2026ರ ಸಾರ್ವತ್ರಿಕ ರಜಾ ಪಟ್ಟಿ ಪ್ರಕಟಿಸಿದ ಕರ್ನಾಟಕ ಸರ್ಕಾರ

ಬೆಂಗಳೂರು: ಕರ್ನಾಟಕ ಸರ್ಕಾರವು 2026ನೇ ಸಾಲಿನ ಸಾರ್ವತ್ರಿಕ ರಜಾ ದಿನಗಳ ಪಟ್ಟಿಯನ್ನು ಪ್ರಕಟಿಸಿದೆ. ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಪಟ್ಟಿ ಅನುಮೋದನೆಗೊಂಡಿದೆ. ರಾಷ್ಟ್ರೀಯ ಹಬ್ಬಗಳು ಹಾಗೂ ಪ್ರಮುಖ ಧಾರ್ಮಿಕ ಹಬ್ಬಗಳನ್ನು ಒಳಗೊಂಡಂತೆ ಒಟ್ಟು 20 ರಜೆಗಳು ಈ ಪಟ್ಟಿ ಒಳಗೊಂಡಿವೆ. 2026ರ ಸಾರ್ವತ್ರಿಕ ರಜಾ ದಿನಗಳು: ಜನವರಿ 15 (ಗುರುವಾರ) – ಉತ್ತರಾಯಣ ಪುಣ್ಯಕಾಲ / ಮಕರ ಸಂಕ್ರಾಂತಿ ಜನವರಿ 26 (ಸೋಮವಾರ) – ಗಣರಾಜ್ಯೋತ್ಸವ ಮಾರ್ಚ್ 19 (ಗುರುವಾರ) – ಯುಗಾದಿ ಹಬ್ಬ ಮಾರ್ಚ್ 21 (ಶನಿವಾರ) – ಖುತುಬ್-ಎ-ರಂಜಾನ್ ಮಾರ್ಚ್ 31 (ಮಂಗಳವಾರ) – ಮಹಾವೀರ ಜಯಂತಿ ಏಪ್ರಿಲ್ 3 (ಶುಕ್ರವಾರ) – ಗುಡ್ ಫ್ರೈಡೇ ಏಪ್ರಿಲ್ 14 (ಮಂಗಳವಾರ) – ಡಾ. ಬಿ. ಆರ್. ಅಂಬೇಡ್ಕರ್ ಜಯಂತಿ ಏಪ್ರಿಲ್ 20 (ಸೋಮವಾರ) – ಬಸವ ಜಯಂತಿ / ಅಕ್ಷಯ ತೃತೀಯ…

