ವಿಶಾಖಪಟ್ಟಣಂ: ಆಂಧ್ರಪ್ರದೇಶದ ಚಿಂತೂರು-ಮರೇಡುಮಿಲ್ಲಿ ಘಾಟ್ ರಸ್ತೆಯಲ್ಲಿ ಬಸ್ ಕಂದಕಕ್ಕೆ ಉರುಳಿಬಿದ್ದು ಸಂಭವಿಸಿದ ಭೀಕರ ಅಪಘಾತದಲ್ಲಿ 9 ಮಂದಿ ಸಾವನ್ನಪ್ಪಿದ್ದಾರೆ. 22 ಮಂದಿಗೆ ಗಾಯಗೊಂಡಿದ್ದಾರೆ. ಚಿಂತೂರು-ಮರೇಡುಮಿಲ್ಲಿ ಘಾಟ್ ರಸ್ತೆಯಲ್ಲಿ ಶುಕ್ರವಾರ ನಸುಕಿನ ಜಾವ ಖಾಸಗಿ ಟ್ರಾವೆಲ್ ಬಸ್ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿ ಬಿದ್ದಿದೆ. ವಿವಿಧ ದೇವಸ್ಥಾನಗಳಿಗೆ ಯಾತ್ರೆ ಹೊರಟಿದ್ದವರ ವಾಹನ ಅಪಘಾತಕ್ಕೀಡಾಗಿದೆ. 35 ಮಂದಿ ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಬಸ್ ಇದಾಗಿತ್ತು. ಭದ್ರಾಚಲಂ ದೇವಸ್ಥಾನದ ದರ್ಶನ ಪಡೆದು ಅನ್ನಾವರಂ ಕಡೆಗೆ ತೆರಳುತ್ತಿದ್ದಾಗ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ.
Month: December 2025
ಒಳಮೀಸಲಾತಿಯ ಬಿಕ್ಕಟ್ಟಿನಿಂದಾಗಿ ನೇಮಕಾತಿ ಪ್ರಕ್ರಿಯೆಯಲ್ಲಿ ವಿಳಂಬ
ಬೆಳಗಾವಿ: ಸರ್ಕಾರದ ವಿವಿಧ ಇಲಾಖೆಗಳಲ್ಲಿ ಒಟ್ಟು 2,84,881 ಹುದ್ದೆಗಳು ಖಾಲಿಯಿದೆ. ಈ ಹುದ್ದೆಗಳಿಗೆ ನೇಮಕಾತಿ ಮಾಡಲಿ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ವಿಧಾನ ಮಂಡಲ ಅಧಿವೇಶನದಲ್ಲಿ ಮಾತನಾಡುತ್ತ ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ಸಂಖ್ಯೆ ಮತ್ತು ನೇಮಕಾತಿ ಬಗ್ಗೆ ಅವರು ಮಾಹಿತಿ ಹಂಚಿಕೊಂಡರು. ವಿವಿಧ ನಿಗಮ ಮಂಡಳಿಗಳಲ್ಲಿ1,01,420 ಹುದ್ದೆಗಳು, ವಿಶ್ವವಿದ್ಯಾಲಯಗಳಲ್ಲಿ 14,677 ಹುದ್ದೆಗಳು ಒಟ್ಟು 1,88,037 ಹುದ್ದೆಗಳು ಖಾಲಿಯಿದೆ. ಈಗಾಗಲೇ 24,300 ಹುದ್ದೆಗಳ ನೇಮಕಾತಿ ಪ್ರಕ್ರಿಯೆಗೆ ಆರ್ಥಿಕ ಇಲಾಖೆಯಿಂದ ಅನುಮತಿ ದೊರೆತಿದೆ. ಹೈದ್ರಾಬಾದ್ ಕರ್ನಾಟಕಕ್ಕೆ 371ಜೆ ಅಡಿ 