‘ಜೇನು ಕ್ರಾಂತಿ’: ವಿಶ್ವದ ಎರಡನೇ ಅತಿದೊಡ್ಡ ಜೇನು ರಫ್ತುದಾರ ರಾಷ್ಟ್ರವಾಗಿ ಭಾರತ

ನವದೆಹಲಿ: ಭಾರತವು ಜೇನು ಉತ್ಪಾದನೆ ಮತ್ತು ರಫ್ತು ಕ್ಷೇತ್ರದಲ್ಲಿ ಮಹತ್ವದ ಮೆಟ್ಟಿಲೇರಿದೆ. 2023–24ರ ಹಣಕಾಸು ವರ್ಷದಲ್ಲಿ ಸುಮಾರು 1.07 ಲಕ್ಷ ಮೆಟ್ರಿಕ್ ಟನ್ ನೈಸರ್ಗಿಕ ಜೇನುತುಪ್ಪವನ್ನು ವಿದೇಶಗಳಿಗೆ ಸಾಗಿಸುವ ಮೂಲಕ ಭಾರತವು ಜಾಗತಿಕವಾಗಿ ಎರಡನೇ ಅತಿದೊಡ್ಡ ಜೇನು ರಫ್ತುದಾರ ರಾಷ್ಟ್ರವಾಗಿ ಹೊರಹೊಮ್ಮಿದೆ. 2020ರಲ್ಲಿ 9ನೇ ಸ್ಥಾನದಲ್ಲಿದ್ದ ಭಾರತವು ಕೇವಲ ನಾಲ್ಕು ವರ್ಷಗಳಲ್ಲಿ ಏಳು ಸ್ಥಾನಗಳ ಏರಿಕೆ ಕಂಡಿದೆ ಎಂದು ಸರ್ಕಾರದ ಅಧಿಕೃತ ಹೇಳಿಕೆ ಭಾನುವಾರ ತಿಳಿಸಿದೆ. ರಾಷ್ಟ್ರೀಯ ಜೇನುಸಾಕಣೆ ಮತ್ತು ಜೇನು ಮಿಷನ್‌ (NBHM) ಕೇಂದ್ರ ಸರ್ಕಾರದ ಪ್ರಮುಖ ಯೋಜನೆಯಾಗಿದ್ದು, ವೈಜ್ಞಾನಿಕ ಜೇನುಸಾಕಣೆ, ಗುಣಮಟ್ಟದ ಜೇನುತುಪ್ಪ ಮತ್ತು ಇತರ ಜೇನುಗೂಡು ಉತ್ಪನ್ನಗಳ ಉತ್ಪಾದನೆಗೆ ಉತ್ತೇಜನ ನೀಡುತ್ತಿದೆ. ಈ ಯೋಜನೆ ರಾಷ್ಟ್ರೀಯ ಜೇನುಸಾಕಣೆ ಮಂಡಳಿ (NBB) ಮೂಲಕ ಜಾರಿಗೆ ತರಲಾಗುತ್ತಿದ್ದು, ‘ಆತ್ಮನಿರ್ಭರ ಭಾರತ’ ಅಭಿಯಾನದ ಭಾಗವಾಗಿ 2020–21 ರಿಂದ 2022–23ರ ವರೆಗೆ ₹500 ಕೋಟಿ ಬಜೆಟ್‌ನೊಂದಿಗೆ ಆರಂಭಿಸಲಾಯಿತು. ನಂತರ…

