ಹರಿಯಾಣದಲ್ಲಿ ಮತಗಳ್ಳತನ; ಬೆಂಗಳೂರಿನಲ್ಲಿ ಯುವ ಕಾಂಗ್ರೆಸ್ ಪ್ರತಿಭಟನೆ

ಬೆಂಗಳೂರು : ಹರಿಯಾಣ ರಾಜ್ಯದಲ್ಲಿ ನಡೆದ 25 ಲಕ್ಷಕ್ಕೂ ಹೆಚ್ಚು ಮತಗಳ್ಳತನದ ಘಟನೆ ದೇಶದ ಪ್ರಜಾಸತ್ತಾತ್ಮಕ ವ್ಯವಸ್ಥೆಯ ಮೇಲೆ ನಡೆದ ಅತ್ಯಂತ ದೊಡ್ಡ ದಾಳಿ ಎಂದು ರಾಜ್ಯ ಯುವ ಕಾಂಗ್ರೆಸ್ ಖಂಡಿಸಿದೆ. ಕೇಂದ್ರ ಸರ್ಕಾರ ಹಾಗೂ ಚುನಾವಣಾ ಆಯೋಗದ ನಿರ್ಲಕ್ಷ್ಯ ಮತ್ತು ಜನರ ಮತಹಕ್ಕಿನ ಅಪಹರಣದ ವಿರುದ್ಧವಾಗಿ, ರಾಜ್ಯ ಯುವ ಕಾಂಗ್ರೆಸ್ ಸಮಿತಿ ಇಂದು ಸಂಜೆ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷರಾದ ಹೆಚ್ ಎಸ್ ಮಂಜುನಾಥ ಗೌಡರು ಅವರ ನೇತೃತ್ವದಲ್ಲಿ ಪ್ರತಿಭಟನೆಯನ್ನು ನಡೆಯಿತು. ಕೇಂದ್ರ ಸರ್ಕಾರ ಹಾಗೂ ಚುನಾವಣಾ ಆಯೋಗದ ನಡೆಯನ್ನು ಖಂಡಿಸಿದ ನಾಯಕರು ಪ್ರತಿಕೃತಿ ದಹನ ಮಾಡಿ ಆಕ್ರೋಶ ಹೊರಹಾಕಿದರು. ಈ ಪ್ರತಿಭಟನೆಯಲ್ಲಿ ರಾಜ್ಯ ಯುವ ಕಾಂಗ್ರೆಸ್ ಸಮಿತಿಯು ಎಲ್ಲಾ ಜಿಲ್ಲಾ ಮತ್ತು ತಾಲೂಕು ಯುವ ಕಾಂಗ್ರೆಸ್ ಅಧ್ಯಕ್ಷರು, ಕಮಿಟಿ ಸದಸ್ಯರು, ಪದಾಧಿಕಾರಿಗಳು ಭಾಗವಹಿಸಿದ್ದರು.

ಕನ್ನಡ ಚಿತ್ರರಂಗದ ಖ್ಯಾತ ನಟ ಹರೀಶ್ ರಾಯ್ ಇನ್ನಿಲ್ಲ

ಬೆಂಗಳೂರು: ಖ್ಯಾತ ನಟ ಹರೀಶ್ ರಾಯ್ ವಿಧಿವಶರಾಗಿದ್ದಾರೆ. ಅನೇಕ ಕನ್ನಡ ಸಿನಿಮಾಗಳಲ್ಲಿ ಅಭಿನಯಿಸಿ ಜನಪ್ರಿಯತೆ ಪಡೆದಿದ್ದ ಹರೀಶ್ ರಾಯ್ ಹಲವು ದಶಕಗಳಿಂದ ಸಿನಿಮಾ ಲೋಕದಲ್ಲಿ ಸೇವೆ ಸಲ್ಲಿಸುತ್ತಿದ್ದರು. 55 ವರ್ಷ ವಯಸ್ಸಿನ ಅವರು ಕ್ಯಾನ್ಸರ್​​ನಿಂದ ಬಳಲುತ್ತಿದ್ದರು. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಚಿಕಿತ್ಸೆ ಫಲಕಾರಿ ಆಗದೇ ಗುರುವಾರ ಕೊನೆಯುಸಿರೆಳೆದಿದ್ದಾರೆ. ಪತ್ನಿ ಆರತಿ ಹಾಗೂ ಮಗ ರೋಷನ್ ಸಹಿತ ಅನೇಕ ಬಂಧುಗಳನ್ನು ಅವರು ಆಗಲಿದ್ದಾರೆ. ಹರೀಶ್ ರಾಯ್ ನಿಧನಕ್ಕೆ ಕನ್ನಡ ಚಿತ್ರರಂಗದ ಗಣ್ಯರು ಕಂಬನಿ ಮಿಡಿದಿದ್ದಾರೆ.

RSS ನಿರ್ಬಂಧದ ಪ್ರಯತ್ನ ವಿಫಲ; ಸರ್ಕಾರದ ಮೇಲ್ಮನವಿ ವಜಾ

ಧಾರವಾಡ: ರಾಷ್ಟ್ರೀಯ ಸ್ವಯಂಸೇವಕ (ಆರ್​​ಎಸ್​ಎಸ್) ಚಟುವಟಿಕೆಗಳಿಗೆ ನಿರ್ಬಂಧ ಹೇರುವ ರಾಜ್ಯ ಸರ್ಕಾರದ ಪ್ರಯತ್ನಕ್ಕೆ ಮತ್ತೆ ಹಿನ್ನಡೆಯಾಗಿದೆ. ಸರ್ಕಾರ ಹೊರಡಿಸಿದ್ದ ಅಧಿಸೂಚನೆಗೆ ಹೈಕೋರ್ಟ್ ನೀಡಿದ್ದ ತಡೆಯಾಜ್ಞೆ ಪ್ರಶ್ನಿಸಿ ಸರ್ಕಾರದ ಪರವಾಗಿ ಸಲ್ಲಿಕೆಯಾಗಿರುವ ಮೇಲ್ಮನವಿಯನ್ನ ಹೈಕೋರ್ಟ್ ದ್ವಿಸದಸ್ಯ ಪೀಠ ವಜಾಗೊಳಿಸಿದೆ. ಸರ್ಕಾರದ ವಾದ ಬಗ್ಗೆ ತೃಪ್ತವಾಗದ ನ್ಯಾಯಪೀಠ, ಪ್ರಕರಣವನ್ನು ಏಕಸದಸ್ಯ ಪೀಠದಲ್ಲೇ ಇತ್ಯರ್ಥ ಮಾಡಿಕೊಳ್ಳುವಂತೆ ಎಂದು ವಿಭಾಗೀಯ ಪೀಠ ತಿಳಿಸಿದೆ.

