ಬೆಂಗಳೂರು: ದೆಹಲಿ ಪೊಲೀಸರು ನೀಡಿರುವ ನೋಟಿಸ್ ಕುರಿತಂತೆ ಕೋರ್ಟ್ ಮೊರೆಹೋಗಲು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನಿರ್ಧರಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಈ ವಿಷಯ ತಿಳಿಸಿದರು. “ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಯಾವುದೇ ಎಫ್ ಐಆರ್ ಇಲ್ಲದೇ ಇ.ಡಿ ಈ ಪ್ರಕರಣವನ್ನು ಹೇಗೆ ಕೈಗೆತ್ತಿಕೊಂಡಿತು. ನಮ್ಮ ಮೇಲೂ ಇ.ಡಿ ಬೇಕಾದಷ್ಟು ಪ್ರಕರಣಗಳನ್ನು ದಾಖಲಿಸಿತ್ತು. ಕೊನೆಗೆ ಏನಾಯಿತು? ಜೈಲಿನಲ್ಲಿ ಇಟ್ಟರು. ತುಘಲಕ್ ಪೊಲೀಸ್ ಠಾಣೆಯಲ್ಲಿ ಇಟ್ಟರು” ಎಂದರು. “ಸೋನಿಯಾಗಾಂಧಿ ಅವರು ಹಾಗೂ ರಾಹುಲ್ ಗಾಂಧಿ ಅವರಿಗೂ ಇದೇ ರೀತಿ ಮಾಡಲು ಹೊರಟರು ಆದರೆ ಧೈರ್ಯ ಸಾಲದೆ ಚಾರ್ಜ್ ಶೀಟ್ ಹಾಕಿದರು. ನ್ಯಾಯಾಲಯ ಇದನ್ನು ತಿರಸ್ಕರಿಸಿತು. ನ್ಯಾಯಾಲಯವು ಪೊಲೀಸರ ಬಳಿ ಚಾರ್ಜ್ ಶೀಟ್ ಎಲ್ಲಿ, ಎಫ್ ಐಆರ್ ಎಲ್ಲಿ ಎಂದು ಕೇಳಿತು. ನಮ್ಮ ವಕೀಲರಾದ ಅಭಿಷೇಕ್ ಮನುಸಿಂಗ್ವಿ ಅವರು ವಾದ ಮಾಡಿದರು. ಇವರು ಕಾನೂನುಗಳನ್ನು ಪರಿಶೀಲಿಸಿದಾಗ, ಯಾವುದೇ ವ್ಯಕ್ತಿ ದೂರು ನೀಡಿದರೆ ಪ್ರಕರಣದಾಖಲಿಸಲು ಬರುವುದಿಲ್ಲ.…
