ಅನ್ನಭಾಗ್ಯ: ಇನ್ನುಮುಂದೆ ಹಣಕ್ಕೆ ಬದಲು ಅಕ್ಕಿ

ಬೆಂಗಳೂರು: ರಾಜ್ಯಸರ್ಕಾರ ಇನ್ನುಮುಂದೆ ಅನ್ನಭಾಗ್ಯ ಯೋಜನೆ ಫಲಾನುಭವಿಗಳಿಗೆ ಹಣದ ಬದಲು ಅಕ್ಕಿ ಕೊಡಲು ತೀರ್ಮಾನಿಸಲಾಗಿದೆ. ಈ ಕುರಿತಂತೆ ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾಹಿತಿ ಹಂಚಿಕೊಂಡಿರುವ ಆಹಾರ ಸಚಿವ ಕೆ.ಹೆಚ್​ ಮುನಿಯಪ್ಪಇಷ್ಟು ದಿನಗಳ ಕಾಲ ಹೆಚ್ಚುವರಿ 5 ಕೆಜಿ ಅಕ್ಕಿಗೆ ಪರ್ಯಾಯವಾಗಿ 170 ರೂಪಾಯಿ ಹಣ ನೀಡಲಾಗುತ್ತಿತ್ತು. ಇನ್ನು ಮುಂದೆ 10 ಕೆಜಿ ಅಕ್ಕಿ ಕೊಡಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದರು. ಈ ತಿಂಗಳಿಂದಲೇ ಅಕ್ಕಿಯನ್ನು ನೀಡಲಾಗುತ್ತದೆ ಎಂದವರು ತಿಳಿಸಿದರು. ಕೇಂದ್ರ ಸರ್ಕಾರವು 5 ಕೆಜಿ ಅಕ್ಕಿನೀಡಲು ಒಪ್ಪಿದೆ ಎಂದ ಅವರು, ತಿಂಗಳಿಗೆ 2.29 ಲಕ್ಷ ಮೆಟ್ರಿಕ್ ಟನ್ ಅಕ್ಕಿ ಅವಶ್ಯಕತೆ ಇದೆ. ವರ್ಷಕ್ಕೆ 27.48 ಲಕ್ಷ ಮೆಟ್ರಿಕ್ ಅಕ್ಕಿ ಅವಶ್ಯಕತೆ ಇದೆ. ರಾಜ್ಯದ ಪರಿಸ್ಥಿತಿ ಬಗ್ಗೆ ಕೇಂದ್ರಕ್ಕೆ ವಿವರಿಸಲಾಗಿದ್ದು, ನಮ್ಮ ಮನವಿಗೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರು ಸ್ಪಂದಿಸಿದ್ದಾರೆ ಎಂದು ಸಚಿವ ಮುನಿಯಪ್ಪ ಹೇಳಿದರು.

ಕಾರವಾರ ನೌಕಾ ನೆಲೆಯ ಸೂಕ್ಷ್ಮ ಮಾಹಿತಿ ಪಾಕಿಸ್ತಾನಕ್ಕೆ ಸೋರಿಕೆ; ಮೂವರ ಬಂಧನ

ನವದೆಹಲಿ: ಪಾಕಿಸ್ತಾನಕ್ಕೆ ಸೂಕ್ಷ್ಮ ಮಾಹಿತಿ ರವಾನಿಸುತ್ತಿದ್ದ ಆರೋಪದಲ್ಲಿ ರಾಷ್ಟ್ರೀಯ ತನಿಕಾ ತಂಡ NIA ಮೂವರನ್ನು ಬಂಧಿಸಿದೆ. ಭಾರತದ ರಕ್ಷಣಾ ಇಲಾಖೆಗೆ ಸಂಬಂಧಿಸಿದ ಸೂಕ್ಷ್ಮ ಮಾಹಿತಿಯನ್ನು ಸೋರಿಕೆ ಮಾಡಿ ಪಾಕಿಸ್ತಾನ ಮೂಲದ ಗುಪ್ತಚರ ಅಧಿಕಾರಿಗಳಿಗೆ ನೀಡಿದ ಆರೋಪದಲ್ಲಿ ವೇತನ್ ಲಕ್ಷ್ಮಣ್ ತಂಡೇಲ್, ಅಕ್ಷಯ್ ರವಿ ನಾಯಕ್ ಹಾಗೂ ಅಭಿಲಾಷ್ ಎಂಬವರನ್ನು ಬಂಧಿಸಲಾಗಿದೆ ಎಂದು NIA ಮೂಲಗಳು ತಿಳಿಸಿವೆ. ಕಾರವಾರ ನೌಕಾ ನೆಲೆ ಮತ್ತು ಕೊಚ್ಚಿ ನೌಕಾ ನೆಲೆಯಲ್ಲಿರುವ ಭಾರತೀಯ ರಕ್ಷಣಾ ಸಂಸ್ಥೆಗಳ ಬಗ್ಗೆ ಸೂಕ್ಷ್ಮ ಮಾಹಿತಿಯನ್ನು ಈ ಆರೋಪಿಗಳು ಸೋರಿಕೆ ಮಾಡಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕಾರವಾರ ಹಾಗೂ ಕೊಚ್ಚಿಯಲ್ಲಿ ಕಾರ್ಯಾಚರಣೆ ನಡೆಸಿ ಬಂಧಿಸಲಾಗಿದೆ ಎಂದು NIA ಅಧಿಕಾರಿಗಳು ತಿಳಿಸಿದ್ದಾರೆ.

26ನೇ ಮುಖ್ಯ ಚುನಾವಣಾ ಆಯುಕ್ತರಾಗಿ ಜ್ಞಾನೇಶ್ ಕುಮಾರ್ ಪದಗ್ರಹಣ

ನವದೆಹಲಿ: ಕೇಂದ್ರ ಚುನಾವಣಾ ಆಯೋಗದ 26ನೇ ಮುಖ್ಯ ಚುನಾವಣಾ ಆಯುಕ್ತರಾಗಿ ಜ್ಞಾನೇಶ್ ಕುಮಾರ್ ಬುಧವಾರ ಅಧಿಕಾರ ವಹಿಸಿಕೊಂಡರು. ಸೋಮವಾರದಂದು ಜ್ಞಾನೇಶ್ ಕುಮಾರ್ ಅವರ ಹೆಸರನ್ನು ಚುನಾವಣಾ ಆಯೋಗದ ಮುಖ್ಯ ಆಯುಕ್ತ ಸ್ಥಾನಕ್ಕೆ ಕೇಂದ್ರ ಸರ್ಕಾರದ ಉನ್ನತ ಸಮಿತಿ ನೇಮಕ ಮಾಡಿತ್ತು. ಈ ನೇಮಕಾತಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ ನಂತರ ಬುಧವಾರ ಬೆಳಿಗ್ಗೆ ಜ್ಞಾನೇಸ್ ಕುಮಾರ್ ಅವರು ಮುಖ್ಯ ಚುನಾವಣಾ ಆಯುಕ್ತರಾಗಿ ಅಧಿಕಾರವಹಿಸಿಕೊಂಡರು. Gyanesh Kumar's message after taking charge as Chief Election Commissioner.#ChiefElectionCommissioner | #CEC | #GyaneshKumar @ECISVEEP pic.twitter.com/xEfhDbnAgi — All India Radio News (@airnewsalerts) February 19, 2025

