ಬೆಂಗಳೂರು: “ನಮ್ಮ ಹೈಕಮಾಂಡ್ ನಾಯಕರು ಸಿಎಂ ಮತ್ತು ನನಗೆ ಇಬ್ಬರಿಗೂ ಏನೋ ಹೇಳಿದ್ದಾರೆ. ಸೂಕ್ತ ಸಮಯದಲ್ಲಿ ಕರೆಸುತ್ತೇವೆ ಎಂದೂ ಇಬ್ಬರಿಗೂ ಹೇಳಿದ್ದಾರೆ. ಆಗ ಇಬ್ಬರೂ ದಿಲ್ಲಿಗೆ ಹೋಗುತ್ತೇವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗಳಿಗೆ ಶನಿವಾರ ಪ್ರತಿಕ್ರಿಯೆ ನೀಡಿದ ಡಿ.ಕೆ. ಶಿವಕುಮಾರ್, “ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇ.ಡಿ ಹಾಕಿದ್ದ ಚಾರ್ಜ್ ಶೀಟ್ ಕೋರ್ಟ್ ನಲ್ಲಿ ತಿರಸ್ಕೃತಗೊಂಡಿದ್ದು, ಈಗ ಒಂದು ಎಫ್ಐಆರ್ ಬಾಕಿ ಉಳಿದುಕೊಂಡಿದೆ. ನಮ್ಮ ಮೇಲೆ ಯಾವ ರೀತಿ ದಬ್ಬಾಳಿಕೆ ನಡೆಯುತ್ತಿದೆ ಎಂದು ತಿಳಿಸಲು ನಾವು ಪ್ರತಿಭಟನೆ ನಡೆಸುತ್ತಿದ್ದೇವೆ” ಎಂದರು. ವಿಧಾನ ಮಂಡಲ ಅಧಿವೇಶನದ ಬಳಿಕ ನೀವು ಮತ್ತು ಸಿಎಂ ದೆಹಲಿಗೆ ಹೋಗಿ ಹೈಕಮಾಂಡ್ ನಾಯಕರನ್ನು ಭೇಟಿ ಮಾಡುವ ಎಂದು ಚರ್ಚೆ ಇದೆಯಲ್ಲ ಎಂದು ಕೇಳಿದಾಗ, “ಆ ರೀತಿ ಇದ್ದರೆ ನಿಮಗೂ ತಿಳಿಸುತ್ತೇವೆ. ನಿಮಗೆ ತಿಳಿಸದೇ ಏನೂ ಮಾಡುವುದಿಲ್ಲ. ನಾನು ಕದ್ದುಮುಚ್ಚಿ ಹೋಗುವುದಿಲ್ಲ”…
Month: December 2025
ವಾರಾಹಿ ಯೋಜನೆಯಡಿ ಎಲ್ಲಾ ಬಾಕಿ ಕಾಮಗಾರಿ ಶೀಘ್ರ ಪೂರ್ಣ; ಡಿಕೆಶಿ ಭರವಸೆ
ಬೆಳಗಾವಿ: ವಾರಾಹಿ ಯೋಜನೆಯಡಿ ಎಲ್ಲಾ ಬಾಕಿ ಕಾಮಗಾರಿಗಳನ್ನು ತಾಂತ್ರಿಕ ಸಾಧ್ಯತೆಗೆ ಅನುಗುಣವಾಗಿ ಮತ್ತು ಯೋಜನೆಗೆ ಅವಶ್ಯವಿರುವ ಅರಣ್ಯ ಭೂಮಿ ಪ್ರಸ್ತಾವನೆಗಳಿಗೆ ತೀರುವಳಿ ಪಡೆದು, ಆದ್ಯತೆ ಮೇರೆಗೆ ಪೂರ್ಣಗೊಳಿಸಲು ಕ್ರಮವಹಿಸಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಅವರ ಪ್ರಶ್ನೆಗೆ ಡಿ.