32,132 ಹುದ್ದೆಗಳು ಭರ್ತಿಯಾಗಬೇಕಿದೆ. ಒಟ್ಟು 56,432 ಹುದ್ದೆಗಳ ಭರ್ತಿಗೆ ಈಗಾಗಲೇ ಕ್ರಮ ಕೈಗೊಳ್ಳಲಾಗಿದೆ ಎಂದರು. ಸರ್ಕಾರದ ವಿವಿಧ ಇಲಾಖೆಗಳಲ್ಲಿ ಒಟ್ಟು 2,84,881 ಹುದ್ದೆಗಳು ಖಾಲಿಯಿದೆ. ಅದರಲ್ಲಿ ವಿವಿಧ ನಿಗಮ ಮಂಡಳಿಗಳಲ್ಲಿ1,01,420 ಹುದ್ದೆಗಳು, ವಿಶ್ವವಿದ್ಯಾಲಯಗಳಲ್ಲಿ 14,677 ಹುದ್ದೆಗಳು ಒಟ್ಟು 1,88,037 ಹುದ್ದೆಗಳು ಖಾಲಿಯಿದೆ.…
ಬೆಳೆ ಹಾನಿ, ಮಳೆ ಹಾನಿ ಪರಿಹಾರ ಇಲ್ಲ; ಶ್ವೇತಪತ್ರಕ್ಕೆ ಪ್ರತಿಪಕ್ಷ ಆಗ್ರಹ
ಬೆಳಗಾವಿ: ಉತ್ತರ ಕರ್ನಾಟಕದ ಸಮಸ್ಯೆ ಬಗೆಹರಿಸಲು ಸರಿಯಾದ ನಾಯಕತ್ವ ಬೇಕಿದೆ. ಆದರೆ ರೈತರಿಗೆ ಕಾಂಗ್ರೆಸ್ ಸರ್ಕಾರ ಪರಿಹಾರ ನೀಡಿಲ್ಲ, ಮನೆ ಕಳೆದುಕೊಂಡವರಿಗೆ ಪರಿಹಾರ ನೀಡಿಲ್ಲ. ಉತ್ತರ ಕರ್ನಾಟಕದ ಯಾವ ಭರವಸೆಗಳು ಈಡೇರಿದೆ ಎಂದು ತಿಳಿಸಲು ಶ್ವೇತಪತ್ರ ಬಿಡುಗಡೆ ಮಾಡಬೇಕು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆಗ್ರಹಿಸಿದ್ದಾರೆ. ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಸದನದಲ್ಲಿ ಮಾತನಾಡಿದ ಅವರು, ಪ್ರವಾಹದ ಸಂದರ್ಭದಲ್ಲಿ ಜನರು ಗಂಜಿ ಕೇಂದ್ರದಲ್ಲಿರುತ್ತಾರೆ. ಆಗ ಸರ್ಕಾರ ಕೂಡಲೇ ಪರಿಹಾರ ನೀಡಬೇಕು. ಕಾಂಗ್ರೆಸ್ ಸರ್ಕಾರದಲ್ಲಿ, 2013-2014 ರ ಜುಲೈನಲ್ಲಿ 9 ತಿಂಗಳಾದ ನಂತರ, 2014-15 ರಲ್ಲಿ 8 ತಿಂಗಳ ನಂತರ, 2015-16 ರಲ್ಲಿ 7 ತಿಂಗಳ ನಂತರ ಪರಿಹಾರ ನೀಡಲಾಗಿದೆ. ನಮ್ಮ ಬಿಜೆಪಿ ಸರ್ಕಾರದಲ್ಲಿ 2019-20 ರ ಆಗಸ್ಟ್ ಪ್ರವಾಹದ ನಂತರ ಎರಡೇ ತಿಂಗಳಲ್ಲಿ ಪ್ರವಾಹ ನೀಡಲಾಗಿದೆ. 2022 ರ ಪ್ರವಾಹದಲ್ಲಿ ಎರಡು ತಿಂಗಳಲ್ಲಿ, 2021-22 ರ ಪ್ರವಾಹದಲ್ಲಿ…
“77 ವರ್ಷಗಳ ನಂತರವೂ ದಲಿತರಿಗೆ ನ್ಯಾಯ ತಲುಪಿಲ್ಲ”
