ಮುಡಾ ಪ್ರಕರಣ:; ಡಿಸೆಂಬರ್ 23 ತೀರ್ಪು ಸಾಧ್ಯತೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಪ್ರಮುಖ ಆರೋಪಿಯನ್ನಾಗಿ ಹೆಸರಿಸಲಾಗಿರುವ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣದ ತನಿಖೆ ಅಂತಿಮ ಹಂತದಲ್ಲಿದೆ ಎಂದು ಕರ್ನಾಟಕ ಲೋಕಾಯುಕ್ತರು ಗುರುವಾರ ಶಾಸಕರು–ಸಂಸದರ ವಿಶೇಷ ನ್ಯಾಯಾಲಯಕ್ಕೆ ತಿಳಿಸಿದರು. ಆದರೆ ತನಿಖೆ ಪೂರ್ಣಗೊಳಿಸುವಲ್ಲಿ ಆಗುತ್ತಿರುವ ವಿಳಂಬದ ಬಗ್ಗೆ ನ್ಯಾಯಾಲಯ ಅಸಮಾಧಾನ ವ್ಯಕ್ತಪಡಿಸಿತು. ಲೋಕಾಯುಕ್ತರ ಪರ ವಿಶೇಷ ಸಾರ್ವಜನಿಕ ಅಭಿಯೋಜಕರು (ಎಸ್‌ಪಿಪಿ) ನ್ಯಾಯಾಲಯಕ್ಕೆ ಸ್ಥಿತಿಗತಿ ವರದಿ ಸಲ್ಲಿಸಿ, ಕೆಲ ಮಂಜೂರಾತಿ ಆದೇಶಗಳನ್ನು ಇನ್ನೂ ಪಡೆಯಬೇಕಿದ್ದು, ತನಿಖೆ ಮುಕ್ತಾಯದ ಹಂತದಲ್ಲಿದೆ ಎಂದು ತಿಳಿಸಿದರು. ಡಿಸೆಂಬರ್ 18ರೊಳಗೆ ಅಂತಿಮ ವರದಿ ಸಲ್ಲಿಸುವಂತೆ ನ್ಯಾಯಾಲಯ ಈ ಹಿಂದೆ ನಿರ್ದೇಶನ ನೀಡಿದ್ದನ್ನು ಸ್ಮರಿಸಿತು. ವಿಳಂಬವನ್ನು ಗಮನಿಸಿದ ನ್ಯಾಯಾಲಯ, ಮುಡಾ ಪ್ರಕರಣದ ವಿವಿಧ ಅಂಶಗಳನ್ನು ಪರಿಗಣಿಸಿ ತನಿಖೆ ಪೂರ್ಣಗೊಳಿಸುವಂತೆ ತನಿಖಾಧಿಕಾರಿಗಳಿಗೆ ನಿರ್ದೇಶನ ನೀಡಲಾಗಿತ್ತು ಎಂದು ದಾಖಲಿಸಿದೆ. ತನಿಖೆ ಪೂರ್ಣಗೊಳ್ಳದೆ, ಹೆಚ್ಚಿನ ತನಿಖೆಗೆ ಅನುಮತಿ ಕೋರಿ ತನಿಖಾಧಿಕಾರಿ ಮನವಿ ಸಲ್ಲಿಸಿದ್ದರಿಂದ, ಆರೋಪಿ ಸಂಖ್ಯೆ 1…