನಿಖಾ ತಂಡವನ್ನು ರಚಿಸಿದೆ. ಈ ತಂಡಕ್ಕೆ ಎನ್‌ಐಎ ಹೆಚ್ಚುವರಿ ಮಹಾನಿರ್ದೇಶಕ ವಿಜಯ್ ಸಖಾರೆ ನೇತೃತ್ವ ವಹಿಸಲಿದ್ದು, ಅವರೊಂದಿಗೆ ಒಬ್ಬ ಇನ್ಸ್‌ಪೆಕ್ಟರ್ ಜನರಲ್ (ಐಜಿ), ಇಬ್ಬರು ಡೆಪ್ಯುಟಿ ಇನ್ಸ್‌ಪೆಕ್ಟರ್ ಜನರಲ್‌ಗಳು (ಡಿಐಜಿ), ಮೂವರು ಪೊಲೀಸ್ ಅಧೀಕ್ಷಕರು (ಎಸ್‌ಪಿ) ಹಾಗೂ ಉಳಿದವರು ಡಿಎಸ್‌ಪಿ ಮಟ್ಟದ ಅಧಿಕಾರಿಗಳಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ. ಮಂಗಳವಾರ ಗೃಹ ಸಚಿವಾಲಯವು ದೆಹಲಿ ಸ್ಫೋಟ ಪ್ರಕರಣವನ್ನು ಎನ್‌ಐಎಗೆ ಹಸ್ತಾಂತರಿಸಿದ ಒಂದು ದಿನದ ನಂತರ ಈ ತಂಡ ರಚನೆಯಾಗಿದೆ. ನವೆಂಬರ್ 10ರ ಸಂಜೆ ಕೆಂಪು ಕೋಟೆ ಮೆಟ್ರೋ ನಿಲ್ದಾಣದ ಗೇಟ್ ಸಂಖ್ಯೆ 1ರ ಬಳಿ ನಿಲ್ಲಿಸಲಾಗಿದ್ದ ಹರಿಯಾಣ ನೋಂದಾಯಿತ ಕಾರು ಸ್ಫೋಟಗೊಂಡು, ಕನಿಷ್ಠ ಎಂಟು ಮಂದಿ ಸಾವನ್ನಪ್ಪಿದ್ದು, ಡಜನಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು.…

ಟರ್ಕಿ ಸೇನಾ ವಿಮಾನ ಪತನ: 20 ಮಂದಿ ದುರ್ಮರಣ

ಅಂಕಾರಾ: ಟರ್ಕಿ ಸೇನೆಗೆ ಸೇರಿದ ಸರಕು ಸಾಗಾಣಿಕಾ ವಿಮಾನವೊಂದು ಭೀಕರ ದುರಂತಕ್ಕೀಡಾಗಿ, ವಿಮಾನದಲ್ಲಿದ್ದ 20 ಮಂದಿ ಸಾವನ್ನಪ್ಪಿದ್ದಾರೆ ಎಂದು ಟರ್ಕಿ ರಕ್ಷಣಾ ಸಚಿವಾಲಯ ದೃಢಪಡಿಸಿದೆ. ಅಜರ್ಬೈಜಾನ್‌ನಿಂದ ಟರ್ಕಿಗೆ ವಾಪಸಾಗುತ್ತಿದ್ದ ಸಿ–130 ಮಾದರಿಯ ಸೇನಾ ಸಾರಿಗೆ ವಿಮಾನ ಮಂಗಳವಾರ ಜಾರ್ಜಿಯಾದ ವಾಯುಪ್ರದೇಶದಲ್ಲಿ ಪತನಗೊಂಡಿದೆ. ವಿಮಾನದಲ್ಲಿದ್ದ ಎಲ್ಲಾ ಸಿಬ್ಬಂದಿ ಹಾಗೂ ಪ್ರಯಾಣಿಕರು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮೂಲಗಳ ಪ್ರಕಾರ, ವಿಮಾನವು ಅಜರ್ಬೈಜಾನ್‌ನ ಗಂಜಾ ವಿಮಾನ ನಿಲ್ದಾಣದಿಂದ ಟರ್ಕಿಯತ್ತ ಪ್ರಯಾಣ ಆರಂಭಿಸಿತ್ತು. ಜಾರ್ಜಿಯಾ ವಾಯುಪ್ರದೇಶವನ್ನು ಪ್ರವೇಶಿಸಿದ ಕೆಲವೇ ಕ್ಷಣಗಳಲ್ಲಿ ಕಂಟ್ರೋಲ್ ರೂಮ್‌ನೊಂದಿಗೆ ಸಂಪರ್ಕ ಕಳೆದುಕೊಂಡಿತು. ತುರ್ತು ಸಂದರ್ಭ ಸಂದೇಶ ಕಳುಹಿಸಲು ಪೈಲಟ್‌ಗಳಿಗೆ ಅವಕಾಶವೇ ಸಿಕ್ಕಿಲ್ಲ ಎನ್ನಲಾಗಿದ್ದು, ಘಟನೆ ಅತ್ಯಂತ ಕ್ಷಿಪ್ರವಾಗಿ ಸಂಭವಿಸಿದೆ ಎಂದು ತಜ್ಞರು ವಿಶ್ಲೇಷಿಸಿದ್ದಾರೆ.

