ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ತಾಲೂಕಿನ ಅಜ್ಜವಾರ ಗೇಟ್ ಬಳಿ ಬೈಕ್’ಗೆ ಟಿಪ್ಪರ್ ಲಾರಿ ಡಿಕ್ಕಿಯಾಗಿ ಸಂಭವಿಸಿದ ಅಪಘಾತದಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ. ಒಂದೇ ಬೈಕ್‌ನಲ್ಲಿ ಪ್ರಯಾಣಿಸುತ್ತಿದ್ದ ನಾಲ್ವರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಅವರನ್ನು ಅರುಣ್, ಮನೋಜ್, ನರಸಿಂಹಮೂರ್ತಿ, ನಂದೀಶ್ ಎಂದು ಗುರುತಿಸಲಾಗಿದೆ. ಚಿಕ್ಕಬಳ್ಳಾಪುರದಿಂದ ಬೈಕ್‌ನಲ್ಲಿ ಹೋಗುತ್ತಿದ್ದ ಯುವಕರು, ಅಜ್ಜವಾರ ಕ್ರಾಸ್‌ನಲ್ಲಿ ತಿರುವು ಪಡೆಯಲು ಯತ್ನಿಸಿದ್ದಾರೆ. ಆ ವೇಳೆ, ಬೈಕ್‌ಗೆ ಟಿಪ್ಪರ್ ಡಿಕ್ಕಿಯಾಗಿದ್ದು, ಬೈಕ್‌ನಲ್ಲಿದ್ದ ನಾಲ್ವರು ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ..
Day: December 26, 2025
ಮೈಸೂರು ಅರಮನೆ ಮುಂಭಾಗ ನೈಟ್ರೋಜನ್ ಗ್ಯಾಸ್ ಸಿಲಿಂಡರ್ ಸ್ಫೋಟ; ಓರ್ವ ಸಾವು
ಮೈಸೂರು: ಮೈಸೂರು ಅರಮನೆಮುಂಭಾಗದಲ್ಲಿ ನೈಟ್ರೋಜನ್ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಓರ್ವ ಸಾವನ್ನಪ್ಪಿ, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಗುರುವಾರ ರಾತ್ರಿ ಸಂಭವಿಸಿದೆ. ಮೈಸೂರು ಅರಮನೆಯ ಜಯ ಮಾರ್ತಾಂಡ ಗೇಟ್ ಬಳಿ ಬಲೂನ್‌ಗೆ ಗ್ಯಾಸ್ ತುಂಬುವ ವೇಳೆ ಸ್ಫೋಟ ಸಂಭವಿಸಿದೆ. ಅರಮನೆ ಮುಂಭಾಗ ಮಕ್ಕಳ ಆಟಿಕೆ ಸಾಮಾನುಗಳ ಮಾರಾಟ ಸ್ಥಳದಲ್ಲಿ, ಜನನಿಬಿಡ ಸ್ಥಳದಲ್ಲಿ ಹಿಲಿಯಂ ಗ್ಯಾಸ್ ಸಿಲಿಂಡರ್ ಸ್ಪೋಟವಾಗಿದ್ದು, ಬಲೂನ್ ಮಾರುತ್ತಿದ್ದ ವ್ಯಕ್ತಿ ಸಾವನ್ನಪ್ಪಿದ್ದಾನೆ. ಗಾಯಗೊಂಡಿದ್ದು ಅವರನ್ನು ಮೈಸೂರಿನ ಕೆ.ಆರ್.ಆಸ್ಪತ್ರೆಗೆ ದಾಖಲಿಸಲಾಗಿದೆ. ಸುದ್ದಿ ತಿಳಿದು ಸ್ಥಳಕ್ಕೆ ಧಾವಿಸಿದ ಪೊಲೀಸರು ನಡೆಸಿದ್ದಾರೆ. ಘಟನೆ ಬಗ್ಗೆ ಪ್ರಕರಣ ದಾಖಲಾಗಿದ್ದು ತನಿಖೆ ನಡೆಸಲಾಗುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ. #WATCH | Karnataka | A helium cylinder explosion occurred in front of the Jayamarthanda gate of the Mysore Palace at around 8.30 pm. The balloon…
ಅತಂತ್ರದಲ್ಲಿ ಬದುಕುತ್ತಿದ್ದ ಕುಟುಂಬಗಳ ಸೂರಿಗೆ ದಾಖಲೆಗಳ ಗ್ಯಾರಂಟಿ
ಬೆಂಗಳೂರು: ಬಹುಕಾಲದಿಂದ ತಾಂಡ, ಹಟ್ಟಿ ಗೊಲ್ಲರಹಟ್ಟಿಗಳಲ್ಲಿ ವಾಸ ಮಾಡುತ್ತಿದ್ದ ನಿವಾಸಿಗಳಿಗೆ ದಾಖಲೆ ಇಲ್ಲದೆ ನೆಮ್ಮದಿಯ ಜೀವನ ಅಸಾಧ್ಯವಾಗಿತ್ತು. ಇಂತಹವರಿಗೆ ಹಕ್ಕುಪತ್ರ ಮತ್ತು ದಾಖಲೆಯನ್ನು ಒದಗಿಸಿಕೊಡಲು ಕರ್ನಾಟಕ ಭೂ ಸುಧಾರಣಾ ಕಾಯ್ದೆಗೆ 2017ರಲ್ಲಿ ಕಾನೂನು ತಿದ್ದುಪಡಿ ಮಾಡಲಾಗಿದೆ. ಇದರ ಮುಖಾಂತರ ಕಾಲಾನುಕಾಲದಿಂದ ಅತಂತ್ರದಲ್ಲಿ ಬದುಕುತ್ತಿದ್ದ ಕುಟುಂಬಗಳ ಸೂರಿಗೆ ದಾಖಲೆಗಳ ಗ್ಯಾರಂಟಿ ನೀಡುವ ಕೆಲಸ ಪ್ರಗತಿಯಲ್ಲಿದೆ. ಈ ಕಾನೂನು 2017ರಲ್ಲಿ ತಿದ್ದುಪಡಿ ಆದ ನಂತರ 2023ರ ಮೇ ವರೆಗೆ 6 ವರ್ಷಗಳಲ್ಲಿ 1.08 ಲಕ್ಷ ನಿವಾಸಿಗಳಿಗೆ ಹಕ್ಕುಪತ್ರಗಳನ್ನು ನೀಡಲಾಗಿತ್ತು. ಮೇ 2023 ರಿಂದ 2025ರವರೆಗೆ 1.11 ಲಕ್ಷ ಹಕ್ಕುಪತ್ರಗಳನ್ನು ನೀಡಲಾಗಿದೆ. ಮೇ 2025ರ ನಂತರ 1.10 ಲಕ್ಷ ಹಕ್ಕುಪತ್ರಗಳನ್ನು ನೀಡುವ ಪ್ರಕ್ರಿಯೆ ಕೂಡಲೇ ಪೂರ್ಣಗೊಳಿಸಿ, 2026ರ ಫೆಬ್ರವರಿ ತಿಂಗಳ ಒಳಗಾಗಿ 1.10 ಲಕ್ಷ ಕುಟುಂಬಗಳಿಗೆ ಹಕ್ಕುಪತ್ರ ನೀಡಲು ಸರ್ಕಾರ ತೀರ್ಮಾನಿಸಿದೆ. ಈ ಮಾಹಿತಿ ಹಂಚಿಕೊಂಡಿರುವ ಸಿಎಂ ಸಿದ್ದರಾಮಯ್ಯ, ದಶಕಗಳ ಸಮಸ್ಯೆಗೆ…
