ನಾಡಿನೆಲ್ಲೆಡೆ ಕ್ರಿಸ್ಮಸ್ ಸಡಗರ; ಚರ್ಚಿನ ಪ್ರಾರ್ಥನೆಯಲ್ಲಿ ಪ್ರಧಾನಿ ಮೋದಿ ಭಾಗಿ

ನವದೆಹಲಿ: ಕ್ರಿಸ್‌ಮಸ್ ಹಬ್ಬದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ದೆಹಲಿಯ ದಿ ಕ್ಯಾಥೆಡ್ರಲ್ ಚರ್ಚ್ ಆಫ್ ದಿ ರಿಡೆಂಪ್ಶನ್ನಲ್ಲಿ ನಡೆದ ಕ್ರಿಸ್‌ಮಸ್ ಬೆಳಗಿನ ವಿಶೇಷ ಪ್ರಾರ್ಥನಾ ಸೇವೆಯಲ್ಲಿ ಭಾಗವಹಿಸಿದರು. ದೆಹಲಿ ಮತ್ತು ಉತ್ತರ ಭಾರತದ ಕ್ರೈಸ್ತ ಸಮುದಾಯದ ಭಾರಿ ಪ್ರಾರ್ಥನಾ ಕೂಟದಲ್ಲಿ ಪ್ರಧಾನಮಂತ್ರಿ ಉಪಸ್ಥಿತರಿದ್ದರು. #WATCH | Prime Minister Narendra Modi attended the Christmas morning service at The Cathedral Church of the Redemption in Delhi along with a large congregation of Christians of Delhi and North India on the occassion of #Christmas2025 today. The service included prayers,… pic.twitter.com/wVuQe6GYKQ — ANI (@ANI) December 25, 2025 ಈ ಸಂದರ್ಭದಲ್ಲಿ ದೆಹಲಿಯ ಬಿಷಪ್ ರೆವರೆಂಡ್ ಡಾ. ಪಾಲ್…

ಶಾಲಾ ಬಸ್ಸಿಗೂ ಡಿಕ್ಕಿಯಾಗಿದ್ದ ಬಸ್; ಹಿರಿಯೂರು ಅಪಘಾತದಲ್ಲಿ ವಿದ್ಯಾರ್ಥಿಗಳು ಪಾರು

ಪೂರ್ವ ವಲಯ ಐಜಿಪಿ ಡಾ. ಬಿ.ಆರ್. ರವಿಕಾಂತೇ ಗೌಡ ಮಾಧ್ಯಮಗಳಿಗೆ ಮಾಹಿತಿ ನೀಡಿ, “ಗೋಕರ್ಣಕ್ಕೆ ಹೋಗುತ್ತಿದ್ದ ಸೀಬರ್ಡ್ ಬಸ್. ಇಂಧನ ಟ್ಯಾಂಕರ್ ಟ್ರಕ್ ವಿಭಜಕವನ್ನು ಹಾರಿ ಬಸ್‌ಗೆ ಡಿಕ್ಕಿ ಹೊಡೆದಿದೆ. ಪ್ರಾಥಮಿಕ ತನಿಖೆಯ ಪ್ರಕಾರ, ಎಂಟು ಜನರು ಸಾವನ್ನಪ್ಪಿದ್ದಾರೆ, ಕೆಲವರು ಗಾಯಗಳೊಂದಿಗೆ ಪಾರಾಗಿದ್ದಾರೆ ಎಂದು ತಿಳಿಸಿದ್ದಾರೆ. #WATCH | Chitradurga, Karnataka | IGP Dr BR Ravikante Gowda says, "The accident happened at 2 am… A container crossed the divider and hit a moving bus… Three people are missing… Hopefully, they are alive… One person is at risk and has been taken to the hospital for… https://t.co/aTrDHKnYD9 pic.twitter.com/IkKiOl2dKv — ANI (@ANI) December 25, 2025 ಕಂಟೇನರ್…

