ಬೆಂಗಳೂರು: ಪ್ರಸ್ತುತ ವರ್ಷದ ಮಾನ್ಸೂನ್ ಅವಧಿಯಲ್ಲಿ ಭಾರೀ ಮಳೆ ಮತ್ತು ಪ್ರವಾಹದಿಂದ ಬೆಳೆ ಹಾನಿಗೊಳಗಾದ ರೈತರಿಗೆ ರಾಜ್ಯ ಸರ್ಕಾರದಿಂದ ಹೆಚ್ಚುವರಿ ಸಬ್ಸಿಡಿಗಾಗಿ ರೂ.1033.60 ಕೋಟಿ ವಿಶೇಷ ಪ್ಯಾಕೇಜ್ ಘೋಷಿಸಲಾಗಿದ್ದು ಅದಕ್ಕೆ ಗುರುವಾರ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದರು. ಮುಂಗಾರು ಮಳೆಯಿಂದಾಗಿ ಬೆಳೆ ಹಾನಿಗೆ ಒಳಗಾದ ರಾಜ್ಯದ ರೈತರ ಖಾತೆಗಳಿಗೆ ‘ಇನ್ ಪುಟ್ ಸಬ್ಸಿಡಿ’ ವಿತರಿಸುವ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ, ಬೆಳೆ ಹಾನಿ ಸಂಭವಿಸಿದ 14.24 ಲಕ್ಷ ರೈತರ ಬ್ಯಾಂಕ್ ಖಾತೆಗಳಿಗೆ ಒಟ್ಟು ರೂ.1033.60 ಕೋಟಿ ಹೆಚ್ಚುವರಿ ಪರಿಹಾರ ಒದಗಿಸಲಾಗುತ್ತಿದೆ ಎಂದರು. ‘ನಾವು ರೈತರ ಪರವಾಗಿದ್ದು, ಬೆಳೆ ಹಾನಿಗೊಳಗಾದ ರೈತರಿಗೆ ಹೆಚ್ಚಿನ ನೆರವು ಒದಗಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಇನ್‌ಪುಟ್ ಸಬ್ಸಿಡಿಗಳ ದರಗಳನ್ನು ಹೆಚ್ಚಿಸಿದೆ. ಗರಿಷ್ಟ 2 ಹೆಕ್ಟೇರಿಗೆ ಸೀಮಿತವಾಗಿ, ಮಳೆಯಾಶ್ರಿತ ಬೆಳೆಗಳಿಗೆ ಹೆಕ್ಟೇರ್ ಒಂದಕ್ಕೆ ರೂ. 8500 ರಿಂದ ರೂ. 17 ಸಾವಿರ, ನೀರಾವರಿ…
Day: November 28, 2025
‘ಕಲ್ಯಾಣ ಕರ್ನಾಟಕ ಕಷ್ಟಕರ ಕರ್ನಾಟಕ’; ಸಾರಿಗೆ ಅವ್ಯವಸ್ಥೆ ಬಗ್ಗೆ ಬಿಜೆಪಿ ಟೀಕೆ
ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಕಲ್ಯಾಣ ಕರ್ನಾಟಕ “ಕಷ್ಟಕರ” ಕರ್ನಾಟಕವಾಗಿದೆ ಎಂದು ಪ್ರತಿಪಕ್ಷ ಬಿಜೆಪಿ ದೂರಿದೆ. ದೋರನಹಳ್ಳಿಯಿಂದ 14 ಕಿಲೋ ಮೀಟರ್ ದೂರವಿರುವ ಶಹಾಪುರಕ್ಕೆ ಪ್ರತಿದಿನ 20 ರಿಂದ 30 ಹದಿಹರೆಯದ ಶಾಲಾ ವಿದ್ಯಾರ್ಥಿನಿಯರು ಕಾಲ್ನಡಿಗೆಯಲ್ಲೇ ಶಾಲೆಗೆ ಹೋಗುವ ದುಸ್ಥಿತಿ ನಿರ್ಮಾಣವಾಗಿದೆ ಎಂದು ಬಿಜೆಪಿ ಗಮನಸೆಳೆದಿದೆ. ರಾಜ್ಯದಲ್ಲಿ @INCKarnataka ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಕಲ್ಯಾಣ ಕರ್ನಾಟಕ “ಕಷ್ಟಕರ” ಕರ್ನಾಟಕವಾಗಿದೆ. ದೋರನಹಳ್ಳಿಯಿಂದ 14 ಕಿಲೋ ಮೀಟರ್ ದೂರವಿರುವ ಶಹಾಪುರಕ್ಕೆ ಪ್ರತಿದಿನ 20 ರಿಂದ 30 ಹದಿಹರೆಯದ ಶಾಲಾ ವಿದ್ಯಾರ್ಥಿನಿಯರು ಕಾಲ್ನಡಿಗೆಯಲ್ಲೇ ಶಾಲೆಗೆ ಹೋಗುವ ದುಸ್ಥಿತಿ ನಿರ್ಮಾಣವಾಗಿದೆ. ಕರ್ನಾಟಕದಲ್ಲಿನ್ನೂ ಸಂಪೂರ್ಣ ಬಸ್… pic.twitter.com/RwlFwO33aa — BJP Karnataka (@BJP4Karnataka) November 27, 2025 ಈ ಕುರಿತಂತೆ ಸಾಮಾಜಿಕ ಮಾಧ್ಯಮ ‘X’ನಲ್ಲಿ ಪೋಸ್ಟ್ ಹಾಕಿರುವ ಬಿಜೆಪಿ, ‘ಕರ್ನಾಟಕದಲ್ಲಿನ್ನೂ ಸಂಪೂರ್ಣ ಬಸ್ ವ್ಯವಸ್ಥೆಯೇ ಇಲ್ಲದೆ ಶಕ್ತಿ ಯೋಜನೆ…
