RSS ನಡೆನುಡಿಗಳೇ ನಿಗೂಢ’; ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು: RSS ನಂತಹ ಸಂಘಟನೆಗಳನ್ನು ನಿಗ್ರಹಿಸಿದಾಗ ಮೂಲಭೂತವಾದವನ್ನು ನಿಗ್ರಹಿಸಿದಂತಾಗುತ್ತದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. RSS ನಿಷೇಧ ಕುರಿತ ತಮ್ಮ ಸಮರ್ಥಿಸಿ ಸಾಮಾಜಿಕ ಜಾಲತಾಣ ‘X’ನಲ್ಲಿ ಪೋಸ್ಟ್ ಹಾಕಿರುವ ಪ್ರಿಯಾಂಕ್ ಖರ್ಗೆ, ‘ನಾನು ಮೂಲಭೂತವಾದದ ವಿರೋಧಿಯೇ ಹೊರತು ಯಾವುದೇ ಧರ್ಮಶ್ರದ್ದೆಯ ವಿರೋಧಿಯಲ್ಲ’ ಎಂದಿದ್ದಾರೆ. ‘ಯಾವುದೇ ಒಂದು ಸಂಸ್ಥೆ ಅಥವಾ ಸಂಘಟನೆ ತಾವು ಯಾವ ಕ್ಷೇತ್ರದಲ್ಲಿ ಕೆಲಸ ಮಾಡುತ್ತೇವೆ ಎಂಬುದನ್ನು ಸ್ಪಷ್ಟಪಡಿಸಬೇಕಾಗುತ್ತದೆ. ಆದರೆ RSS ತಮ್ಮದು ಧಾರ್ಮಿಕ ಸಂಘಟನೆಯಲ್ಲ ಎನ್ನುತ್ತದೆ, ಧರ್ಮದ ಹೆಸರಲ್ಲಿ ಅವಾಂತರ ಸೃಷ್ಟಿಸುತ್ತದೆ.ತಮ್ಮದು ರಾಜಕೀಯ ಸಂಘಟನೆಯಲ್ಲ ಎನ್ನುತ್ತದೆ, ನೇರಾನೇರಾ ರಾಜಕೀಯ ಮಾಡುತ್ತದೆ. ಹೀಗೆ ಇವರು ನಡೆನುಡಿಗಳೇ ನಿಗೂಢ’ ಎಂದು ಅವರು ವಿಶ್ಲೇಷಿಸಿದ್ದಾರೆ. ಆರ್ಎಸ್ಎಸ್ ನಂತಹ ಸಂಘಟನೆಗಳನ್ನು ನಿಗ್ರಹಿಸಿದಾಗ ಮೂಲಭೂತವಾದವನ್ನು ನಿಗ್ರಹಿಸಿದಂತಾಗುತ್ತದೆ.ನಾನು ಮೂಲಭೂತವಾದದ ವಿರೋಧಿಯೇ ಹೊರತು ಯಾವುದೇ ಧರ್ಮಶ್ರದ್ದೆಯ ವಿರೋಧಿಯಲ್ಲ. ಯಾವುದೇ ಒಂದು ಸಂಸ್ಥೆ ಅಥವಾ ಸಂಘಟನೆ ತಾವು ಯಾವ ಕ್ಷೇತ್ರದಲ್ಲಿ ಕೆಲಸ ಮಾಡುತ್ತೇವೆ ಎಂಬುದನ್ನು…