ಭೀಕರ ಅಪಘಾತ; ಬಸ್ ಬೆಂಕಿಗೆ ಆಹುತಿ, 9 ಮಂದಿ ಸಜೀವ ದಹನ

ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಗೊರ್ಲತ್ತು ಗ್ರಾಮದ ಬಳಿ ಗುರುವಾರ ಬೆಳಗಿನ ಜಾವ ಖಾಸಗಿ ಸ್ಲೀಪರ್ ಬಸ್ ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಭೀಕರ ಅಪಘಾತ ಸಂಭವಿಸಿದೆ. ಬಸ್ ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ. ಅಪಘಾತದಲ್ಲಿ ಕನಿಷ್ಠ 9 ಮಂದಿ ಸಜೀವ ದಹನಗೊಂಡಿದ್ದು, ಹಲವರು ಗಾಯಗೊಂಡಿದ್ದಾರೆ ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ. ಬೆಂಗಳೂರಿನಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ ಸ್ಲೀಪರ್ ಬಸ್ ರಾಷ್ಟ್ರೀಯ ಹೆದ್ದಾರಿ–48ರಲ್ಲಿ ಅಪಘಾತಕ್ಕೀಡಾಗಿದೆ. ಡಿಕ್ಕಿಯಾದ ತಕ್ಷಣವೇ ಬಸ್‌ಗೆ ಬೆಂಕಿ ಹೊತ್ತಿಕೊಂಡಿದೆ. ಆಗ ಪ್ರಯಾಣಿಕರು ಬಸ್ಸಿನೊಳಗೆ ಸಿಲುಕಿಕೊಂಡಿದ್ದರು. ಕ್ ರಸ್ತೆ ವಿಭಜಕವನ್ನು ದಾಟಿ ಬಸ್‌ಗೆ ಮುಖಾಮುಖಿ ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ. ಟ್ರಕ್ ಚಾಲಕ ಕೂಡಾ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಸುದ್ದಿ ತಿಳಿದು, ಪೊಲೀಸ್ ಮಹಾನಿರೀಕ್ಷಕ ಬಿ.ಆರ್. ರವಿಕಾಂತೇ ಗೌಡ, ಚಿತ್ರದುರ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು ಸೇರಿದಂತೆ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದರು. ಅಗ್ನಿಶಾಮಕ…

ಹಿರಿಯೂರು ಬಳಿ ಅಪಘಾತ; ತುರ್ತು ಪರಿಹಾರ ಕ್ರಮಕ್ಕೆ ಸಾರಿಗೆ ಸಚಿವರ ಸೂಚನೆ

ಚಿತ್ರದುರ್ಗದ ಹಿರಿಯೂರು ಬಳಿ ಗುರುವಾರ ನಸುಕಿನ ಜಾವ ಖಾಸಗಿ ಬಸ್ ಮತ್ತು ಲಾರಿ ನಡುವೆ ಸಂಭವಿಸಿದ ಅಪಘಾತದಲ್ಲಿ 10ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. ಈ ಅಪಘಾತ ಬಗ್ಗೆ ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ದುಃಖ ವ್ಯಕ್ತಪಡಿಸಿದ್ದಾರೆ. ಚಿತ್ರದುರ್ಗದ ಹಿರಿಯೂರು ಬಳಿ ಇಂದು ನಸುಕಿನ ಜಾವ ಖಾಸಗಿ ಬಸ್ ಮತ್ತು ಲಾರಿ ನಡುವೆ ಸಂಭವಿಸಿದ ಅಪಘಾತದಲ್ಲಿ ಸದ್ಯಕ್ಕೆ ಬಂದ ಮಾಹಿತಿ ಪ್ರಕಾರ 11ಕ್ಕೂ ಹೆಚ್ಚು ಜನರು ಮೃತಪಟ್ಟಿರುವುದನ್ನು ಕೇಳಿ ಅತ್ಯಂತ ದುಃಖವಾಯಿತು. ರಾಷ್ಟ್ರೀಯ ಹೆದ್ದಾರಿಯಲ್ಲಿ ವೇಗವಾಗಿ ಬರುತ್ತಿದ್ದ ಲಾರಿಯೊಂದು ರಸ್ತೆ ವಿಭಜಕವನ್ನು (median) ಹಾರಿ ಬಸ್‌ಗೆ ಡಿಕ್ಕಿ… pic.twitter.com/OmmTmqIuaf — Ramalinga Reddy (@RLR_BTM) December 25, 2025 ಅಪಘಾತ ಸ್ಥಳದ ವೀಡಿಯೊವನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿರುವ ಅವರು, ರಾಷ್ಟ್ರೀಯ ಹೆದ್ದಾರಿಯಲ್ಲಿ ವೇಗವಾಗಿ ಬರುತ್ತಿದ್ದ ಲಾರಿಯೊಂದು ರಸ್ತೆ ವಿಭಜಕವನ್ನು (median) ಹಾರಿ ಬಸ್‌ಗೆ ಡಿಕ್ಕಿ ಹೊಡೆದಿರುವುದೇ ಈ ದುರಂತಕ್ಕೆ…