ಒಂಬತ್ತು ಹೊಸ ಎಐಸಿಸಿ ಕಾರ್ಯದರ್ಶಿಗಳ ನೇಮಕ, ಐವರ ಉಸ್ತುವಾರಿ ಮರುಹಂಚಿಕೆ

ನವದೆಹಲಿ: ಅಖಿಲ ಭಾರತ ಕಾಂಗ್ರೆಸ್ ಸಮಿತಿಯಲ್ಲಿ (ಎಐಸಿಸಿ) ಮಹತ್ವದ ಸಾಂಸ್ಥಿಕ ಬದಲಾವಣೆಗಳನ್ನು ಕೈಗೊಂಡಿರುವ ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಒಂಬತ್ತು ಹೊಸ ಕಾರ್ಯದರ್ಶಿಗಳ ನೇಮಕಾತಿಗೆ ಹಾಗೂ ಐದು ಅಸ್ತಿತ್ವದಲ್ಲಿರುವ ಕಾರ್ಯದರ್ಶಿಗಳ ಮರುಹಂಚಿಕೆಗೆ ಮಂಗಳವಾರ ಅನುಮೋದನೆ ನೀಡಿದ್ದಾರೆ. ಬದಲಾವಣೆಗಳು ತಕ್ಷಣದಿಂದಲೇ ಜಾರಿಯಾಗಲಿವೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರು ಬಿಡುಗಡೆ ಮಾಡಿದ ಪ್ರಕಟಣೆಯಲ್ಲಿ, “ರಾಜ್ಯ ಘಟಕಗಳನ್ನು ಬಲಪಡಿಸಲು ಮತ್ತು ಚುನಾವಣಾ ಪೂರ್ವ ತಯಾರಿ ವೇಗಗೊಳಿಸಲು ಕೈಗೊಳ್ಳಲಾದ ಕ್ರಮಗಳ ಭಾಗವಾಗಿ ಈ ಪುನರ್ರಚನೆ ನಡೆದಿದೆ” ಎಂದು ತಿಳಿಸಿದ್ದಾರೆ. ಗುಜರಾತ್‌ಗೆ ಶ್ರೀನಿವಾಸ್ ಬಿ.ವಿ., ಪುದುಚೇರಿ ಮತ್ತು ಲಕ್ಷದ್ವೀಪಕ್ಕೆ ಟಿ.ಎನ್. ಪ್ರತಾಪನ್, ಮಧ್ಯಪ್ರದೇಶಕ್ಕೆ ಸಂಜನಾ ಜಾತವ್, ತೆಲಂಗಾಣಕ್ಕೆ ಸಚಿನ್ ಸಾವಂತ್, ಮಹಾರಾಷ್ಟ್ರಕ್ಕೆ ರೆಹನಾ ರಯಾಜ್ ಚಿಸ್ತಿ, ಪಂಜಾಬ್‌ಗೆ ಹಿನಾ ಕವಾರೆ ಹಾಗೂ ಸೂರಜ್ ಠಾಕೂರ್ (ಸಂಯುಕ್ತವಾಗಿ), ಒಡಿಶಾಕ್ಕೆ ಜೆಟ್ಟಿ ಕುಸುಮ್ ಕುಮಾರ್, ಮತ್ತು ತಮಿಳುನಾಡಿಗೆ ನಿವೇದಿತ್ ಅಲ್ವಾ ಅವರನ್ನು ಕಾರ್ಯದರ್ಶಿಗಳಾಗಿ ನೇಮಿಸಲಾಗಿದೆ.…