ಕೆ.ಶಿವಕುಮಾರ್ ಉತ್ತರಿಸಿದರು. ವಾರಾಹಿ ಯೋಜನೆಯಡಿ ಮೂಲ ಯೋಜನೆಯ ಅಚ್ಚುಕಟ್ಟು ವಿಸ್ತ್ರೀರ್ಣದಲ್ಲಿ ಯಾವುದೇ ವ್ಯತ್ಯಾಸವಾಗದಂತೆ ಯೋಜನೆಯನ್ನು ಮಾರ್ಪಡಿಸಲಾಗಿದ್ದು, ₹569.53 ಕೋಟಿ ಅಂದಾಜು ಮೊತ್ತದ ಯೋಜನಾ ವರದಿಗೆ 20.03.2006ರಲ್ಲಿ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ ಎಂದರು. ಈ ಯೋಜನೆಯು ಪಶ್ಚಿಮ ಘಟ್ಟದ ಕೆಳಭಾಗ ಮತ್ತು ಕರಾವಳಿ ಪ್ರದೇಶದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಪ್ರಪ್ರಥಮ ಬೃಹತ್ ನೀರಾವರಿ ಯೋಜನೆಯಾಗಿದ್ದು, ಯೋಜನೆಯನ್ನು ಅನುಷ್ಠಾನಗೊಳಿಸುವಲ್ಲಿ ಹಲವಾರು ತಾಂತ್ರಿಕ ಅಡಚಣೆಗಳು ಎದುರಾಗಿರುತ್ತವೆ. ಪ್ರಸ್ತಾಪಿತ ಯೋಜನೆಯ ಯೋಜಿತ ರೂಪುರೇಷೆಗೆ ಅನುಗುಣವಾಗಿ ಮತ್ತು ನಿಗದಿತ ನೀರಾವರಿ ಸಾಮರ್ಥ್ಯ ಕಲ್ಪಿಸುವಿಕೆಗೆ ಪೂರಕವಾಗಿ ಕಾಲಕಾಲಕ್ಕೆ,…
ಪಲ್ಸ್ ಪೋಲಿಯೊ ಕಾರ್ಯಕ್ರಮ; 62.40 ಲಕ್ಷ ಮಕ್ಕಳನ್ನು ತಲುಪುವ ಗುರಿ
ಆರೋಗ್ಯ ಇಲಾಖೆಯು ರಾಜ್ಯಾದ್ಯಂತ ಇದೇ ಭಾನುವಾರ (ಡಿ.21) ಪಲ್ಸ್ ಪೋಲಿಯೊ ಕಾರ್ಯಕ್ರಮ ಹಮ್ಮಿಕೊಂಡಿದ್ದು, 5 ವರ್ಷದೊಳಗಿನ 62.40 ಲಕ್ಷ ಮಕ್ಕಳನ್ನು ತಲುಪುವ ಗುರಿ ಹಾಕಿಕೊಂಡಿದೆ ಎಂದು ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಪೋಲಿಯೊ ಹನಿ ವಿತರಣೆಗೆ 33,258 ಬೂತ್‌ಗಳನ್ನು ಗುರುತಿಸಲಾಗಿದೆ. 1,030 ಸಂಚಾರಿ ತಂಡಗಳು ರೈಲ್ವೆ ನಿಲ್ದಾಣ, ಬಸ್ ನಿಲ್ದಾಣ ಸೇರಿದಂತೆ ವಿವಿಧ ಸಾರ್ವಜನಿಕ ಪ್ರದೇಶಗಳಲ್ಲಿ ಲಸಿಕೆ ವಿತರಿಸಲಿವೆ. 