ಬೆಂಗಳೂರು: ಸರ್ಕಾರಿ ವ್ಯವಸ್ಥೆಯಲ್ಲಿ ಮಹಿಳಾ ನೌಕರರ ಮಹತ್ವದ ಪಾತ್ರವನ್ನು ಗೌರವಿಸಲು ಸೆಪ್ಟೆಂಬರ್ 13 ಅನ್ನು ‘ಮಹಿಳಾ ನೌಕರರ ದಿನ’ವಾಗಿ ಘೋಷಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಕಟಿಸಿದ್ದಾರೆ. ಅಖಿಲ ಕರ್ನಾಟಕ ರಾಜ್ಯ ಸರ್ಕಾರಿ ಮಹಿಳಾ ನೌಕರರ ಸಂಘ ಗುರುವಾರ ಆಯೋಜಿಸಿದ್ದ ಮಹಿಳಾ ಸಮ್ಮೇಳನದಲ್ಲಿ ಮಾತನಾಡಿದ ಅವರು, ಮಹಿಳಾ ಉದ್ಯೋಗಿಗಳಿಗೆ ತಿಂಗಳಿಗೆ ಒಂದು ದಿನ ವೇತನ ಸಹಿತ ಮುಟ್ಟಿನ ರಜೆ ನೀಡುವ ಸರ್ಕಾರದ ನಿರ್ಧಾರವನ್ನು ಪುನರುಚ್ಚರಿಸಿದರು. ಸಂಘದ ಕಚೇರಿಗೆ ಮತ್ತು ಚಟುವಟಿಕೆಗಳಿಗೆ ಬಾಲಭವನದಲ್ಲಿ ಸ್ಥಳಾವಕಾಶ ಕಲ್ಪಿಸುವ ಬಗ್ಗೆ ಮಹಿಳಾ ಹಾಗೂ ಮಕ್ಕಳ ಕಲ್ಯಾಣ ಇಲಾಖೆಯೊಂದಿಗೆ ಚರ್ಚೆ ನಡೆಸಲಾಗಿದೆ ಎಂದೂ ಹೇಳಿದರು. ಮಹಿಳೆಯರು ಪುರುಷರಷ್ಟೇ ಸರ್ಕಾರಕ್ಕೆ ಸೇವೆ ಮಾಡುತ್ತಿದ್ದು, ಆಡಳಿತದ ಅನೇಕ ಕ್ಷೇತ್ರಗಳಲ್ಲಿ ಮುಂಚೂಣಿಯಲ್ಲಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿದರು. ಲಿಂಗ ಅಸಮಾನತೆಯನ್ನು ನಿವಾರಿಸಿ ಸಮಾನತೆ ಸ್ಥಾಪಿಸುವುದು ಸರ್ಕಾರದ ಬದ್ಧತೆಯಾಗಿದೆ ಎಂದು ಅವರು ಒತ್ತಿ ಹೇಳಿದರು. ಭಾರತದ ಸ್ವಾತಂತ್ರ್ಯಕ್ಕೆ…
Day: December 5, 2025
63% ಭ್ರಷ್ಟಾಚಾರ ಆರೋಪ; ಸ್ವಲ್ಪ ಸಮಯ ಕೊಡಿ ಎಲ್ಲವನ್ನೂ ಸರಿಪಡಿಸುತ್ತೇವೆ ಎಂದ ಸಿಎಂ
ಬೆಂಗಳೂರು: ರಾಜ್ಯದಲ್ಲಿ 63% ಭ್ರಷ್ಟಾಚಾರ ಇದೆ ಇದೆ ಎಂದು ಉಪಲೋಕಾಯುಕ್ತ ಬಿ.ವೀರಪ್ಪ ಮಾಡಿರುವ ಆರೋಪ ಬಿಜೆಪಿ ಸರ್ಕಾರದ ಅವಧಿಯದ್ದು ಎಂದು ಸಿಎಂ ಸಿದ್ದರಾಮಯ್ಯ ಬೊಟ್ಟು ಮಾಡಿದ್ದಾರೆ. ಪ್ರತಿಪಕ್ಷ ನಾಯಕ ಆರ್.ಅಶೋಕ್ ಅವರು ಉಪಲೋಕಾಯುಕ್ತರ ಮಾತನ್ನು ಸರಿಯಾಗಿ ಅರ್ಥೈಸಿಕೊಳ್ಳದೆ ಬಿಜೆಪಿಯ ಪಾಪದ ಗಂಟನ್ನು ನಮ್ಮ ತಲೆಗೆ ಕಟ್ಟಲು ಹೋಗಿ ತಮ್ಮ ಕಾಲ ಮೇಲೆ ತಾವೇ ಚಪ್ಪಡಿ ಎಳೆದುಕೊಂಡಿದ್ದಾರೆ ಎಂದು ಸಿದ್ದರಾಮಯ್ಯ ಲೇವಡಿ ಮಾಡಿದ್ದಾರೆ. ಬಿಜೆಪಿ ನಾಯಕರ ಹೇಳಿಕೆಗಳಿಗೆ ಎದಿರೇಟು ನೀಡಿರುವ ಸಿದ್ದರಾಮಯ್ಯ, ಉಪಲೋಕಾಯುಕ್ತ ಬಿ.ವೀರಪ್ಪ ಅವರು 2019ರ ನವೆಂಬರ್‌ನಲ್ಲಿ ಕೊಟ್ಟ ವರದಿಯಲ್ಲಿ ರಾಜ್ಯದಲ್ಲಿ 63% ಭ್ರಷ್ಟಾಚಾರ ಇದೆ ಎಂಬುದಾಗಿತ್ತು. ಅದೇ ವರದಿಯನ್ನು ಆಧರಿಸಿ ಬಿ.ವೀರಪ್ಪನವರು ಈಗ ಮಾತನಾಡಿದ್ದಾರೆ. ಅವರು ವರದಿ ನೀಡುವ ವೇಳೆಯಲ್ಲಿ ರಾಜ್ಯದಲ್ಲಿ ಯಡಿಯೂರಪ್ಪ ಅವರ ನೇತೃತ್ವದ ಬಿಜೆಪಿ ಸರ್ಕಾರ ಆಡಳಿತದಲ್ಲಿ ಇತ್ತು ಎಂದು ಸ್ಪಷ್ಟಪಡಿಸಿದ್ದಾರೆ. ಬಿಜೆಪಿ ಸರ್ಕಾರವಿದ್ದ ಅವಧಿಯಲ್ಲಿ ರಾಜ್ಯದಲ್ಲಿ ನಡೆದ ಭ್ರಷ್ಟಾಚಾರ ಹಗರಣಗಳು ಒಂದೇ,…