ರಾಜ್ಯದಲ್ಲಿ 422 ವೈದ್ಯಕೀಯ ಪಿಜಿ ಸೀಟುಗಳ ಸಂಖ್ಯೆ ಹೆಚ್ಚಳ: ಡಾ. ಶರಣ್ ಪ್ರಕಾಶ್ ಪಾಟೀಲ್

ಬೆಂಗಳೂರು, ಆ.18: ರಾಜ್ಯಕ್ಕೆ ಹಬ್ಬಕ್ಕೆ ಮುನ್ನವೇ ದೀಪಾವಳಿ ಸಡಗರ ಬಂದಿದೆ. 2025-26ನೇ ಸಾಲಿನ ಶೈಕ್ಷಣಿಕ ವರ್ಷಕ್ಕೆ ಅನ್ವಯವಾಗುವಂತೆ ಸರಕಾರಿ ವೈದ್ಯಕೀಯ ಕಾಲೇಜುಗಳಲ್ಲಿ 422 ಪಿಜಿ ಸೀಟುಗಳ ಸಂಖ್ಯ ಹೆಚ್ಚಳವಾಗಿದೆ. ಹಲವಾರು ವರ್ಷಗಳ ಬೇಡಿಕೆ ಈಗ ಈಡೇರಿದಂತಾಗಿದೆ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಶಿಕ್ಷಣ ಸಚಿವರಾದ ಡಾ. ಶರಣಪ್ರಕಾಶ ಆರ್. ಪಾಟೀಲ್ ತಿಳಿಸಿದ್ದಾರೆ. ವಿಕಾಸಸೌಧದಲ್ಲಿ ಶನಿವಾರ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಚಿವರು ಈ ಕುರಿತು ಮಾಹಿತಿ ನೀಡಿದರು. ಉತ್ತಮ ಗುಣಮಟ್ಟದ ಉನ್ನತ ಶಿಕ್ಷಣ ನೀಡುವುದೇ ನಮ್ಮ ಸರ್ಕಾರದ ಗುರಿ ಎಂದು ಸಚಿವರು ಇದೇ ಸಂದರ್ಭದಲ್ಲಿ ಸ್ಪಷ್ಟಪಡಿಸಿದರು. ಪ್ರೀ ಕ್ಲೀನಿಕಲ್‌, ಪ್ಯಾರಾ ಕ್ಲೀನಿಕಲ್‌ ಮತ್ತು ಕ್ಲೀನಿಕಲ್‌ ವಿಭಾಗಕ್ಕೆ ಒಟ್ಟು 422 ಪಿಜಿ ಸೀಟುಗಳ ಹೆಚ್ಚಳ ಮಾಡಲಾಗಿದೆ ಎಂದು ಡಾ. ಪಾಟೀಲ್‌ ವಿವರಿಸಿದರು. ಪೀಡಿಯಾಟ್ರಿಕ್ಸ್‌, ಅನಸ್ತೇಸಿಯಾ, ಫೋರೆನ್ಸಿಕ್‌ ಮೆಡಿಸಿನ್‌, ಮೈಕ್ರೊ ಬಯಲಾಜಿ ಸೇರಿದಂತೆ ಇಪ್ಪತ್ತಕ್ಕೂ…

