ಬೆಂಗಳೂರು: ರಾಜ್ಯ ಸರ್ಕಾರಗಳ ಸಾಧನೆಯ ನೆರಳಲ್ಲಿ ಬಿಜೆಪಿಯ ಕೇಂದ್ರ ಸರ್ಕಾರ ಬೆನ್ನು ತಟ್ಟಿಕೊಳ್ಳುವುದು ಹೊಸ ವಿಷಯವೇನೂ ಅಲ್ಲ ಎಂದಿರುವ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ, ಜಲಜೀವನ್ ಮಿಷನ್ ಹೆಸರಿಗೆ ಮಾತ್ರ ಕೇಂದ್ರ ಪುರಸ್ಕೃತ ಯೋಜನೆಯಾದರೂ ವಾಸ್ತವದಲ್ಲಿ ಕರ್ನಾಟಕದ ಮಟ್ಟಿಗೆ ಕೇಂದ್ರ ತೀರಸ್ಕೃತ ಯೋಜನೆಯಾಗಿದೆ ಎನ್ನಬಹುದು ಎಂದಿದ್ದಾರೆ. ರಾಜ್ಯದಲ್ಲಿ ಪ್ರಸಕ್ತ ಸಾಲಿನವರೆಗೆ JJM ಯೋಜನೆಗಾಗಿ ಒಟ್ಟು ₹35,698,58 ಕೋಟಿ ಖರ್ಚು ಮಾಡಲಾಗಿದೆ. ಇದರಲ್ಲಿ ರಾಜ್ಯ ಸರ್ಕಾರ ಖರ್ಚು ಮಾಡಿರುವುದು ₹24,598,45 ಕೋಟಿ. ಇದುವರೆಗೂ ಕೇಂದ್ರ ಸರ್ಕಾರ ಕೊಟ್ಟಿರುವುದು ₹11, 786, 63 ಕೋಟಿ ಮಾತ್ರ. ಪ್ರಸಕ್ತ ಸಾಲಿನವರೆಗೆ ಕೇಂದ್ರ ಸರ್ಕಾರ ಬಿಡುಗಡೆಗೊಳಿಸಬೇಕಾದ ಮೊತ್ತ ₹13,004,63 ಕೋಟಿ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹಂಚಿಕೊಂಡಿದ್ದಾರೆ. ಬಿಜೆಪಿಯ ಕೇಂದ್ರ ಸರ್ಕಾರದ ಕರ್ನಾಟಕದೆಡೆಗಿನ ಮಲತಾಯಿ ಧೋರಣೆ ಹೇಗಿದೆ ಎಂದು ನೋಡುವುದಾದರೆ 2024-25ನೇ ಆರ್ಥಿಕ ಸಾಲಿನಲ್ಲಿ JJM ಯೋಜನೆಗಾಗಿ ₹3,804,41 ಕೋಟಿಯನ್ನು ಕರ್ನಾಟಕಕ್ಕೆ ಹಂಚಿಕೆ…