2,096 ಟ್ರಾನ್ಸಿಟ್ ತಂಡಗಳನ್ನೂ ರಚಿಸಲಾಗಿದೆ. ಈ ಕಾರ್ಯಕ್ರಮಕ್ಕೆ 1.13 ಲಕ್ಷ ಕಾರ್ಯಕರ್ತರನ್ನು ಬಳಸಿಕೊಳ್ಳಲಾಗುತ್ತಿದೆ. 7,322 ಮೇಲ್ವಿಚಾರಕರನ್ನು ನೇಮಿಸಲಾಗಿದೆ. ಐದು ವರ್ಷದೊಳಗಿನ ಎಲ್ಲ ಮಕ್ಕಳು ಲಸಿಕೆ ಪಡೆದುಕೊಳ್ಳಬೇಕು. ಈ ಮೂಲಕ ಪೋಲಿಯೊ ವಿರುದ್ಧದ ಹೋರಾಟದಲ್ಲಿ ವಿಜಯ ಸಾಧಿಸುವುದನ್ನು ಮುಂದುವರಿಸಲು ಕೈಜೋಡಿಸಬೇಕು. ರಾಜ್ಯದ ಎಲ್ಲ ಆಸ್ಪತ್ರೆಗಳು, ಗ್ರಾಮೀಣ ಪ್ರದೇಶ, ಗುಡ್ಡಗಾಡು ಪ್ರದೇಶ ಸೇರಿದಂತೆ ವಿವಿಧೆಡೆ ಲಸಿಕೆ ಹಾಕಲು ವ್ಯವಸ್ಥೆ ಮಾಡಲಾಗಿದೆ. ಪೋಲಿಯೊ ಹನಿ ಸಂಪೂರ್ಣ ಸುರಕ್ಷಿತವಾಗಿದ್ದು, ಯಾವುದೇ ವದಂತಿಗಳಿಗೆ…
ಮುಡಾ ಪ್ರಕರಣ:; ಡಿಸೆಂಬರ್ 23 ತೀರ್ಪು ಸಾಧ್ಯತೆ
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಪ್ರಮುಖ ಆರೋಪಿಯನ್ನಾಗಿ ಹೆಸರಿಸಲಾಗಿರುವ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣದ ತನಿಖೆ ಅಂತಿಮ ಹಂತದಲ್ಲಿದೆ ಎಂದು ಕರ್ನಾಟಕ ಲೋಕಾಯುಕ್ತರು ಗುರುವಾರ ಶಾಸಕರು–ಸಂಸದರ ವಿಶೇಷ ನ್ಯಾಯಾಲಯಕ್ಕೆ ತಿಳಿಸಿದರು. ಆದರೆ ತನಿಖೆ ಪೂರ್ಣಗೊಳಿಸುವಲ್ಲಿ ಆಗುತ್ತಿರುವ ವಿಳಂಬದ ಬಗ್ಗೆ ನ್ಯಾಯಾಲಯ ಅಸಮಾಧಾನ ವ್ಯಕ್ತಪಡಿಸಿತು. ಲೋಕಾಯುಕ್ತರ ಪರ ವಿಶೇಷ ಸಾರ್ವಜನಿಕ ಅಭಿಯೋಜಕರು (ಎಸ್‌ಪಿಪಿ) ನ್ಯಾಯಾಲಯಕ್ಕೆ ಸ್ಥಿತಿಗತಿ ವರದಿ ಸಲ್ಲಿಸಿ, ಕೆಲ ಮಂಜೂರಾತಿ ಆದೇಶಗಳನ್ನು ಇನ್ನೂ ಪಡೆಯಬೇಕಿದ್ದು, ತನಿಖೆ ಮುಕ್ತಾಯದ ಹಂತದಲ್ಲಿದೆ ಎಂದು ತಿಳಿಸಿದರು. ಡಿಸೆಂಬರ್ 18ರೊಳಗೆ ಅಂತಿಮ ವರದಿ ಸಲ್ಲಿಸುವಂತೆ ನ್ಯಾಯಾಲಯ ಈ ಹಿಂದೆ ನಿರ್ದೇಶನ ನೀಡಿದ್ದನ್ನು ಸ್ಮರಿಸಿತು. ವಿಳಂಬವನ್ನು ಗಮನಿಸಿದ ನ್ಯಾಯಾಲಯ, ಮುಡಾ ಪ್ರಕರಣದ ವಿವಿಧ ಅಂಶಗಳನ್ನು ಪರಿಗಣಿಸಿ ತನಿಖೆ ಪೂರ್ಣಗೊಳಿಸುವಂತೆ ತನಿಖಾಧಿಕಾರಿಗಳಿಗೆ ನಿರ್ದೇಶನ ನೀಡಲಾಗಿತ್ತು ಎಂದು ದಾಖಲಿಸಿದೆ. ತನಿಖೆ ಪೂರ್ಣಗೊಳ್ಳದೆ, ಹೆಚ್ಚಿನ ತನಿಖೆಗೆ ಅನುಮತಿ ಕೋರಿ ತನಿಖಾಧಿಕಾರಿ ಮನವಿ ಸಲ್ಲಿಸಿದ್ದರಿಂದ, ಆರೋಪಿ ಸಂಖ್ಯೆ 1…
ಟ್ರಂಪ್–ಮೋದಿ ಸ್ನೇಹದಿಂದ ಭಾರತಕ್ಕೆ ಲಾಭ ಏನು? ಕಾಂಗ್ರೆಸ್ ಪ್ರಶ್ನೆ
ಬೆಳಗಾವಿ: “ಪಾಕಿಸ್ತಾನದ ಪ್ರಧಾನಿ ಎಂದಿಗೂ ಡೊನಾಲ್ಡ್ ಟ್ರಂಪ್ ಅವರನ್ನು ತಮ್ಮ ಆತ್ಮೀಯ ಸ್ನೇಹಿತ ಎಂದು ಹೇಳಿಕೊಂಡಿಲ್ಲ. ಆದರೆ ನಮ್ಮ ಪ್ರಧಾನಿ ಡೊನಾಲ್ಡ್ ಟ್ರಂಪ್ ತಮ್ಮ ಆತ್ಮೀಯ ಸ್ನೇಹಿತ ಎಂದು ಹೇಳಿಕೊಂಡಿದ್ದಾರೆ. ಹಾಗಿದ್ದರೂ ಆ ಸ್ನೇಹಿತ ಭಾರತಕ್ಕೆ ಏನು ಮಾಡುತ್ತಿದ್ದಾರೆ ಎಂಬುದನ್ನು ನೋಡಿದರೆ, ಹೆಚ್ಚಿನ ಸುಂಕಗಳನ್ನು ವಿಧಿಸುವುದೇ ಆಗಿದೆ” ಎಂದು ಸಚಿವ ಪ್ರಿಯಾಂಕ್ ಖರ್ಗೆ ಕಟುವಾಗಿ ಟೀಕಿಸಿದ್ದಾರೆ. ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಅಮೆರಿಕ ಪಾಕಿಸ್ತಾನಕ್ಕೆ ಐಎಂಎಫ್ ಮತ್ತು ವಿಶ್ವಬ್ಯಾಂಕ್‌ನಿಂದ ಸಾಲ ಪಡೆಯಲು ಸಂಪೂರ್ಣ ಸಹಾಯ ಮಾಡುತ್ತಿದೆ. ಅವರೊಂದಿಗೆ ಒಟ್ಟಿಗೆ ಊಟ–ಸಭೆಗಳನ್ನು ನಡೆಸುತ್ತಿದೆ. ಆದರೆ ಅಮೆರಿಕದಿಂದ ಭಾರತಕ್ಕೆ ಏನು ಸಿಗುತ್ತಿದೆ? ಏನೂ ಇಲ್ಲ” ಎಂದು ಅಸಮಾಧಾನ ವ್ಯಕ್ತಪಡಿಸಿದರು. “ಬದಲಾಗಿ ನಮಗೆ ಹೆಚ್ಚಿನ ಸುಂಕಗಳು ಬರುತ್ತಿವೆ. ವಿವಿಧ ವ್ಯಾಪಾರ ಒಪ್ಪಂದಗಳಿಂದ ಭಾರತವನ್ನು ಹೊರಗಿಡಲಾಗುತ್ತಿದೆ. ನ್ಯಾಯಯುತ ವ್ಯಾಪಾರ ಒಪ್ಪಂದಗಳಿಗೂ ಅವಕಾಶ ನೀಡಲಾಗುತ್ತಿಲ್ಲ. ನಮ್ಮ ಪ್ರಧಾನಿ ಅಮೆರಿಕದ ಅಧ್ಯಕ್ಷರೊಂದಿಗೆ ಉತ್ತಮ ಸ್ನೇಹವಿದೆ ಎಂದು…
