ಬೆಂಗಳೂರು: ‘ನಮ್ಮ ಮತ- ನಮ್ಮ ಹಕ್ಕು’ ಘೋಷಣೆಯಡಿ, ಮತಗಳ್ಳತನ ವಿರುದ್ಧದ ರಾಹುಲ್ ಗಾಂಧಿಯವರ ಹೋರಾಟಕ್ಕೆ ಕೈ ಜೋಡಿಸಿರುವ ಪ್ರದೇಶ ಕಾಂಗ್ರೆಸ್, ಕರ್ನಾಟಕದಲ್ಲಿ 1,12,41,000 ಸಹಿ ಸಂಗ್ರಹ ಮಾಡಿದೆ. ಕೆಪಿಸಿಸಿ ಕಚೇರಿಯಲ್ಲಿ ಶನಿವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಉಪಸ್ತಿಯಲ್ಲಿ ಜಂಟಿ ಪತ್ರಿಕಾಗೋಷ್ಠಿ ನಡೆಸಿದ ಉಪಮುಖ್ಯಮಂತ್ರಿಯೂ ಆದ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ.ಶಿವಕುಮಾರ್, ರಾಜ್ಯದಲ್ಲಿ ನಡೆದ ವೋಟ್ ಚೋರಿ ಸಹಿ ಸಂಗ್ರಹಣಾ ಅಭಿಯಾನಕ್ಕೆ ಸಂಬಂಧಿಸಿದಂತೆ ಮಾಹಿತಿ ನೀಡಿದರು. ಪ್ರಜಾಪ್ರಭುತ್ವದ ಶಕ್ತಿಯಾದ ಮತವನ್ನು ಕದಿಯುವ ಪ್ರಯತ್ನಗಳ ವಿರುದ್ಧ ನಮ್ಮ ನಾಯಕರಾದ ರಾಹುಲ್ ಗಾಂಧಿ ಅವರು ಕರ್ನಾಟಕದಿಂದಲೇ ಧ್ವನಿ ಎತ್ತಿದ್ದಾರೆ. ಮಹದೇವಪುರ, ಆಳಂದ ಮಾತ್ರವಲ್ಲದೆ ವ್ಯಾಪಕವಾಗಿ ಹೊರ ರಾಜ್ಯಗಳಲ್ಲಿಯೂ ಮತಗಳ್ಳತನ ಪ್ರಕರಣಗಳು ನಡೆದಿರುವ ಬಗ್ಗೆ ಸಾಕ್ಷಿಸಮೇತ ಮಾಹಿತಿ ನೀಡಿ, ಮತದಾರರ ಹಕ್ಕುಗಳ ಉಳಿವಿಗಾಗಿ ಹೋರಾಟ ಮುಂದುವರೆಸಿದ್ದಾರೆ ಎಂದರು. ಈ ಹಿಂದೆ ಚಿಲುಮೆ ಸಂಸ್ಥೆಯನ್ನು ಬಳಸಿಕೊಂಡು ಯಾವ ರೀತಿಯಲ್ಲಿ ಮತದಾರರ ಮಾಹಿತಿ ಕಳ್ಳತನ ಮಾಡಲಾಯಿತು ಎಂಬುದು…
Day: November 8, 2025
ರಸ್ತೆ ಗುಂಡಿ, ಕಸ ಅವಾಂತರ; ಸರ್ಕಾರಕ್ಕೆ ಮುಜುಗರ ತಂದ ಬಿಜೆಪಿ ಅಭಿಯಾನ
ಬೆಂಗಳೂರು: ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರ: ಗುಂಡಿ ಬಿದ್ದ ರಸ್ತೆಗಳು ಮತ್ತು ಕಸ ವಿಲೇವಾರಿಯಾಗದೇ ಇರುವುದು ಕಾಂಗ್ರೆಸ್ ಸರ್ಕಾರ ವೈಫಲ್ಯ ಖಂಡಿಸಿ ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ವಿವಿಧ ಬಡಾವಣೆಗಳಲ್ಲಿ ಬಿಜೆಪಿ ಪಕ್ಷದ ವತಿಯಿಂದ ಜನಜಾಗೃತಿ ಅಭಿಯಾನ ನಡೆಯಿತು. ವಿರೋಧ ಪಕ್ಷದ ನಾಯಕರಾದ ಆರ್.ಅಶೋಕ್ ರವರು, ಶಾಸಕರುಗಳಾದ ಎಸ್.ಸುರೇಶ್ ಕುಮಾರ್, ಡಾ.ಸಿ.ಎನ್.ಅಶ್ವಥ್ ನಾರಾಯಣ್, ಮುನಿರತ್ನ, ವಿಧಾನಪರಿಷತ್ ಮಾಜಿ ಸದಸ್ಯ ಅಶ್ವಥ್ ನಾರಾಯಣ್, ಬಿಜೆಪಿ ಉತ್ತರ ಜಿಲ್ಲಾಧ್ಯಕ್ಷರಾದ ಎಸ್.ಹರೀಶ್, ದಕ್ಷಿಣ ಜಿಲ್ಲಾ ಬಿಜೆಪಿ ಉಪಾಧ್ಯಕ್ಷರು, ನಿಕಟಪೂರ್ವ ಬಿಬಿಎಂಪಿ ಸದಸ್ಯರಾದ ಕೆ.ಉಮೇಶ್ ಶೆಟ್ಟಿರವರು ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ಗುಂಡಿ ಬಿದ್ದ ರಸ್ತೆಗಳು ಹಾಗೂ ಕಸ ರಾಶಿಗಳು ಬಿದ್ದಿರುವ ಸ್ಥಳಕ್ಕೆ ವೀಕ್ಷಣೆ ಮಾಡಿದರು. ಇದೇ ಸಂದರ್ಭದಲ್ಲಿ ಆರ್.ಅಶೋಕ್ ರವರು ಮಾತನಾಡಿ ರಾಜ್ಯ ಕಾಂಗ್ರೆಸ್ ಸರ್ಕಾರ ಗುಂಡಿಗಳ ಸರ್ಕಾರ, ಗುಂಡಿಗಳ ಕ್ಯಾಬಿನೇಟ್ ಆಗಿದೆ ಎಂದರು. ಎರಡುವರೆ ವರ್ಷಗಳಿಂದ ಯಾವುದೇ ಅಭವೃದ್ದಿ ಕೆಲಸವಾಗಿಲ್ಲ ಗ್ಯಾರೆಂಟಿ, ಗ್ಯಾರೆಂಟಿ ಎಂದು…
‘ನಮ್ಮ ಮತ- ನಮ್ಮ ಹಕ್ಕು’: ಮತಗಳ್ಳತನ ವಿರುದ್ಧ ಕರ್ನಾಟಕದಲ್ಲಿ 1,12,41,000 ಸಹಿ ಸಂಗ್ರಹ
ಬೆಂಗಳೂರು: ‘ನಮ್ಮ ಮತ- ನಮ್ಮ ಹಕ್ಕು’ ಘೋಷಣೆಯಡಿ, ಮತಗಳ್ಳತನ ವಿರುದ್ಧದ ರಾಹುಲ್ ಗಾಂಧಿಯವರ ಹೋರಾಟಕ್ಕೆ ಕೈ ಜೋಡಿಸಿರುವ ಪ್ರದೇಶ ಕಾಂಗ್ರೆಸ್, ಕರ್ನಾಟಕದಲ್ಲಿ 1,12,41,000 ಸಹಿ ಸಂಗ್ರಹ ಮಾಡಿದೆ. ಕೆಪಿಸಿಸಿ ಕಚೇರಿಯಲ್ಲಿ ಶನಿವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಉಪಸ್ತಿಯಲ್ಲಿ ಜಂಟಿ ಪತ್ರಿಕಾಗೋಷ್ಠಿ ನಡೆಸಿದ ಉಪಮುಖ್ಯಮಂತ್ರಿಯೂ ಆದ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ.ಶಿವಕುಮಾರ್, ರಾಜ್ಯದಲ್ಲಿ ನಡೆದ ವೋಟ್ ಚೋರಿ ಸಹಿ ಸಂಗ್ರಹಣಾ ಅಭಿಯಾನಕ್ಕೆ ಸಂಬಂಧಿಸಿದಂತೆ ಮಾಹಿತಿ ನೀಡಿದರು. ಪ್ರಜಾಪ್ರಭುತ್ವದ ಶಕ್ತಿಯಾದ ಮತವನ್ನು ಕದಿಯುವ ಪ್ರಯತ್ನಗಳ ವಿರುದ್ಧ ನಮ್ಮ ನಾಯಕರಾದ ರಾಹುಲ್ ಗಾಂಧಿ ಅವರು ಕರ್ನಾಟಕದಿಂದಲೇ ಧ್ವನಿ ಎತ್ತಿದ್ದಾರೆ. ಮಹದೇವಪುರ, ಆಳಂದ ಮಾತ್ರವಲ್ಲದೆ ವ್ಯಾಪಕವಾಗಿ ಹೊರ ರಾಜ್ಯಗಳಲ್ಲಿಯೂ ಮತಗಳ್ಳತನ ಪ್ರಕರಣಗಳು ನಡೆದಿರುವ ಬಗ್ಗೆ ಸಾಕ್ಷಿಸಮೇತ ಮಾಹಿತಿ ನೀಡಿ, ಮತದಾರರ ಹಕ್ಕುಗಳ ಉಳಿವಿಗಾಗಿ ಹೋರಾಟ ಮುಂದುವರೆಸಿದ್ದಾರೆ ಎಂದರು. ಈ ಹಿಂದೆ ಚಿಲುಮೆ ಸಂಸ್ಥೆಯನ್ನು ಬಳಸಿಕೊಂಡು ಯಾವ ರೀತಿಯಲ್ಲಿ ಮತದಾರರ ಮಾಹಿತಿ ಕಳ್ಳತನ ಮಾಡಲಾಯಿತು ಎಂಬುದು…
4 ಹೊಸ ವಂದೇ ಭಾರತ್ ರೈಲುಗಳಿಗೆ ಪ್ರಧಾನಿ ಮೋದಿ ಚಾಲನೆ
ವಾರಣಾಸಿ: ಬನಾರಸ್ ರೈಲು ನಿಲ್ದಾಣ ಶನಿವಾರ ವಿಶೇಷ ಸನ್ನಿವೇಶಕ್ಕೆ ಸಾಕ್ಷಿಯಾಯಿತು. 4 ಹೊಸ ಹೊಸ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲುಗಳಿಗೆ ಚಾಲನೆ ನೀಡಲಾಯಿತು. Delighted to flag off four Vande Bharat trains. These will enhance connectivity and provide greater comfort for citizens. https://t.co/kHl2ufYLoF — Narendra Modi (@narendramodi) November 8, 2025 ಪ್ರಧಾನಿ ನರೇಂದ್ರ ಮೋದಿ ಅವರು ಈ ಹೊಸ ರೈಲುಗಳಿಗೆ ಚಾಲನೆ ನೀಡಿದರು. ಬನಾರಸ್-ಖಜುರಾಹೊ, ಲಕ್ನೋ-ಸಹಾರನ್‌ಪುರ, ಫಿರೋಜ್‌ಪುರ-ದೆಹಲಿ ಮತ್ತು ಎರ್ನಾಕುಲಂ-ಬೆಂಗಳೂರು ಮಾರ್ಗಗಳಲ್ಲಿ ಈ ರೈಲುಗಳು ಕಾರ್ಯನಿರ್ವಹಿಸಲಿವೆ. ಈ ನಗರಗಳ ನಡುವೆ ಹೈಸ್ಪೀಡ್ ರೈಲುಗಳ ಸಂಚಾರಕ್ಕೆ ಸುದೀರ್ಘ ಆಗ್ರಹಗಳಿತ್ತು. ಇದೀಗ ಈ ಅರೆ-ಹೈ-ಸ್ಪೀಡ್ ರೈಲುಗಳು ಪ್ರಮುಖ ನಿಲ್ದಾಣಗಳ ನಡುವಿನ ಪ್ರಯಾಣದ ಸಮಯವನ್ನು ಗಮನಾರ್ಹವಾಗಿ ಕಡಿಮೆ ಮಾಡುತ್ತದೆ. ಹಲವು ರಾಜ್ಯಗಳನ್ನು ಸಂಪರ್ಕಿಸುವುದರಿಂದ ಔದ್ಯೋಗಿಕ ಕ್ಷೇತ್ರಕ್ಕೂ ಅನುಕೂಲವಾಗಲಿದೆ ಎಂದು ನಂಬಲಾಗಿದೆ.
ಕೊನೆಗೂ ಮಣಿದ ಸರ್ಕಾರ ಪ್ರತಿ ಟನ್ ಕಬ್ಬಿಗೆ ₹3300 ರೂ ದರ ನಿಗದಿ; ಬಿಜೆಪಿ ಸ್ವಾಗತ
ಬೆಂಗಳೂರು: ರೈತರ ಬೇಡಿಕೆಗಳನ್ನು ಕಾಲಕಾಲಕ್ಕೆ ಈಡೇರಿಸುವುದು ಅಧಿಕಾರದಲ್ಲಿರುವ ಸರ್ಕಾರಗಳ ಕರ್ತವ್ಯ. ಕಾಂಗ್ರೆಸ್ ಸರ್ಕಾರ ಈ ನಿಟ್ಟಿನಲ್ಲಿ ಈವರೆವಿಗೂ ಅನುಸರಿಸಿದ ಉಪೇಕ್ಷೆ ಧೋರಣೆಗಳನ್ನು ಮುಂದಾದರೂ ನಿಲ್ಲಿಸಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ. ದೇಶದ ಬೆನ್ನೆಲುಬು ರೈತ, ‘ಅನ್ನದಾತ ಮುನಿದರೆ ಸರ್ಕಾರ ನಿದ್ರೆಗೆ ಜಾರಲು ಸಾಧ್ಯವೇ ಇಲ್ಲ’ ಎಂಬ ಇತಿಹಾಸ ಮರುಕಳಿಸಿದೆ. ಬೆಳಗಾವಿ ಜಿಲ್ಲೆಯ ಗುರ್ಲಾಪುರ ಕ್ರಾಸ್, ಬೆಳಗಾವಿ, ಬಾಗಲಕೋಟೆ, ವಿಜಯಪುರ, ಚಿಕ್ಕೋಡಿ ಜಿಲ್ಲೆಗಳಲ್ಲಿ ನಡೆದ ಕಬ್ಬು ಬೆಳೆಗಾರ ರೈತರ ಸಂಘಟಿತ ಹೋರಾಟಕ್ಕೆ ಜಯ ಸಿಕ್ಕಿದೆ. ರೈತರ ಹೋರಾಟಕ್ಕೆ ಕೊನೆಗೂ ಮಣಿದ ಸರ್ಕಾರ ಪ್ರತಿ ಟನ್ ಕಬ್ಬಿಗೆ ₹3300 ರೂ ದರ ನಿಗದಿ ಪಡಿಸಿ ನಿರ್ಧಾರ ಕೈಗೊಂಡಿದೆ. ಹೋರಾಟನಿರತ ರೈತ ಬಂಧುಗಳು ನಿರ್ಧಾರವನ್ನು ಸ್ವಾಗತಿಸಿ ಮುಷ್ಕರವನ್ನು ಕೈ ಬಿಟ್ಟಿರುವುದು ಸಮಂಜಸವಾಗಿದೆ ಎಂದು ಅವರು ಹೇಳಿದ್ದಾರೆ. ಈ ಹೋರಾಟದಲ್ಲಿ ಭಾರತೀಯ ಜನತಾ ಪಾರ್ಟಿಯ ಕಾರ್ಯಕರ್ತನಾಗಿ, ರೈತನಾಯಕ ಯಡಿಯೂರಪ್ಪ ಅವರ ಪುತ್ರನಾಗಿ…
‘ಸಂವೇದನೆ ಉಳ್ಳವರು ನರನಿಂದ ನಾರಾಯಣರಾಗಬಲ್ಲರು’ ಡಾ.ಮೋಹನ್ ಭಾಗವತ್
ಬೆಂಗಳೂರು: ಸಮಾಜದ ಕುರಿತು ಸೂಕ್ಷ್ಮ ಸಂವೇದನೆಯನ್ನು ಬೆಳೆಸಿಕೊಂಡ ವ್ಯಕ್ತಿಯು ನರನಿಂದ ನಾರಾಯಣನಾಗಬಲ್ಲ. ಅದೇ ರೀತಿ ಸಂಸ್ಕಾರ ರಹಿತ ವ್ಯಕ್ತಿಯು ನರಾಧಮನೂ ಆಗುವ ಅಪಾಯವಿದೆ. ಇಡೀ ಸಮಾಜ ಸಂವೇದನಶೀಲವಾಗಬೇಕು ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಸಂಘಚಾಲಕ ಡಾ. ಮೋಹನ್ ಭಾಗವತ್ ಅವರು ಅಭಿಪ್ರಾಯಪಟ್ಟರು. ಅವಕಾಶವಂಚಿತ ಮಕ್ಕಳ ಆಶ್ರಯ ತಾಣವಾದ ‘ನೆಲೆ’ಯ 25 ವರ್ಷದ ಸಮಾರೋಪ ಸಮಾರಂಭದ ಪ್ರಯುಕ್ತ ಜೆ.ಪಿ. ನಗರದ ಆರ್.ವಿ. ದಂತ ಕಾಲೇಜಿನಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದರು. ಒಂದು ಕೆಲಸವನ್ನು 25 ವರ್ಷ ನಿರಂತರವಾಗಿ ನಡೆಸುವುದು ಕಷ್ಟದ ಕೆಲಸ. ಕೆಲಸ ಒಳ್ಳೆಯದೇ ಆದರೂ ಸಾಗುವ ದಾರಿಯಲ್ಲಿ ಬಳಲಿಕೆ ಆಗುತ್ತದೆ. ಗುಡ್ಡ ಏರಬೇಕಾದರೆ ಶ್ರಮ ವಹಿಸಬೇಕಾಗುತ್ತದೆ, ಇಳಿಯಬೇಕಾದರೂ ಸಮತೋಲನಕ್ಕೆ ಶ್ರಮ ವಹಿಸಬೇಕಾಗುತ್ತದೆ. ಯಾರು ಜೊತೆಗೆ ಬರಲಿ, ಬಿಡಲಿ ಎಂಬ ಚಿಂತೆಯಿಲ್ಲದೆ ಆರಂಭವಾದ ನೆಲೆಯ ಕೆಲಸ 25 ವರ್ಷ ಪೂರೈಸಿ ಮುನ್ನಡೆಯುತ್ತಿದೆ ಎನ್ನುವುದು ನಮ್ಮೆಲ್ಲರಿಗೆ ಸಂತಸದ ವಿಚಾರ ಎಂದು ನುಡಿದರು.…