RSS ಬಗ್ಗೆ ಎಚ್ಚರಿಕೆಯಿಂದ ಇರಬೇಕು ಎಂದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಸಂಘ ಪರಿವಾರ ಮತ್ತು ಆರ್.ಎಸ್.ಎಸ್ ನವರು ಅಂಬೇಡ್ಕರ್ ಅವರ ಸಂವಿಧಾನವನ್ನು ಹಿಂದೆಯೂ ವಿರೋಧಿಸಿದ್ದರು, ಈಗಲೂ ವಿರೋಧಿಸುತ್ತಿದ್ದಾರೆ. ಹೀಗಾಗಿ ಇವರ ಬಗ್ಗೆ ಎಚ್ಚರಿಕೆ ಇಂದ ಇರಬೇಕು ಎಂದು ಸಿಎಂ ಸಿದ್ದರಾಮಯ್ಯ ಪ್ರತಿಪಾದಿಸಿದ್ದಾರೆ. ಮೈಸೂರು ವಿಶ್ವ ವಿದ್ಯಾಲಯದ ರಜತ ಮಹೋತ್ಸವ ಹಾಗೂ ನೂತನ ಜ್ಞಾನ ದರ್ಶನ ಕಟ್ಟಡವನ್ನು ಉದ್ಘಾಟಿಸಿದ ಅವರು, ಅಂಬೇಡ್ಕರ್ ಅವರು ತಮ್ಮ ಜ್ಞಾನವನ್ನು ಸಮಾಜದ ಬದಲಾವಣೆಗೆ ಬಳಸಿದ ಮಹಾನ್ ಚೇತನ. ಇವರು ಸಮಾಜವನ್ನು ಅರ್ಥ ಮಾಡಿಕೊಳ್ಳಲು ಜ್ಞಾನ‌ ಸಂಪಾದನೆ ಮಾಡಿದರು. ಬಳಿಕ ತಮ್ಮ ಜ್ಞಾನವನ್ನು ಬದುಕಿನುದ್ದಕ್ಕೂ ಸಮಾಜದ ಬದಲಾವಣೆಗೆ ಬಳಸಿದರು ಎಂದರು. ಅಂಬೇಡ್ಕರ್ ಅವರ ಹೆಸರಲ್ಲಿ ಬಿಜೆಪಿಯವರು, ಸಂಘ ಪರಿವಾರದವರು ಅಪಪ್ರಚಾರ ಮಾಡುತ್ತಿದ್ದಾರೆ. ಅವರನ್ನು ಚುನಾವಣೆಯಲ್ಲಿ ಸೋಲಿಸಿದ್ದು ಕಾಂಗ್ರೆಸ್ ಎಂದು ಅಪಪ್ರಚಾರ ಮಾಡುತ್ತಿದ್ದಾರೆ. ಆದರೆ, ಸತ್ಯ ಏನೆಂದರೆ “ನನ್ನನ್ನು ಚುನಾವಣೆಯಲ್ಲಿ ಸೋಲಿಸಿದ್ದು ಸಾವರ್ಕರ್ ಮತ್ತು ಡಾಂಗೆ” ಎಂದು ಸ್ವತಃ ಅಂಬೇಡ್ಕರ್ ಅವರೇ ತಮ್ಮದೇ ಹಸ್ತಾಕ್ಷರದಲ್ಲಿ ಬರೆದಿದ್ದಾರೆ.…

RSS ಚಟುವಟಿಕೆ ನಿಷೇಧ: ಜನರ ಹಾದಿ ತಪ್ಪಿಸುವುದರಲ್ಲಿ ಬಿಜೆಪಿಗರು ನಿಸ್ಸೀಮರು ಎಂದ ಸಚಿವ

ಬೆಂಗಳೂರು: ಸರಕಾರಿ ಸ್ಥಳಗಳಲ್ಲಿ ಯಾವುದೇ ಸಂಘ ಸಂಸ್ಥೆಗಳು ಚಟುವಟಿಕೆ ನಡೆಸಬೇಕಾದರೆ ಸಂಬಂಧಪಟ್ಟ ಸ್ಥಳೀಯ ಸಂಸ್ಥೆಗಳ ಅನುಮತಿ ಪಡೆಯಬೇಕು ಎಂಬ ಸಚಿವ ಸಂಪುಟದ ತೀರ್ಮಾನ ಸಮರ್ಥನೀಯ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಶಿಕ್ಷಣ ಸಚಿವರಾದ ಡಾ. ಶರಣಪ್ರಕಾಶ ಆರ್. ಪಾಟೀಲ್ ತಿಳಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ರಾಜಕೀಯ ವಿದ್ಯಮಾನಗಳ ಕುರಿತಾಗಿಯೂ ಸಚಿವರು ಪ್ರತಿಕ್ರಿಯೆ ನೀಡಿದ ಶರಣಪ್ರಕಾಶ ಪಾಟೀಲ್, ‘ನಮ್ಮ ಸರ್ಕಾರ ಜಾರಿಗೆ ಈ ನಿಷೇಧ ಹೇರಿಲ್ಲ. ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರ ಅಧಿಕಾರಾವಧಿಯಲ್ಲಿ ಜಾರಿಗೆ ತರಲಾಗಿತ್ತು. ಇದನ್ನು ನಮ್ಮ ಸರ್ಕಾರ ಅನುಷ್ಠಾನ ಮಾಡಿದೆಯಷ್ಟೇ. ಮಾಡಲು ಕೆಲಸವಿಲ್ಲದ ಬಿಜೆಪಿಯವರು ಜನರಲ್ಲಿ ಗೊಂದಲ ಸೃಷ್ಟಿಸಲು ಯತ್ನಿಸುತ್ತಿದ್ದಾರೆ’ ಎಂದು ತಿರುಗೇಟು ನೀಡಿದರು. ಗ್ರಾಮೀಣಭಿವೃದ್ದಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರು ಆರೆಸ್ಸೆಸ್‌ ನಿಷೇಧ ಮಾಡಬೇಕು ಎಂದು ಎಲ್ಲಿಯೂ ಹೇಳಿಲ್ಲ.ಎಲ್ಲರೂ ಅವರ ಮಾತನ್ನ ತಪ್ಪಾಗಿ ಅರ್ಥೈಸಿಕೊಂಡಿದ್ದಾರೆ.…

