ಬೆಳಗಾವಿ: ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆ ಹಾಗೂ ಕರ್ನಾಟಕ ಕೆರೆ ಸಂರಕ್ಷಣೆ ಮತ್ತು ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಬೆಳಗಾವಿಯ ಸುವರ್ಣ ವಿಧಾನಸೌಧದ ಸೆಂಟ್ರಲ್ ಹಾಲ್‌ನಲ್ಲಿ ಬುಧವಾರ ರಾಜ್ಯದ ಕೆರೆ ಬಳಕೆದಾರರ ಸಂಘಗಳ ಪದಾಧಿಕಾರಿಗಳ ಕಾರ್ಯಾಗಾರ ಆಯೋಜಿಸಲಾಯಿತು. ಕಾರ್ಯಕ್ರಮದಲ್ಲಿ ಕಾರ್ಯಾಗಾರಕ್ಕೆ ಅಧಿಕೃತವಾಗಿ ಚಾಲನೆ ನೀಡಲಾಗಿದ್ದು, ಕೆರೆ ಬಳಕೆದಾರರ ಸಂಘಗಳ ಕಾರ್ಯಾಗಾರದ ಕೈಪಿಡಿ ಹಾಗೂ ‘ನೀರಿದ್ದರೆ ನಾಳೆ’ ಯೋಜನೆಯ ಕರಪತ್ರವನ್ನು ಬಿಡುಗಡೆ ಮಾಡಲಾಯಿತು. ರಾಜ್ಯದಲ್ಲಿ ಸುಮಾರು 44 ಸಾವಿರ ಕೆರೆಗಳಿದ್ದು, ಅವುಗಳಲ್ಲಿ 20 ಸಾವಿರಕ್ಕೂ ಹೆಚ್ಚು ಕೆರೆಗಳು ಪಂಚಾಯತ್ ರಾಜ್ ಇಲಾಖೆಯ ವ್ಯಾಪ್ತಿಗೆ ಒಳಪಟ್ಟಿವೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಕೆರೆಗಳ ಸರ್ವೇ, ಒತ್ತುವರಿ ತೆರವು ಹಾಗೂ ಪುನಶ್ಚೇತನಕ್ಕೆ ಈಗಾಗಲೇ ಕ್ರಮ ಕೈಗೊಂಡಿದೆ ಎಂದು ತಿಳಿಸಲಾಯಿತು. ಸಾಂಪ್ರದಾಯಿಕ ನೀರಿನ ಮೂಲಗಳಾದ ಕೆರೆಗಳ ಸಂರಕ್ಷಣೆ ಸರ್ಕಾರದ ಆದ್ಯತೆಯಾಗಬೇಕು. ಈ ಹಿನ್ನೆಲೆ ಕಾರ್ಯಾಗಾರದಲ್ಲಿ ಕೆರೆಗಳ ಜತನ, ಸದ್ಬಳಕೆ ಹಾಗೂ…
Month: December 2025
‘ಶ್ರೀಮತಿ ದೇಶಪಾಂಡೆ’ ಯಾಗಿ ‘ಧಕ್ ಧಕ್’ ಹುಡುಗಿ ಮಾಧುರಿ ದೀಕ್ಷಿತ್
ಮುಂಬೈ: ಬಾಲಿವುಡ್‌ನ ‘ಧಕ್ ಧಕ್’ ಹುಡುಗಿ ಮಾಧುರಿ ದೀಕ್ಷಿತ್ ಇತ್ತೀಚಿನ ವರ್ಷಗಳಲ್ಲಿ ಕಡಿಮೆ ಚಿತ್ರಗಳು ಮತ್ತು ಸರಣಿಗಳಲ್ಲಿ ಕಾಣಿಸಿಕೊಳ್ಳುತ್ತಿರುವುದಕ್ಕೆ ಕಾರಣವನ್ನು ಬಹಿರಂಗಪಡಿಸಿದ್ದಾರೆ. ಬಹುಕಾಲದ ಬಳಿಕ ಅವರು ಬಹು ನಿರೀಕ್ಷಿತ ಥ್ರಿಲ್ಲರ್ ಚಿತ್ರ ‘ಶ್ರೀಮತಿ ದೇಶಪಾಂಡೆ’ ಮೂಲಕ ತೆರೆಗೆ ಮರಳುತ್ತಿದ್ದಾರೆ. ಐಎಎನ್‌ಎಸ್‌ಗೆ ನೀಡಿದ ವಿಶೇಷ ಸಂದರ್ಶನದಲ್ಲಿ ಮಾತನಾಡಿದ ಮಾಧುರಿ, ತಾನು