ಬೆಂಗಳೂರು: ನೆಲಮಂಗಲದಿಂದ ತುಮಕೂರುವರೆಗೆ ಸುಮಾರು 44 ಕಿಮೀ ಉದ್ದದ 12 ಪಥಗಳ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯನ್ನು 2027ರ ಮಾರ್ಚ್ ತಿಂಗಳೊಳಗೆ ಪೂರ್ಣಗೊಳಿಸುವ ವಿಶ್ವಾಸವನ್ನು ಸಂಸದ ಡಾ.ಸುಧಾಕರ್ ವ್ಯಕ್ತಪಡಿಸಿದ್ದಾರೆ. ಕೇಂದ್ರ ಸರ್ಕಾರದ ಭಾರತ್ ಮಾಲಾ ಯೋಜನೆಯಡಿ ನೆಲಮಂಗಲದಿಂದ ತುಮಕೂರುವರೆಗೆ ಸುಮಾರು ₹2,000 ಕೋಟಿ ವೆಚ್ಚದಲ್ಲಿ ನಿರ್ಮಾಣ ಆಗುತ್ತಿರುವ 44 ಕಿಮೀ ಉದ್ದದ 12 ಪಥಗಳ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯನ್ನು ಶನಿವಾರ ಅವರು ಪರಿಶೀಲಿಸಿದರು. ಈ ಕುರಿತಂತೆ ಮಾಹಿತಿ ಹಂಚಿಕೊಂಡಿರುವ ಅವರು, ಈ ಯೋಜನೆಯ ಭೂಸ್ವಾಧೀನ ಪ್ರಕ್ರಿಯೆಯಲ್ಲಿದ್ದ ತೊಡಕುಗಳಿಂದ ಕಾಮಗಾರಿ ವಿಳಂಬವಾಗಿದ್ದು, 2027ರ ಮಾರ್ಚ್ ತಿಂಗಳೊಳಗೆ ಕಾಮಗಾರಿ ಪೂರ್ಣಗೊಳಿಸುವುದಾಗಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ ಎಂದು ತಿಳಿಸಿದರು. ನಿರ್ಮಾಣ ಹಂತದಲ್ಲಿರುವ ಈ ರಸ್ತೆಯಲ್ಲಿ ಅಪಘಾತಗಳು ಹೆಚ್ಚಾಗುತ್ತಿರುವ ಬಗ್ಗೆ ಸಾರ್ವಜನಿಕರಿಂದ ದೂರುಗಳಿದ್ದು, ಈ ನಿಟ್ಟಿನಲ್ಲಿ ಬ್ಲಾಕ್ ಸ್ಪಾಟ್‌ಗಳನ್ನು ಗುರುತಿಸಿ, ಬ್ಲಾಕ್ ಸ್ಪಾಟ್ ಪ್ರದೇಶಗಳಲ್ಲಿ ಬೆಳಕಿನ ವ್ಯವಸ್ಥೆ, ಎಚ್ಚರಿಕೆ ಫಲಕಗಳು, ಪೇಂಟಿಂಗ್ ಹಾಗೂ ಸುರಕ್ಷತಾ…
