2025-26ರಲ್ಲಿ ರಾಜ್ಯದಲ್ಲಿ 1,20,000 ಕೋ.ರೂ. ವಾಣಿಜ್ಯ ತೆರಿಗೆ ಸಂಗ್ರಹದ ಗುರಿ

ಬೆಂಗಳೂರು: ವಾಣಿಜ್ಯ ತೆರಿಗೆ ಇಲಾಖೆಗೆ 2025-26 ನೇ ಹಣಕಾಸು ಸಾಲಿನಲ್ಲಿ ರೂ. 1,20,000 ಕೋಟಿ ಗುರಿಯನ್ನು ನಿಗದಿಪಡಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ನಡೆದ ತೆರಿಗೆ ಸಂಗ್ರಹ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ನವೆಂಬರ್‌ ಅಂತ್ಯದವರೆಗೆ ರೂ. 80 ಸಾವಿರ ಕೋಟಿ ಗುರಿ ನಿಗದಿಪಡಿಸಲಾಗಿದೆ. ಇದರಲ್ಲಿ ನಿವ್ವಳ ಸಂಗ್ರಹ ರೂ.72,131 ಕೋಟಿ ಮಾಡಲಾಗಿದ್ದು, ಶೇಕಡಾವಾರು ಶೇ.90 ಸಾಧನೆ ಮಾಡಲಾಗಿದೆ. ಇದರಲ್ಲಿ ಜಿಎಸ್‌ಟಿ ರೂ.53,522 ಕೋಟಿ, ಕೆಎಸ್‌ಟಿ ರೂ.17,595 ಕೋಟಿ ಮತ್ತು ವೃತಿ ತೆರಿಗೆ ರೂ.1,014 ಕೋಟಿ ಸಂಗ್ರಹಿಸಲಾಗಿದೆ ಎಂದು ವಿವರಿಸಿದ್ದಾರೆ. ಆರಂಭದ ಐದು ತಿಂಗಳಲ್ಲಿ ಎಪ್ರಿಲ್‌ನಿಂದ ಆಗಸ್ಟ್‌ವರೆಗೆ ಶೇ.12ರಷ್ಟು ಬೆಳವಣಿಗೆ ದರ ಸಾಧಿಸಲಾಗಿದೆ. ಆದರೆ ಜಿಎಸ್‌ಟಿ ದರಗಳಲ್ಲಿ ಬದಲಾವಣೆ ಹಿನ್ನೆಲೆಯಲ್ಲಿ ತೆರಿಗೆ ಸಂಗ್ರಹದಲ್ಲಿ ಕಳೆದ ಮೂರು ತಿಂಗಳಲ್ಲಿ ಕೇವಲ ಶೇ.3ರಷ್ಟು ಬೆಳವಣಿಗೆ ದರ ಸಾಧ್ಯವಾಗಿದೆ ಎಂದಿದ್ದಾರೆ. ವಾಣಿಜ್ಯ ತೆರಿಗೆ ಸಂಗ್ರಹದಲ್ಲಿ ಶೇ.100ರಷ್ಟು ನಿಗದಿತ…