ಮಾವೋವಾದಿಗಳ ಶರಣಾಗತಿ: ಈ ಬಾರಿ ʻಒಲಿಂಪಿಕ್ಸ್ʼ ತಯಾರಿ — ಪ್ರಧಾನಿ ಮೋದಿ

ನವದೆಹಲಿ: “ಕಳೆದ 24 ಗಂಟೆಗಳಲ್ಲಿ 300 ಕ್ಕೂ ಹೆಚ್ಚು ಮಾವೋವಾದಿಗಳು ಶರಣಾಗಿದ್ದಾರೆ. ಒಂದು ಕಾಲದಲ್ಲಿ ಬಾಂಬ್‌ ಸ್ಫೋಟಗಳು ಮತ್ತು ಹತ್ಯೆಗಳ ನೆಲವಾಗಿದ್ದ ಪ್ರದೇಶದಲ್ಲಿ ಈಗ ʻಒಲಿಂಪಿಕ್ಸ್ʼ ಕ್ರೀಡಾಕೂಟದ ತಯಾರಿ ನಡೆಯುತ್ತಿದೆ. ಇದು ದೇಶದ ಶಾಂತಿ ಮತ್ತು ಅಭಿವೃದ್ಧಿಯ ದಿಕ್ಕಿನಲ್ಲಿ ದೊಡ್ಡ ಬದಲಾವಣೆಯ ಸಂಕೇತ,” ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ. ವಿಶ್ವ ಶೃಂಗಸಭೆಯಲ್ಲಿ ಮಾತನಾಡಿದ ಅವರು, ಕಳೆದ 50–55 ವರ್ಷಗಳಲ್ಲಿ ಮಾವೋವಾದಿಗಳು ಸಾವಿರಾರು ಜನರ ಪ್ರಾಣ ಹಿಂಡಿದ್ದು, ಶಾಲೆ ಮತ್ತು ಆಸ್ಪತ್ರೆಗಳ ನಿರ್ಮಾಣಕ್ಕೂ ಅಡ್ಡಿಪಡಿಸಿದ್ದರು ಎಂದು ಹೇಳಿದರು. ಅವರ ಭಯೋತ್ಪಾದನೆಯಿಂದ ಅನೇಕ ಯುವಜನರು ಅನ್ಯಾಯಕ್ಕೆ ಒಳಗಾದರು ಎಂದು ಪ್ರಧಾನಿ ನೆನಪಿಸಿದರು. “ನಮ್ಮ ಸರ್ಕಾರ ದಾರಿ ತಪ್ಪಿದ ಯುವಕರನ್ನು ಸಮಾಜದ ಮುಖ್ಯವಾಹಿನಿಗೆ ತರಲು ನಿರಂತರ ಪ್ರಯತ್ನ ನಡೆಸಿದೆ. ಈಗ ಆ ಪ್ರಯತ್ನದ ಫಲವಾಗಿ 303 ನಕ್ಸಲರು ಶರಣಾಗಿದ್ದಾರೆ. ಛತ್ತೀಸ್‌ಗಢದಲ್ಲಿ ಒಂದೇ ದಿನದಲ್ಲಿ 170 ನಕ್ಸಲರು ಶರಣಾದರು. ಇವರಲ್ಲಿ ಅನೇಕರ…

ಕದನ ವಿರಾಮ ಉಲ್ಲಂಘಿಸಿದ ಪಾಕ್; ಕಾಬೂಲ್ ಮೇಲೆ ಬಾಂಬ್ ದಾಳಿ;