ಇದೊಂದು ಬಾರಿ ಕೊನೆಯದಾಗಿ ಸರ್ಕಾರ ಅನಧಿಕೃತ ಬಡಾವಣೆಗಳಿಗೆ ‘ಬಿ ಖಾತಾ’: ಸಿಎಂ

ಬೆಂಗಳೂರು: ‘ಬಿ ಖಾತಾ’ ಅಭಿಯಾನದ ಮೂಲಕ ರಾಜ್ಯದ ಪಟ್ಟಣ ಹಾಗೂ ನಗರ ಪಾಲಿಕೆ ವ್ಯಾಪ್ತಿಯ ಅನಧಿಕೃತ ಬಡಾವಣೆಗಳಿಗೆ ಅಂತ್ಯ ಹಾಡುತ್ತಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಇದೊಂದು ಬಾರಿ ಕೊನೆಯದಾಗಿ ಸರ್ಕಾರ ಅನಧಿಕೃತ ಬಡಾವಣೆಗಳಿಗೆ ಬಿ ಖಾತಾ ನೀಡುತ್ತಿದೆ. ಮುಂದೆ ಎಲ್ಲಿಯೂ ಅನಧಿಕೃತ ಬಡಾವಣೆಗಳು ತಲೆಯೆತ್ತಬಾರದು, ಎತ್ತಿದರೆ ಸಂಬಂಧಪಟ್ಟ ಅಧಿಕಾರಿಗಳ ಮೇಲೆ ಕ್ರಮ ಜರುಗಿಸುವುದು ನಿಶ್ಚಿತ ಎಂದವರು ತಿಳಿಸಿದ್ದಾರೆ. " ಬಿ ಖಾತಾ" ಅಭಿಯಾನದ ಮೂಲಕ ರಾಜ್ಯದ ಪಟ್ಟಣ ಹಾಗೂ ನಗರ ಪಾಲಿಕೆ ವ್ಯಾಪ್ತಿಯ ಅನಧಿಕೃತ ಬಡಾವಣೆಗಳಿಗೆ ಅಂತ್ಯ ಹಾಡುತ್ತಿದ್ದೇವೆ. ಇದೊಂದು ಬಾರಿ ಕೊನೆಯದಾಗಿ ಸರ್ಕಾರ ಅನಧಿಕೃತ ಬಡಾವಣೆಗಳಿಗೆ ಬಿ ಖಾತಾ ನೀಡುತ್ತಿದೆ. ಮುಂದೆ ಎಲ್ಲಿಯೂ ಅನಧಿಕೃತ ಬಡಾವಣೆಗಳು ತಲೆಯೆತ್ತಬಾರದು, ಎತ್ತಿದರೆ ಸಂಬಂಧಪಟ್ಟ ಅಧಿಕಾರಿಗಳ ಮೇಲೆ ಕ್ರಮ ಜರುಗಿಸುವುದು ನಿಶ್ಚಿತ. pic.twitter.com/HlsyqED95L — Siddaramaiah (@siddaramaiah) February 18, 2025