ಕಾವೇರಿ 2 ಮತ್ತು ಇ-ಸ್ವತ್ತು ಡಿಜಿಟಲ್ ಡೇಟಾ ಪರಸ್ಪರ ಲಿಂಕ್ ಮಾಡಲು ತಾಂತ್ರಿಕ ತೊಂದರೆ
ಬೆಳಗಾವಿ: ರಾಜ್ಯದಲ್ಲಿ ಕಾವೇರಿ 2 ಮತ್ತು ಇ-ಸ್ವತ್ತು ಡಿಜಿಟಲ್ ಡೇಟಾ ಪರಸ್ಪರ ಲಿಂಕ್ ಮಾಡುವಲ್ಲಿ ಉಂಟಾಗಿರುವ ತಾಂತ್ರಿಕ ತೊಂದರೆ ಸರಿಪಡಿಸಿ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಿಕೊಡಲಾಗುವುದು” ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ. ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ವಿಧಾನ ಪರಿಷತ್ ಸದಸ್ಯ ಡಿ.ಎಸ್.ಅರುಣ್ ಅವರ ಪ್ರಶ್ನೆಗೆ ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ಅವರು ಉತ್ತರ ನೀಡಿದರು. ಕಾವೇರಿ 2.0 ತಂತ್ರಾಂಶದಲ್ಲಿ ವಿಭಾಗಪತ್ರ ಹಾಗೂ ದಾನಪತ್ರಗಳ ನೋಂದಣಿ ಸ್ಥಗಿತವಾಗಿರುವುದಿಲ್ಲ. ಆರ್‌ಟಿಸಿ, ಮೋಜಿಣಿ ನಕ್ಷೆ, ಇ ಸ್ವತ್ತು ಖಾತಾ, ಇ-ಆಸ್ತಿ ಖಾತಾ ಹಾಗೂ ಯುಎಲ್‌ಎಮ್‌ಎಸ್ ಖಾತಾ ಹೊಂದಿರುವ ಸ್ವತ್ತುಗಳ ವಿಭಾಗಪತ್ರ ಹಾಗೂ ದಾನಪತ್ರಗಳು ಎಂದಿನಂತೆ ನೋಂದಣಿ ಆಗುತ್ತಿವೆ ಎಂದು ತಿಳಿಸಿದರು. ಕಾವೇರಿ 2.0 ತಂತ್ರಾಂಶದಲ್ಲಿ 2024-25ನೇ ಸಾಲಿನಲ್ಲಿ 1,15,068 ವಿಭಾಗ ಪತ್ರಗಳು ಮತ್ತು 1,39,134 ದಾನಪತ್ರಗಳು ಅದೇ ರೀತಿ 2025-26ನೇ ಸಾಲಿನಲ್ಲಿ 79,515 ವಿಭಾಗ ಪತ್ರಗಳು ಹಾಗೂ 92,618 ದಾನಪತ್ರಗಳು…
ರೈತರ ಬೆಳೆ ಸಮೀಕ್ಷೆಗೆ GPS ಆಧಾರಿತ ಮೊಬೈಲ್ ತಂತ್ರಾಂಶ ಬಳಕೆ; ಚಲುವರಾಯಸ್ವಾಮಿ
