ಮಾಜಿ ಸಚಿವ, ಕಾಂಗ್ರೆಸ್ ಶಾಸಕ ಶಾಮನೂರು ಶಿವಶಂಕರಪ್ಪ ವಿಧಿವಶ

ಬೆಂಗಳೂರು: ಮಾಜಿ ಸಚಿವ, ದಾವಣಗೆರೆ ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಶಾಸಕ ಶಾಮನೂರು ಶಿವಶಂಕರಪ್ಪ ವಿಧಿವಶರಾಗಿದ್ದಾರೆ. ಅಖಿಲ ಭಾರತ ವೀರಶೈವ ಮಹಾ ಸಭೆಯ ರಾಷ್ಟ್ರೀಯ ಅಧ್ಯಕ್ಷರೂ ಆದ ಶಾಮನೂರು ಶಿವಶಂಕರಪ್ಪ ಅವರು ವಯೋಸಹಜ ಸಮಸ್ಯೆಗಳಿಂದ ಬಳಲುತ್ತಿದ್ದರು. 92 ವರ್ಷ ವಯಸ್ಸಿನ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಭಾನುವಾರ ಸಂಜೆ ಕೊನೆಯುಸಿರೆಳೆದಿದ್ದಾರೆ ಎಂದು ಮೂಲಗಳು ತಿಳಿಸಿವೆ.

ನೆಲಮಂಗಲ-ತುಮಕೂರು 12 ಪಥಗಳ ಹೆದ್ದಾರಿ ಕಾಮಗಾರಿ 2027ರ ಮಾರ್ಚ್ ತಿಂಗಳೊಳಗೆ ಪೂರ್ಣ; ಸುಧಾಕರ್

ಬೆಂಗಳೂರು: ನೆಲಮಂಗಲದಿಂದ ತುಮಕೂರುವರೆಗೆ ಸುಮಾರು 44 ಕಿಮೀ ಉದ್ದದ 12 ಪಥಗಳ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯನ್ನು 2027ರ ಮಾರ್ಚ್ ತಿಂಗಳೊಳಗೆ ಪೂರ್ಣಗೊಳಿಸುವ ವಿಶ್ವಾಸವನ್ನು ಸಂಸದ ಡಾ.ಸುಧಾಕರ್ ವ್ಯಕ್ತಪಡಿಸಿದ್ದಾರೆ. ಕೇಂದ್ರ ಸರ್ಕಾರದ ಭಾರತ್ ಮಾಲಾ ಯೋಜನೆಯಡಿ ನೆಲಮಂಗಲದಿಂದ ತುಮಕೂರುವರೆಗೆ ಸುಮಾರು ₹2,000 ಕೋಟಿ ವೆಚ್ಚದಲ್ಲಿ ನಿರ್ಮಾಣ ಆಗುತ್ತಿರುವ 44 ಕಿಮೀ ಉದ್ದದ 12 ಪಥಗಳ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯನ್ನು ಶನಿವಾರ ಅವರು ಪರಿಶೀಲಿಸಿದರು. ಈ ಕುರಿತಂತೆ ಮಾಹಿತಿ ಹಂಚಿಕೊಂಡಿರುವ ಅವರು, ಈ ಯೋಜನೆಯ ಭೂಸ್ವಾಧೀನ ಪ್ರಕ್ರಿಯೆಯಲ್ಲಿದ್ದ ತೊಡಕುಗಳಿಂದ ಕಾಮಗಾರಿ ವಿಳಂಬವಾಗಿದ್ದು, 2027ರ ಮಾರ್ಚ್ ತಿಂಗಳೊಳಗೆ ಕಾಮಗಾರಿ ಪೂರ್ಣಗೊಳಿಸುವುದಾಗಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ ಎಂದು ತಿಳಿಸಿದರು. ನಿರ್ಮಾಣ ಹಂತದಲ್ಲಿರುವ ಈ ರಸ್ತೆಯಲ್ಲಿ ಅಪಘಾತಗಳು ಹೆಚ್ಚಾಗುತ್ತಿರುವ ಬಗ್ಗೆ ಸಾರ್ವಜನಿಕರಿಂದ ದೂರುಗಳಿದ್ದು, ಈ ನಿಟ್ಟಿನಲ್ಲಿ ಬ್ಲಾಕ್ ಸ್ಪಾಟ್‌ಗಳನ್ನು ಗುರುತಿಸಿ, ಬ್ಲಾಕ್ ಸ್ಪಾಟ್ ಪ್ರದೇಶಗಳಲ್ಲಿ ಬೆಳಕಿನ ವ್ಯವಸ್ಥೆ, ಎಚ್ಚರಿಕೆ ಫಲಕಗಳು, ಪೇಂಟಿಂಗ್ ಹಾಗೂ ಸುರಕ್ಷತಾ…