ಬಂದವರಿಗೂ ಹರಸಿದವರಿಗೂ ಕೃತಜ್ಞತೆ ಸಲ್ಲಿಸಿದ ಡಾಲಿ

ಬೆಂಗಳೂರು: ಹಸಮಾನೇ ಏರಿ ಹೊಸ ಬದುಕು ಆರಂಭಿಸಿರುವ ನಟ ಡಾಲಿ ಧನಂಜಯ ಮತ್ತು ಪತ್ನಿ ಅವರು ಅಭಿಮಾನಿಗಳ ಮುಂದೆ ಪ್ರತ್ಯಕ್ಷರಾಗಿದ್ದಾರೆ. ನವ ವಿವಾಹಿತರನ್ನು ಕಂಡು ಅಭಿಮಾನಿ ಬಂದುಗಳು ಸಂತಸಗೊಂಡಿದ್ದಾರೆ. ಈ ಫೋಟೋಗಳನ್ನು ಹಂಚಿಕೊಂಡಿರುವ ನಟ ಡಾಲಿ ಧನಂಜಯ ಮದುವೆಗೆ ಬಂದು ಹರಸಿದ, ಬರಲಾಗದೆ ಇದ್ದರು ಶುಭಾಶಯಗಳನ್ನು ತಿಳಿಸಿದ ಎಲ್ಲರಿಗೂ ಹೃದಯಪೂರ್ವಕ ನಮನಗಳು ಎಂದಿದ್ದಾರೆ. ಯಾವುದೇ ತೊಂದರೆ ಆಗದೆ ಸಮಾರಂಭ ಚೆನ್ನಾಗಿ ಆಗುವಲ್ಲಿ ಕುಟುಂಬದ ಜೊತೆ ಸ್ನೇಹಿತರು, ನೆಂಟರು, ಇಷ್ಟರು, ಮಾಧ್ಯಮ, ಪೊಲೀಸ್ ಇಲಾಖೆ, ಕಾರ್ಮಿಕರು, ಅಭಿಮಾನಿಗಳಾದಿಯಾಗಿ ಸಾಕಷ್ಟು ಜನರ ಶ್ರಮವಿದೆ. ಎಲ್ಲರಿಗೂ ತುಂಬು ಅಭಿಮಾನದ ಕೃತಜ್ಞತೆಗಳು ಎಂದಿದ್ದಾರೆ. ತುಂಬ ಜನ ಸೇರಿದ್ದರಿಂದ, ಕೆಲವರಿಗೆ ನಮ್ಮನ್ನು ತಲುಪಲು ತೊಂದರೆಯುಂಟಾಗಿದ್ದಲ್ಲಿ, ತಲುಪಲು ಸಾಧ್ಯವಾಗಿರದಿದ್ದಲ್ಲಿ ದಯವಿಟ್ಟು ಕ್ಷಮೆಯಿರಲಿ, ಖಂಡಿತವಾಗಿಯೂ ಇನ್ನಷ್ಟು ಒಳ್ಳೆ ವಿಷಯಗಳೊಂದಿಗೆ ಮತ್ತೆ ಸಿಗುತ್ತೇವೆ. ಆಶೀರ್ವಾದವಿರಲಿ ಎಂದವರು ವಿನಂತಿಸಿಕೊಂಡಿದ್ದಾರೆ. ಇಷ್ಟೆಲ್ಲದರ ಮಧ್ಯೆ ಬಂದು ಹರಸಿದ ನನ್ನ ಚಿತ್ರರಂಗದ ಗೆಳೆಯರು ,…

ಕೇಂದ್ರ ಮುಖ್ಯ ಚುನಾವಣಾ ಅಯುಕ್ತರಾಗಿ ಜ್ಞಾನೇಶ್ ಕುಮಾರ್ ನೇಮಕ

ನವದೆಹಲಿ: ಕೇಂದ್ರ ಚುನಾವಣಾ ಆಯೋಗದ ಮುಂದಿನ ಮುಖ್ಯ ಆಯುಕ್ತರನ್ನಾಗಿ ಜ್ಞಾನೇಶ್ ಕುಮಾರ್ ಅವರನ್ನು ಕೇಂದ್ರ ಸರ್ಕಾರ ನೇಮಕ ಮಾಡಿದೆ. ಈವರೆಗೂ ಅವರು ಚುನಾವಣಾ ಆಯುಕ್ತರಾಗಿದ್ದರು. ನೂತನ ಮುಖ್ಯ ಆಯುಕ್ತರನ್ನು ಸಮಿತಿ ಆಯ್ಕೆ‌ಮಾಡಿರುವ ಬಗ್ಗೆ ಕಾನೂನು ಸಚಿವಾಲಯ ಮಾಹಿತಿ ನೀಡಿದೆ. ಜ್ಞಾನೇಶ್ ಕುಮಾರ್ ಅಧಿಕಾರಾವಧಿಯು ಜನವರಿ 26, 2029 ರವರೆಗೆ ಇರಲಿದೆ.