ಬಿಹಾರ ಚುನಾವಣೆ: 2ನೇ ಹಂತಕ್ಕೆ ಕಾಂಗ್ರೆಸ್‌ ಸ್ಟಾರ್ ಪ್ರಚಾರಕರ ಪಟ್ಟಿ ಬಿಡುಗಡೆ

ನವದೆಹಲಿ: ಬಿಹಾರ ವಿಧಾನಸಭಾ ಚುನಾವಣೆಯ ಎರಡನೇ ಹಂತ ನವೆಂಬರ್ 11ರಂದು ನಡೆಯಲಿದ್ದು, ಅದರ ಹಿನ್ನೆಲೆ ಕಾಂಗ್ರೆಸ್ ಭಾನುವಾರ 40 ಸ್ಟಾರ್ ಪ್ರಚಾರಕರ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಈ ಪಟ್ಟಿಯಲ್ಲಿ ಪಕ್ಷದ ಶ್ರೇಷ್ಟ ನಾಯಕತ್ವದ ಜೊತೆಗೆ ರಾಜ್ಯದ ಪ್ರಮುಖ ಮುಖಂಡರೂ ಸೇರಿದ್ದಾರೆ. ಇದರಿಂದ ಬಿಹಾರದಲ್ಲಿ ತನ್ನ ಅಸ್ತಿತ್ವವನ್ನು ಬಲಪಡಿಸಲು ಕಾಂಗ್ರೆಸ್ ಸಂಪೂರ್ಣ ಶಕ್ತಿಯಿಂದ ಕಣಕ್ಕಿಳಿದಿದೆ ಎಂಬ ಸಂದೇಶ ಸಿಕ್ಕಿದೆ. ಪಟ್ಟಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಬಳಿಕ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಇದ್ದಾರೆ. ಇವರು ಪ್ರಮುಖ ಕ್ಷೇತ್ರಗಳಲ್ಲಿ ಬೃಹತ್ ರ್ಯಾಲಿಗಳು ಹಾಗೂ ಸಾರ್ವಜನಿಕ ಸಭೆಗಳಲ್ಲಿ ಭಾಗವಹಿಸಲಿದ್ದಾರೆ. ಅಶೋಕ್ ಗೆಹ್ಲೋಟ್, ಭೂಪೇಶ್ ಬಘೇಲ್, ದಿಗ್ವಿಜಯ ಸಿಂಗ್, ಅಧೀರ್ ರಂಜನ್ ಚೌಧರಿ, ಸಚಿನ್ ಪೈಲಟ್ ಮೊದಲಾದ ಹಿರಿಯ ನಾಯಕರು ವಿವಿಧ ಪ್ರದೇಶಗಳಲ್ಲಿ ಪ್ರಚಾರ ಅಭಿಯಾನ ಮುನ್ನಡೆಸಲಿದ್ದಾರೆ. ಕೆ.ಸಿ. ವೇಣುಗೋಪಾಲ್, ಪವನ್ ಖೇರಾ, ರಣದೀಪ್ ಸಿಂಗ್ ಸುರ್ಜೇವಾಲಾ, ಇಮ್ರಾನ್…

MES ಪುಂಡಾಟವನ್ನು ಮಟ್ಟಹಾಕಬೇಕು; ಜೆಡಿಎಸ್ ಆಗ್ರಹ

ಬೆಂಗಳೂರು: ಬೆಳಗಾವಿಯಲ್ಲಿ ಕನ್ನಡ ರಾಜ್ಯೋತ್ಸವ ಮೆರವಣಿಗೆ ವೇಳೆಯೇ ದುಷ್ಕರ್ಮಿಗಳು ಐದು ಮಂದಿಗೆ ಚಾಕು ಇರಿದು ಅಟ್ಟಹಾಸ ಮೆರೆದಿರುವ ಘಟನೆಯನ್ನು ಪ್ರತಿಪಕ್ಷ ಜೆಡಿಎಸ್ ಖಂಡಿಸಿದೆ. ಭುವನೇಶ್ವರಿ ಮೂರ್ತಿ ಮೆರವಣಿಯಲ್ಲಿ ಯುವಕರು ನೃತ್ಯ ಮಾಡುತ್ತಿದ್ದ ವೇಳೆ ಏಕಾಏಕಿ ನುಗ್ಗಿದ ದುಷ್ಕರ್ಮಿಗಳು ಮನಸ್ಸೋ ಇಚ್ಛೆ ಚಾಕುವಿನಿಂದ ಇರಿದು ಪರಾರಿಯಾಗಿದ್ದಾರೆ. ಈ ದುರ್ಘಟನೆಯಲ್ಲಿ ಐವರು ಗಾಯಗೊಂಡಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ. ಇದಕ್ಕೆ ಪೊಲೀಸ್ ಇಲಾಖೆಯ ವೈಫಲ್ಯವೇ ಕಾರಣ ಎಂದು ಜೆಡಿಎಸ್ ಆರೋಪಿಸಿದೆ. ಕನ್ನಡ ರಾಜ್ಯೋತ್ಸವದ ಶುಭದಿನದಂದೇ ಬೆಳಗಾವಿಯಲ್ಲಿ ನಾಡದ್ರೋಹಿ ಎಂಇಎಸ್ ಪುಂಡರು ಕರಾಳ ದಿನಾಚರಣೆ ಮೆರವಣಿಗೆಗೆ ಕಾಂಗ್ರೆಸ್ ಸರ್ಕಾರ ಅವಕಾಶ ನೀಡಿದ್ದು, ಮಹಾರಾಷ್ಟ್ರ ನವನಿರ್ಮಾಣ ಸೇನೆ (MNS) ಕಾರ್ಯಕರ್ತರು ಕರಾಳ ದಿನ ಆಚರಿಸಿದ್ದಾರೆ. ಕರ್ತವ್ಯದಲ್ಲಿದ್ದ ಪೊಲೀಸ್ ಅಧಿಕಾರಿ ನಾಡದ್ರೋಹಿಗಳ ಜೊತೆ ಸೆಲ್ಫಿ ತೆಗೆದುಕೊಂಡಿದ್ದು ದುಷ್ಕತ್ಯಕ್ಕೆ ಪ್ರೇರಣೆ ನೀಡಿದಂತಿದೆ ಎಂದು ಜೆಡಿಎಸ್ ತನ್ನ ‘X’ ಖಾತೆಯಲ್ಲಿ ಬರೆದುಕೊಂಡಿದೆ. ಬೆಳಗಾವಿಯಲ್ಲಿ ಸಂಭವಿಸಿರುವ ಈ ದುರ್ಘಟನೆಗಳಿಗೆ ರಾಜ್ಯ…

