ಬೆಂಗಳೂರು: ಕನ್ನಡ ಹೋರಾಟಗಾರರ ಮೇಲಿನ ಕೇಸುಗಳನ್ನು ವಾಪಾಸ್ ಪಡೆಯುವುದಾಗಿ ಸಿಎಂ ಸಿದ್ದರಾಮಯ್ಯ ಪ್ರಕಟಿಸಿದ್ದಾರೆ. ಮೈಸೂರು ಬ್ಯಾಂಕ್ ವೃತ್ತದ ನೃಪತುಂಗ ಮಂಟಪದಲ್ಲಿ ಭುವನೇಶ್ವರಿ ಹಾಗೂ ಅಣ್ಣಮ್ಮ ದೇವತೆಯ ವೈಭವದ ಮೆರವಣಿಗೆಗೆ ಚಾಲನೆ ನೀಡಿ ಮಾತನಾಡಿದ ಸಿದ್ದರಾಮಯ್ಯ, ವಾಟಾಳ್ ಕನ್ನಡದ ವಿಚಾರದಲ್ಲಿ ರಾಜಿ ಮಾಡಿಕೊಳ್ಳದ ಹೋರಾಟಗಾರರು. ದೇವರಾಜ ಅರಸು ಅವರು ಮಂತ್ರಿ ಸ್ಥಾನ ಕೊಡ್ತೀನಿ ಎಂದು ಕರೆದರೂ ಕನ್ನಡ ಪಕ್ಷ ಮತ್ತು ಕನ್ನಡ ಹೋರಾಟ ಬಿಡಲು ವಾಟಾಳ್ ಅವರು ಒಪ್ಪಲಿಲ್ಲ ಎಂದು ನೆನಪಿಸಿದರು. ನಾವೆಲ್ಲರೂ ಕನ್ನಡ ನೆಲ, ಜಲ, ಭಾಷೆ, ಸಂಸ್ಕೃತಿ ಬಗ್ಗೆ ಅಭಿಮಾನ, ಪ್ರೀತಿ ಬೆಳೆಸಿಕೊಳ್ಳಬೇಕು. ನಮ್ಮ ನೆಲದಲ್ಲಿ ಕನ್ನಡದ ವಾತಾವರಣ ಬೆಳೆಸಬೇಕು. ಇದಕ್ಕಾಗಿ ಯಾರು ಯಾವುದೇ ಭಾಷೆಯಲ್ಲಿ ಮಾತನಾಡಿದರೂ ನೀವು ಕನ್ನಡದಲ್ಲೇ ಉತ್ತರ ಕೊಡಬೇಕು ಎಂದು ಹೇಳಿದರು. . ಮೈಸೂರು ವಿಶ್ವ ವಿದ್ಯಾಲಯದಿಂದ ದೇವರಾಜು ಅರಸು ಅವರಿಗೆ ಮರಣೋತ್ತರ ಡಾಕ್ಟರೇಟ್ ಪ್ರಶಸ್ತಿ ನೀಡಬೇಕು ಎನ್ನುವ ವಾಟಾಳ್ ನಾಗರಾಜ್…
Year: 2025
ಮಂಗಳೂರು ಮೂಲದ ರೌಡಿಶೀಟರ್ ತುಕ್ಕ ನೌಫಲ್ ಬರ್ಬರ ಹತ್ಯೆ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಕುಖ್ಯಾತ ರೌಡಿ ತುಕ್ಕ ನೌಫಲ್ ಎಂಬಾತ ಬರ್ಬರವಾಗಿ ಕೊಲೆಯಾಗಿದ್ದಾನೆ. ಕೇರಳ ರಾಜ್ಯದ ಕಾಸರಗೋಡು ಉಪ್ಪಳ ಬಳಿ ಹಂತಕರು ಕುಖ್ಯಾತ ರೌಡಿ ತುಕ್ಕ ನೌಫಲ್’ನನ್ನ ಕೊಲೆ ಮಾಡಿದ್ದಾರೆ. ಮಂಗಳೂರು ಮೂಲದ ರೌಡಿಶೀಟರ್ ತುಕ್ಕ ನೌಫಲ್ ಕರಾವಳಿ ಜಿಲ್ಲೆಗಳಲ್ಲಿ 10ಕ್ಕೂ ಹೆಚ್ಚು ಪ್ರಕರಣಗಲ್ಲಿ ಭಾಗಿಯಾಗಿದ್ದ ಆರೋಪ ಹೊಂದಿದ್ದಾನೆ. ಕೊಲೆ, ಸುಲಿಗೆ, ದರೋಡೆ ಸಹಿತ ಅನೇಕ ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದ ಈತ ಪೊಲೀಸರ ಎಚ್ಚರಿಕೆಗೂ ಜಗ್ಗಲಿಲ್ಲ. ಮಂಗಳೂರು ಪೊಲೀಸರ ಹೇಳಿಕೆ ಪ್ರಕಾರ ಈತ ಕ್ಲಾಸ್ ಒನ್ ರೌಡಿ ಎಂದು ಬಿಂಬಿತನಾಗಿದ್ದ. ಮಂಗಳೂರಿನ ಫೈಝಲ್ ನಗರ ನಿವಾಸಿ ನೌಫಲ್ ಕೊಲೆಯಾಗಿರುವ ಬಗ್ಗೆ ಪಡೆದ ಮಂಗಳೂರು ನಗರ ಪೊಲೀಸರ ತಂಡ ಕಾಸರಗೋಡಿಗೆ ತೆರಳಿ ಕಲೆಹಾಕಿದೆ.
‘ರಾಮ್ ಸೇ ರಾಷ್ಟ್ರ’ ಎಂದರೆ ಸರ್ವರ ಕ್ಷೇಮ; ಗಮನಸೆಳೆದ ಮೋದಿ ಭಾಷಣ
ರಾಯಪುರ: “ಛತ್ತೀಸ್‌ಗಢವು ಭಗವಾನ್ ಶ್ರೀರಾಮನ ತಾಯಿಯ ಮನೆ” ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ನವ ರಾಯಪುರದ ಹೊಸ ವಿಧಾನಸಭೆ ಕಟ್ಟಡದ ಉದ್ಘಾಟನಾ ಸಮಾರಂಭ ಹಾಗೂ ರಾಜ್ಯದ 25ನೇ ಸಂಸ್ಥಾಪನಾ ದಿನಾಚರಣೆಯ ವೇಳೆ ಶನಿವಾರ ಮಾತನಾಡಿದ ಅವರು, “ರಾಮರಾಜ್ಯದಿಂದ ರಾಷ್ಟ್ರ” ಎಂಬ ತತ್ವದ ಆಳವಾದ ನಿರೂಪಣೆಯನ್ನು ನೀಡಿದರು. ‘ರಾಮ್ ಸೇ ರಾಷ್ಟ್ರ’ ಎಂದರೆ ಸರ್ವರ ಕ್ಷೇಮ. ‘ಸಬ್ ಕಾ ಸಾಥ್, ಸಬ್ ಕಾ ವಿಕಾಸ್’ – ಯಾರನ್ನೂ ಬಿಡದ ಸಮಗ್ರ ಅಭಿವೃದ್ಧಿ. ‘ರಾಮ್’ ಎಂದರೆ ಬಡತನ, ಅಸಮಾನತೆ, ಅನ್ಯಾಯದಿಂದ ಮುಕ್ತವಾದ ಸಮಾಜ. ಆರೋಗ್ಯ, ಸಂತೋಷ ಮತ್ತು ನ್ಯಾಯ ಮೌಲ್ಯಗಳಲ್ಲಿ ನಿಂತ ರಾಷ್ಟ್ರ. ‘ರಾಮ್’ ಎಂದರೆ ದುಷ್ಟ ಶಕ್ತಿಗಳ ನಾಶ – ನಕ್ಸಲಿಸಂ ವಿರುದ್ಧದ ಹೋರಾಟದಂತೆ ಎಂದು ಪ್ರಧಾನಿ ಹೇಳಿದರು. मुझे प्रसन्नता है कि जिस प्रकार हमारी नई संसद की गैलरियां भारत के…
ಶ್ರೀಕಾಕುಳಂ ಜಿಲ್ಲೆಯ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಭೀಕರ ಕಾಲ್ತುಳಿತ; 10ಕ್ಕೂ ಹೆಚ್ಚು ಮಂದಿ ಸಾವು