ಬಿಲ್ಲವಾಸ್ ಕತಾರ್’ನ ನೂತನ ಅಧ್ಯಕ್ಷರಾಗಿ ಅಪರ್ಣ ಶರತ್; ಸಂದೀಪ್ ಸಾಲಿಯಾನ್’ಗೆ ಗೌರವಪೂರ್ವಕವಾಗಿ ಬೀಳ್ಕೊಡುಗೆ

ಕತಾರ್: ಸಾಗರೋತ್ತರ ರಾಷ್ಟ್ರ ಕತಾರ್’ನ ಬಿಲ್ಲವ ಸಮುದಾಯದ ಪಾಳಯದಲ್ಲಿ ಅಚ್ಚರಿಯ ಬೆಳವಣಿಗೆ ನಡೆದಿದೆ. ಬಿಲ್ಲವಾಸ್ ಕತಾರ್’ನ ಈವರೆಗೂ ಅಧ್ಯಕ್ಷರಾಗಿದ್ದ ಸಂದೀಪ್ ಸಾಲಿಯಾನ್’ಗೆ ಗೌರವಪೂರ್ವಕವಾಗಿ ಬೀಳ್ಕೊಡುಗೆ ನೀಡಲಾಗಿದೆ. ಇದೇ ವೇಳೆ, ನೂತನ ಅಧ್ಯಕ್ಷರಾಗಿ ಅಪರ್ಣ ಶರತ್ ನೇಮಕವಾಗಿದ್ದಾರೆ. ಬಿಲ್ಲವಾಸ್ ಕತಾರ್ ನ ನೇತೃತ್ವದಲ್ಲಿ ಕತಾರ್’ನ ಎಂ.ಆರ್.ಎ, ಸಲ್ವ ರೋಡ್, ಔತಣಕೂಟ ಹಾಲ್’ನಲ್ಲಿ ನಡೆದ ಸಮಾರಂಭದಲ್ಲಿ ಬಿಲ್ಲವಾಸ್ ಕತಾರ್ ನ ಅಧ್ಯಕ್ಷರಾದ ಸಂದೀಪ್ ಸಾಲಿಯಾನ್ ಅವರನ್ನು ಅಭಿನಂಧಿಸಿದ ಅಪೂರ್ವ ಸನ್ನಿವೇಶ ಗಮನಸೆಳೆಯಿತು. ಸಮುದಾಯದ ಮುಖಂಡರ ಹಾಗೂ ವಿವಿಧ ಸಂಘಟನೆಗಳ ಪ್ರಮುಖರ ಉಪಸ್ಥಿತಿಯಲ್ಲಿ ನೆರವೇರಿದ ಸಮಾರಂಭದಲ್ಲಿ ಸಂದೀಪ್ ಸಾಲಿಯಾನ್ ವಿನಯಪೂರ್ವಕವಾಗಿ ಬೀಳ್ಕೊಡಲಾಯಿತು. ಉದ್ಯೋಗ ನಿಮಿತ್ತ ನೆರೆಯ ಕೊಲ್ಲಿ ರಾಷ್ಟ್ರಕ್ಕೆ ವರ್ಗಾವಣೆಗೊಂಡ ಅನಿವಾರ್ಯತೆ ಹಿನ್ನೆಲೆಯಲ್ಲಿ ಬಿಲ್ಲವಾಸ್ ಕತಾರ್’ನ ಜವಾಬ್ಧಾರಿಯಿಂದ ಬಿಡುಗೊಂಡಿರುವುದಾಗಿ ಹೇಳಿದ ಸಂದೀಪ್ ಸಾಲಿಯಾನ್, ಈ ವರೆಗೂ ಸಹಕರಿಸಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದರು. ಸಂದೀಪ್ ಸಾಲಿಯಾನ್ ನಿರ್ಗಮದ ಹಿನ್ನೆಲೆಯಲ್ಲಿ ತೆರವಾಗಿರುವ ಬಿಲ್ಲವಾಸ್ ಕತಾರ್’ನ…