ಯಾವುದೇ ಯೋಜನೆಯನ್ನು ಆಯ್ಕೆ ಮಾಡುವಲ್ಲಿ ಬಹಳ ಆಯ್ಕೆಶೀಲವಾಗಿದ್ದೇನೆ ಎಂದು ಹೇಳಿದ್ದಾರೆ. “ನನಗೆ ನಿಜವಾಗಿಯೂ ಉತ್ಸಾಹ ಹುಟ್ಟಿಸುವ ಪಾತ್ರಗಳನ್ನು ಮಾತ್ರ ಮಾಡಲು ಇಚ್ಛಿಸುತ್ತೇನೆ. ಪ್ರತಿದಿನ ಬೆಳಿಗ್ಗೆ ಎದ್ದು ‘ಈ ಚಿತ್ರ ಅಥವಾ ಸರಣಿಯಲ್ಲಿ ಕೆಲಸ ಮಾಡಲು ಹೋಗುತ್ತಿದ್ದೇನೆ’ ಎಂದು ಖುಷಿಪಡುವಂತಹ ಪಾತ್ರಗಳೇ ನನಗೆ ಬೇಕು,” ಎಂದು ಅವರು ಹೇಳಿದರು. Watch: In an exclusive interview, renowned Bollywood actress Madhuri Dixit reflects on her nearly 40 year journey in the film industry.…
ಶಿಕ್ಷಣದ ಮೂಲಕ ಬದಲಾವಣೆ ತರಲು ನಮ್ಮ ಸರ್ಕಾರ ಬದ್ಧ; ಮಧು ಬಂಗಾರಪ್ಪ
ಬೆಂಗಳೂರು: ಎಸ್.ಎಸ್.ಎಲ್.ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ತೇರ್ಗಡೆಯಾಗದ ಅಥವಾ ಫಲಿತಾಂಶ ವೃದ್ಧಿಸಿಕೊಳ್ಳಲು ಬಯಸುವ ಎಲ್ಲ ವಿದ್ಯಾರ್ಥಿಗಳಿಗೆ ಪೂರ್ಣ ಶುಲ್ಕ ವಿನಾಯ್ತಿ ಮಾಡಿ ಉಚಿತವಾಗಿ ಎರಡನೇ ಮತ್ತು ಮೂರನೇ ಪರೀಕ್ಷೆ ಬರೆಯಲು ಅವಕಾಶವನ್ನು ಕಲ್ಪಿಸಲಾಗಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ಈ ಅವಕಾಶವನ್ನು ಸದ್ಬಳಕೆ ಮಾಡಿಕೊಂಡು ರಾಜ್ಯದಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ಜೊತೆಗೆ ಉತ್ತಮ ಅಂಕಗಳನ್ನು ವೃದ್ಧಿಸಿಕೊಂಡು, ಪೂರ್ಣಾಂಕಗಳನ್ನು ಪಡೆದಿದ್ದಾರೆ ಎಂದವರು ಮಾಹಿತಿ ಹಂಚಿಕೊಂಡಿದ್ದಾರೆ. ‘ಮೂರು ಬಾರಿ ಪರೀಕ್ಷೆ’ ಎಂಬ ವಿನೂತನ ಯೋಜನೆಯಿಂದ ಲಕ್ಷಾಂತರ ವಿದ್ಯಾರ್ಥಿಗಳು ತಮ್ಮ ಶೈಕ್ಷಣಿಕ ಜೀವನದ ಮುಂದಿನ ಗುರಿಯೆಡೆಗೆ ಸಾಗುವಲ್ಲಿ ಯಶಸ್ವಿಯಾಗಿ ತಮ್ಮ ಭವಿಷ್ಯವನ್ನು ರೂಪಿಸಿಕೊಂಡಿದ್ದಾರೆ ಎಂದಿರುವ ಸಚಿವ ಮಧು ಬಂಗಾರಪ್ಪ, ಶಿಕ್ಷಣದ ಮೂಲಕ ಬದಲಾವಣೆ ತರಲು ನಮ್ಮ ಸರ್ಕಾರ ಬದ್ಧ ಎಂದಿದ್ದಾರೆ.