RSS ಶತಾಬ್ದಿ ಸಂಭ್ರಮ; ನ.8, 9ರಂದು ಬೆಂಗಳೂರಿನಲ್ಲಿ ಮೋಹನ್ ಭಾಗವತ್ ಅವರಿಂದ ವಿಶೇಷ ಉಪನ್ಯಾಸಮಾಲೆ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘವು ಕಳೆದ ವಿಜಯದಶಮಿಯಂದು (ಅಕ್ಟೋಬರ್ 2, 2025) ತನ್ನ ನೂರು ವರ್ಷವನ್ನು ಪೂರ್ಣಗೊಳಿಸಿ ರಾಷ್ಟ್ರದ ಸರ್ವಾಂಗೀಣ ಉನ್ನತಿಯ ಧ್ಯೇಯದೊಂದಿಗೆ ಮುನ್ನಡೆದಿದೆ. ಶತಾಬ್ದಿ ವರ್ಷದಲ್ಲಿ ವಿಜಯದಶಮಿ ಉತ್ಸವಗಳು, ಯುವ ಸಮಾವೇಶ, ಮನೆಮನೆ ಸಂಪರ್ಕ, ಹಿಂದು ಸಮ್ಮೇಳನ, ಸಾಮಾಜಿಕ ಸದ್ಭಾವನಾ ಸಮಾವೇಶ, ಪ್ರಮುಖ ನಾಗರಿಕರ ವಿಚಾರಗೋಷ್ಠಿ ಮುಂತಾದ ವಿವಿಧ ಚಟುವಟಿಕೆಗಳನ್ನು ದೇಶಾದ್ಯಂತ ಆಯೋಜಿಸಲಾಗಿದೆ. ಸಮಾಜದ ಗಣ್ಯಮಾನ್ಯರು, ನೀತಿ ನಿರೂಪಕರು ಹಾಗೂ ಸಮಾಜಸೇವಕರೊಂದಿಗಿನ ಸಂವಾದವನ್ನು ಸಂಘವು ನೂರನೇ ವರ್ಷದಲ್ಲೂ ಮುಂದುವರಿಸಿದ್ದು, ಬೆಂಗಳೂರಿನಲ್ಲಿ ಇದೇ ನವೆಂಬರ್ 8 ಹಾಗೂ 9 ರಂದು ಸರಸಂಘಚಾಲಕರಾದ ಡಾ|| ಮೋಹನ್ ಭಾಗವತ್ ಅವರು ವಿಶೇಷ ಉಪನ್ಯಾಸಮಾಲೆಯಲ್ಲಿ ಮಾತನಾಡಲಿದ್ದಾರೆ. ಶತಾಬ್ದಿ ವರ್ಷದಲ್ಲಿ ದೇಶದ 4 ಕಡೆಗಳಲ್ಲಿ (ನವದೆಹಲಿ, ಬೆಂಗಳೂರು, ಮುಂಬಯಿ ಮತ್ತು ಕೊಲ್ಕತ್ತಾ) ಡಾ|| ಮೋಹನ್ ಭಾಗವತ್ ಅವರು ಈ ಉಪನ್ಯಾಸಮಾಲೆಗಳನ್ನು ನಡೆಸಿಕೊಡಲಿದ್ದಾರೆ. ನವದೆಹಲಿಯಲ್ಲಿ ಕಳೆದ ಆಗಸ್ಟ್ 26, 27, 28 ರಂದು ನವದೆಹಲಿಯಲ್ಲಿ…

ಮೇಕೆದಾಟು, ಕೃಷ್ಣಾ, ಮಹದಾಯಿ ವಿವಾದ; ವಕೀಲರೊಂದಿಗೆ ಡಿಕೆಶಿ ಚರ್ಚೆ

ನವದೆಹಲಿ; ಮೇಕೆದಾಟು ಸೇರಿದಂತೆ ಸುಪ್ರೀಂಕೋರ್ಟ್ ಅಲ್ಲಿ ಬಾಕಿಯಿರುವ ಕರ್ನಾಟಕದ ಜಲ ವಿವಾದಗಳ ಕುರಿತು ಕರ್ನಾಟಕದ ಪರ ವಾದಿಸುತ್ತಿರುವ ಹಿರಿಯ ವಕೀಲರಾದ ಮೋಹನ್ ವಿ ಕಾತರಾಕಿ, ನಿಶಾಂತ್ ಪಾಟೀಲ್, ರಾಜ್ಯದ ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ, ಅಪರ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತಾ ಹಾಗೂ ನನ್ನ ತಾಂತ್ರಿಕ ಸಲಹೆಗಾರರಾದ ಜೈಪ್ರಕಾಶ್ ಜೊತೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ದೆಹಲಿಯ ಕರ್ನಾಟಕ ಭವನದಲ್ಲಿ ಚರ್ಚೆ ನಡೆಸಿದರು. ಕೃಷ್ಣಾ ಮೇಲ್ದಂಡೆ ಯೋಜನೆ ಸಂಬಂಧ ಈಗಾಗಲೇ ರೈತರಿಗೆ ಭೂ ಪರಿಹಾರ ನೀಡಲು ತೀರ್ಮಾನ ಮಾಡಲಾಗಿದೆ. ಹೊಸ ಕಾಯ್ದೆ ಪ್ರಕಾರ ಇದಕ್ಕೆ ಪ್ರತ್ಯೇಕ ಪ್ರಾಧಿಕಾರ ರಚಿಸಬೇಕಿದೆ. ಬೇರೆ ರಾಜ್ಯಗಳಲ್ಲಿ ಈ ಪ್ರಾಧಿಕಾರ ರಚನೆ ಆಗಿವೆ. ಬಿಹಾರದಲ್ಲಿ ಪ್ರಾಧಿಕಾರದ ಮೂಲಕ ಸಾವಿರಾರು ಪ್ರಕರಣ ಬಗೆಹರಿಸಲಾಗಿದೆ. ಕಾನೂನು ಉಪಯೋಗಿಸಿಕೊಳ್ಳಬೇಕು. ಮಹದಾಯಿ ಯೋಜನೆ ಸಂಬಂಧ ಕೆಲವು ದಾಖಲೆ ಸಿದ್ಧಪಡಿಸಲು ಅವರು ಸೂಚಿಸಿದರು. ಮೇಕೆದಾಟು ಯೋಜನೆ ಸಂಬಂಧ ಕೇಂದ್ರ ಸಚಿವರ ಪತ್ರ ನಮ್ಮ…