ಜನಸಂದಣಿ ಸೇರುವ ಸ್ಥಳಗಳಲ್ಲಿ ಕಾಲ್ತುಳಿತ ಘಟನೆಗಳು ಮರುಕಳಿಸುತ್ತಲೇ ಇದ್ದು, ಕಾರ್ತಿಕ ಮಾಸದ ಏಕಾದಶಿ ಸಂದರ್ಭದ ಕೈಂಕರ್ಯ 10ಕ್ಕೂ ಹೆಚ್ಚು ಜನರ ಸಾವಿಗೆ ಸಾಕ್ಷಿಯಾಯಿತು. . ಪ್ರಾರ್ಥನೆ ಸಲ್ಲಿಸಲು ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಸೇರಿದ್ದ ಸಮಯದಲ್ಲಿ ದುರಂತ ಸಂಭವಿಸಿದೆ. ಶ್ರೀಕಾಕುಳಂ ಜಿಲ್ಲೆಯ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಶನಿವಾರ ಈ ದುರ್ಘಟನೆ ಸಂಭವಿಸಿದೆ. TRAGIC NEWS 9 people DIED and several others INJURED after a STAMPEDE at Venkateswara Swamy Mandir in Kasibugga, Srikakulam (Andhra Pradesh) during Ekadashi celebrations of devotees. — PRAYERS pic.twitter.com/6owZPIdOxd — Megh Updates ™ (@MeghUpdates) November 1, 2025 ಕರ್ನೂಲ್ ಬಸ್ ದುರಂತದ ಕಹಿ ನೆನಪು ಮಾಸುವ ಮುನ್ನವೇ ಆಂಧ್ರ ಪ್ರದೇಶದಲ್ಲಿ ಮತ್ತೊಂದು ಭೀಕರ ದುರಂತ ಇದಾಗಿದೆ. ಶ್ರೀಕಾಕುಳಂ ಜಿಲ್ಲೆಯ ಕಾಶಿಬುಗ್ಗ…
ಸೋನಿಯಾ, ರಾಹುಲ್ ಒತ್ತಡಕ್ಕೆ ಮಣಿದು RSS ನಿಷೇಧಕ್ಕೆ ಖರ್ಗೆ ಆಗ್ರಹ; AICC ಅಧ್ಯಕ್ಷ ಖರ್ಗೆಗೆ ಶೋಭಾ ತರಾಟೆ
ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ನಿಷೇಧಿಸಬೇಕೆಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೀಡಿದ ಹೇಳಿಕೆಗೆ ಪ್ರತಿಕ್ರಿಯಿಸಿರುವ ಕೇಂದ್ರ ಸಚಿವ ಶೋಭಾ ಕರಂದ್ಲಾಜೆ, “ಈ ಹೇಳಿಕೆ ಖರ್ಗೆ ಅವರದೇ ಅಲ್ಲ, ಅದು ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರ ಒತ್ತಡದ ಫಲ” ಎಂದು ಟೀಕಿಸಿದ್ದಾರೆ. ಬೆಂಗಳೂರಿನ ಬಿಜೆಪಿ ಪ್ರಧಾನ ಕಚೇರಿಯಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ನಾನು ಖರ್ಗೆ ಅವರನ್ನು ಗೌರವಿಸುತ್ತೇನೆ. ಅವರು ರಾಷ್ಟ್ರ ಮಟ್ಟದ ಹಿರಿಯ ರಾಜಕಾರಣಿ. ಆದರೆ ಅವರ ಪಕ್ಷದಲ್ಲಿ ಒಂದು ಕುಟುಂಬದ ಪ್ರಭಾವದಿಂದ ಅವರು ಸ್ವತಂತ್ರವಾಗಿ ಯೋಚಿಸಲು ಸಾಧ್ಯವಾಗುತ್ತಿಲ್ಲ. ತಮ್ಮ 50 ವರ್ಷಗಳ ರಾಜಕೀಯ ಜೀವನದಲ್ಲಿ ಅವರು ಆರ್‌ಎಸ್‌ಎಸ್ ವಿರುದ್ಧ ಒಂದೇ ಸಲವೂ ಮಾತನಾಡಿಲ್ಲ” ಎಂದು ಹೇಳಿದರು. “ಜವಾಹರಲಾಲ್ ನೆಹರು ಮತ್ತು ಇಂದಿರಾ ಗಾಂಧಿ ಯವರಿಂದಲೂ ಆರ್‌ಎಸ್‌ಎಸ್ ನಿಷೇಧಿಸಲು ಸಾಧ್ಯವಾಗಲಿಲ್ಲ. ಹಾಗಿದ್ದಾಗ ನಿಮ್ಮಿಂದ ಅದು ಸಾಧ್ಯವೇ? ಏನು ಪ್ರಶ್ನಿಸಿದ ಶೋಭಾ, ಈ…
ಕನ್ನಡದಲ್ಲೇ ರಾಜ್ಯೋತ್ಸವ ಶುಭ ಹಾರೈಸಿದ ಮೋದಿ
ನವದೆಹಲಿ: ಕರುನಾಡು ಮಾತ್ರವಲ್ಲ ಎಲ್ಲೆಡೆ ಕನ್ನಡಿಗರು ರಾಜ್ಯೋತ್ಸವ ಸಡಗರದಲ್ಲಿ ಇದ್ದಾರೆ. ಎಲ್ಲೆಲ್ಲೂ ಕನ್ನಡಮ್ಮನ ಉತ್ಸವ ಸಾಗಿದೆ. ಗಣ್ಯಾತಿಗಣ್ಯರು ಶುಭಾಶಯ ಕೋರುತ್ತಿದ್ದಾರೆ. ಇದೇ ವೇಳೆ, ಪ್ರಧಾನಿ ನರೇಂದ್ರ ಮೋದಿಯವರು ಕನ್ನಡಲ್ಲೇ ಕನ್ನಡಿಗರಿಗೆ ಶುಭ ಹಾರಿಸಿ ಗಮನಸೆಳೆದಿದ್ದಾರೆ. ‘ನಾವು ಕನ್ನಡ ರಾಜ್ಯೋತ್ಸವವನ್ನು ಆಚರಿಸುತ್ತಿರುವಾಗ, ಕರ್ನಾಟಕದ ಜನರಿಗೆ ಪ್ರತೀಕವಾಗಿರುವ ಶ್ರೇಷ್ಠತೆ ಮತ್ತು ಶ್ರಮಶೀಲ ಸ್ವಭಾವವನ್ನು ನಾವು ಆಚರಿಸುತ್ತೇವೆ. ಸಾಹಿತ್ಯ, ಕಲೆ, ಸಂಗೀತ ಮತ್ತಿತರ ಕ್ಷೇತ್ರಗಳಲ್ಲಿ ಪ್ರತಿಫಲಿಸುವ ಕರ್ನಾಟಕದ ಶ್ರೀಮಂತ ಸಂಸ್ಕೃತಿಯನ್ನು ಸಹ ನಾವು ಆಚರಿಸುತ್ತೇವೆ. ಈ ರಾಜ್ಯವು ಜ್ಞಾನದಲ್ಲಿ ಅಡಗಿರುವ ಪ್ರಗತಿಯ ಮನೋಭಾವವನ್ನು ಪ್ರತಿಬಿಂಬಿಸುತ್ತದೆ. ರಾಜ್ಯದ ಜನರು ಸಂತೋಷ ಮತ್ತು ಆರೋಗ್ಯದಿಂದ ಇರಲಿ ಎಂದು ಪ್ರಾರ್ಥಿಸುತ್ತೇನೆ’ ಎಂದು ನರೇಂದ್ರ ಮೋದಿ ಸಾಮಾಜಿಕ ಮಾಧ್ಯಮ ‘X’ ನಲ್ಲಿ ಪೋಸ್ಟ್ ಹಾಕಿದ್ದಾರೆ. ಇಂದು, ನಾವು ಕನ್ನಡ ರಾಜ್ಯೋತ್ಸವವನ್ನು ಆಚರಿಸುತ್ತಿರುವಾಗ, ಕರ್ನಾಟಕದ ಜನರಿಗೆ ಪ್ರತೀಕವಾಗಿರುವ ಶ್ರೇಷ್ಠತೆ ಮತ್ತು ಶ್ರಮಶೀಲ ಸ್ವಭಾವವನ್ನು ನಾವು ಆಚರಿಸುತ್ತೇವೆ. ಸಾಹಿತ್ಯ, ಕಲೆ,…
ರಾಮನಗರ ಬಳಿ ರೆವ್ ಪಾರ್ಟಿ; ಪೋಲೀಸ್ ದಾಳಿ, 115 ಮಂದಿ ವಶಕ್ಕೆ
ರಾಮನಗರ: ವಾರಾಂತ್ಯದಲ್ಲಿ ಆಯೋಜಿತವಾಗಿದ್ದ ರೆವ್ ಪಾರ್ಟಿ ಮೇಲೆ ಪೊಲೀಸರು ಕ್ಷಿಪ್ರ ದಾಳಿ ಮಾಡಿ ಹಲವರನ್ನು ಬಂಧಿಸಿದ್ದಾರೆ. ರಾಮನಗರ ಹೊರವಲಯದ ಖಾಸಗಿ ರೆಸಾರ್ಟ್‌ನಲ್ಲಿ ರೇವ್ ಪಾರ್ಟಿ ನಡೆಯುತ್ತಿದ್ದ ಬಗ್ಗೆ ಮಾಹಿತಿ ಪಡೆದ ಬೆಂಗಳೂರು ದಕ್ಷಿಣ ಎಸ್‌ಪಿ ಶ್ರೀನಿವಾಸ್ ಗೌಡ ನೇತೃತ್ವದಲ್ಲಿ ಪೊಲೀಸರು ಶುಕ್ರವಾರ ದಿಢೀರ್ ದಾಳಿ ನಡೆಸಿದಾರು. ದೇವಿಗೆರೆ ಕ್ರಾಸ್ ಸಮೀಪದಲ್ಲಿರುವ ರೆಸಾರ್ಟ್‌ನಲ್ಲಿ ರಾತ್ರಿ ರೇವ್ ಪಾರ್ಟಿ ನಡೆಯುತ್ತಿತ್ತು ಎನ್ನಲಾಗಿದೆ. ಪೊಲೀಸರು 115 ಮಂದಿಯನ್ನು ವಶಕ್ಕೆ ಪಡೆದಿದ್ದಾರೆ. ಅವರಲ್ಲಿ 35 ಯುವತಿಯರು ಸೇರಿದ್ದಾರೆ. ಎನ್ನಲಾಗಿದೆ.
ಅಲೆಮಾರಿ ಸಮುದಾಯಗಳಿಗೆ ಸಾಮಾಜಿಕ ನ್ಯಾಯ ಕಲ್ಪಿಸಲು ಸರ್ಕಾರ ಬದ್ಧ; ಸಿಎಂ ಭರವಸೆ
ಬೆಂಗಳೂರು: ಅಲೆಮಾರಿ ಸಮುದಾಯಗಳಿಗೆ ಸಾಮಾಜಿಕ ನ್ಯಾಯ ಕಲ್ಪಿಸಲು ಸರ್ಕಾರ ಬದ್ಧ ಎಂದು ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ. ಒಳಮೀಸಲಾತಿಗೆ ಸಂಬಂಧಿಸಿದಂತೆ ಅಲೆಮಾರಿ ಒಕ್ಕೂಟದ ಪದಾಧಿಕಾರಿಗಳ ನಿಯೋಗದ ಜೊತೆಗಿನ ಸಭೆಯ ಬಳಿಕ ಮಾತನಾಡಿದ ಸಿದ್ದರಾಮಯ್ಯ, ಮುಖ್ಯಮಂತ್ರಿ ಅಲೆಮಾರಿ ಸಮುದಾಯಗಳಿಗೆ ಸಾಮಾಜಿಕ ನ್ಯಾಯ ಕಲ್ಪಿಸಲು ಸರ್ಕಾರ ಬದ್ಧವಾಗಿದ್ದು, ಶೇಕಡ 1ರಷ್ಟು ಮೀಸಲಾತಿಯನ್ನು ಯಾವ ರೀತಿಯಲ್ಲಿ ಕಲ್ಪಿಸಬಹುದು ಎಂಬ ಬಗ್ಗೆ ಪರಿಶೀಲಿಸಿ ಕ್ರಮ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದರು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಸುಧಾರಣೆಗೆ ಎಸ್‌ಸಿಪಿ /ಟಿಎಸ್‌ಪಿ ಕಾರ್ಯ ಕ್ರಮಗಳನ್ನು ಜಾರಿಗೊಳಿಸಿದ್ದೇ ನಮ್ಮ ಸರ್ಕಾರ. ಪ್ರತಿಯೊಬ್ಬರಿಗೂ ನ್ಯಾಯ ಸಿಗಲಿ ಎನ್ನುವುದೇ ಸರ್ಕಾರದ ಉದ್ದೇಶ. ಯಾವುದೇ ಜಾತಿಯೊಳಗೆ ಇನ್ನೊಂದನ್ನು ಸೇರಿಸುವ, ಯಾವುದೇ ಸಮುದಾಯಕ್ಕೆ ಅನ್ಯಾಯ ಮಾಡುವ ಉದ್ದೇಶ ಸರ್ಕಾರಕ್ಕಿಲ್ಲ. ಇದಕ್ಕೊಂದು ಪರಿಹಾರ ಹುಡುಕಿ, ನ್ಯಾಯ ಒದಗಿಸುತ್ತೇವೆ ಎಂದು ಆಶ್ವಾಸನೆ ನೀಡಿದರು. ಒಳಮೀಸಲಾತಿ ಕಲ್ಪಿಸಲು ಸರ್ಕಾರ ಪ್ರಾಮಾಣಿಕ ಪ್ರಯತ್ನ ಮಾಡಿದೆ. ಈಗ ಉಂಟಾಗಿರುವ…
ರಾಜ್ಯದ ವಿವಿಗಳಿಗೆ ಬಸವಣ್ಣ, ಕನಕದಾಸ, ಒಡೆಯರ್, ಅರಸು ನಾಮಕರಣಕ್ಕೆ ಸಿಎಂ ಸೂಚನೆ
ಬೆಂಗಳೂರು: ರಾಜ್ಯದ ವಿಶ್ವವಿದ್ಯಾಲಯಗಳಿಗೆ ವಿಶ್ವಗುರು ಬಸವಣ್ಣ, ಕನಕದಾಸ, ನಾಲ್ವಡಿ ಕೃಷ್ಣರಾಜ ಒಡೆಯರ್ ಹಾಗೂ ಡಿ.ದೇವರಾಜ ಅರಸು ಹೆಸರುಗಳನ್ನು ನಾಮಕರಣ ಮಾಡುವ ಕುರಿತು ಕ್ರಮ ಕೈಗೊಳ್ಳಲು ಮುಖ್ಯ ಕಾರ್ಯದರ್ಶಿಗೆ ಸಿಎಂ ಸಿದ್ದರಾಮಯ್ಯ ಸೂಚಿಸಿದ್ದಾರೆ. ರಾಜ್ಯದ ವಿವಿಧ ವಿಶ್ವವಿದ್ಯಾಲಯಗಳಿಗೆ ಆದಿಕವಿ ಮಹರ್ಷಿ ವಾಲ್ಮೀಕಿ, ಅಕ್ಕಮಹಾದೇವಿ, ರಾಣಿ ಚನ್ನಮ್ಮ, ಕೃಷ್ಣದೇವರಾಯ, ಕುವೆಂಪು, ವಿಶ್ವೇಶ್ವರಯ್ಯ, ಗಂಗೂಬಾಯಿ ಹಾನಗಲ್, ರಾಜೀವ್ ಗಾಂಧಿ ಹಾಗೂ ಮನಮೋಹನ್ ಸಿಂಗ್ ಅವರುಗಳ ಗಳ ಹೆಸರುಗಳನ್ನು ಈಗಾಗಲೇ ನಾಮಕರಣ ಮಾಡಲಾಗಿದೆ. ಸಾಮಾಜಿಕ ನ್ಯಾಯದ ಹರಿಕಾರರೆಂದು ಹೆಸರಾಗಿರುವ ವಿಶ್ವಗುರು-ಸಾಂಸ್ಕೃತಿಕ ನಾಯಕ ಬಸವಣ್ಣನವರು, ಶೂದ್ರ ಸಿದ್ಧಾಂತದ ಹರಿಕಾರರಾದ ಕನಕದಾಸರು, ಹಿಂದುಳಿದ ಸಮುದಾಯಗಳಿಗೆ ಚೈತನ್ಯ ನೀಡಿದ ರಾಜ್ಯದ ಅಭಿವೃದ್ಧಿಗೆ ಚಲನಶೀಲತೆ ತಂದ ನಾಲ್ವಡಿ ಕೃಷ್ಣರಾಜ ಒಡೆಯರ್ ಮತ್ತು ದೇವರಾಜ ಅರಸು ಅವರ ಹೆಸರುಗಳನ್ನು ರಾಜ್ಯದ ವಿವಿಧ ವಿಶ್ವವಿದ್ಯಾಲಯಗಳಿಗೆ ನಾಮಕರಣ ಮಾಡುವ ಅಗತ್ಯವಿದೆ ಎಂದವರು ಪ್ರತಿಪಾದಿಸಿದ್ದಾರೆ. ಈ ಕುರಿತು ಪರಿಶೀಲಿಸಿ, ಸೂಕ್ತ ಪ್ರಸ್ತಾವನೆಯನ್ನು ಮುಂದಿನ ಸಚಿವ…
‘ಟಾಕ್ಸಿಕ್’ ಸಿನಿಮಾ ಬಿಡುಗಡೆಗೆ ಮುಹೂರ್ತ ಫಿಕ್ಸ್; ಮಾರ್ಚ್ 19ರಂದು ತೆರೆಗೆ
ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ಆಕ್ಷನ್ ಡ್ರಾಮಾ ‘ಟಾಕ್ಸಿಕ್: ಎ ಫೇರಿ ಟೇಲ್ ಫಾರ್ ಗ್ರೋನ್-ಅಪ್ಸ್’ ಚಿತ್ರವು 2026ರ ಮಾರ್ಚ್ 19ರಂದು ವಿಶ್ವಾದ್ಯಂತ ಬಿಡುಗಡೆ ಆಗಲಿದೆ ಎಂದು ಅಧಿಕೃತವಾಗಿ ಘೋಷಿಸಲಾಗಿದೆ. ಚಿತ್ರದ ಬಿಡುಗಡೆ ಮುಂದೂಡಲ್ಪಟ್ಟಿದೆ ಎಂಬ ವದಂತಿಗಳಿಗೆ ತೆರೆ ಬೀಳಿಸಿದ್ದು, ಪ್ರಸಿದ್ಧ ಚಲನಚಿತ್ರ ವಿಶ್ಲೇಷಕ ತರಣ್ ಆದರ್ಶ್ ತಮ್ಮ ಸಾಮಾಜಿಕ ಮಾಧ್ಯಮದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಅವರು ನಿರ್ಮಾಪಕರೊಂದಿಗೆ ಮಾತನಾಡಿದ ನಂತರ “ಚಿತ್ರವು ನಿಗದಿತ ವೇಳಾಪಟ್ಟಿಯಂತೆ ಸಾಗುತ್ತಿದೆ” ಎಂದು ದೃಢಪಡಿಸಿದ್ದಾರೆ. ತರಣ್ ಆದರ್ಶ್ಅವರು ಸಾಮಾಜಿಕ ಮಾಧ್ಯಮದಲ್ಲಿ ಮಾಹಿತಿ ಹಂಚಿಕೊಂಡಿದ್ದು, “ವದಂತಿಗಳನ್ನು ನಿಲ್ಲಿಸಿ! ಯಶ್ ಅವರ ಮುಂದಿನ ಚಿತ್ರ ‘ಟಾಕ್ಸಿಕ್’ ವಿಳಂಬವಾಗಿಲ್ಲ ಅಥವಾ ಮುಂದೂಡಲ್ಪಟ್ಟಿಲ್ಲ. ಬಿಡುಗಡೆ ದಿನಾಂಕ — ಮಾರ್ಚ್ 19, 2026 — ಸ್ಥಿರವಾಗಿದೆ. ಯುಗಾದಿ, ಗುಡಿ ಪಾಡ್ವಾ ಮತ್ತು ಈದ್ ಹಬ್ಬದ ವಾರಾಂತ್ಯಕ್ಕೆ ಇದು ಪರಿಪೂರ್ಣ ಸಮಯ. ಮುಂಬೈನಲ್ಲಿ ಯಶ್ ‘ರಾಮಾಯಣ’ ಚಿತ್ರೀಕರಣ ಮಾಡುತ್ತಿದ್ದ…