ಮತ ಕಳ್ಳತನ ವಿರುದ್ಧದ ಹೋರಾಟ ಮುಂದುವರಿಯಲಿದೆ: ಕಾಂಗ್ರೆಸ್
ನವದೆಹಲಿ: ಮತ ಕಳ್ಳತನ ವಿರುದ್ಧದ ಹೋರಾಟ ಮುಂದುವರಿಯಲಿದೆ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ನವದೆಹಲಿಯಲ್ಲಿ ಸುದ್ದಿಗಗಾರರೊಂದಿಗೆ ಮಾತನಾಡಿದ ಅವರು , ಮತ ಕಳ್ಳತನ ವಿರುದ್ಧದ ಹೋರಾಟ ಇಲ್ಲಿಗೆ ಮುಗಿಯುವುದೇ ಎಂದು ಕೇಳಿದಾಗ, “ಪ್ರಜಾಪ್ರಭುತ್ವ ವ್ಯವಸ್ಥೆ ಉಳಿಸಲು ಮತ ಕಳ್ಳತನ ವಿರುದ್ಧ ನಾವು ಆರಂಭಿಸಿರುವ ಹೋರಾಟ ಮುಂದುವರಿಯಲಿದೆ ಎಂದರು. ಪ್ರತಿ ಕ್ಷೇತ್ರದಲ್ಲಿ ನಾವು ಲೀಗಲ್ ಬ್ಯಾಂಕ್ ಸ್ಥಾಪಿಸುತ್ತೇವೆ. ನಮ್ಮ ಪಕ್ಷದ ಪರ ಇರುವ ವಕೀಲರನ್ನು ಇದರಲ್ಲಿ ಸೇರಿಸಲಾಗುವುದು. ಇವರು ನಮ್ಮ ಕಾರ್ಯಕರ್ತರಿಗೆ ಕಾನೂನು ಸಲಹೆ ನೀಡಲಾಗುವುದು ಎಂದು ತಿಳಿಸಿದರು. ಜಿ.ಸಿ.ಚಂದ್ರಶೇಖರ್ ಅವರು ಬಿಎಲ್ ಎ ಗುರುತಿನ ಚೀಟಿ ನೀಡಲು ತಯಾರು ಮಾಡಿಕೊಂಡಿದ್ದಾರೆ. ಎಐಸಿಸಿಯಿಂದ ಒಪ್ಪಿಗೆ ಪಡೆಯಲು ತೆಗೆದುಕೊಂಡು ಹೋಗಲಾಗುವುದು. ನಾವು ಇಡೀ ದೇಶದಲ್ಲಿಯೇ ಅತಿ ಹೆಚ್ಚು ಸಹಿ ಸಂಗ್ರಹ ಮಾಡಿದ್ದೇವೆ. ದೆಹಲಿಯಲ್ಲಿನ ಪ್ರತಿಭಟನೆಯಲ್ಲಿ ಜನರಲ್ಲಿ ಇದ್ದ ಉತ್ಸಾಹ 2028 ಹಾಗೂ 2029ರ ಚುನಾವಣೆಗೆ ನಾಂದಿಯಾಡಿದೆ.…
ಜಿಬಿಎ ಚುನಾವಣೆ; 369 ವಾರ್ಡ್’ಗಳ ಆಕಾಂಕ್ಷಿಗಳಿಂದ ಅರ್ಜಿ ಅಹ್ವಾನ
ಬೆಂಗಳೂರು: “ಜಿಬಿಎ ಚುನಾವಣೆಗೆ ಅರ್ಜಿ ಸ್ವೀಕಾರ ಮಾಡಲಾಗುವುದು. ಮೀಸಲಾತಿ ಇನ್ನು ಅಂತಿಮವಾಗಿಲ್ಲವಾದರೂ 369 ವಾರ್ಡ್ ಗಳಲ್ಲಿ ಸ್ಪರ್ಧಿಸಲು ಯಾರಿಗೆಲ್ಲಾ ಆಸಕ್ತಿ ಇದೆ ಎಂದು ತಿಳಿಯಲು ಅರ್ಜಿ ಕರೆಯಲಾಗಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ದೆಹಲಿಯ ಕರ್ನಾಟಕ ಭವನದಲ್ಲಿ ಶಿವಕುಮಾರ್ ಅವರು