ರೌಡಿಶೀಟರ್ ಗಳನ್ನು ವಿಚಾರಣೆ ನೆಪದಲ್ಲಿ ಪೊಲೀಸ್ ಠಾಣೆಗೆ ಕರೆಸುವುದಕ್ಕೆ ಹೈಕೋರ್ಟ್ ಅಸಮಾಧಾನ

ಬೆಂಗಳೂರು: ಮೌಖಿಕವಾಗಿ ವಿಚಾರಣೆ ಸೇರಿದಂತೆ ಇನ್ನಿತರೆ ಕಾರಣಗಳಿಗೆ ರೌಡಿಶೀಟರ್ ಗಳನ್ನು ಪೊಲೀಸ್ ಠಾಣೆಗೆ ಕರೆಸುವುದಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಆದರೇ ರೌಡಿ ಶೀಟರ್ ಗಳನ್ನು ಪೊಲೀಸ್ ಠಾಣೆಗೆ ಎಸ್ ಎಂ ಎಸ್, ವಾಟ್ಸ್ ಆಪ್ ಮೂಲಕ ಮಾಹಿತಿ ನೀಡಿ, ಕರೆಸುವುದನ್ನು ಕಡ್ಡಾಯಗೊಳಿಸಿ ಮಹತ್ವದ ಆದೇಶ ಮಾಡಿದೆ. ಹೈಕೋರ್ಟ್ ನ್ಯಾಯಮೂರ್ತಿ ಆರ್.ನಟರಾಜ್ ಅವರಿದ್ಧ ನ್ಯಾಯಪೀಠವು, ರೌಡಿಶೀಟರ್ ಗಳನ್ನು ಪೊಲೀಸ್ ಠಾಣೆಗೆ ಕರೆಸುವುದಕ್ಕೆ ಹೈಕೋರ್ಟ್ ಪ್ರಕ್ರಿಯೆ ನಿಗದಿ ಪಡಿಸಿ ಮಹತ್ವದ ಆದೇಶ ಮಾಡಿದೆ. ಎಸ್ ಎಂ ಎಸ್, ವಾಟ್ಸ್ ಆಪ್ ಮೂಲಕ ಪೊಲೀಸ್ ಠಾಣೆಗೆ ಕರೆಸಬಹುದು. ಪೊಲೀಸ್ ಠಾಣೆಗಳಿಗೆ ರೌಡಿಶೀಟರ್ ಗಳು ತಮ್ಮ ಮೊಬೈಲ್ ನಂಬರ್ ನೀಡಬೇಕು. ಮೌಖಿಕವಾಗಿ ಕರೆಯುವ ಬದಲು ಎಸ್ ಎಂ ಎಸ್, ವಾಟ್ಸ್ ಆಪ್ ಸಂದೇಶ ನೀಡಬೇಕು ಎಂಬುದಾಗಿ ಹೈಕೋರ್ಟ್ ಸೂಚಿಸಿದೆ. ಒಂದು ವೇಳೆ ಎಸ್ಎಂಎಸ್, ವಾಟ್ಸ್ ಆಪ್ ನಲ್ಲಿ ಸೂಚಿಸಿದರೂ ಪೊಲೀಸ್ ಠಾಣೆಗೆ ರೌಡಿ…