ಕಿಚ್ಚ ಸುದೀಪ್ ಅವರ ‘ಮಾರ್ಕ್’; 110 ದಿನಗಳ ಶ್ರಮದ ಫಲ

ಚೆನ್ನೈ: ಸ್ಯಾಂಡಲ್‌ವುಡ್‌ನ ಸ್ಟಾರ್ ನಟ ಕಿಚ್ಚ ಸುದೀಪ್ ಅಭಿನಯದ ಬಹುನಿರೀಕ್ಷಿತ ಮಾಸ್ ಆಕ್ಷನ್ ಎಂಟರ್‌ಟೈನರ್ “ಮಾರ್ಕ್” ಚಿತ್ರವು ಈ ವರ್ಷದ ಕ್ರಿಸ್‌ಮಸ್ ಸಮಯದಲ್ಲಿ ಬಿಡುಗಡೆಯಾಗಲಿದೆ. ಸುಮಾರು 110 ದಿನಗಳ ಕಾಲ ನಡೆದ ನಿರಂತರ ಶೂಟಿಂಗ್ ಹಾಗೂ ಅಸಂಖ್ಯಾತ ಕಾಲ್‌ಶೀಟ್‌ಗಳ ನಂತರ ಚಿತ್ರದ ಚಿತ್ರೀಕರಣ ಪೂರ್ಣಗೊಂಡಿದೆ. ತಂಡದವರೊಂದಿಗೆ ಗುಂಪುಚಿತ್ರವನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡ ಸುದೀಪ್, “ಮಾರ್ಕ್ ಚಿತ್ರದ ಯಶಸ್ಸು ಒಟ್ಟಾಗಿ ಕೆಲಸ ಮಾಡಿದ ತಂಡದ ಸಾಮೂಹಿಕ ಪ್ರಯತ್ನದ ಫಲ. ಪ್ರತಿ ದಿನ ಗುರಿಯತ್ತ ನಿಷ್ಠೆಯಿಂದ ಕೆಲಸ ಮಾಡಿದ ತಂಡದ ಶ್ರಮದ ಫಲ ಇದು,” ಎಂದು ತಿಳಿಸಿದ್ದಾರೆ. “ಜುಲೈ 7 ರಂದು ನಮ್ಮ ಪ್ರಯಾಣ ಆರಂಭವಾಯಿತು. ಪ್ರಾರಂಭದಲ್ಲಿ ಅಸಾಧ್ಯವೆಂದು ತೋರಿದ್ದುದನ್ನು ಸಾಧಿಸುವ ದೃಢನಿಶ್ಚಯದಿಂದ ನಾವು ಹೊರಟಿದ್ದೆವು. ಈ ಪ್ರಯಾಣ ಯಶಸ್ವಿಯಾಗಲು ಕೆಲವರ ಶ್ರಮವಲ್ಲ, ಪ್ರತಿಯೊಬ್ಬ ಸದಸ್ಯನ ಪರಿಶ್ರಮ ಕಾರಣವಾಗಿದೆ. ಪ್ರತಿದಿನ ಒಂದೇ ಉದ್ದೇಶದಿಂದ ಎಲ್ಲರೂ ಕೆಲಸ ಮಾಡಿದರು — ಗುರಿ…

‘ಮೇಕೆದಾಟು’ ಯೋಜನೆ; ‘ಸರ್ಕಾರದ ದಿಟ್ಟ ನಿಲುವು, ಕಾನೂನು ತಜ್ಞರ ನಿರಂತರ ಪರಿಶ್ರಮದಿಂದಾಗಿ ಈ ಗೆಲುವು ಲಭಿಸಿದೆ’ ಎಂದ AG ಶಶಿಕಿರಣ್ ಶೆಟ್ಟಿ

ನವದೆಹಲಿ: ಮೇಕೆದಾಟು ಯೋಜನೆಗೆ ಸಂಬಂಧಿಸಿದ ಪ್ರಕರಣದಲ್ಲಿ ಕರ್ನಾಟಕದ ಪರವಾಗಿ ಸುಪ್ರೀಂ ಕೋರ್ಟ್‌ನಿಂದ ಮಹತ್ವದ ತೀರ್ಪು ಬಂದಿದೆ. ಯೋಜನೆ ವಿರೋಧಿಸಿ ನೆರೆಯ ತಮಿಳುನಾಡು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಗುರುವಾರ ವಜಾಗೊಳಿಸಿದೆ. ಇದರೊಂದಿಗೆ, ಮೇಕೆದಾಟು ಯೋಜನೆ ವಿಚಾರದಲ್ಲಿ ಕರ್ನಾಟಕ ಸರ್ಕಾರಕ್ಕೆ ದೊಡ್ಡ ಗೆಲುವು ಲಭಿಸಿದಂತಾಗಿದೆ. ಈ ಕುರಿತಂತೆ ಮಾಹಿತಿ ಹಂಚಿಕೊಂಡಿರುವ ಕರ್ನಾಟಕ ರಾಜ್ಯ ಸರ್ಕಾರದ ಅಡ್ವೋಕೇಟ್ ಜನೆರಲ್ ಕೆ ಶಶಿಕಿರಣ್ ಶೆಟ್ಟಿ, ರಾಜ್ಯದ ಪಾಲಿಗೆ ಇದೊಂದು ಅಭೂತಪೂರ್ವ ಗೆಲುವಾಗಿದೆ. ಸರ್ಕಾರದ ದಿಟ್ಟ ನಿಲುವು, ಕಾನೂನು ತಜ್ಞರ ನಿರಂತರ ಪರಿಶ್ರಮದಿಂದಾಗಿ ಈ ಗೆಲುವು ಲಭಿಸಿದೆ ಎಂದಿದ್ದಾರೆ. ಕಳೆದ ಏಳು ವರ್ಷಗಳಿಂದ ತಮಿಳುನಾಡು ಈ ಯೋಜನೆಗೆ ಅಡ್ಡಗಾಲು ಹಾಕುತ್ತಾ ಬಂದಿತ್ತಲ್ಲದೆ, ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿತ್ತು. ಇದೀಗ ಆ ಅರ್ಜಿಯನ್ನು ವಜಾಗೊಳಿಸಿದ ಹಿನ್ನಲೆಯಲ್ಲಿ ಕರ್ನಾಟಕದ ಮಹತ್ವಾಕಾಂಕ್ಷೆಯ ಯೋಜನೆ ಮುಂದುವರೆಯಲು ಹಾದಿ ಸುಲಭವಾದಂತಾಗಿದೆ ಎಂದು ಕೆ ಶಶಿ ಕಿರಣ್ ಶೆಟ್ಟಿ ಸಂತಸ ವ್ಯಕ್ತಪಡಿಸಿದ್ದಾರೆ.…

ಕೃಷಿ ವಿಜ್ಞಾನ ಕೇಂದ್ರದ ಆವರಣದಲ್ಲಿ ‘ಕೃಷಿ ಮೇಳ’; ಪ್ರಗತಿಪರ ರೈತರಿಗೆ ರಾಜ್ಯ ಮಟ್ಟದ ಪ್ರಶಸ್ತಿ

ಬೆಂಗಳೂರು: ಕಡಿಮೆ ವೆಚ್ಚದಲ್ಲಿ ಉತ್ತಮ ಇಳುವರಿ ಮತ್ತು ಆದಾಯ ನೀಡುವ ಬೆಳೆಗಳನ್ನು ನೀಡುವ ಉದ್ದೇಶದಿಂದ ಇಂತಹ ಕೃಷಿ ಮೇಳಗಳನ್ನು ಆಯೋಜಿಸಲಾಗಿದ್ದು, ಇದನ್ನು ಬಳಸಿಕೊಂಡು ರೈತರು ಉದ್ಯಮಿಗಳಾಗಿ ಬಲವರ್ಧನೆಗೊಳ್ಳಬೇಕೆಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿಯವರು ಕರೆ ನೀಡಿದರು. ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯದಲ್ಲಿ ಸಮೃದ್ಧ ಕೃಷಿ -ವಿಕಸಿತ ಭಾರತ ನೆಲ,ಜಲ ಮತ್ತು ಬೆಳೆ ಶೀರ್ಷಿಕೆ ಅಡಿಯಲ್ಲಿ ನಾಲ್ಕು ದಿನಗಳವರೆಗೆ ಗಾಂಧಿ ಕೃಷಿ ವಿಜ್ಞಾನ ಕೇಂದ್ರದ ಆವರಣದಲ್ಲಿ ಏರ್ಪಡಿಸಲಾಗಿರುವ ಕೃಷಿ ಮೇಳ 2025 ಕಾರ್ಯಕ್ರಮವನ್ನು ಉದ್ಘಾಟಿಸಿ ಸಚಿವರು ಮಾತನಾಡಿದರು. ಬೆಂಗಳೂರು ಕೃಷಿ ವಿವಿಯೂ ಪ್ರತಿವರ್ಷ ಅತ್ಯುತ್ತಮ ಕೃಷಿ ಮೇಳ ಮತ್ತು ಪ್ರದರ್ಶನವನ್ನು ಏರ್ಪಡಿಸುತ್ತಾ ಬಂದಿದ್ದು, ಉತ್ತಮ ತಳಿಗಳನ್ನು ಈ ಭಾರಿ ಬಿಡುಗಡೆಗೊಳಿಸಿದೆ. ರೈತರಿಗೆ ಕೃಷಿ ವಿವಿಗಳು ನೀಡಬೇಕಾಗಿರುವುದು ಇದನ್ನೆ. ಕೃಷಿಯನ್ನು ಉದ್ದಿಮೆಯಾಗಿ ಪರಿವರ್ತಿಸಿ ರೈತರಿಗೆ ಉತ್ತಮ ಆದಾಯ ನೀಡಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಹಲವು ಸೌಲಭ್ಯಗಳು ಹಾಗೂ ಕಾರ್ಯಕ್ರಮಗಳನ್ನು ನೀಡುತ್ತಿವೆ. ಕೆಪೆಕ್…