ನಂದಿನಿ ತುಪ್ಪ ದುಬಾರಿ; ‘ಹಗಲು ದರೋಡೆ’ ಎಂದ ಜೆಡಿಎಸ್

ಬೆಂಗಳೂರು: ನಂದಿನಿ ತುಪ್ಪ ದುಬಾರಿಯಾಗಲಿದೆ. ನಂದಿನಿ ತುಪ್ಪದ ಬೆಲೆಯನ್ನು ಏಕಾಏಕಿ 1 ಕೆ.ಜಿ.ಗೆ 90 ರೂ. ಏರಿಸಲು ಸರ್ಕಾರ ಸಹಮತ ವ್ಯಕ್ತಪಡಿಸಿದೆ. ಕೆಎಂಎಫ್ ನಿರ್ಧಾರ ಬಗ್ಗೆ ಸಾರ್ವಜನಿಕವಲಯದಲ್ಲಿ ಆಕ್ಷೇಪ ವ್ಯಕ್ತವಾಗಿದೆ. ಪ್ರತಿಪಕ್ಷ ಜೆಡಿಎಸ್ ಕೂಡಾ ಆಕ್ರೋಶ ಹೊರಹಾಕಿದೆ. "ಸಾಲ ಮಾಡಿಯಾದರೂ ತುಪ್ಪ ತಿನ್ನು" ಗಾದೆ ಮಾತು. ಗ್ರಾಹಕರ ಹೊಟ್ಟೆ ಮೇಲೆ ಹೊಡೆದು @INCKarnatakaಸರ್ಕಾರ ತುಪ್ಪ ತಿನ್ನುತ್ತಿದೆ. ಕೇಂದ್ರ ಸರ್ಕಾರ ಜಿಎಸ್‌ಟಿ ಕಡಿಮೆಮಾಡಿದ್ದರೂ, ಕಾಂಗ್ರೆಸ್‌ ಸರ್ಕಾರ ನಂದಿನಿ ತುಪ್ಪದ ಬೆಲೆಯನ್ನು ಏಕಾಏಕಿ 1 ಕೆ.ಜಿ.ಗೆ 90 ರೂ. ಏರಿಸಿ ಹಗಲು ದರೋಡೆ ಮಾಡುತ್ತಿದೆ. ಗ್ಯಾರಂಟಿಗಾಗಿ ಬೊಕ್ಕಸ ಖಾಲಿಮಾಡಿರುವ… pic.twitter.com/2Di1Koit0X — Janata Dal Secular (@JanataDal_S) November 5, 2025 ‘ಸಾಲ ಮಾಡಿಯಾದರೂ ತುಪ್ಪ ತಿನ್ನು’ ಗಾದೆ ಮಾತು. ಗ್ರಾಹಕರ ಹೊಟ್ಟೆ ಮೇಲೆ ಹೊಡೆದು ಕಾಂಗ್ರೆಸ್ ಸರ್ಕಾರ ತುಪ್ಪ ತಿನ್ನುತ್ತಿದೆ’ ಎಂದು ಜೆಡಿಎಸ್ ಪ್ರತಿಕ್ರಿಯಿಸಿದೆ. ಕೇಂದ್ರ ಸರ್ಕಾರ ಜಿಎಸ್‌ಟಿ…