ಬೆಂಗಳೂರು–ಎರ್ನಾಕುಲಂ ವಂದೇ ಭಾರತ್ ಎಕ್ಸ್‌ಪ್ರೆಸ್‌ನ ವೇಳಾಪಟ್ಟಿ ಬಿಡುಗಡೆ

Aಬೆಂಗಳೂರು: ಕರ್ನಾಟಕ, ತಮಿಳುನಾಡು ಮತ್ತು ಕೇರಳ ರಾಜ್ಯಗಳ ನಡುವೆ ವಂದೇ ಭಾರತ್ ಎಕ್ಸ್‌ಪ್ರೆಸ್‌ ರೈಲು ಸೇವೆಗೆ ತಯಾರಿ ನಡೆದಿದೆ. ರೈಲ್ವೆ ಸಚಿವಾಲಯವು ಬೆಂಗಳೂರು–ಎರ್ನಾಕುಲಂ ವಂದೇ ಭಾರತ್ ಎಕ್ಸ್‌ಪ್ರೆಸ್‌ನ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. ರೈಲ್ವೆ ಸಚಿವಾಲಯದ ಅಧಿಸೂಚನೆ ಪ್ರಕಾರ, ರೈಲು ಸಂಖ್ಯೆ 26651 ಕೆಎಸ್‌ಆರ್ ಬೆಂಗಳೂರು–ಎರ್ನಾಕುಲಂ ವಂದೇ ಭಾರತ್ ಎಕ್ಸ್‌ಪ್ರೆಸ್ ಪ್ರತಿ ದಿನ ಬೆಳಗ್ಗೆ 5:10ಕ್ಕೆ ಬೆಂಗಳೂರು ನಿಲ್ದಾಣದಿಂದ ಹೊರಟು, ಕೃಷ್ಣರಾಜಪುರಂ, ಸೇಲಂ, ಈರೋಡ್, ತಿರುಪ್ಪೂರು, ಕೊಯಮತ್ತೂರು, ಪಾಲಕ್ಕಾಡ್ ಮತ್ತು ತ್ರಿಶೂರ್ ನಿಲ್ದಾಣಗಳಲ್ಲಿ ನಿಗದಿತ ನಿಲುಗಡೆ ನಂತರ ಮಧ್ಯಾಹ್ನ 1:50ಕ್ಕೆ ಎರ್ನಾಕುಲಂ ಜಂಕ್ಷನ್ ತಲುಪಲಿದೆ. ಮರಳಿ, ರೈಲು ಸಂಖ್ಯೆ 26652 ಎರ್ನಾಕುಲಂನಿಂದ ಮಧ್ಯಾಹ್ನ 2:20ಕ್ಕೆ ಹೊರಟು, ರಾತ್ರಿ 11:00ಕ್ಕೆ ಬೆಂಗಳೂರಿಗೆ ತಲುಪಲಿದೆ. . ಈ ವಂದೇ ಭಾರತ್ ಎಕ್ಸ್​​ಪ್ರೆಸ್ ರೈಲು ದಕ್ಷಿಣ ಭಾರತದ ರಾಜ್ಯಗಳ ಪ್ರಮುಖ ನಗರಗಳ ನಡುವಿನ ಸಂಚಾರ ಸಮಯವನ್ನು ಗಣನೀಯವಾಗಿ ಕಡಿಮೆ ಮಾಡುವ ನಿರೀಕ್ಷೆಯಿದೆ.

