ಬಾಗಲಕೋಟೆ: ಬೆಳಗಾವಿಯ ಕಬ್ಬು ಹೋರಾಟ ಶಮನಗೊಳ್ಳುತ್ತಿದ್ದಂತೆ, ಅದರ ಜ್ವಾಲೆ ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನಲ್ಲೂ ಹೊತ್ತಿಕೊಂಡಿದೆ. ಪ್ರತಿ ಟನ್ ಕಬ್ಬಿಗೆ ₹3,500 ನೀಡುವಂತೆ ಆಗ್ರಹಿಸುತ್ತಿರುವ ರೈತರು ಶುಕ್ರವಾರ ತಮ್ಮ ಹೋರಾಟವನ್ನು ತೀವ್ರಗೊಳಿಸಿದರು. ಮುಧೋಳ ತಾಲೂಕಿನ ಸೈದಾಪುರ ಗ್ರಾಮದ ಸಮೀರವಾಡಿ ಬಳಿಯ ಗೋದಾವರಿ ಸಕ್ಕರೆ ಕಾರ್ಖಾನೆ ಎದುರು ಸಾಲಾಗಿ ನಿಲ್ಲಿಸಿದ್ದ 100ಕ್ಕೂ ಹೆಚ್ಚು ಟ್ರ್ಯಾಕ್ಟರ್-ಟ್ರಾಲಿಗಳಿಗೆ ಬೆಂಕಿಹಚ್ಚಿ ರೈತರು ಆಕ್ರೋಶ ಹೊರಹಾಕಿದರು. ಸರ್ಕಾರ ನಿಗದಿಪಡಿಸಿದ್ದ ₹3,300ರ ಬೆಲೆಗೆ ವಿರೋಧ ವ್ಯಕ್ತಪಡಿಸುತ್ತಿದ್ದ ರೈತರು ಕಳೆದ ವಾರದಿಂದಲೇ ಪ್ರತಿಭಟನೆ ನಡೆಸುತ್ತಿದ್ದರು. ಗುರುವಾರ ಮುಧೋಳ ಪಟ್ಟಣ ಬಂದ್ ಮಾಡಲಾಗಿತ್ತು. ಕಾರ್ಖಾನೆ ಮಾಲೀಕರು ಸಂಧಾನಕ್ಕೆ ಮುಂದಾಗದ ಹಿನ್ನೆಲೆಯಲ್ಲಿ ರೈತರು ಸಿಟ್ಟುಗೊಂಡು, ಗೋದಾವರಿ ಕಾರ್ಖಾನೆ ಕಡೆಗೆ ಮೆರವಣಿಗೆ ನಡೆಸಿದರು. ಈ ವೇಳೆ ಕಾರ್ಖಾನೆಗೆ ಕಬ್ಬು ಸಾಗಿಸುತ್ತಿದ್ದ ಟ್ರ್ಯಾಕ್ಟರ್ ಅನ್ನು ತಡೆದು ಬೆಂಕಿ ಹಚ್ಚಿದರುಎನ್ನಲಾಗಿದೆ. ಘಟನೆಯ ಕುರಿತು ಪ್ರತಿಕ್ರಿಯಿಸಿದ ಸಕ್ಕರೆ ಸಚಿವ ಶಿವಾನಂದ ಪಾಟೀಲ, ರೈತರು ಮತ್ತು ಕಾರ್ಖಾನೆಗಳ…