ಶಿಕ್ಷಿತರಲ್ಲೇ ಜಾತೀಯತೆ ಹೆಚ್ಚಾಗಿದೆ; ಅದು ಕೊನೆಗೊಳ್ಳಬೇಕು: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಶಿಕ್ಷಿತರಲ್ಲಿ ಜಾತೀಯತೆ ಹೆಚ್ಚಾಗಿ ಕಂಡುಬರುತ್ತಿರುವುದು ಆತಂಕಕಾರಿ ಸಂಗತಿಯಾಗಿದ್ದು, ಇದು ಸಂಪೂರ್ಣವಾಗಿ ಕೊನೆಗೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಳವಳ ವ್ಯಕ್ತಪಡಿಸಿದರು. ಗದಗ ಜಿಲ್ಲೆಯ ಲಕ್ಷ್ಮೇಶ್ವರದಲ್ಲಿ ಶನಿವಾರ ನಡೆದ ಭಾರತ ರತ್ನ ಪ್ರೊ. ಸಿ.ಎನ್.ಆರ್. ರಾವ್ ಅವರ 10ನೇ ವಾರ್ಷಿಕ ವಿಜ್ಞಾನ ಸಂಪರ್ಕ ಕಾರ್ಯಕ್ರಮ–2025 ಉದ್ಘಾಟಿಸಿ ಅವರು ಮಾತನಾಡಿದರು. “ಸಮಾಜ ಸುಧಾರಕ ಬಸವಣ್ಣ 850 ವರ್ಷಗಳ ಹಿಂದೆಯೇ ‘ತಾನು ಯಾರು ಎಂದು ಕೇಳಬೇಡಿ’ ಎಂದು ಹೇಳಿದ್ದಾರೆ. ಸ್ವಾತಂತ್ರ್ಯ ಬಂದು 79 ವರ್ಷಗಳಾದರೂ, ಶೇ.76ರಷ್ಟು ಸಾಕ್ಷರತೆ ಸಾಧಿಸಿದ ಬಳಿಕವೂ ಜಾತಿ ವ್ಯವಸ್ಥೆ ಮಾಯವಾಗಿಲ್ಲ. ವಾಸ್ತವವಾಗಿ, ಶಿಕ್ಷಿತರಲ್ಲೇ ಜಾತೀಯತೆ ಹೆಚ್ಚಾಗಿರುವುದು ದುಃಖಕರ. ಇದು ಕೊನೆಗೊಳ್ಳಲೇಬೇಕು,” ಎಂದು ಅವರು ಮನವಿ ಮಾಡಿದರು. ಶಿಕ್ಷಣದ ಮೂಲ ಉದ್ದೇಶ ವೈಜ್ಞಾನಿಕ ಮನೋಭಾವ ಮತ್ತು ತಾರ್ಕಿಕ ಚಿಂತನೆಯನ್ನು ಬೆಳೆಸುವುದೆಂದು ಸಿದ್ದರಾಮಯ್ಯ ಹೇಳಿದರು. “ಅಸಮಾನತೆ ಹೋಗಲಾಡಿಸದೇ, ಕುರುಡು ಆಚರಣೆಗಳನ್ನು ತ್ಯಜಿಸದೇ ನಿಜವಾದ ಮಾನವೀಯ ಸಮಾಜ ನಿರ್ಮಾಣ ಸಾಧ್ಯವಿಲ್ಲ,” ಎಂದರು.…