ವಾರಾಹಿ ಯೋಜನೆಯಡಿ ಎಲ್ಲಾ ಬಾಕಿ ಕಾಮಗಾರಿ ಶೀಘ್ರ ಪೂರ್ಣ; ಡಿಕೆಶಿ ಭರವಸೆ

ಬೆಳಗಾವಿ: ವಾರಾಹಿ ಯೋಜನೆಯಡಿ ಎಲ್ಲಾ ಬಾಕಿ ಕಾಮಗಾರಿಗಳನ್ನು ತಾಂತ್ರಿಕ ಸಾಧ್ಯತೆಗೆ ಅನುಗುಣವಾಗಿ ಮತ್ತು ಯೋಜನೆಗೆ ಅವಶ್ಯವಿರುವ ಅರಣ್ಯ ಭೂಮಿ ಪ್ರಸ್ತಾವನೆಗಳಿಗೆ ತೀರುವಳಿ ಪಡೆದು, ಆದ್ಯತೆ ಮೇರೆಗೆ ಪೂರ್ಣಗೊಳಿಸಲು ಕ್ರಮವಹಿಸಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಅವರ ಪ್ರಶ್ನೆಗೆ ಡಿ.ಕೆ.ಶಿವಕುಮಾರ್‌ ಉತ್ತರಿಸಿದರು. ವಾರಾಹಿ ಯೋಜನೆಯಡಿ ಮೂಲ ಯೋಜನೆಯ ಅಚ್ಚುಕಟ್ಟು ವಿಸ್ತ್ರೀರ್ಣದಲ್ಲಿ ಯಾವುದೇ ವ್ಯತ್ಯಾಸವಾಗದಂತೆ ಯೋಜನೆಯನ್ನು ಮಾರ್ಪಡಿಸಲಾಗಿದ್ದು, ₹569.53 ಕೋಟಿ ಅಂದಾಜು ಮೊತ್ತದ ಯೋಜನಾ ವರದಿಗೆ 20.03.2006ರಲ್ಲಿ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ ಎಂದರು. ಈ ಯೋಜನೆಯು ಪಶ್ಚಿಮ ಘಟ್ಟದ ಕೆಳಭಾಗ ಮತ್ತು ಕರಾವಳಿ ಪ್ರದೇಶದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಪ್ರಪ್ರಥಮ ಬೃಹತ್ ನೀರಾವರಿ ಯೋಜನೆಯಾಗಿದ್ದು, ಯೋಜನೆಯನ್ನು ಅನುಷ್ಠಾನಗೊಳಿಸುವಲ್ಲಿ ಹಲವಾರು ತಾಂತ್ರಿಕ ಅಡಚಣೆಗಳು ಎದುರಾಗಿರುತ್ತವೆ. ಪ್ರಸ್ತಾಪಿತ ಯೋಜನೆಯ ಯೋಜಿತ ರೂಪುರೇಷೆಗೆ ಅನುಗುಣವಾಗಿ ಮತ್ತು ನಿಗದಿತ ನೀರಾವರಿ ಸಾಮರ್ಥ್ಯ ಕಲ್ಪಿಸುವಿಕೆಗೆ ಪೂರಕವಾಗಿ ಕಾಲಕಾಲಕ್ಕೆ,…