ಬೆಳಗಾವಿ: ರೈತರ ಅನುಕೂಲಕ್ಕಾಗಿ ಜಮೀನುಗಳಲ್ಲಿ ಬೆಳೆದ ಬೆಳೆ ಸಮೀಕ್ಷೆಯನ್ನು ಕೈಗೊಳ್ಳಲು ಡಿಪಿಎಆರ್ ಇಲಾಖಾ ವತಿಯಿಂದ ಅಭಿವೃದ್ಧಿ ಪಡಿಸಿರುವ ಜಿ.ಪಿ.ಎಸ್ ಆಧಾರಿತ ಆ್ಯಂಡ್ರಾಯ್ಡ್ ಮೊಬೈಲ್ ತಂತ್ರಾಂಶವನ್ನು ಬಳಸಿ ರೈತರ ಬೆಳೆ ಸಮೀಕ್ಷೆ ನಡೆಸಲಾಗುತ್ತಿದೆ ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ತಿಳಿಸಿದ್ದಾರೆ. ತರೀಕೆರೆ ವಿಧಾನಸಭಾ ಕ್ಷೇತ್ರದ ಶಾಸಕ ಶ್ರೀನಿವಾಸ್ ಜಿ.ಹೆಚ್. ರವರ ಚುಕ್ಕೆ ಗುರುತಿನ ಪ್ರಶ್ನೆಗೆ ವಿಧಾನಸಭೆಯಲ್ಲಿಂದು ಉತ್ತರಿಸಿದ ಕೃಷಿ ಸಚಿವ ಎನ್.ಚಲುವರಾಯಸ್ವಾಮಿಯವರು, ರಾಜ್ಯದ ಎಲ್ಲಾ ಕಂದಾಯ ಗ್ರಾಮಗಳಲ್ಲಿ ಖಾಸಗಿ ಕೃಷಿ ಜಮೀನುಗಳಲ್ಲಿ ಬೆಳೆ ಸಮೀಕ್ಷೆಯನ್ನು ಕೈಗೊಳ್ಳಲಾಗುತ್ತಿದ್ದು ಸ್ವತಃ ರೈತರೇ ” ಬೆಳೆ ಸಮೀಕ್ಷೆ ರೈತರ ಆಪ್” ನಲ್ಲಿ ಬೆಳೆ ಮಾಹಿತಿ ನಮೂದಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಸಚಿವರು ತಿಳಿಸಿದರು. 2017 ನೇ ಸಾಲಿನಿಂದ ಸರ್ಕಾರಿ ಅಧಿಕಾರಿಗಳ ( ಕಂದಾಯ, ಕೃಷಿ , ತೋಟಗಾರಿಕೆ, ಹಾಗೂ ರೇಷ್ಮೆ) ಮೂಲಕ ಬೆಳೆ ಸಮೀಕ್ಷೆಯನ್ನು ಪ್ರಾರಂಭಿಸಲಾಗಿದ್ದು, 2018-19 ನೇ ಸಾಲಿನಿಂದ ಆಯಾ…
‘ಗೃಹಲಕ್ಷ್ಮಿ’ ಕಂತು ವಿಳಂಬ: ಸಚಿವೆ ಹೆಬ್ಬಾಳ್ಕರ್–ಬಿಜೆಪಿ ನಡುವೆ ವಾಕ್ಸಮರ
ಬೆಳಗಾವಿ: ಗೃಹಲಕ್ಷ್ಮಿ ಯೋಜನೆಯ ಕಂತುಗಳ ವಿತರಣೆಯಲ್ಲಿ ಲೋಪವಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸದನದಲ್ಲಿ ಒಪ್ಪಿಕೊಂಡರು. ಈ ವಿಷಯದಲ್ಲಿ ವಿರೋಧ ಪಕ್ಷಗಳು ತಮ್ಮನ್ನು ಗುರಿಯಾಗಿಸಿಕೊಂಡಿವೆ ಎಂದು ಆರೋಪಿಸಿದ ಅವರು, ತಾವು ಮಹಿಳೆಯಾಗಿರುವುದರಿಂದ ಪ್ರತ್ಯೇಕವಾಗಿ ಟೀಕಿಸಲಾಗುತ್ತಿದೆ ಎಂದು ಹೇಳಿದರು. ಈ ಹೇಳಿಕೆಗೆ ಬಿಜೆಪಿ ಸದಸ್ಯರು ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. ಗೃಹಲಕ್ಷ್ಮಿ ಯೋಜನೆಯಡಿ 1.26 ಕೋಟಿ ಫಲಾನುಭವಿಗಳಿಗೆ ತಲಾ 2,000 ರೂ.