ಕಾಬುಲ್: ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನ ನಡುವೆ ಮತ್ತೆ ಉದ್ವಿಗ್ನತೆ ಹೆಚ್ಚಾಗಿದೆ. ಕದನ ವಿರಾಮವನ್ನು ಉಲ್ಲಂಘಿಸಿದ ಪಾಕಿಸ್ತಾನ, ಅಫ್ಘಾನಿಸ್ತಾನದ ನೆಲದಲ್ಲಿ ವೈಮಾನಿಕ ದಾಳಿ ನಡೆಸಿ ಕ್ರೌರ್ಯ ಪ್ರದರ್ಶಿಸಿದೆ. ಪಾಕಿಸ್ತಾನ ನಡೆಸಿದ ಈ ದಾಳಿಯಲ್ಲಿ 10 ಮಂದಿ ನಾಗರಿಕರು ಸಾವನ್ನಪ್ಪಿದ್ದು, 12ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಮೃತರಲ್ಲಿ ಇಬ್ಬರು ಮಕ್ಕಳು ಸೇರಿದ್ದಾರೆ ಎಂದು ಸ್ಥಳೀಯ ಮೂಲಗಳು ತಿಳಿಸಿವೆ. ಪಾಕಿಸ್ತಾನವು ಪಕ್ಟಿಕಾ ಪ್ರಾಂತ್ಯದ ಮೂರು ಭಾಗಗಳಲ್ಲಿ ಬಾಂಬ್ ದಾಳಿ ನಡೆಸಿದ್ದು, ಇದು ಎರಡೂ ದೇಶಗಳ ನಡುವಿನ ಶಾಂತಿ ಪ್ರಯತ್ನಗಳಿಗೆ ದೊಡ್ಡ ಹೊಡೆತ ನೀಡಿದೆ. ಈ ಕ್ರಮಕ್ಕೆ ಪ್ರತಿಕ್ರಿಯಿಸಿದ ಅಫ್ಘಾನಿಸ್ತಾನದ ತಾಲಿಬಾನ್ ಸರ್ಕಾರ, “ಪಾಕಿಸ್ತಾನ ಕದನ ವಿರಾಮವನ್ನು ಮುರಿದಿದೆ; ನಾವು ಪ್ರತೀಕಾರ ತೀರಿಸಿಕೊಳ್ಳುತ್ತೇವೆ” ಎಂದು ಎಚ್ಚರಿಕೆ ನೀಡಿದೆ. ಎರಡು ರಾಷ್ಟ್ರಗಳ ಗಡಿಭಾಗದಲ್ಲಿ ಕಳೆದ ಕೆಲವು ವಾರಗಳಿಂದಲೂ ಉದ್ವಿಗ್ನತೆ ವಾತಾವರಣ ಮುಂದುವರಿದಿದೆ.