ದಲಿತರ ಮೇಲಿನ ದೌರ್ಜನ್ಯಗಳ ಖಂಡನೆ: ಸಂಘಟನೆಗಳ ಒಕ್ಕೂಟದಿಂದ ಬೃಹತ್ ತಮಟೆ ಚಳುವಳಿ ಬೆಂಗಳೂರು: ಬ್ಯಾಟರಾಯನಪುರ ಕ್ಷೇತ್ರ ಸೇರಿದಂತೆ ಬೆಂಗಳೂರು ನಗರ ಜಿಲ್ಲೆಯಲ್ಲಿ ದಲಿತರ ಮೇಲಿನ ಅನ್ಯಾಯ, ದೌರ್ಜನ್ಯ ಹೆಚ್ಚುತ್ತಿರುವುದನ್ನು ಖಂಡಿಸಿ, ಹಲವಾರು ದಲಿತ ಸಂಘಟನೆಗಳ ಒಕ್ಕೂಟ ಫ್ರೀಡಂ ಪಾರ್ಕ್‌ನಲ್ಲಿ ಶನಿವಾರ ಬೃಹತ್ ತಮಟೆ ಚಳುವಳಿಯನ್ನು ನಡೆಸಿತು. ಜೈಭೀಮ್ ಅಖಿಲ ಭಾರತ ದಲಿತ ಕ್ರಿಯಾ ಸಮಿತಿ, ಜೈ ಮಾದಿಗರ ಬೌದ್ಧಿಕ ವೇದಿಕೆ ಹಾಗೂ ಜೈಭೀಮ್ ದಲಿತ ಭೂ ರಕ್ಷಣಾ ವೇದಿಕೆಗಳು, ತಮ್ಮ ಸಂಸ್ಥಾಪಕ ಮತ್ತು ರಾಷ್ಟ್ರೀಯ ಅಧ್ಯಕ್ಷ ಬಿ.ಆರ್. ಮುನಿರಾಜರವರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ, ವಿವಿಧ ಇಲಾಖೆಗಳು ದಲಿತರ ವಿರುದ್ಧ ತೋರಿಸುತ್ತಿರುವ ‘ವ್ಯವಸ್ಥಿತ ಅನ್ಯಾಯ’ಕ್ಕೆ ಸರ್ಕಾರ ತಕ್ಷಣ ಸ್ಪಂದಿಸಬೇಕೆಂದು ಆಗ್ರಹಿಸಿದವು. ಖಾಸಗಿವಾಗಿ, ಕಂದಾಯ ಇಲಾಖೆಯ ಭೂದಾಖಲೆಗಳ ಉಪ ನಿರ್ದೇಶಕರಾದ ಸುಜಯ್ ಕುಮಾರ್, ಶ್ರೀನಿವಾಸ್ ಮತ್ತು ಭಾನುಪ್ರಕಾಶ್ ವಿರುದ್ಧ “ದಲಿತ ವಿರೋಧಿ ನಿಲುವು ಮತ್ತು ಅಕ್ರಮ” ಆರೋಪಿಸಿ, ಅವರನ್ನು ಅಮಾನತು…
ರೌಡಿಶೀಟರ್ ಗಳನ್ನು ವಿಚಾರಣೆ ನೆಪದಲ್ಲಿ ಪೊಲೀಸ್ ಠಾಣೆಗೆ ಕರೆಸುವುದಕ್ಕೆ ಹೈಕೋರ್ಟ್ ಅಸಮಾಧಾನ
ಬೆಂಗಳೂರು: ಮೌಖಿಕವಾಗಿ ವಿಚಾರಣೆ ಸೇರಿದಂತೆ ಇನ್ನಿತರೆ ಕಾರಣಗಳಿಗೆ ರೌಡಿಶೀಟರ್ ಗಳನ್ನು ಪೊಲೀಸ್ ಠಾಣೆಗೆ ಕರೆಸುವುದಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಆದರೇ ರೌಡಿ ಶೀಟರ್ ಗಳನ್ನು ಪೊಲೀಸ್ ಠಾಣೆಗೆ ಎಸ್ ಎಂ ಎಸ್, ವಾಟ್ಸ್ ಆಪ್ ಮೂಲಕ ಮಾಹಿತಿ ನೀಡಿ, ಕರೆಸುವುದನ್ನು ಕಡ್ಡಾಯಗೊಳಿಸಿ ಮಹತ್ವದ ಆದೇಶ ಮಾಡಿದೆ. ಹೈಕೋರ್ಟ್ ನ್ಯಾಯಮೂರ್ತಿ ಆರ್.