ಗಳ ಎರಡು ಕಂತುಗಳನ್ನು ಬಿಡುಗಡೆ ಮಾಡಲಾಗಿದೆ ಎಂದು ಸದನಕ್ಕೆ ತಪ್ಪು ಮಾಹಿತಿ ನೀಡಲಾಗಿದೆ ಎಂದು ಆರೋಪಿಸಿದ ಬಿಜೆಪಿ, ಸಚಿವೆ ಬೇಷರತ್ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿತು. ಇದಕ್ಕೆ ಪ್ರತಿಕ್ರಿಯಿಸಿದ ಸಚಿವೆ, ಸದನದ ಸದಸ್ಯರ ಭಾವನೆಗಳಿಗೆ ನೋವಾಗಿದ್ದರೆ ವಿಷಾದ ವ್ಯಕ್ತಪಡಿಸಿದರು. ಆದರೆ ಇದು ಸದಸ್ಯರ ಭಾವನೆಗಳ ವಿಷಯವಲ್ಲ, ಫಲಾನುಭವಿಗಳಿಗೆ ಕ್ಷಮೆಯಾಚಿಸದಿರುವುದೇ ಪ್ರಶ್ನೆ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ ಹೇಳಿದರು. ನಂತರ ಸಚಿವೆ ಕ್ಷಮೆಯಾಚಿಸಿದರೂ,…
ರಾಜ್ಯದಲ್ಲಿ ಯಾವುದೇ ಪಠ್ಯಕ್ರಮದ ಶಾಲೆಯಾಗಿದ್ದರೂ, ‘ಕನ್ನಡ’ ಭಾಷೆ ಕಡ್ಡಾಯ
ಬೆಳಗಾವಿ: “ರಾಜ್ಯದ ಯಾವುದೇ ಪಠ್ಯಕ್ರಮದ ಶಾಲೆಯಾಗಿದ್ದರೂ, ‘ಕನ್ನಡ’ ಭಾಷೆಯನ್ನು ಕಡ್ಡಾಯವಾಗಿ ಕಲಿಸಲೇಬೇಕು” ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಶಾಲೆಗಳ ಮಾನ್ಯತೆ ನವೀಕರಣ (Renewal) ಮಾಡುವ ಸಂದರ್ಭದಲ್ಲಿಯೇ, ಕನ್ನಡ ಭಾಷೆಯನ್ನು ಕಲಿಸಲೇಬೇಕು ಎಂದು ನಾವು ಆಡಳಿತ ಮಂಡಳಿಯಿಂದ ಲಿಖಿತ ಮುಚ್ಚಳಿಕೆ (Undertaking) ಬರೆಸಿಕೊಳ್ಳುತ್ತಿದ್ದೇವೆ. ಒಂದು ವೇಳೆ ಮುಚ್ಚಳಿಕೆ ಬರೆದುಕೊಟ್ಟ ನಂತರವೂ ಕನ್ನಡ ಕಲಿಸದೇ ಇರುವುದು ಅಥವಾ ಕನ್ನಡ ಮಾತನಾಡುವ ಮಕ್ಕಳ ಬಗ್ಗೆ ತಾರತಮ್ಯ ಎಸಗುತ್ತಿರುವುದು