ಬೆಂಗಳೂರಿಗೆ ಬರಲಿದೆ ಭಾರತದ ಅತ್ಯಂತ ಮಹತ್ವಾಕಾಂಕ್ಷೆಯ ರೈಲ್ವೆ ಟರ್ಮಿನಲ್

ಬೆಂಗಳೂರು: ಭಾರತದ ಅತ್ಯಂತ ಮಹತ್ವಾಕಾಂಕ್ಷೆಯ ಹಾಗೂ ವಿಶ್ವದರ್ಜೆಯ ರೈಲ್ವೆ ಟರ್ಮಿನಲ್ ಬೆಂಗಳೂರಿಗೆ ಬರಲು ಸಜ್ಜಾಗಿದೆ. ಚೀನಾದ ಐಕಾನಿಕ್ ಹ್ಯಾಂಗ್‌ಝೌ ರೈಲು ನಿಲ್ದಾಣದಿಂದ ಸ್ಫೂರ್ತಿ ಪಡೆದು, ನಗರ ಚಲನಶೀಲತೆಯ ಭವಿಷ್ಯಕ್ಕೆ ತಕ್ಕಂತೆ ವಿನ್ಯಾಸಗೊಳಿಸಲಾದ ಸಂಪೂರ್ಣವಾಗಿ ಎತ್ತರದ (ಎಲಿವೇಟೆಡ್) ರೈಲ್ವೆ ಟರ್ಮಿನಲ್ ಯಲಹಂಕದಲ್ಲಿ ನಿರ್ಮಾಣವಾಗಲಿದೆ ಎಂದು ಸಂಸದ ಡಾ. ಸುಧಾಕರ್ ಮಾಹಿತಿ ಹಂಚಿಕೊಂಡಿದ್ದಾರೆ. ಸುಮಾರು ₹6,000 ಕೋಟಿ ಹೂಡಿಕೆಯಲ್ಲಿ ನಿರ್ಮಾಣವಾಗಲಿರುವ ಈ ಮಹತ್ವದ ಯೋಜನೆಯು 20 ಎಕರೆ ವಿಸ್ತೀರ್ಣದಲ್ಲಿ ರೂಪುಗೊಳ್ಳಲಿದ್ದು, 16 ಅತ್ಯಾಧುನಿಕ ವೇದಿಕೆಗಳು, 10 ಸ್ಥಿರ ಮಾರ್ಗಗಳು ಹಾಗೂ 15 ಪಿಟ್ ಮಾರ್ಗಗಳನ್ನು ಒಳಗೊಂಡಿರಲಿದೆ. ಪ್ರಯಾಣಿಕರ ಸುಗಮ ಸಂಚಾರಕ್ಕೆ ಪ್ರತ್ಯೇಕ ಆಗಮನ ಮತ್ತು ನಿರ್ಗಮನ ವ್ಯವಸ್ಥೆಗಳನ್ನು ಕಲ್ಪಿಸಲಾಗುತ್ತದೆ. ಅಲ್ಲದೆ, ಮೆಟ್ರೋ ಸೇವೆಯೊಂದಿಗೆ ತಡೆರಹಿತ ಏಕೀಕರಣವೂ ಈ ಟರ್ಮಿನಲ್‌ನ ಪ್ರಮುಖ ವೈಶಿಷ್ಟ್ಯವಾಗಿರಲಿದೆ. ಈ ಹೆಗ್ಗುರುತು ಯೋಜನೆಯಿಂದ ಉತ್ತರ ಬೆಂಗಳೂರಿನ ಸಂಚಾರ ದಟ್ಟಣೆ ಗಮನಾರ್ಹವಾಗಿ ಕಡಿಮೆಯಾಗಲಿದ್ದು, ಈಗಿರುವ ರೈಲ್ವೆ ಟರ್ಮಿನಲ್‌ಗಳ ಮೇಲಿನ…