ಮತದಾರರ ಪಟ್ಟಿಯ SIR ವಿರುದ್ಧ ನ.16ರಂದು ತಮಿಳುನಾಡಿನಾದ್ಯಂತ TVK ಪ್ರತಿಭಟನೆ

ಚೆನ್ನೈ: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ತಮಿಳಗ ವೆಟ್ರಿ ಕಳಗಂ (TVK) ನವೆಂಬರ್‌ 16ರಂದು ರಾಜ್ಯವ್ಯಾಪಿ ಪ್ರತಿಭಟನೆಗೆ ಕರೆ ನೀಡಿದೆ. ನಟ–ರಾಜಕಾರಣಿ ವಿಜಯ್ ನೇತೃತ್ವದ ಈ ಪಕ್ಷವು ತಮಿಳುನಾಡಿನ ಎಲ್ಲಾ ಜಿಲ್ಲೆಗಳಲ್ಲಿ ಏಕಕಾಲದಲ್ಲಿ ಪ್ರತಿಭಟನೆಗಳನ್ನು ಆಯೋಜಿಸಲು ಸಜ್ಜಾಗಿದೆ. ಬೆಳಿಗ್ಗೆ 11 ಗಂಟೆಗೆ ಆರಂಭವಾಗುವ ಈ ಆಂದೋಲನಕ್ಕಾಗಿ ಜಿಲ್ಲಾ ಕಾರ್ಯದರ್ಶಿಗಳು ಮತ್ತು ಸ್ಥಳೀಯ ನಾಯಕರಿಗೆ ನಿರ್ದೇಶನ ನೀಡಲಾಗಿದೆ. ರಾಜ್ಯ ಮಟ್ಟದ ಪದಾಧಿಕಾರಿಗಳು ಪ್ರಮುಖ ಜಿಲ್ಲೆಗಳಲ್ಲಿ ಪ್ರತಿಭಟನೆ ಮುನ್ನಡೆಸಲಿದ್ದಾರೆ. ವಲಯ ಮತ್ತು ಒಕ್ಕೂಟ ಮಟ್ಟದ ನಾಯಕರು ಸ್ಥಳೀಯ ಮಟ್ಟದ ಭಾಗವಹಿಸುವಿಕೆಯನ್ನು ಖಚಿತಪಡಿಸಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ. TVK ನೇತೃತ್ವವು ಚುನಾವಣಾ ಆಯೋಗ ನಡೆಸುತ್ತಿರುವ ಪ್ರಸ್ತುತ SIR ಪ್ರಕ್ರಿಯೆ ಮತದಾರರ ಒಳಗೊಳ್ಳುವಿಕೆ ಮತ್ತು ಪಾರದರ್ಶಕತೆಗೆ “ಗಂಭೀರ ಪರಿಣಾಮ” ಬೀರಬಹುದೆಂದು ಆತಂಕ ವ್ಯಕ್ತಪಡಿಸಿದೆ. ಮನೆ–ಮನೆ ಪರಿಶೀಲನೆ ವೇಳೆ ಅನೇಕ ಅರ್ಹ ಮತದಾರರ ಹೆಸರುಗಳು…