ಬಿಹಾರದಲ್ಲಿ NDA ಜಯಭೇರಿ ಸಾಧ್ಯತೆ; ಮತಗಟ್ಟೆ ಸಮೀಕ್ಷೆಯ ಫಲಿತಾಂಶ ಹೀಗಿದೆ

ನವದೆಹಲಿ: ಬಿಹಾರದಲ್ಲಿ ನಡೆದ ಚುನಾವಣಾ ಆಡಳಿತಾರೂಢ NDA ಹಾಗೂ ಪ್ರತಿಪಕ್ಷಗಳ ಒಕ್ಕೂಟ ಮಹಾಘಟಬಂಧನ್ ನಡುವೆ ನೇರ ಹಣಾಹಣಿ ನಡೆದಿದೆ. ಮತದಾನ ಮುಗಿದಿದ್ದು ಸೋಲು ಗೆಲುವಿನ ಲೆಕ್ಕಾಚಾರ ಸಾಗಿದೆ. ನವೆಂಬರ್ 14ರಂದು ಮತ ಎಣಿಕೆ ನಡೆಯಲಿದ್ದು, ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ. ಆದರೆ ಅಷ್ಟರಲ್ಲೇ ಮತದಾನೋತ್ತರ ಸಮೀಕ್ಷೆ ಫಲಿತಾಂಶ ಹೊರಬಿದ್ದಿದೆ. ಬಹುತೇಕ ಸಂಸ್ಥೆಗಳ ಸಮೀಕ್ಷೆಯಲ್ಲಿ ಬಿಜೆಪಿ ನೇತೃತ್ವದ NDA ಭಾರೀ ಬಹುಮತದೊಂದಿಗೆ ಈ ಬಾರಿಯೂ ಸರ್ಕಾರ ರಚಿಸುವ ಸಾಧ್ಯತೆಗಳಿವೆ ಎಂದು ಹೇಳಿವೆ. ಆದರೆ, ಕೆಲವು ಸಂಸ್ಥೆಗಳು ಮಹಾಘಟಬಂಧನ್ ಮುನ್ನಡೆ ಸಾಧ್ಯತೆಗಳನ್ನು ತಳ್ಳಿಹಾಕುವಂತಿಲ್ಲ ಎಂದೂ ಹೇಳಿವೆ. ಪೀಪಲ್ಸ್ ಪಲ್ಸ್, ಪೀಪಲ್ಸ್ ಇನ್‌ಸೈಟ್, ಮ್ಯಾಟ್ರಿಜ್, ಜೆವಿಸಿ, ಭಾಸ್ಕರ್ ಬಿಹಾರ, ಚಾಣಕ್ಯ ಸ್ಟ್ರಾಟಜೀಸ್ ಸಂಸ್ಥೆಗಳು NDA ಗೆಲುವಿನ ಸಾಧ್ಯತೆಗಳತ್ತ ಬೆಳಕುಚೆಲ್ಲಿವೆ. ಒಟ್ಟಾರೆ ಫಲಿತಾಂಶ ಹೀಗಿದೆ: ಪೀಪಲ್ಸ್ ಪಲ್ಸ್: NDA – 133-159 | ಮಹಾಘಟಬಂಧನ್ – 75-101 | ಜನ ಸುರಾಜ್ – 0-5…