ನಟರಾಜ್ ಅವರಿದ್ಧ ನ್ಯಾಯಪೀಠವು, ರೌಡಿಶೀಟರ್ ಗಳನ್ನು ಪೊಲೀಸ್ ಠಾಣೆಗೆ ಕರೆಸುವುದಕ್ಕೆ ಹೈಕೋರ್ಟ್ ಪ್ರಕ್ರಿಯೆ ನಿಗದಿ ಪಡಿಸಿ ಮಹತ್ವದ ಆದೇಶ ಮಾಡಿದೆ. ಎಸ್ ಎಂ ಎಸ್, ವಾಟ್ಸ್ ಆಪ್ ಮೂಲಕ ಪೊಲೀಸ್ ಠಾಣೆಗೆ ಕರೆಸಬಹುದು. ಪೊಲೀಸ್ ಠಾಣೆಗಳಿಗೆ ರೌಡಿಶೀಟರ್ ಗಳು ತಮ್ಮ ಮೊಬೈಲ್ ನಂಬರ್ ನೀಡಬೇಕು. ಮೌಖಿಕವಾಗಿ ಕರೆಯುವ ಬದಲು ಎಸ್ ಎಂ ಎಸ್, ವಾಟ್ಸ್ ಆಪ್ ಸಂದೇಶ ನೀಡಬೇಕು ಎಂಬುದಾಗಿ ಹೈಕೋರ್ಟ್ ಸೂಚಿಸಿದೆ. ಒಂದು ವೇಳೆ ಎಸ್ಎಂಎಸ್, ವಾಟ್ಸ್ ಆಪ್ ನಲ್ಲಿ ಸೂಚಿಸಿದರೂ ಪೊಲೀಸ್ ಠಾಣೆಗೆ ರೌಡಿ…
ಜಗಳೂರು: ರೈತರ ಜಮೀನಿಗೆ ಹಗಲು ವೇಳೆ ವಿದ್ಯುತ್ ಪೂರೈಸಲು ಆಗ್ರಹ
ದಾವಣಗೆರೆ: ರಾತ್ರಿ ವೇಳೆ ಜಮೀನಿಗೆ ತೆರಳಿ ನೀರಾಯಿಸಲು ಕಾಡುಪ್ರಾಣಿಗಳ ಆತಂಕ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಹಗಲು ವೇಳೆಯಲ್ಲೇ ವಿದ್ಯುತ್ ಪೂರೈಸಬೇಕೆಂದು ರೈತರು ವಿದ್ಯುತ್ ಇಲಾಖೆಗೆ ಮನವಿ ಸಲ್ಲಿಸಿದ್ದಾರೆ. ಪಟ್ಟಣದ ಬೆಸ್ಕಾಂ ವಿಭಾಗ ಕಚೇರಿಯಲ್ಲಿ ತಮಲೇಹಳ್ಳಿ, ಗೌಡಗೊಂಡನಹಳ್ಳಿ, ಕೆಳಗೋಟೆ, ಚಿಕ್ಕಮ್ಮನಹಟ್ಟಿ, ಹಿರೇಬನ್ನಿಹಟ್ಟಿ ಸೇರಿದಂತೆ ಅನೇಕ ಗ್ರಾಮಗಳ ರೈತರು ಸೇರಿ ಎಇಇ ಮಲ್ಲಿಕಾರ್ಜುನ್ ಅವರಿಗೆ ಮನವಿ ಸಲ್ಲಿಸಿದರು. ಯುವ ಮುಖಂಡ ತಮಲೇಹಳ್ಳಿ ಶ್ರೀನಿವಾಸ್ ಮಾತನಾಡಿ, “ಕೊಂಡಕುರಿ ಅಂಚಿನಲ್ಲಿರುವ ಹಲವು ಗ್ರಾಮಗಳ ರೈತರು ರಾತ್ರಿ ವೇಳೆ ಜಮೀನಿಗೆ ತೆರಳುವುದೇ ಭಯ. ಕಾಡುಪ್ರಾಣಿಗಳ ಉಪಟಳ ಹೆಚ್ಚಿರುವುದರಿಂದ ರಾತ್ರಿ ಬದಲಿಗೆ ಹಗಲಿನಲ್ಲಿ 5 ಗಂಟೆಗಳ ಕಾಲ ವಿದ್ಯುತ್ ಪೂರೈಸಬೇಕು” ಎಂದು ಒತ್ತಾಯಿಸಿದರು. ಮನವಿ ಸ್ವೀಕರಿಸಿದ ಎಇಇ ಮಲ್ಲಿಕಾರ್ಜುನ್, “ಸೊಕ್ಕೆ–ಪಲ್ಲಾಗಟ್ಟೆ ಮಾರ್ಗದ ವಿದ್ಯುತ್ ಸಂಪರ್ಕವನ್ನು ಬೇರ್ಪಡಿಸಿ, ತುರವನೂರು ಮಾರ್ಗದಿಂದ ಲಿಂಕ್ ಲೈನ್ ಮೂಲಕ ಬೆಳಗಿನ ವೇಳೆಯಲ್ಲಿ ವಿದ್ಯುತ್ ಪೂರೈಸಲು ಕ್ರಮಜರುಗಿಸಲಾಗುತ್ತಿದೆ. ಬುಧವಾರದೊಳಗಾಗಿ ಪರಿಷ್ಕೃತ ವ್ಯವಸ್ಥೆ ಜಾರಿಗೆ ಬರಲಿದೆ”…
ಖರೀದಿ ಕೇಂದ್ರವೂ ಇಲ್ಲ, ಬೆಲೆ ಹಾನಿಗೆ ಪರಿಹಾರವೂ ಇಲ್ಲ; ಸಂಕಷ್ಟದಲ್ಲಿ ರೈತರು
ಬೆಂಗಳೂರು: ಖರೀದಿ ಕೇಂದ್ರಗಳನ್ನು ತೆರೆಯದೇ ವಂಚಿಸಿರುವ ಕಾಂಗ್ರೆಸ್ ಸರ್ಕಾರ, ಬೆಳೆ ಹಾನಿ ಪರಿಹಾರದಲ್ಲೂ ರೈತರಿಗೆ ಅನ್ಯಾಯ ಮಾಡುತ್ತಿದೆ ಎಂದು ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ. ರಾಜ್ಯ ಸರ್ಕಾರದ ಧೋರಣೆ ಕುರಿತಂತೆ ಅವರು ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ. ರಾಜ್ಯ ಸರ್ಕಾರದ ನಡೆಯಿಂದಾಗಿ ಕರ್ನಾಟಕದ ರೈತರು ಸಂಕಷ್ಟದಲ್ಲಿದ್ದಾರೆ ಎಂದು ಅವರು ಟೀಕಿಸಿದ್ದಾರೆ. A teacher from Agra was fined for not wearing helmet inside a car Post that incident, he now wears a helmet Magical Amritkaalpic.twitter.com/wXkHqZ0wTt — 𝕲𝖆𝖓𝖊𝖘𝖍 * (@ggganeshh) December 9, 2025
ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಖಾಸಗೀಕರಣ ಇಲ್ಲ; ಸಚಿವ ಡಾ. ಶರಣಪ್ರಕಾಶ್ ಪಾಟೀಲ್
ಬೆಳಗಾವಿ: ಯಾವುದೇ ಕಾರಣಕ್ಕೂ ಸರ್ಕಾರಿ ಒಡೆತನದ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳನ್ನು ಖಾಸಗಿಕರಣ ಮಾಡುವ ಪ್ರಶ್ನೆಯೇ ಇಲ್ಲ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಶರಣಪ್ರಕಾಶ್ ಆರ್. ಪಾಟೀಲ್ ವಿಧಾನಪರಿಷತ್‌ನಲ್ಲಿ ಸ್ಪಷ್ಟಪಡಿಸಿದರು. ಕಾಂಗ್ರೆಸ್ ಪಕ್ಷದ ನಾಗರಾಜ್ ಯಾದವ್ ಪ್ರಶ್ನೆಗೆ ಉತ್ತರಿಸಿದ ಸಚಿವರು, ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳಿಗೆ ಸರ್ಕಾರ ಅಗತ್ಯವಿರುವ ಮೂಲ ಸೌಕರ್ಯಗಳನ್ನು ಒದಗಿಸಿಕೊಟ್ಟಿದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಮೇಲ್ದರ್ಜೆಗೇರಿಸಲಾಗುವುದು. ಯಾವುದೇ ಕಾರಣಕ್ಕೂ ಇವುಗಳನ್ನು ಖಾಸಗಿಯವರಿಗೆ ಒಪ್ಪಿಸುವ ಪ್ರಶ್ನೆಯೇ ಇಲ್ಲ ಎಂದು ಪುನರುಚ್ಚರಿಸಿದರು. ಬೆಳಗಾವಿಯ ವೈದ್ಯಕೀಯ ವಿಜ್ಞಾನ ಸಂಸ್ಥೆ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ನಿರ್ಲಕ್ಷ್ಯದಿಂದ ರೋಗಿಯ ಹೊಟ್ಟೆಯ ಗಡ್ಡೆಯ ಬದಲು ಕರಳು ತೆಗೆದು ಹಾಕಲಾಗಿದೆ ಎಂಬ ವದಂತಿ ಹರಡಿದೆ. ಇದು ಸರ್ಕಾರದ ಗಮನಕ್ಕೆ ಬಂದಿದೆ. ಈತ ಮದ್ಯವ್ಯಸನಿಯಾಗಿದ್ದು, ಕರುಳಿನಲ್ಲಿ ರಂಧ್ರವಿರುವ ಬಗ್ಗೆ ತಾಲೂಕಿನ ಆಸ್ಪತ್ರೆಯಲ್ಲಿ ಸ್ಪಷ್ಟವಾಗಿ ನಮೂದಿಸಲಾಗಿದೆ. ರೋಗಿಗೆ ಅಪೆಂಡಿಸೆಕ್ಟಮಿ ಮಾಡಲಾಗಿದೆ. ಶಸ್ತ್ರಚಿಕಿತ್ಸೆಯ…
ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ಸರ್ಕಾರದಿಂದ ಯಾವುದೇ ಅನುದಾನ ಇಲ್ಲ
ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ವಿವಿಧ ಹುದ್ದೆಗಳ ನೇಮಕಾತಿಯ ಪರೀಕ್ಷೆ ಸಂದರ್ಭದಲ್ಲಿ ಬಡ ಹಾಗೂ ಗ್ರಾಮೀಣ ಪ್ರದೇಶದ ಅಭ್ಯರ್ಥಿಗಳಿಗೆ ಆರ್ಥಿಕವಾಗಿ ಹೊರೆಯಾಗದಂತೆ ಪರೀಕ್ಷಾ ಶುಲ್ಕ ನಿಗದಿಪಡಿಸಿದೆ. ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ವಿಧಾನ ಪರಿಷತ್ ಸದಸ್ಯ ನಿರಾಣಿ ಹನುಮಂತಪ್ಪ ರುದ್ರಪ್ಪ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಉತ್ತರ ನೀಡುತ್ತಾ, 2024ನೇ ಸಾಲಿನಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ರಾಜ್ಯ ಸರ್ಕಾರದ ವಿವಿಧ ಹುದ್ದೆಗಳ ನೇಮಕಾತಿಗಾಗಿ 17 ನೇಮಕಾತಿ ಅಧಿಸೂಚನೆಗಳನ್ನು ಪೂರ್ಣಗೊಳಿಸಿರುವುದಿಲ್ಲ. 2024ರಲ್ಲಿ ಕೆಲವೇ ಅಧಿಸೂಚನೆಗಳನ್ನು