ದೆಹಲಿ ಸ್ಫೋಟದ ತನಿಖೆ ಚುರುಕು; ತುಮಕೂರಿನಲ್ಲಿ ವ್ಯಕ್ತಿಯ ವಿಚಾರಣೆ

ಬೆಂಗಳೂರು: ದೆಹಲಿಯಲ್ಲಿ ನವೆಂಬರ್ 10ರಂದು ಸಂಭವಿಸಿದ ಕಾರು ಸ್ಫೋಟದಲ್ಲಿ 12 ಜನರು ಮೃತಪಟ್ಟ ಪ್ರಕರಣದ ತನಿಖೆಯ ಭಾಗವಾಗಿ, ಕರ್ನಾಟಕ ಪೊಲೀಸರು ತುಮಕೂರಿನ ಮಾಜಿ ಭಯೋತ್ಪಾದಕ ಎಂದು ಹೇಳಲಾದ ವ್ಯಕ್ತಿಯನ್ನು ಗುರುವಾರ ವಿಚಾರಣೆಗೊಳಪಡಿಸಿದ್ದಾರೆ. ಪೊಲೀಸರ ಮಾಹಿತಿಯ ಪ್ರಕಾರ, ಮುಜಾಹಿದ್ ಎಂಬಾತನನ್ನು ತಿಲಕ್‌ನಗರ ಪೊಲೀಸ್ ಠಾಣೆಯಲ್ಲಿ ಹೆಚ್ಚುವರಿ ಎಸ್‌ಪಿ ಪುರುಷೋತ್ತಮ್ ಅವರ ನೇತೃತ್ವದಲ್ಲಿ ಎರಡು ಗಂಟೆಗಳಿಗಿಂತ ಹೆಚ್ಚು ಹೊತ್ತು ವಿಚಾರಣೆ ನಡೆಸಲಾಯಿತು. ವಿಚಾರಣೆ ಬಳಿಕ ಯಾವುದೇ ನೇರ ಸಂಪರ್ಕ ಕಂಡುಬರದ ಹಿನ್ನೆಲೆಯಲ್ಲಿ, ಆತನನ್ನು ಬಿಡುಗಡೆ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮುಜಾಹಿದ್ ಹಿಂದೆ ಭಯೋತ್ಪಾದಕ ಸಂಘಟನೆಗಾಗಿ ಸಭೆ ಆಯೋಜಿಸಿದ ಆರೋಪದಡಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಬಂಧಿಸಿ ದೆಹಲಿಯ ತಿಹಾರ್ ಜೈಲಿಗೆ ಕಳುಹಿಸಿತ್ತು. ಆರು ವರ್ಷಗಳ ಶಿಕ್ಷೆ ಅನುಭವಿಸಿದ ಬಳಿಕ ಆತ ಬಿಡುಗಡೆಗೊಂಡಿದ್ದು, ಈಗ ತುಮಕೂರಿನ ಪಿಎಸ್ ಕಾಲೊನಿಯಲ್ಲಿ ವಾಸಿಸುತ್ತಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ದೆಹಲಿ ಸ್ಫೋಟದ ನಂಟು ಕರ್ನಾಟಕದತ್ತ?…

ದೆಹಲಿ ಸ್ಫೋಟ: ಸ್ಫೋಟಕ ತುಂಬಿದ ಕಾರನ್ನು ಚಲಾಯಿಸಿದ್ದು ಡಾ. ಉಮರ್

ಹೊಸದಿಲ್ಲಿ: ನವೆಂಬರ್‌ 10ರಂದು ಕೆಂಪುಕೋಟೆ ಬಳಿ ಸಂಭವಿಸಿದ ಭಾರೀ ಸ್ಫೋಟ ಪ್ರಕರಣದಲ್ಲಿ ಮಹತ್ವದ ತಿರುವು ಕಂಡುಬಂದಿದೆ. ಸ್ಫೋಟಗೊಂಡ ಐ20 ಕಾರನ್ನು ಫರಿದಾಬಾದ್‌ನ ಅಲ್ ಫಲಾಹ್ ವಿಶ್ವವಿದ್ಯಾಲಯದ ಹಿರಿಯ ವೈದ್ಯ ಡಾ. ಉಮರ್ ಮೊಹಮ್ಮದ್ ಅವರು ಓಡಿಸುತ್ತಿದ್ದರು ಎಂಬುದು ಡಿಎನ್‌ಎ ಪರೀಕ್ಷೆಯಿಂದ ದೃಢವಾಗಿದೆ ಎಂದು ತನಿಖಾಧಿಕಾರಿಗಳು ತಿಳಿಸಿದ್ದಾರೆ. ಈ ಸ್ಫೋಟದಲ್ಲಿ ಎಂಟು ಮಂದಿ ಮೃತಪಟ್ಟಿದ್ದು, ಕನಿಷ್ಠ 20 ಮಂದಿ ಗಾಯಗೊಂಡಿದ್ದಾರೆ. ದೆಹಲಿ ಪೊಲೀಸ್ ಮೂಲಗಳ ಪ್ರಕಾರ, ಸ್ಫೋಟ ಸ್ಥಳದಿಂದ ಸಂಗ್ರಹಿಸಿದ ಮೂಳೆಯ ತುಂಡುಗಳು, ಹಲ್ಲುಗಳು ಹಾಗೂ ಬಟ್ಟೆಯ ಅವಶೇಷಗಳಿಂದ ತೆಗೆದುಕೊಂಡ ಡಿಎನ್‌ಎ ಮಾದರಿ, ಉಮರ್ ಅವರ ತಾಯಿ ಮತ್ತು ಸಹೋದರರ ಮಾದರಿಗಳೊಂದಿಗೆ ಶೇಕಡಾ 100ರಷ್ಟು ಹೊಂದಿಕೆಯಾಗಿದೆ. ಇದರಿಂದ ಸ್ಫೋಟದ ಸಮಯದಲ್ಲಿ ಕಾರಿನೊಳಗಿದ್ದವರು ಉಮರ್ ಎಂಬುದು ದೃಢಪಟ್ಟಿದೆ. ಸಂಜೆ ಸುಮಾರು 6.52ರ ಹೊತ್ತಿಗೆ ಸಂಭವಿಸಿದ ಈ ಪ್ರಬಲ ಸ್ಫೋಟವು ರಾಜಧಾನಿಯಾದ್ಯಂತ ಆತಂಕ ಸೃಷ್ಟಿಸಿತು. ಕೆಂಪುಕೋಟೆ ಸುತ್ತಲಿನ ಅತ್ಯಧಿಕ ಭದ್ರತಾ ವಲಯದಲ್ಲಿಯೇ…