ಖಾದರ್ ವಿರುದ್ಧ ಭ್ರಷ್ಟಾಚಾರ ಆರೋಪ ಮಡಿದ ಬಿಜೆಪಿ ನಾಯಕರ ವಿರುದ್ಧ ಹಕ್ಕುಚ್ಯುತಿ ದೂರು

ಮಂಗಳೂರು: ರಾಜ್ಯ ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ವಿರುದ್ದ ಬಿಜೆಪಿ ನಾಯಕರು ಮಾಡಿರುವ ಭ್ರಷ್ಟಾಚಾರದ ಆರೋಪ ಸತ್ಯಕ್ಕೆ ದೂರವಾದುದು. ರಾಜಕೀಯ ದುರುದ್ದೇಶದಿಂದ ಈ ಆರೋಪಗಳನ್ನು ಮಾಡಲಾಗಿದ್ದು, ಇದರಿಂದ ಸದನ ಹಕ್ಕುಚ್ಯುತಿ ಉಂಟಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ಪ್ರತಿಕ್ರಿಯಿಸಿದ್ದಾರೆ. ಮಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಐವನ್ ಡಿಸೋಜಾ, ಯು.ಟಿ.ಖಾದರ್ ಅವರು ಶಾಸನ ಸಭೆಯ ಅತ್ಯನ್ನತ ಹುದ್ದೆಯಾಗಿರುವ ವಿಧಾನಸಭಾಧ್ಯಕ್ಷರಾಗಿದ್ದಾರೆ. ಆ ಸ್ಥಾನದಲ್ಲಿರುವವರ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡುವ ಸಂದರ್ಭದಲ್ಲಿ ಶಾಸನಾತ್ಮಕ ಪ್ರಕ್ರಿಯೆಗಳನ್ನು ಅನುಸಬೇಕಾಗುತ್ತದೆ. ಅದನ್ನು ಹೊರತಾಗಿ ವಿಧಾನಸಭೆಯ ಮಾಜಿ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಹಾಗೂ ಹಾಲಿ ಶಾಸಕ ಡಾ.ವೈ.ಭರತ್ ಶೆಟ್ಟಿ ಅವರು ಹಾಲಿ ಸ್ಪೀಕರ್ ವಿರುದ್ಧ ಸುಳ್ಳು ಆರೋಪ ಮಾಡಿದ್ದಾರೆ ಎಂದು ದೂರಿದರು. ಇದು ಸದನವನ್ನು ನಿಂದಿಸಿದ ಹಾಗೂ ಹಕ್ಕುಚ್ಯುತಿಯ ನಡೆಯಾಗಿರುವುದರಿಂದ ಅವರ ವಿರುದ್ದ ಹಕ್ಕುಚ್ಯುತಿ ದೂರನ್ನು ನೀಡಲಾಗುವುದು ಎಂದು ಐವನ್ ಡಿಸೋಜಾ ತಿಳಿಸಿದರು. ಯು.ಟಿ.ಖಾದರ್ ರವರು ವಿಧಾನಸಭಾ…

‘RamalingaReddyForCM’ ಅಭಿಯಾನ ಈ ಬಗ್ಗೆ ಸಾರಿಗೆ ಸಚಿವರ ಸ್ಪಷ್ಟನೆ

ಬೆಂಗಳೂರು: ಪ್ರ’ಸ್ತುತ ಮುಖ್ಯಮಂತ್ರಿ ಸ್ಥಾನ ಸಹ ಖಾಲಿ ಇರುವುದಿಲ್ಲ ಮತ್ತು ನಾನು ಅದರ ಆಕಾಂಕ್ಷಿಯಲ್ಲ’ ಎಂದು ಸಾರಿಗೆ ರಾಮಲಿಂಗ ರೆಡ್ಡಿ ಸ್ಪಷ್ಟಪಡಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಕಳೆದ ಕೆಲವು ದಿನಗಳಿಂದ ‘RamalingaReddyForCM’ ಎಂದು ಪೋಸ್ಟ್’ಗಳು ಹರಿದಾಡುತ್ತಿವೆ. ಈ ಬಗ್ಗೆ ಸಾಮಾಜಿಕ ಮಾಧ್ಯಮದಲ್ಲಿ ಸ್ಪಷ್ಟನೆ ನೀಡಿರುವ ರಾಮಲಿಂಗಾ ರೆಡ್ಡಿ, ‘ರಾಜ್ಯದಲ್ಲಿ ಸರ್ಕಾರ ಸದೃಢವಾಗಿದ್ದು, ಪ್ರಸ್ತುತ ಮುಖ್ಯಮಂತ್ರಿ ಸ್ಥಾನ ಸಹ ಖಾಲಿ ಇರುವುದಿಲ್ಲ ಮತ್ತು ನಾನು ಅದರ ಆಕಾಂಕ್ಷಿಯಲ್ಲ’ ಎಂದು ತಿಳಿಸಿದ್ದಾರೆ. ‘ನನ್ನ ಮೇಲೆ ಮತ್ತು ಪಕ್ಷದ ಮೇಲೆ ಗೌರವವಿದ್ದರೆ, ದಯವಿಟ್ಟು ಈ ರೀತಿಯ ಆಧಾರರಹಿತ ಪ್ರಚಾರವನ್ನು ತಕ್ಷಣವೇ ನಿಲ್ಲಿಸಬೇಕು’ ಎಂದವರು ಮನವಿ ಮಾಡಿದ್ದಾರೆ. ರಾಜ್ಯದ ಮುಖ್ಯಮಂತ್ರಿಯಾಗಲು ಎಲ್ಲಾ ರೀತಿಯಿಂದಲೂ ತಾವು ಅರ್ಹರಿದ್ದೀರಿ, ನಿಮ್ಮ ಸ್ಥಾನಮಾನದ ವಿಚಾರವಾಗಿ ಪಕ್ಷದ ಕಾರ್ಯಕರ್ತರ ಅಭಿಪ್ರಾಯ ತಪ್ಪೇನಿಲ್ಲ. — Umesh Gowda (@Umeshgowda6975) November 2, 2025 ‘ಮುಖ್ಯಮಂತ್ರಿಗಳ ನೇತೃತ್ವದಲ್ಲಿ ನಮ್ಮ ಸರ್ಕಾರ ಉತ್ತಮವಾಗಿ ಜನಪರ…