ಜೂನ್ ಅಥವಾ ಜುಲೈನಲ್ಲಿ ತಾಲ್ಲೂಕು, ಜಿಲ್ಲಾ ಪಂಚಾಯತ್ ಚುನಾವಣೆ ಸಾಧ್ಯತೆ; ಹೈಕೋರ್ಟಿಗೆ ಸರ್ಕಾರದ ಮಾಹಿತಿ

ಬೆಂಗಳೂರು: ತಾಲ್ಲೂಕು ಮತ್ತು ಜಿಲ್ಲಾ ಪಂಚಾಯತ್ ಚುನಾವಣೆ ಮೇ ತಿಂಗಳ ಬಳಿಕ ನಡೆಯುವ ಸಾಧ್ಯತೆಗಳಿವೆ. ಈ ಸಂಬಂಧ ರಾಜ್ಯ ಸರ್ಕಾರ ಹೈಕೋರ್ಟಿಗೆ ಮಾಹಿತಿ ನೀಡಿದೆ. 3 ವರ್ಷಗಳಾದರೂ ಜಿಲ್ಲಾ ಹಾಗೂ ತಾಲೂಕು ಪಂಚಾಯತ್ ಚುನಾವಣೆ ನಡೆಸದ ಹಿನ್ನೆಲೆಯಲ್ಲಿ ರಾಜ್ಯ ಚುನಾವಣಾ ಆಯೋಗ ಸಲ್ಲಿಸಿದ್ದ ನ್ಯಾಯಾಂಗ ನಿಂದನೆ‌ ಅರ್ಜಿ ಸೋಮವಾರ ಹೈಕೋರ್ಟಿನಲ್ಲಿ ವಿಚಾರಣೆಗೆ ಬಂದಿದೆ. ಮೂರು ವರ್ಷಗಳಾದರೂ ಸಹ ಜಿಲ್ಲಾ ಪಂಚಾಯಿತಿ ಹಾಗೂ ತಾಲೂಕು ಪಂಚಾಯಿತಿ ಚುನಾವಣೆ ನಡೆಸದ ಬಗ್ಗೆ ರಾಜ್ಯ ಚುನಾವಣಾ ಆಯೋಗದ ಪರ ಹಿರಿಯ ವಕೀಲ ಕೆ.ಎನ್.ಫಣೀಂದ್ರ ಅವರು ಹೈಕೋರ್ಟ್​ ಗಮನಸೆಳೆದರು. ಸರ್ಕಾರವು ಮೀಸಲಾತಿ ಪಟ್ಟಿ ನೀಡಿದರೆ ವೇಳಾಪಟ್ಟಿ ಪ್ರಕಟಿಸಲಾಗುವುದು ಎಂದು ಚುನಾವಣಾ ಆಯೋಗದ ನಿಲುವನ್ನು ತಿಳಿಸಿದರು. ಈ ವೇಳೆ ಅಡ್ವೊಕೆಟ್ ಜನರಲ್ ಶಶಿಕಿರಣ್ ಶೆಟ್ಟಿ ಅವರು ಮೇ ತಿಂಗಳ ಬಳಿಕ ಎಲೆಕ್ಷನ್ ನಡೆಸುವುದಾಗಿ ಮಾಹಿತಿ ನೀಡಿದರು. ಈ ಕುರಿತು ಹೇಳಿಕೆ ದಾಖಲಿಸಿಕೊಂಡ ಹೈಕೋರ್ಟ್ ಅರ್ಜಿಯನ್ನು…