ಭಾನುವಾರ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದರು. ಸಚಿವರ ಜೊತೆ ಚರ್ಚಿಸಿ ಈ ಅರ್ಜಿ ಜೊತೆಗೆ ಪಡೆಯುವ ಹಣವನ್ನು ಪಕ್ಷದ ಕಟ್ಟಡ ನಿಧಿಗೆ ಬಳಸಲು ತೀರ್ಮಾನಿಸಿದ್ದು, ಸಾಮಾನ್ಯವರ್ಗಕ್ಕೆ 50 ಸಾವಿರ ಹಾಗೂ ಮಹಿಳೆಯರು ಹಾಗೂ ಪರಿಶಿಷ್ಟ ಸಮುದಾಯದವರಿಗೆ 25 ಸಾವಿರ ರೂ. ನಿಗದಿಪಡಿಸಲಾಗಿದೆ. ಆನ್ಲೈನ್ ಅರ್ಜಿ ಹಾಕಲು ಅವಕಾಶ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.
ಮಾಜಿ ಸಚಿವ, ಕಾಂಗ್ರೆಸ್ ಶಾಸಕ ಶಾಮನೂರು ಶಿವಶಂಕರಪ್ಪ ವಿಧಿವಶ
ಬೆಂಗಳೂರು: ಮಾಜಿ ಸಚಿವ, ದಾವಣಗೆರೆ ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಶಾಸಕ ಶಾಮನೂರು ಶಿವಶಂಕರಪ್ಪ ವಿಧಿವಶರಾಗಿದ್ದಾರೆ. ಅಖಿಲ ಭಾರತ ವೀರಶೈವ ಮಹಾ ಸಭೆಯ ರಾಷ್ಟ್ರೀಯ ಅಧ್ಯಕ್ಷರೂ ಆದ ಶಾಮನೂರು ಶಿವಶಂಕರಪ್ಪ ಅವರು ವಯೋಸಹಜ ಸಮಸ್ಯೆಗಳಿಂದ ಬಳಲುತ್ತಿದ್ದರು. 92 ವರ್ಷ ವಯಸ್ಸಿನ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಭಾನುವಾರ ಸಂಜೆ ಕೊನೆಯುಸಿರೆಳೆದಿದ್ದಾರೆ ಎಂದು ಮೂಲಗಳು ತಿಳಿಸಿವೆ.
ನೆಲಮಂಗಲ-ತುಮಕೂರು 12 ಪಥಗಳ ಹೆದ್ದಾರಿ ಕಾಮಗಾರಿ 2027ರ ಮಾರ್ಚ್ ತಿಂಗಳೊಳಗೆ ಪೂರ್ಣ; ಸುಧಾಕರ್
ಬೆಂಗಳೂರು: ನೆಲಮಂಗಲದಿಂದ ತುಮಕೂರುವರೆಗೆ ಸುಮಾರು 44 ಕಿಮೀ ಉದ್ದದ 12 ಪಥಗಳ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯನ್ನು 2027ರ ಮಾರ್ಚ್ ತಿಂಗಳೊಳಗೆ ಪೂರ್ಣಗೊಳಿಸುವ ವಿಶ್ವಾಸವನ್ನು ಸಂಸದ ಡಾ.