ದೇಶದ ಹಿತಾಸಕ್ತಿ ಬಗ್ಗೆಯೇ RSS ಅಖಿಲ ಭಾರತ ಕಾರ್ಯಕಾರಿ ಮಂಡಳಿಯಲ್ಲಿ ಚರ್ಚೆ

ಭೋಪಾಲ್: ಆರ್‌ಎಸ್‌ಎಸ್ ದೇಶದ ಏಕತೆ, ಭದ್ರತೆ, ಸಂಸ್ಕೃತಿ ಮತ್ತು ಅಭಿವೃದ್ಧಿಗಾಗಿ ಕೆಲಸ ಮಾಡುವ ಸಂಸ್ಥೆಯಾಗಿದೆ ಎಂದು ಸಮಾಜವು ಸ್ವೀಕರಿಸಿದೆ. ಕೆಲ ರಾಜಕಾರಣಿಗಳ ಬಯಕೆಯಂತೆ ಸಂಘವನ್ನು ನಿಷೇಧಿಸುವುದು ಸಾಧ್ಯವಿಲ್ಲ,” ಎಂದು ಆರ್‌ಎಸ್‌ಎಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ದತ್ತಾತ್ರೇಯ ಹೊಸಬಾಳೆ ಹೇಳಿದ್ದಾರೆ. ಆರ್‌ಎಸ್‌ಎಸ್ ನಿಷೇಧಿಸಬೇಕು ಎಂಬ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಹೊಸಬಾಳೆ, “ಸಂಘವನ್ನು ಸಮಾಜವೇ ರಾಷ್ಟ್ರದ ಏಕತೆ ಮತ್ತು ಅಭಿವೃದ್ಧಿಗಾಗಿ ಕೆಲಸ ಮಾಡುವ ಸಂಸ್ಥೆಯೆಂದು ಗುರುತಿಸಿದೆ. ಹಿಂದೆ ಮೂರು ಬಾರಿ ನಿಷೇಧಿಸಲಾಗಿತ್ತು, ನಂತರ ಏನಾಯಿತು ಎಂಬುದು ಎಲ್ಲರಿಗೂ ತಿಳಿದಿದೆ. ರಾಜಕಾರಣಿಗಳು ಇತಿಹಾಸದಿಂದ ಪಾಠ ಕಲಿಯಬೇಕು,” ಎಂದರು. ಮಧ್ಯಪ್ರದೇಶದ ಜಬಲ್‌ಪುರದಲ್ಲಿ ನಡೆದ ಮೂರು ದಿನಗಳ ಆರ್‌ಎಸ್‌ಎಸ್ ಅಖಿಲ ಭಾರತ ಕಾರ್ಯಕಾರಿ ಮಂಡಳಿ ಸಭೆಯ ಸಮಾರೋಪದ ಸಂದರ್ಭದಲ್ಲಿ ಅವರು ಮಾತನಾಡಿದರು. 2014 ರ ನಂತರ ಆರ್‌ಎಸ್‌ಎಸ್ ಮತ್ತು ಬಿಜೆಪಿ ನಡುವಿನ ಸಂಬಂಧದ ಚಲನಶೀಲತೆ ಕುರಿತು ತಮ್ಮದೇ ದಾಟಿಯಲ್ಲಿ ಅವರು…

ಮಾನಸಿಕ ಒತ್ತಡ ತಗ್ಗಿಸಲು ಚಾಕಲೇಟ್ ಕೂಡಾ ಔಷಧಿಯಾಗಬಹುದು

ಸ್ಮರಣಶಕ್ತಿ ಕುಗ್ಗುತ್ತಿರುವುದೇ ಅಥವಾ ಒತ್ತಡ ಹೆಚ್ಚಿದೆಯೇ? ಹಾಗಾದರೆ, ಸ್ವಲ್ಪ ಡಾರ್ಕ್ ಚಾಕೊಲೇಟ್ ಅಥವಾ ಕೆಲವು ಬೆರ್ರಿ ಹಣ್ಣುಗಳನ್ನು ಸೇವಿಸಿ ನೋಡಿ. ಇತ್ತೀಚಿನ ಪ್ರಾಣಿ ಅಧ್ಯಯನದ ಪ್ರಕಾರ, ಇವುಗಳಲ್ಲಿ ಇರುವ ವಿಶೇಷ ರಾಸಾಯನಿಕಗಳು ಮೆದುಳಿನ ಚಟುವಟಿಕೆಯನ್ನು ಉತ್ತೇಜಿಸಿ, ಸ್ಮರಣಶಕ್ತಿಯನ್ನು ಹೆಚ್ಚಿಸುವುದಲ್ಲದೆ ಒತ್ತಡವನ್ನು ಸಹ ಕಡಿಮೆ ಮಾಡುತ್ತವೆ. ಜಪಾನ್‌ನ ಶಿಬೌರಾ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ವಿಜ್ಞಾನಿಗಳ ಅಧ್ಯಯನವು ಕೋಕೋ ಹಾಗೂ ಬೆರ್ರಿ ಹಣ್ಣುಗಳಲ್ಲಿ ದೊರೆಯುವ ಫ್ಲಾವನಾಲ್‌ಗಳು ಎಂಬ ಸಂಯೋಗಗಳು ಸ್ಮರಣಶಕ್ತಿ ಮತ್ತು ಅರಿವನ್ನು ಸುಧಾರಿಸುತ್ತವೆ ಎಂದು ತೋರಿಸಿದೆ. ‘ಕರಂಟ್ ರಿಸರ್ಚ್ ಇನ್ ಫುಡ್ ಸೈನ್ಸ್’ ಪತ್ರಿಕೆಯಲ್ಲಿ ಪ್ರಕಟವಾದ ಈ ಅಧ್ಯಯನ ಪ್ರಕಾರ, ಫ್ಲಾವನಾಲ್‌ಗಳ ಸೇವನೆಯು ವ್ಯಾಯಾಮದಂತೆಯೇ ಶಾರೀರಿಕ ಪ್ರತಿಕ್ರಿಯೆಗಳನ್ನು ಉಂಟುಮಾಡುತ್ತದೆ — ಕೇಂದ್ರ ನರಮಂಡಲವನ್ನು ಸಕ್ರಿಯಗೊಳಿಸಿ ಗಮನ, ಪ್ರೇರಣೆ ಮತ್ತು ಸ್ಮರಣೆಯನ್ನು ಹೆಚ್ಚಿಸುತ್ತದೆ. ಇವು ನರಕೋಶಗಳನ್ನು ಹಾನಿಯಿಂದ ಕೂಡ ರಕ್ಷಿಸುತ್ತವೆ. “ಫ್ಲಾವನಾಲ್ ಸೇವನೆಯಿಂದ ಉಂಟಾಗುವ ಒತ್ತಡ ಪ್ರತಿಕ್ರಿಯೆಗಳು ದೈಹಿಕ ವ್ಯಾಯಾಮದಿಂದ…