ದೆಹಲಿಯ ಸ್ಪೋಟದ ಪ್ರತಿಧ್ವನಿ; ರಾಜ್ಯದಲ್ಲೂ ಕಟ್ಟೆಚ್ಚರ

ದೆಹಲಿಯ ಸ್ಪೋಟ ಪ್ರಕರಣವನ್ನು ರಾಜ್ಯ ಸರ್ಕಾರವು ಗಂಭೀರವಾಗಿ ಪರಿಗಣಿಸಿದೆ. ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ತೀವ್ರ ಕಟ್ಟೆಚ್ಚರ ವಹಿಸುವಂತೆ ಪೊಲೀಸ್ ಮಹಾನಿರ್ದೇಶಕರಿಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಜನನಿಬಿಡ ಸ್ಥಳಗಳಲ್ಲಿ ಭದ್ರತೆಯನ್ನು ಹೆಚ್ಚಿಸಿ, ಜನರ ಸುರಕ್ಷತೆಗೆ ಆದ್ಯತೆ ನೀಡುವಂತೆ ಗೃಹ ಇಲಾಖೆಗೆ ನಿರ್ದೇಶನ ನೀಡಿದ್ದಾರೆ. ರಾಜ್ಯದಲ್ಲಿ ಯಾವುದೇ ತರನಾದ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದ್ದು, ಸಾರ್ವಜನಿಕರು ಕೂಡ ಪೊಲೀಸ್ ಇಲಾಖೆಯ ಜೊತೆ ಸಹಕರಿಸಬೇಕು ಎಂದು ಜನರಲ್ಲಿ ಸಿಎಂ ಮನವಿ ಮಾಡಿದ್ದಾರೆ.

ದೆಹಲಿ ಸ್ಫೋಟದಲ್ಲಿ ಸಾವಿನ ಸಂಖ್ಯೆ 10ಕ್ಕೆ ಏರಿಕೆ; ನಾಗ್ಪುರದ ಆರ್‌ಎಸ್‌ಎಸ್ ಕಚೇರಿಗೆ ಬಿಗಿ ಭದ್ರತೆ

ನವದೆಹಲಿ: ದೇಶದ ಹೃದಯಭಾಗ ದೆಹಲಿಯ ಕೆಂಪುಕೋಟೆ ಮೆಟ್ರೋ ನಿಲ್ದಾಣದ ಬಳಿ ಸೋಮವಾರ ಸಂಜೆ ಸಂಭವಿಸಿದ ಭೀಕರ ಸ್ಫೋಟದಲ್ಲಿ ಸಾವಿನ ಸಂಖ್ಯೆ 10ಕ್ಕೆ ಏರಿಕೆಯಾಗಿದೆ. ಇನ್ನೂ ಡಜನ್‌ಗಟ್ಟಲೆ ಮಂದಿ ಗಾಯಗೊಂಡಿದ್ದು, ಸಂತ್ರಸ್ತರನ್ನು ಸಮೀಪದ ಎಲ್‌ಎನ್‌ಜೆಪಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯ ತೀವ್ರತೆಗೆ ರಾಷ್ಟ್ರ ರಾಜಧಾನಿಯ ಜೊತೆಗೆ ಯುಪಿ, ಮುಂಬೈ ಹಾಗೂ ನಾಗ್ಪುರದ ಆರ್‌ಎಸ್‌ಎಸ್ ಪ್ರಧಾನ ಕಚೇರಿಯಂತಹ ಪ್ರಮುಖ ಪ್ರದೇಶಗಳಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ. ನಾಗ್ಪುರದ ಆರ್‌ಎಸ್‌ಎಸ್ ಕಚೇರಿಯ ಸುತ್ತಮುತ್ತಲೂ ಬಿಗಿಯಾದ ಭದ್ರತಾ ವಲಯವನ್ನು ನಿರ್ಮಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಸ್ಫೋಟದ ಕೆಲವೇ ನಿಮಿಷಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಗೃಹ ಸಚಿವ ಅಮಿತ್ ಶಾ ಅವರೊಂದಿಗೆ ದೂರವಾಣಿ ಮೂಲಕ ಸಂಪರ್ಕಿಸಿಕೊಂಡು ಪರಿಸ್ಥಿತಿಯ ವಿವರ ಪಡೆದಿದ್ದಾರೆ. ಗೃಹ ಸಚಿವ ಅಮಿತ್ ಶಾ ದೆಹಲಿ ಪೊಲೀಸ್ ಆಯುಕ್ತ ಸತೀಶ್ ಗೋಲ್ಚಾ ಹಾಗೂ ಗುಪ್ತಚರ ಬ್ಯೂರೋ ಮುಖ್ಯಸ್ಥ ತಪನ್ ದೇಕಾ ಅವರೊಂದಿಗೆ ಚರ್ಚೆ ನಡೆಸಿದ್ದಾರೆ. ಸ್ಫೋಟ…