ಗುರು–ಶಿಷ್ಯ ಪರಂಪರೆಗೆ ನವಚೈತನ್ಯ ನೀಡಿದ SDPT REUNION

ಮಂಗಳೂರು: ‘ಗುರುಗಳನ್ನು ವಿದ್ಯಾರ್ಥಿಗಳು ಮತ್ತು ವೈದ್ಯರನ್ನು ರೋಗಿಗಳು ತಮ್ಮ ಕೆಲಸ ಮುಗಿದ ನಂತರ ಮರೆತುಬಿಡುತ್ತಾರೆ’ ಎಂಬುದು ಜನರಾಡಿಕೊಳ್ಳುತ್ತಿರುವ ಮಾತುಗಳು. ಆದರೆ, ‘ಬದುಕಿಗೆ ರೂಪಕೊಟ್ಟ ಗುರುಗಳೇ ಸರ್ವಸ್ವ’ ಎಂದು ಸಾರಿ ಹೇಳುವವರೂ ಇದ್ದಾರೆ. ಅದಕ್ಕೆ ಸಾಕ್ಷಿಯಾಗಿದ್ದೇ ಪುರಾಣ ಪ್ರಸಿದ್ಧ ಕಟೀಲು ದೇವಸ್ಥಾನದ ಅಧೀನದ SDPT ಕಾಲೇಜಿನ ಹಳೆಯ ವಿದ್ಯಾರ್ಥಿಗಳು. ಈ ಕಾಲೇಜು ಸುಮಾರು 3 ದಶಕಗಳ ಹಿಂದೆ ಅಸ್ತಿತ್ವಕ್ಕೆ ಬಂದ ವಿದ್ಯಾಸಂಸ್ಥೆ. ಆಗ ಕುಗ್ರಾಮದಂತಿದ್ದ ಕಟೀಲು ಸಮೀಪದ ಗುಡ್ಡ ಪ್ರದೇಶದಲ್ಲಿ ತಲೆ ಎತ್ತಿದ್ದ ಈ ಶ್ರೀ ದುರ್ಗಾಪರಮೇಶ್ವರಿ ಕಾಲೇಜು ಇದೀಗ ದೇಶಾದ್ಯಂತ ಹೆಸರುಗಳಿಸಿದೆ. ಗುಡ್ಡದಲ್ಲಿ ಕಾಲೇಜು ಆರಂಭದ ದಿನಗಳಲ್ಲಿ ‘ ಅಷ್ಟು ಎತ್ತರ ಹತ್ತುವವರು ಯಾರು?’ ಎಂದು ಪ್ರಶ್ನಿಸಿದ್ದವರೇ ಹೆಚ್ಚು ಮಂದಿ. ವಾಸ್ತವ ಏನೆಂದರೆ, ‘ಈ ಕಾಲೇಜಿನಲ್ಲಿ ಕಲಿತು ಎತ್ತರಕ್ಕೆ ಏರಿದವರೇ ಹೆಚ್ಚು ಮಂದಿ’ ಈ ಕಾಲೇಜಿನಲ್ಲಿ ಕಲಿತ ಅನೇಕ ವಿದ್ಯಾರ್ಥಿಗಳು ಹತ್ತಾರು ದೇಶಗಳಲ್ಲಿ ಪ್ರತಿಷ್ಠಿತ ಹುದ್ದೆಗಳಲ್ಲಿದ್ದಾರೆ. ದಶಕದ…