ಭವ್ಯ ಧ್ವಜಾರೋಹಣಕ್ಕೆ ಸಜ್ಜು: ರಾಮಮಂದಿರ ಆವರಣ ಖಾಲಿ ಮಾಡಲು ಸೂಚನೆ

ಅಯೋಧ್ಯೆ: ನವೆಂಬರ್‌ 25ರಂದು ನಡೆಯಲಿರುವ ಭವ್ಯ ಧ್ವಜಾರೋಹಣ ಸಮಾರಂಭಕ್ಕಾಗಿ ರಾಮಜನ್ಮಭೂಮಿ ದೇವಾಲಯ ಸಂಕೀರ್ಣದಲ್ಲಿ ತೀವ್ರ ಸಿದ್ಧತೆಗಳು ನಡೆಯುತ್ತಿವೆ. ಪ್ರಧಾನಿ ನರೇಂದ್ರ ಮೋದಿ ಅವರು ರಾಮಮಂದಿರದ ಮೇಲೆ ಕೇಸರಿ ಧ್ವಜ ಹಾರಿಸಲಿದ್ದಾರೆ. ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಎಲ್ಲಾ ನಿರ್ಮಾಣ ಮತ್ತು ಕಾರ್ಯನಿರ್ವಾಹಕ ಸಂಸ್ಥೆಗಳಿಗೆ ಆವರಣವನ್ನು ಖಾಲಿ ಮಾಡುವಂತೆ ಸೂಚನೆ ನೀಡಿದೆ. ಇದರಿಂದ ದೇವಾಲಯದ ಸೌಂದರ್ಯೀಕರಣ ಮತ್ತು ಅಲಂಕಾರ ಕಾರ್ಯಗಳಿಗೆ ಸಮಯ ಸಿಗಲಿದೆ ಎಂದು ಟ್ರಸ್ಟ್ ಮೂಲಗಳು ತಿಳಿಸಿವೆ. ದೇವಾಲಯದ ಅಧಿಕಾರಿಗಳ ಪ್ರಕಾರ, ಈ ವರ್ಷದ ಆಚರಣೆಗಳು ಹಿಂದಿನ ಬಾರಿ ಹೋಲಿಸಿದರೆ ಇನ್ನಷ್ಟು ಭವ್ಯವಾಗಲಿವೆ. ಪ್ರಮುಖ ರಾಮಮಂದಿರದ ಪಕ್ಕದಲ್ಲೇ ಭಗವಾನ್‌ ಮಹಾದೇವ, ಗಣೇಶ, ಹನುಮಾನ್‌, ಸೂರ್ಯದೇವ, ಮಾಭಗವತಿ, ಮಾಅನ್ನಪೂರ್ಣ ಮತ್ತು ಶೇಷಾವತಾರ ದೇವತೆಗಳಿಗೆ ಸಮರ್ಪಿತ ಉಪದೇವಾಲಯಗಳು ನಿರ್ಮಾಣಗೊಂಡಿವೆ. ಕಾಶಿಯ ಖ್ಯಾತ ಪಂಡಿತ ಗಣೇಶ್ವರ ಶಾಸ್ತ್ರಿಯವರ ನೇತೃತ್ವದಲ್ಲಿ ಅಯೋಧ್ಯೆ, ಕಾಶಿ ಮತ್ತು ದಕ್ಷಿಣ ಭಾರತದ 108 ಆಚಾರ್ಯರು ಧಾರ್ಮಿಕ…

