ನವದೆಹಲಿ: ದೆಹಲಿಯ ಕೆಂಪುಕೋಟೆ ಪ್ರದೇಶದಲ್ಲಿ ನವೆಂಬರ್ 10ರಂದು ನಡೆದ ಕಾರ್ ಬಾಂಬ್ ಸ್ಫೋಟ ಪ್ರಕರಣದಲ್ಲಿ ಮಹತ್ವದ ತಿರುವು ದೊರೆತಿದ್ದು, ದಾಳಿಗೆ ಬಳಸಲಾದ ಕಾಶ್ಮೀರಿ ಕಾರಿನ ಮಾಲೀಕ ಅಮೀರ್ ರಶೀದ್ ಅಲಿ ಅವರನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಬಂಧಿಸಿದೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ. ಪ್ರಕರಣವನ್ನು ದೆಹಲಿ ಪೊಲೀಸರಿಂದ ವಹಿಸಿಕೊಂಡ ನಂತರ, ಎನ್‌ಐಎ ವ್ಯಾಪಕ ಶೋಧ ಕಾರ್ಯಾಚರಣೆ ನಡೆಸಿ ಅಮೀರ್ ರಶೀದ್ ಅಲಿಯನ್ನು ದೆಹಲಿಯಲ್ಲೇ ಬಂಧಿಸಿದೆ. ಜಮ್ಮು–ಕಾಶ್ಮೀರದ ಪ್ಯಾಂಪೋರ್ ತಾಲ್ಲೂಕಿನ ಸಂಬೂರ್ ಪ್ರದೇಶದ ನಿವಾಸಿಯಾದ ಅಮೀರ್, ಆತ್ಮಹತ್ಯಾ ಬಾಂಬರ್ ಉಮರ್ ಉನ್ ನಬಿ ಜೊತೆ ಸೇರಿ ದಾಳಿಯ ಸಂಚು ರೂಪಿಸಿದ್ದಾನೆ ಎಂದು ಎನ್‌ಐಎ ತನಿಖೆಯಲ್ಲಿ ಹೊರಬಂದಿದೆ. ಅಮೀರ್ ಈ ಕಾರನ್ನು ಖರೀದಿಸಲು ದೆಹಲಿಗೆ ಬಂದು, ಬಳಿಕ ಅದೇ ಕಾರನ್ನು ಐಇಡಿ ಸ್ಫೋಟಕ ಸಾಧನವನ್ನು ಅಳವಡಿಸಿ ರಾಷ್ಟ್ರೀಯ ರಾಜಧಾನಿಯನ್ನು ಬೆಚ್ಚಿಬೀಳಿಸಿದ ದಾಳಿಗೆ ಬಳಸಲಾಗಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕಾರ್…