ಹೊರಡಿಸಿ ಶುಲ್ಕ ಸಂಗ್ರಹಿಸಿದೆ. ಸ್ಪರ್ಧಾತ್ಮಕ ಪರೀಕ್ಷೆಗಳನ್ನು ನಡೆಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ಸರ್ಕಾರದಿಂದ ಯಾವುದೇ ಅನುದಾನ ನೀಡಲಾಗುವುದಿಲ್ಲ ಎಂದರು. ಸ್ಪರ್ಧಾತ್ಮಕ ಪರೀಕ್ಷೆಗಳನ್ನು ನಡೆಸಲು ಪರೀಕ್ಷಾ ಕೇಂದ್ರಗಳಿಗೆ ತಗಲಬಹುದಾದ ವೆಚ್ಚಗಳು, ಗೌಪ್ಯತಾ ವೆಚ್ಚಗಳು, ಮುದ್ರಣ, ಗೌಪ್ಯತಾ ಬಂಡಲುಗಳನ್ನು ಆಯಾ ಪರೀಕ್ಷಾ ಕೇಂದ್ರಗಳಿಗೆ ರವಾನಿಸುವುದು, ಪರೀಕ್ಷೆ ಮುಗಿದ ನಂತರ ಗೌಪ್ಯತಾ ಬಂಡಲುಗಳನ್ನು…
ಬೆಳಗಾವಿ ಜಿಲ್ಲೆ ವಿಭಜನೆಗೆ ಒತ್ತಾಯ ; ಮುಖಂಡರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ
ಬೆಳಗಾವಿ: ರಾಜ್ಯದ ರಾಜಕೀಯವಾಗಿ ಅತಿದೊಡ್ಡ ಜಿಲ್ಲೆ ಎನ್ನಲಾದ ಬೆಳಗಾವಿ ವಿಭಜನೆ ಪ್ರಶ್ನೆ ಮತ್ತೆ ಚರ್ಚೆ ಮತ್ತೆ ಮುನ್ನೆಲೆಗೆ ಬಂದಿದೆ. ಚಿಕ್ಕೋಡಿ ಮತ್ತು ಗೋಕಾಕ್ ಎಂಬ ಎರಡು ಹೊಸ ಜಿಲ್ಲೆಗಳ ರಚನೆಗೆ ಒತ್ತಾಯಿಸಿ ನಿಯೋಗವೊಂದು ಮಂಗಳವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದೆ. 18 ವಿಧಾನಸಭಾ ಕ್ಷೇತ್ರಗಳನ್ನು ಹೊಂದಿರುವ ಬೆಳಗಾವಿ ಬೆಂಗಳೂರು ಹೊರತಾಗಿಯೇ ರಾಜ್ಯದ ಅತಿದೊಡ್ಡ ರಾಜಕೀಯ ಜಿಲ್ಲೆಯಾಗಿದ್ದು, ಜಿಲ್ಲೆ ವಿಭಜನೆ ಅವಶ್ಯಕತೆಯ ಕುರಿತ ಬೇಡಿಕೆ ಹಲವು ವರ್ಷಗಳಿಂದಲೇ ಕೇಳಿಬರುತ್ತಿದೆ. ಬೆಳಗಾವಿ ಚಳಿಗಾಲ ಅಧಿವೇಶನದ ಮೊದಲ ದಿನ ಅರಭಾವಿ ಬಿಜೆಪಿ ಶಾಸಕ ಬಾಲಚಂದ್ರ ಜಾರಕಿಹೊಳಿ ನೇತೃತ್ವದ ನಿಯೋಗವು ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು ಭೇಟಿಯಾಗಿ ಪ್ರಸ್ತುತ ಜಿಲ್ಲೆಯನ್ನು ಸಣ್ಣ ಬೆಳಗಾವಿ ಜಿಲ್ಲೆಯಾಗಿ ಉಳಿಸಬೇಕು ಹಾಗೂ ಚಿಕ್ಕೋಡಿ, ಗೋಕಾಕ್ ಜಿಲ್ಲೆಗಳನ್ನು ಪ್ರತ್ಯೇಕವಾಗಿ ರಚಿಸಬೇಕು ಎಂದು ಮನವಿ ಸಲ್ಲಿಸಿತು.