‘ರೌಡಿ ಕೊತ್ವಾಲ್ ರಾಮಚಂದ್ರನ ಜೊತೆ ಇದ್ದ ಪುಟ್ಟಸ್ವಾಮಿಯಿಂದ ಜೀವ ಬೆದರಿಕೆ ಇತ್ತು’; ಸಿದ್ದರಾಮಯ್ಯ

ಬೆಂಗಳೂರು: ‘ನಾನು ಕೇವಲ ಕುರುಬ ಸಮಾಜಕ್ಕೆ ಮಾತ್ರ ಇಷ್ಟು ಮಾಡಲಿಲ್ಲ. ಹಿಂದುಳಿದವರು, ದಲಿತರು, ಅಲ್ಪಸಂಖ್ಯಾತರು ಸೇರಿ ಎಲ್ಲಾ ಶೋಷಿತ ಸಮುದಾಯಗಳ ಏಳಿಗೆಗೂ ನಾನು ಕೆಲಸ ಮಾಡಿದ್ದೇನೆ’ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಬೆಂಗಳೂರಿನ ಗಾಂಧಿನಗರದಲ್ಲಿ ನಡೆದ ಪ್ರದೇಶ ಕುರುಬರ ಸಂಘ ಮತ್ತು ವಿದ್ಯಾರ್ಥಿನಿಲಯದ ನೂತನ ಕಟ್ಟಡಕ್ಕೆ ಶಂಕುಸ್ಥಾಪನೆ ಸಮಾರಂಭದಲ್ಲಿ ಮಾತನಾಡಿದ ಅವರು, ಮೊದಲ ಬಾರಿ ಮುಖ್ಯಮಂತ್ರಿಯಾಗಿ ಜಾರಿಗೆ ತಂದ ಭಾಗ್ಯಗಳು, ಎರಡನೇ ಬಾರಿ ಮುಖ್ಯಮಂತ್ರಿ ಆಗಿ ಜಾರಿಗೆ ತಂದ ಗ್ಯಾರಂಟಿಗಳು ಎಲ್ಲಾ ಜಾತಿಯ ಬಡವರಿಗಾಗಿ ಜಾರಿ ಆಗಿದೆ. ಸರ್ವರನ್ನೂ ಒಳಗೊಂಡ, ಸರ್ವರ ಅಭಿವೃದ್ಧಿಯ ಸಮಾಜ ನಿರ್ಮಾಣ ನನ್ನ ಗುರಿ ಎಂದರು. ನಾನು ಕೇವಲ ಕುರುಬ ಸಮಾಜಕ್ಕೆ ಮಾತ್ರ ಇಷ್ಟು ಮಾಡಲಿಲ್ಲ. ಹಿಂದುಳಿದವರು, ದಲಿತರು, ಅಲ್ಪಸಂಖ್ಯಾತರು ಸೇರಿ ಎಲ್ಲಾ ಶೋಷಿತ ಸಮುದಾಯಗಳ ಏಳಿಗೆಗೂ ನಾನು ಕೆಲಸ ಮಾಡಿದ್ದೇನೆ. ಮೊದಲ ಬಾರಿ ಮುಖ್ಯಮಂತ್ರಿಯಾಗಿ ಜಾರಿಗೆ ತಂದ ಭಾಗ್ಯಗಳು, ಎರಡನೇ ಬಾರಿ…