ಸುಧಾಕರ್ ವ್ಯಕ್ತಪಡಿಸಿದ್ದಾರೆ. ಕೇಂದ್ರ ಸರ್ಕಾರದ ಭಾರತ್ ಮಾಲಾ ಯೋಜನೆಯಡಿ ನೆಲಮಂಗಲದಿಂದ ತುಮಕೂರುವರೆಗೆ ಸುಮಾರು ₹2,000 ಕೋಟಿ ವೆಚ್ಚದಲ್ಲಿ ನಿರ್ಮಾಣ ಆಗುತ್ತಿರುವ 44 ಕಿಮೀ ಉದ್ದದ 12 ಪಥಗಳ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯನ್ನು ಶನಿವಾರ ಅವರು ಪರಿಶೀಲಿಸಿದರು. ಈ ಕುರಿತಂತೆ ಮಾಹಿತಿ ಹಂಚಿಕೊಂಡಿರುವ ಅವರು, ಈ ಯೋಜನೆಯ ಭೂಸ್ವಾಧೀನ ಪ್ರಕ್ರಿಯೆಯಲ್ಲಿದ್ದ ತೊಡಕುಗಳಿಂದ ಕಾಮಗಾರಿ ವಿಳಂಬವಾಗಿದ್ದು, 2027ರ ಮಾರ್ಚ್ ತಿಂಗಳೊಳಗೆ ಕಾಮಗಾರಿ ಪೂರ್ಣಗೊಳಿಸುವುದಾಗಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ ಎಂದು ತಿಳಿಸಿದರು. ನಿರ್ಮಾಣ ಹಂತದಲ್ಲಿರುವ ಈ ರಸ್ತೆಯಲ್ಲಿ ಅಪಘಾತಗಳು ಹೆಚ್ಚಾಗುತ್ತಿರುವ ಬಗ್ಗೆ ಸಾರ್ವಜನಿಕರಿಂದ ದೂರುಗಳಿದ್ದು, ಈ ನಿಟ್ಟಿನಲ್ಲಿ ಬ್ಲಾಕ್ ಸ್ಪಾಟ್‌ಗಳನ್ನು ಗುರುತಿಸಿ, ಬ್ಲಾಕ್ ಸ್ಪಾಟ್ ಪ್ರದೇಶಗಳಲ್ಲಿ ಬೆಳಕಿನ ವ್ಯವಸ್ಥೆ, ಎಚ್ಚರಿಕೆ ಫಲಕಗಳು, ಪೇಂಟಿಂಗ್ ಹಾಗೂ ಸುರಕ್ಷತಾ…
ಶಿಕ್ಷಿತರಲ್ಲೇ ಜಾತೀಯತೆ ಹೆಚ್ಚಾಗಿದೆ; ಅದು ಕೊನೆಗೊಳ್ಳಬೇಕು: ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಶಿಕ್ಷಿತರಲ್ಲಿ ಜಾತೀಯತೆ ಹೆಚ್ಚಾಗಿ ಕಂಡುಬರುತ್ತಿರುವುದು ಆತಂಕಕಾರಿ ಸಂಗತಿಯಾಗಿದ್ದು, ಇದು ಸಂಪೂರ್ಣವಾಗಿ ಕೊನೆಗೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಳವಳ ವ್ಯಕ್ತಪಡಿಸಿದರು. ಗದಗ ಜಿಲ್ಲೆಯ ಲಕ್ಷ್ಮೇಶ್ವರದಲ್ಲಿ ಶನಿವಾರ ನಡೆದ ಭಾರತ ರತ್ನ ಪ್ರೊ. ಸಿ.ಎನ್.ಆರ್. ರಾವ್ ಅವರ 10ನೇ ವಾರ್ಷಿಕ ವಿಜ್ಞಾನ ಸಂಪರ್ಕ ಕಾರ್ಯಕ್ರಮ–2025 ಉದ್ಘಾಟಿಸಿ ಅವರು ಮಾತನಾಡಿದರು. “ಸಮಾಜ ಸುಧಾರಕ ಬಸವಣ್ಣ 850 ವರ್ಷಗಳ ಹಿಂದೆಯೇ ‘ತಾನು ಯಾರು ಎಂದು ಕೇಳಬೇಡಿ’ ಎಂದು ಹೇಳಿದ್ದಾರೆ. ಸ್ವಾತಂತ್ರ್ಯ ಬಂದು 79 ವರ್ಷಗಳಾದರೂ, ಶೇ.76ರಷ್ಟು ಸಾಕ್ಷರತೆ ಸಾಧಿಸಿದ ಬಳಿಕವೂ ಜಾತಿ ವ್ಯವಸ್ಥೆ ಮಾಯವಾಗಿಲ್ಲ. ವಾಸ್ತವವಾಗಿ, ಶಿಕ್ಷಿತರಲ್ಲೇ ಜಾತೀಯತೆ ಹೆಚ್ಚಾಗಿರುವುದು ದುಃಖಕರ. ಇದು ಕೊನೆಗೊಳ್ಳಲೇಬೇಕು,” ಎಂದು ಅವರು ಮನವಿ ಮಾಡಿದರು. ಶಿಕ್ಷಣದ ಮೂಲ ಉದ್ದೇಶ ವೈಜ್ಞಾನಿಕ ಮನೋಭಾವ ಮತ್ತು ತಾರ್ಕಿಕ ಚಿಂತನೆಯನ್ನು ಬೆಳೆಸುವುದೆಂದು ಸಿದ್ದರಾಮಯ್ಯ ಹೇಳಿದರು. “ಅಸಮಾನತೆ ಹೋಗಲಾಡಿಸದೇ, ಕುರುಡು ಆಚರಣೆಗಳನ್ನು ತ್ಯಜಿಸದೇ ನಿಜವಾದ ಮಾನವೀಯ ಸಮಾಜ ನಿರ್ಮಾಣ ಸಾಧ್ಯವಿಲ್ಲ,” ಎಂದರು.…
ಕೇರಳ: ಬಿಜೆಪಿ ಅಭ್ಯರ್ಥಿ, ಕೇರಳದ ಮೊದಲ ಮಹಿಳಾ ಡಿಜಿಪಿ ಶ್ರೀಲೇಖಾ ಜಯಭೇರಿ
ತಿರುವನಂತಪುರಂ: ತಿರುವನಂತಪುರಂ ಕಾರ್ಪೊರೇಷನ್‌ನ ಶಾಸ್ತಮಂಗಲಂ ವಾರ್ಡ್‌ನಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಕೇರಳದ ಮೊದಲ ಮಹಿಳಾ ಪೊಲೀಸ್ ಮಹಾನಿರ್ದೇಶಕಿ (ಡಿಜಿಪಿ) ಶ್ರೀಲೇಖಾ ಗೆಲುವು ಸಾಧಿಸಿದ್ದಾರೆ. ಈ ಮೂಲಕ ನಗರಸಭೆ ಅಧಿಕಾರ ವಶಪಡಿಸಿಕೊಳ್ಳುವ ಪೈಪೋಟಿಯಲ್ಲಿ ಬಿಜೆಪಿ ತನ್ನ ಸ್ಥಿತಿಯನ್ನು ಮತ್ತಷ್ಟು ಬಲಪಡಿಸಿಕೊಂಡಿದೆ. ತಿರುವನಂತಪುರಂ ಕಾರ್ಪೊರೇಷನ್ ನಿಯಂತ್ರಣಕ್ಕಾಗಿ ಮೂರು ಪ್ರಮುಖ ರಾಜಕೀಯ ಮೈತ್ರಿಗಳ ನಡುವೆ ಕಠಿಣ ಸ್ಪರ್ಧೆ ನಡೆಯುತ್ತಿರುವ ಸಂದರ್ಭದಲ್ಲೇ ಶ್ರೀಲೇಖಾ ಅವರ ಜಯ ಲಭಿಸಿದೆ. ರಾಜಧಾನಿಯಲ್ಲಿ ಸಿಪಿಐ(ಎಂ) ನೇತೃತ್ವದ ಎಡರಂಗವನ್ನು ಅಧಿಕಾರದಿಂದ ದೂರ ಸರಿಸಲು ಬಿಜೆಪಿ ನಡೆಸುತ್ತಿರುವ ಪ್ರಯತ್ನಕ್ಕೆ ಈ ಗೆಲುವು ಸಾಂಕೇತಿಕ ಹಾಗೂ ರಾಜಕೀಯ ಉತ್ತೇಜನವಾಗಿದೆ ಎಂದು ಪಕ್ಷ ವಿಶ್ಲೇಷಿಸಿದೆ. ಪ್ರಸ್ತುತ ಲಭ್ಯ ಮಾಹಿತಿಯಂತೆ, 101 ಸದಸ್ಯರ ತಿರುವನಂತಪುರಂ ಕಾರ್ಪೊರೇಷನ್‌ನಲ್ಲಿ ಬಿಜೆಪಿ 34 