ಬೆಳಗಾವಿ ವಿಚಾರದಲ್ಲಿ ರಾಜಿ ಇಲ್ಲ. ಮಹಾಜನ್ ವರದಿಯೇ ಅಂತಿಮ

ಬೆಂಗಳೂರು: ಕನ್ನಡ ಹೋರಾಟಗಾರರ ಮೇಲಿನ ಕೇಸುಗಳನ್ನು ವಾಪಾಸ್ ಪಡೆಯುವುದಾಗಿ ಸಿಎಂ ಸಿದ್ದರಾಮಯ್ಯ ಪ್ರಕಟಿಸಿದ್ದಾರೆ. ಮೈಸೂರು ಬ್ಯಾಂಕ್ ವೃತ್ತದ ನೃಪತುಂಗ ಮಂಟಪದಲ್ಲಿ ಭುವನೇಶ್ವರಿ ಹಾಗೂ ಅಣ್ಣಮ್ಮ ದೇವತೆಯ ವೈಭವದ ಮೆರವಣಿಗೆಗೆ ಚಾಲನೆ ನೀಡಿ ಮಾತನಾಡಿದ ಸಿದ್ದರಾಮಯ್ಯ, ವಾಟಾಳ್ ಕನ್ನಡದ ವಿಚಾರದಲ್ಲಿ ರಾಜಿ ಮಾಡಿಕೊಳ್ಳದ ಹೋರಾಟಗಾರರು. ದೇವರಾಜ ಅರಸು ಅವರು ಮಂತ್ರಿ ಸ್ಥಾನ ಕೊಡ್ತೀನಿ ಎಂದು ಕರೆದರೂ ಕನ್ನಡ ಪಕ್ಷ ಮತ್ತು ಕನ್ನಡ ಹೋರಾಟ ಬಿಡಲು ವಾಟಾಳ್ ಅವರು ಒಪ್ಪಲಿಲ್ಲ ಎಂದು ನೆನಪಿಸಿದರು. ನಾವೆಲ್ಲರೂ ಕನ್ನಡ ನೆಲ, ಜಲ, ಭಾಷೆ, ಸಂಸ್ಕೃತಿ ಬಗ್ಗೆ ಅಭಿಮಾನ, ಪ್ರೀತಿ ಬೆಳೆಸಿಕೊಳ್ಳಬೇಕು. ನಮ್ಮ ನೆಲದಲ್ಲಿ ಕನ್ನಡದ ವಾತಾವರಣ ಬೆಳೆಸಬೇಕು‌. ಇದಕ್ಕಾಗಿ ಯಾರು ಯಾವುದೇ ಭಾಷೆಯಲ್ಲಿ ಮಾತನಾಡಿದರೂ ನೀವು ಕನ್ನಡದಲ್ಲೇ ಉತ್ತರ ಕೊಡಬೇಕು ಎಂದು ಹೇಳಿದರು. . ಮೈಸೂರು ವಿಶ್ವ ವಿದ್ಯಾಲಯದಿಂದ ದೇವರಾಜು ಅರಸು ಅವರಿಗೆ ಮರಣೋತ್ತರ ಡಾಕ್ಟರೇಟ್ ಪ್ರಶಸ್ತಿ ನೀಡಬೇಕು ಎನ್ನುವ ವಾಟಾಳ್ ನಾಗರಾಜ್…