ಬೆಂಗಳೂರು: ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿರುವ ಬೆಂಗಳೂರು ದರೋಡೆ ಪ್ರಕರಣವನ್ನು ಬೇಧಿಸುವಲ್ಲಿ ಪೊಲೀಸರು ಪ್ರಕರಣದಲ್ಲಿ ಒಟ್ಟು 9 ಮಂದಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬೆಂಗಳೂರು ನಗರ ಪೊಲೀಸರು ₹7.11 ಕೋಟಿ ನಗದು ವ್ಯಾನ್ ದರೋಡೆ ಪ್ರಕರಣದಲ್ಲಿ ಇನ್ನೂ ಆರು ಆರೋಪಿಗಳನ್ನು ಬಂಧಿಸಿದ್ದಾರೆ. ಇದರೊಂದಿಗೆ ಒಟ್ಟು ಬಂಧಿತರ ಸಂಖ್ಯೆ 9ಕ್ಕೆ ಏರಿಕೆಯಾಗಿದೆ. ಈ ಇತ್ತೀಚಿನ ಬಂಧನಗಳಿಂದ ₹1.45 ಕೋಟಿ ಹಣ ಮರುಪಡೆಯಲಾಗಿದ್ದು, ಒಟ್ಟಾರೆಯಾಗಿ ಮರುಪಡೆದ ಹಣದ ಮೊತ್ತ ₹7.1 ಕೋಟಿಗೆ ತಲುಪಿದೆ ಎಂದು ಪೊಲೀಸ್ ಇಲಾಖೆ ಮಾಹಿತಿ ಹಂಚಿಕೊಂಡಿದೆ. ಆರೋಪಿಗಳನ್ನು ಕರ್ನಾಟಕ, ಆಂಧ್ರಪ್ರದೇಶ ಮತ್ತು ತೆಲಂಗಾಣದಾದ್ಯಂತ ಹಲವು ತಂಡಗಳ ಸಮನ್ವಯದಿಂದ ಪತ್ತೆ ಮಾಡಿ ಬಂಧಿಸಲಾಗಿದೆ. ಆರು ಮಂದಿಯನ್ನೂ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದ್ದು, ಪ್ರಕರಣದ ತನಿಖೆ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