ಮಾರ್ಚ್​ 7ರಂದು ಬಜೆಟ್ ಮಂಡನೆ: ಸಿಎಂ ಮಾಹಿತಿ

ಬೆಂಗಳೂರು: ಬಹು ನಿರೀಕ್ಷಿತ ರಾಜ್ಯ ಬಜೆಟ್ ಮುಂದಿನ ತಿಂಗಳ 7ರಂದು ಮಂಡಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. 2025-26ನೇ ಸಾಲಿನ ಆಯವ್ಯಯವನ್ನು ಮಾರ್ಚ್ 7ರಂದು ಮಂಡಿಸಲಾಗುವುದು ಎಂದು ಅವರು ಸೋಮವಾರ ವಿಧಾನಸೌಧದಲ್ಲಿ ತಿಳಿಸಿದ್ದಾರೆ. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ರೈತ ಸಂಘದ ಮುಖಂಡರುಗಳೊಂದಿಗೆ ಆಯವ್ಯಯ ಸಂಬಂಧ ಪೂರ್ವಭಾವಿ ಸಭೆ ನಡೆಸಿದರು. ರೈತರ ಬೇಡಿಕೆಗಳನ್ನು ಆಲಿಸಿದ ಮುಖ್ಯಮಂತ್ರಿ ಅಗತ್ಯ ಮಾಹಿತಿ ಸಂಗ್ರಹಿಸಿದರು. ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಮುಂಬರುವ ಬಜೆಟ್ ಮಂಡನೆ ಬಗ್ಗೆ ಮಾಹಿತಿ ನೀಡಿದರು. ಮಾರ್ಚ್ 3 ರಿಂದ ವಿಧಾನಮಂಡಲ ಅಧಿವೇಶನ ಪ್ರಾರಂಭವಾಗಲಿದ್ದು, ಮಾರ್ಚ್​ 7ರಂದು ಬಜೆಟ್ ಮಂಡಿಸುವುದಾಗಿ ತಿಳಿಸಿದರು.

ಆಂಧ್ರ ಪ್ರದೇಶದಲ್ಲಿ GBS ಸೋಂಕಿನ ತಲ್ಲಣ; ಇಬ್ಬರು ಬಲಿ

ಅಮರಾವತಿ: ದೇಶಾದ್ಯಂತ ಆತಂಕದ ಏಲ್ ಎಬ್ಬಿಸಿರುವ GBS (Guillain Barre Syndrome) ಸೋಂಕಿಗೆ ಆಂಧ್ರ ಪ್ರದೇಶದಲ್ಲಿ ಇಬ್ಬರು ಬಲಿಯಾಗಿದ್ದಾರೆ. ಈ ಘಟನೆಯ ನಂತರ ಮಾರಣಾಂತಿಕ ಸೋಂಕಿನ ಬಗ್ಗೆ ಸರ್ಕಾರ ತೀವ್ರ ಕಟ್ಟೆಚ್ಚರ ವಹಿಸಿದೆ. ‘ಸೋಂಕು ದೃಢಪಟ್ಟ 45 ವರ್ಷದ ಮಹಿಳೆ ಕಮಲಮ್ಮ ಎಂಬವರು ಭಾನುವಾರ ಗುಂಟೂರಿನ ಸರ್ಕಾರಿ ಜನರಲ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದರೆ, 10 ವರ್ಷದ ಬಾಲಕ ಸುಮಾರು 10 ದಿನಗಳ ಹಿಂದೆ ಶ್ರೀಕಾಕುಳಂನ ಖಾಸಗಿ ವೈದ್ಯಕೀಯ ಕಾಲೇಜಿನಲ್ಲಿ ಸಾವನ್ನಪ್ಪಿದ್ದಾರೆ ಎಂದು ಆಂಧ್ರ ಪ್ರದೇಶ ಆರೋಗ್ಯ ಸಚಿವ ಸತ್ಯ ಕುಮಾರ್ ಯಾದವ್ ಮಾಹಿತಿ ನೀಡಿದ್ದಾರೆ. ಈ ನಡುವೆ ಆಂಧ್ರ ಪ್ರದೇಶದಲ್ಲಿ ಸುಮಾರು 17 GBS ಸೋಂಕಿನ ಪ್ರಕರಣಗಳು ದಾಖಲಾಗಿವೆ ಎಂದು ಸಚಿವರು ತಿಳಿಸಿದ್ದಾರೆ.