ಸ್ಥಾನಗಳೊಂದಿಗೆ ಏಕೈಕ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಎಡಪಕ್ಷಗಳು 20 ಸ್ಥಾನಗಳನ್ನು ಪಡೆದುಕೊಂಡಿದ್ದು, ಕಾಂಗ್ರೆಸ್ 16 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಈ ವರ್ಷದ ಆರಂಭದಲ್ಲೇ ಶ್ರೀಲೇಖಾ…
ಡಿಸಿಎಂ ಜೊತೆ ಸಂವಾದ; ಬೆಳಗಾವಿ ಅಧಿವೇಶನದಲ್ಲೇ ವಿಧೇಯಕ ಮಂಡಿಸಲು ಬಿಎಎಫ್ ಆಗ್ರಹ
ಬೆಂಗಳೂರು: ಬೆಳಗಾವಿ ಅಧಿವೇಶನದಲ್ಲೇ ಕರ್ನಾಟಕ ಅಪಾರ್ಟ್‌ಮೆಂಟ್ ಮಾಲೀಕತ್ವ ಮತ್ತು ನಿರ್ವಹಣಾ ಕಾಯ್ದೆ (KAOMA) ಜಾರಿ ಸಂಬಂಧ ವಿಧೇಯಕ ಮಂಡಿಸಬೇಕೆಂದು ಬೆಂಗಳೂರು ಅಪಾರ್ಟ್‌ಮೆಂಟ್ ಫೇಡರೇಷನ್ (BAF) ಅಧ್ಯಕ್ಷ ಸತೀಶ್ ಮಲ್ಯ ಆಗ್ರಹಿಸಿದ್ದಾರೆ. ವಿಧಾನಸೌಧದ ಬ್ವಾಂಕ್ವೇಟ್ ಹಾಲ್‌ನಲ್ಲಿ ಗುರುವಾರ ಉಪಮುಖ್ಯಮಂತ್ರಿಗಳಾದ ಡಿಕೆ ಶಿವಕುಮಾರ್, ಅಪಾರ್ಟ್‌ಮೆಂಟ್ ಮಾಲೀಕರ ಜೊತೆ ವಿಶೇಷ ಸಂವಾದ ನಡೆಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಬೆಂಗಳೂರು ಅಪಾರ್ಟ್‌ಮೆಂಟ್ ಫೇಡರೇಷನ್ (BAF) ಅಧ್ಯಕ್ಷ ಸತೀಶ್ ಮಲ್ಯ, ಬೆಳಗಾವಿ ಅಧಿವೇಶನದಲ್ಲೇ ಕರ್ನಾಟಕ ಅಪಾರ್ಟ್‌ಮೆಂಟ್ ಮಾಲೀಕತ್ವ ಮತ್ತು ನಿರ್ವಹಣಾ ಕಾಯ್ದೆ ಜಾರಿ ಸಂಬಂಧ ವಿಧೇಯಕ ಮಂಡಿಸಬೇಕೆಂದು ಆಗ್ರಹಿಸಿದರು. ಡಿ.ಕೆ.ಶಿವಕುಮಾರ್ ಅವರು ಸಲಹೆಗಳನ್ನು ಪಡೆದರು. ಅಪಾರ್ಟ್ಮೆಂಟ್ ನಿವಾಸಿಗಳ ಆಗ್ರಹಗಳನ್ನು ಶೀಘ್ರವೇ ವಿಧೇಯಕದಲ್ಲಿ ಅಳವಡಿಸಿ ಬೆಳಗಾವಿ ಅಧಿವೇಶನದಲ್ಲಿ ಮಂಡಿಸಬೇಕು ಎನ್ನುವುದು ಸತೀಶ್ ಮಲ್ಯ ಗಮನಸೆಳೆದರು. ಸಂವಾದ ಕಾರ್ಯಕ್ರಮ ನಂತರ ಮಾತನಾಡಿದ ಅವರು, ಇದೊಂದು ಐತಿಹಾಸಿಕ ಕಾರ್ಯಕ್ರಮ. 1972 ರಲ್ಲಿ ಜಾರಿಗೆ ಬಂದಿರುವಂತಹ ಕರ್ನಾಟಕ ಅಪಾರ್ಟ್‌ಮೆಂಟ್ ಮಾಲೀಕತ್ವ…
