ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಸೂರ್ಯಕಾಂತ್ ಪ್ರಮಾಣ ವಚನ

ನವದೆಹಲಿ: ದೇಶದ 53ನೇ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾಯಮೂರ್ತಿ ಸೂರ್ಯಕಾಂತ್ ಅವರು ಸೋಮವಾರ ಪ್ರಮಾಣವಚನ ಸ್ವೀಕರಿಸಿದರು. ರಾಷ್ಟ್ರಪತಿ ಭವನದಲ್ಲಿ ನಡೆದ ಪ್ರಮಾಣವಚನ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅವರಿಗೆ ಪ್ರಮಾಣವಚನ ಬೋಧಿಸಿದರು. ಸೂರ್ಯಕಾಂತ್ ಅವರು ಹಿಂದಿಯಲ್ಲಿ ದೇವರ ಹೆಸರಿನಿಂದ ಪ್ರಮಾಣವಚನ ಪಠಿಸಿದರು. ಸಮಾರಂಭದಲ್ಲಿಉಪರಾಷ್ಟ್ರಪತಿ ಸಿ.ಪಿ ರಾಧಾಕೃಷ್ಣನ್, ಪ್ರಧಾನ ಮಂತ್ರಿ ನರೇಂದ್ರ ಮೋದಿ, ಸಚಿವರು, ಸುಪ್ರೀಂ ಕೋರ್ಟ್ ನ್ಯಾಯಾಧೀಶರು ಹಾಗೂ ಭೂತಾನ್, ಕೀನ್ಯಾ, ಮಲೇಷ್ಯಾ, ಬ್ರೆಜಿಲ್, ಮಾರಿಷಸ್, ನೇಪಾಳ ಮತ್ತು ಶ್ರೀಲಂಕಾದ ಮುಖ್ಯ ನ್ಯಾಯಮೂರ್ತಿಗಳು ಹಾಜರಿದ್ದರು. ಹರಿಯಾಣ ಮುಖ್ಯಮಂತ್ರಿ ನೈಬ್ ಸಿಂಗ್ ಸೈನಿ ಕೂಡ ಸಮಾರಂಭಕ್ಕೆ ಹಾಜರಾಗಿದ್ದರು. ನ್ಯಾಯಮೂರ್ತಿ ಸೂರ್ಯಕಾಂತ್ ಅವರ ಅಧಿಕಾರಾವಧಿ ಸುಮಾರು 14 ತಿಂಗಳು. ಅವರು ಫೆಬ್ರವರಿ 9, 2027 ರಂದು ನಿವೃತ್ತಿಗೊಳ್ಳಲಿದ್ದಾರೆ. ಇತ್ತೀಚೆಗೆ ಸಿಜೆಐ ಪೀಠವನ್ನು ಖಾಲಿ ಮಾಡಿರುವ ಭೂಷಣ್ ಆರ್. ಗವಾಯಿ ಅವರು ಅಕ್ಟೋಬರ್ 30ರಂದು ತಮ್ಮ ಉತ್ತರಾಧಿಕಾರಿಯಾಗಿ ಸೂರ್ಯಕಾಂತ್ ಅವರನ್ನು ಶಿಫಾರಸು…

ಅಮಿತ್ ಶಾ ಭೇಟಿಯಾದ ಬಿ.ವೈ.ವಿಜಯೇಂದ್ರ;

ನವದೆಹಲಿ: ಬಿಹಾರ ವಿಧಾನಸಭಾ ಚುನಾವಣೆಯಲ್ಲಿ NDA ಪ್ರಚಂಡ ಗೆಲುವು ಸಾಧಿಸಿರುವ ಹಿನ್ನೆಲೆಯಲ್ಲಿ ರಾಷ್ಟ್ರೀಯ ಬಿಜೆಪಿಯನ್ನು ಪಕ್ಷದ ಕರ್ನಾಟಕ ಪ್ರದೇಶ ಘಟಕ ಅಭಿನಂಧಿಸಿದೆ. ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಅಮಿತ್ ಷಾ ಅವರನ್ನು ಅವರನ್ನು ಭೇಟಿ ಮಾಡಿದ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅಭಿನಂಧಿಸಿದರು. ಈ ಕುರಿತಂತೆ ಮಾಹಿತಿ ಹಂಚಿಕೊಂಡಿರುವ ವಿಜಯೇಂದ್ರ, ರಾಷ್ಟ್ರ ರಾಜಕಾರಣಕ್ಕೆ ಸ್ಪಷ್ಟ ದಿಕ್ಸೂಚಿ ಎಂದು ವಿಶ್ಲೇಷಿಸಲಾಗಿದ್ದ ಬಿಹಾರ ಚುನಾವಣೆಯನ್ನು ಅತ್ಯಂತ ಸಮರ್ಥವಾಗಿ ನಿಭಾಯಿಸಿ, NDA ಮಿತ್ರಕೂಟ ಐತಿಹಾಸಿಕ ದಿಗ್ವಿಜಯ ಸಾಧಿಸುವಲ್ಲಿ ಮಹತ್ವದ ಪಾತ್ರವಹಿಸಿ ಚುನಾವಣಾ ನೈಪುಣ್ಯತೆ ಮೆರೆದ ಮಾನ್ಯ ಅಮಿತ್ ಶಾ ಜಿ ಅವರು ಬಿಜೆಪಿಗೆ ಕಾರ್ಯಕರ್ತರಿಗೆ ಪ್ರೇರಣಾಶೀಲ ನಾಯಕರಾಗಿದ್ದಾರೆ ಎಂದು ಬಣ್ಣಿಸಿದ್ದಾರೆ. ಇಂದಿನ ಅವರ ಭೇಟಿಯ ಸಂದರ್ಭದಲ್ಲಿ ಕರ್ನಾಟಕದ ರಾಜಕಾರಣದ ಪ್ರಸ್ತುತ ವಿದ್ಯಮಾನಗಳ ಮಾಹಿತಿ ನೀಡಲಾಯಿತು.ಪಕ್ಷ ಸಂಘಟನೆ ಇನ್ನಷ್ಟು ಚುರುಕುಗೊಳಿಸುವ ನಿಟ್ಟಿನಲ್ಲಿ ಅಗತ್ಯ ಮಾರ್ಗದರ್ಶನ ಪಡೆಯಲಾಯಿತು ಎಂದವರು ತಿಳಿಸಿದ್ದಾರೆ.