ನಮ್ಮ ಗಮನಕ್ಕೆ ಬಂದರೆ ಅಂತಹ ಶಾಲೆಗಳ ವಿರುದ್ಧ ಮುಲಾಜಿಲ್ಲದೆ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳುತ್ತೇವೆ ಎಂದವರು ತಿಳಿಸಿದ್ದಾರೆ. ಶಾಲೆಗಳ ಬಗ್ಗೆ ದೂರುಗಳು ಬಂದಾಗ ತಕ್ಷಣವೇ ಅಧಿಕಾರಿಗಳನ್ನು ಕಳುಹಿಸಿ ಪರಿಶೀಲನೆ ನಡೆಸಿ, ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು. ಶಾಲಾ ಹಂತದಲ್ಲಿ ಕನ್ನಡ ಭಾಷೆಯನ್ನು ಕಾಪಾಡುವುದು ಮತ್ತು ಬೆಳೆಸುವುದು ನಮ್ಮ ಸರ್ಕಾರದ ಹಾಗೂ ಶಿಕ್ಷಣ ಇಲಾಖೆಯ ಆದ್ಯ ಕರ್ತವ್ಯ ಇದರಲ್ಲಿ ಯಾವುದೇ ರಾಜಿಯಿಲ್ಲ ಎಂದವರು ಹೇಳಿದ್ದಾರೆ.…
ನ್ಯಾಷನಲ್ ಹೆರಾಲ್ಡ್ ಪ್ರಕರಣ: ಇಡಿ ಕ್ರಮ ಖಂಡಿಸಿ ಕಾಂಗ್ರೆಸ್ ಧರಣಿ
ಬೆಳಗಾವಿ: ನ್ಯಾಷನಲ್ ಹೆರಾಲ್ಡ್–ಯಂಗ್ ಇಂಡಿಯಾ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಸೇರಿದಂತೆ ಪಕ್ಷದ ನಾಯಕರ ವಿರುದ್ಧ ಜಾರಿ ನಿರ್ದೇಶನಾಲಯ (ಇಡಿ) ಸುಳ್ಳು ಪ್ರಕರಣ ದಾಖಲಿಸಿದೆ ಎಂದು ಆರೋಪಿಸಿ ಕಾಂಗ್ರೆಸ್ ಬುಧವಾರ ಪ್ರತಿಭಟನೆ ನಡೆಸಿತು. ಸುವರ್ಣ ವಿಧಾನಸೌಧ ಆವರಣದಲ್ಲಿರುವ ಮಹಾತ್ಮ ಗಾಂಧಿ ಪ್ರತಿಮೆ ಎದುರು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ಧರಣಿ ನಡೆಯಿತು. ಪ್ರತಿಭಟನೆಯಲ್ಲಿ ಸಚಿವರಾದ ಕೆ.ಜೆ. ಜಾರ್ಜ್, ಎಚ್.ಕೆ. ಪಾಟೀಲ್, ಈಶ್ವರ್ ಖಂಡ್ರೆ, ಮುನಿಯಪ್ಪ, ಬೋಸರಾಜು, ಎಂ.ಸಿ. ಸುಧಾಕರ್, ಬೈರತಿ ಸುರೇಶ್, ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ ಸೇರಿದಂತೆ ಹಲವು ಶಾಸಕರು ಹಾಗೂ ವಿಧಾನಪರಿಷತ್ ಸದಸ್ಯರು ಭಾಗವಹಿಸಿದ್ದರು.
