ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾಗಿ ದೇವೇಗೌಡ, ರಾಜ್ಯಾಧ್ಯಕ್ಷರಾಗಿ ಕುಮಾರಸ್ವಾಮಿ ಮುಂದುವರಿಕೆ

ಬೆಂಗಳೂರು: ಜನತಾ ದಳ (ಎಸ್) ಪಕ್ಷದ ರಾಷ್ಟ್ರೀಯ ನೇತೃತ್ವದಲ್ಲಿ ಬದಲಾವಣೆ ಇಲ್ಲ. ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ರಾಷ್ಟ್ರೀಯ ಅಧ್ಯಕ್ಷರಾಗಿ, ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ರಾಜ್ಯ ಘಟಕದ ಅಧ್ಯಕ್ಷರಾಗಿ ಒಮ್ಮತದಿಂದ ಮರು ಆಯ್ಕೆಗೊಂಡಿದ್ದಾರೆ. ಜೆಪಿ ಭವನದಲ್ಲಿ ಶುಕ್ರವಾರ ನಡೆದ ಜೆಡಿಎಸ್ ರಾಷ್ಟ್ರೀಯ ಮಂಡಳಿ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ. ರಾಷ್ಟ್ರೀಯ ಮಟ್ಟದಲ್ಲಿ ಹಾಗೂ ಕರ್ನಾಟಕದಲ್ಲೂ ಸಂಘಟನೆ ವಿಸ್ತರಣೆ ಅಗತ್ಯವಾಗಿರುವ ಈ ಸಂದರ್ಭದಲ್ಲಿ, ದೇವೇಗೌಡ–ಕುಮಾರಸ್ವಾಮಿ ನೇತೃತ್ವ ಮುಂದುವರಿಯಬೇಕೆಂಬ ಅಭಿಪ್ರಾಯ ಪ್ರತಿನಿಧಿಗಳ ನಡುವೆ ನಿರ್ಮಾಣವಾಯಿತು ಎಂದು ಪಕ್ಷದ ಪ್ರಕಟಣೆ ತಿಳಿಸಿದೆ. ಸಭೆಯಲ್ಲಿ ವಿವಿಧ ರಾಜ್ಯಗಳ ಜೆಡಿಎಸ್ ಪ್ರತಿನಿಧಿಗಳು, ರಾಜ್ಯದ ಶಾಸಕರು, ಎಂಎಲ್ಸಿಗಳು, ಜಿಲ್ಲಾಧ್ಯಕ್ಷರು ಸೇರಿದಂತೆ ಅನೇಕ ಪ್ರಮುಖರು ಭಾಗವಹಿಸಿದ್ದರು.

ಪಾಕ್ ಪರ ಬೇಹುಗಾರಿಕೆ ಆರೋಪ: ಉಡುಪಿಯಲ್ಲಿ ಇಬ್ಬರು ಬಂಧನ

ಉಡುಪಿ: ಭಾರತೀಯ ನೌಕಾಪಡೆಯ ಗೌಪ್ಯ ಮಾಹಿತಿಯನ್ನು ಪಾಕಿಸ್ತಾನಕ್ಕೆ ಚೋರಿಸಿ ರವಾನಿಸಿದ್ದ ಆರೋಪದಲ್ಲಿ ಕೊಚ್ಚಿನ್ ಶಿಪ್‌ಯಾರ್ಡ್‌ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಇಬ್ಬರನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ. ಕೊಚ್ಚಿನ್ ಶಿಪ್‌ಯಾರ್ಡ್ ಸಿಇಒ ಮಲ್ಪೆ ಪೊಲೀಸ್ ಠಾಣೆಗೆ ನೀಡಿದ ದೂರಿನ ಮೇರೆಗೆ ಬಿಎನ್‌ಎಸ್ 152 ಹಾಗೂ ಅಧಿಕೃತ ರಹಸ್ಯ ಕಾಯ್ದೆ (ಒಎಸ್‌ಎ) 3 ಮತ್ತು 5ನೇ ಕಲಮಗಳಡಿ ಕೇಸ್ ದಾಖಲಾಗಿದೆ. ಬಂಧಿತರನ್ನು ಉತ್ತರ ಪ್ರದೇಶದ ಸುಲ್ತಾನ್‌ಪುರ ಮೂಲದ 20 ವರ್ಷದ ರೋಹಿತ್ ಮತ್ತು 37 ವರ್ಷದ ಸಾಂತ್ರಿ ಎಂದು ಗುರುತಿಸಲಾಗಿದೆ. ಸ್ಥಳೀಯ ನ್ಯಾಯಾಲಯ ಆರೋಪಿಗಳಿಗೆ ಡಿಸೆಂಬರ್ 3ರವರೆಗೆ ನ್ಯಾಯಾಂಗ ಬಂಧನವನ್ನೂ ವಿಧಿಸಿದೆ. ಈ ಕುರಿತಂತೆ ಮಾಹಿತಿ ನೀಡಿರುವ ಎಸ್ಪಿ ಹರಿರಾಮ್ ಶಂಕರ್ “ರಾಷ್ಟ್ರೀಯ ಭದ್ರತೆಯ ಹಿತಾಸಕ್ತಿಗೆ ಸಂಬಂಧಿಸಿದ ಗಂಭೀರ ಪ್ರಕರಣವಾದ್ದರಿಂದ ತನಿಖೆಯನ್ನು ಮತ್ತಷ್ಟು ವಿಸ್ತರಿಸಲಾಗಿದೆ. ನವೆಂಬರ್ 22ರಂದು ಆರೋಪಿಗಳನ್ನು ಪೊಲೀಸ್ ವಶಕ್ಕೆ ಪಡೆಯಲಾಗುವುದು” ಎಂದರು. ಮಲ್ಪೆಯಲ್ಲಿದ್ದ ವಸತಿಗೃಹದ ಕೋಣೆಯಲ್ಲಿ ಸುಳಿವಿನ ಆಧಾರದ ಮೇಲೆ…