RSS ಗೆ ಸರ್ಕಾರದ ಅಂಕುಶ, ಶುರುವಾಯಿತು “I Love Karnataka’ ಅಭಿಯಾನ

ಬೆಂಗಳೂರು: RSS ವಿರುದ್ದದ ಸಿದ್ದರಾಮಯ್ಯ ಸರ್ಕಾರದ ಪ್ರಹಾರಕ್ಕೆ ಕನ್ನಡ ಕಾರ್ಯಕರ್ತರು ತತ್ತರಗೊಂಡಿದ್ದಾರೆ. ಸಾರ್ವಜನಿಕ ಸ್ಥಳಗಳಲ್ಲಿ ಸಂಘ ಸಂಸ್ಥೆಗಳ ಚಟುವಟಿಕೆ ಮೇಲೆ ರಾಜ್ಯ ಸರ್ಕಾರ ನಿರ್ಬಂಧ ವಿಧಿಸಿರುವ ಕ್ರಮ ಇದೀಗ ರಾಜ್ಯ ಸರ್ಕಾರಕ್ಕೆ ತಿರುಗುಬಾಣ ಎಂಬಂತಾಗಿದೆ. RSS ಮೇಲಿನ ದ್ವೇಷದ ನಡೆಯಿಂದಾಗಿ ಕನ್ನಡ ಸಂಘಟನೆಗಳೂ ಅಸ್ತಿತ್ವ ಕಳೆದುಕೊಳ್ಳುವಂತಾಗಿದೆ ಎಂಬ ಅಭಿಪ್ರಾಯ ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿದೆ. RSSಗೆ ತನ್ನ ಶಾಖೆಯನ್ನು ನಡೆಸಲು ಸಾರ್ವಜನಿಕ ಸ್ಥಳವೇ ಆಗಬೇಕೆಂದಿಲ್ಲ. ಬಹುತೇಕ ಊರುಗಳಲ್ಲಿ ಯಾರದಾದರೂ ಮನೆಗಳಲ್ಲಿ ಶಾಖೆ ಹಾಗೂ ಬೈಠಕ್’ಗಳನ್ನು ನಡೆಸಲಾಗುತ್ತದೆ. ಬಹಿರಂಗ ಸಮಾವೇಶ ಮತ್ತು ಪಾಠ ಸಂಚಲನಗಳು ಮಾತ್ರ ಸಾರ್ವಜನಿಕ ಸ್ಥಳಗಳಲ್ಲಿ ನಡೆಯುತ್ತವೆಯಾದರೂ ಅವು ವರುಷಕ್ಕೊಮ್ಮೆ ಮಾತ್ರ. ಹಾಗಾಗಿ ನಿರ್ಬಂಧದಿಂದ RSSಗೆ ಸಮಸ್ಯೆಯಾಗದು, ಆದರೆ ಇದರ ಪರಿಣಾಮ ಬೀರುವುದು ಕನ್ನಡಿಗರ ಮೇಲೆ. ಕರುನಾಡಿನ ಗಲ್ಲಿಗಲ್ಲಿಗಳಲ್ಲಿ ಕನ್ನಡ ಧ್ವಜ ಹಾರಿಸುವ ಕನ್ನಡಿಗರಿಗೆ ಸಿದ್ದರಾಮಯ್ಯ ಸರ್ಕಾರದ ಈ ದ್ವೇಷದ ನಿಯಮದಿಂದಾಗಿ ಅನ್ಯಾಯವಾಗುತ್ತದೆ. ತಮಿಳುನಾಡು ಸಹಿತ ಹಲವು…

ರಾಣೇಬೆನ್ನೂರು ಬಳಿ ಭೀಕರ ಅಪಘಾತ; ಮೂವರು ದುರ್ಮರಣ

ಹಾವೇರಿ: ರಾಣೇಬೆನ್ನೂರು ತಾಲೂಕಿನ ಕಾಕೋಳ ಗ್ರಾಮದ ಬಳಿ‌ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ನಿಂತಿದ್ದ ಟ್ರ್ಯಾಕ್ಟರ್ ಟ್ರ್ಯಾಕ್ಟರ್ ಟ್ರೈಲರ್ ಗೆ ಟಾಟಾ ಏಸ್ ವಾಹನ ಡಿಕ್ಕಿಯಾಗಿ ಭೀಕರ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. 20 ಜನರಿಗೆ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರನ್ನು ದಾವಣಗೆರೆ ಜಿಲ್ಲೆ ಮಲೇಬೆನ್ನೂರಿನ ನಿವಾಸಿಗಳಾದ ನಿಂಗಮ್ಮ ಜಿಗಳೇರ್ (70), ಚಮನಸಾಬ್ ಕೆರಿಮತ್ತಿಹಳ್ಳಿ (65), ಮಾಬುಸಾಬ್ ದೊಡ್ಡಗುಬ್ಬಿ (65) ಎಂದು ಗುರುತಿಸಲಾಗಿದೆ.

ಬಿಹಾರ ಚುನಾವಣೆಗೆ ಕರ್ನಾಟಕದಿಂದ ಹಣ; ಶೆಟ್ಟರ್ ಆರೋಪ

ಬೆಳಗಾವಿ: ಬಿಹಾರ ವಿಧಾನಸಭಾ ಚುನಾವಣೆಗೆ ಹಣ ಸಂಗ್ರಹಿಸುವ ಉದ್ದೇಶದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಇತ್ತೀಚಿಗೆ ತಮ್ಮ ಸಂಪುಟ ಸಹೋದ್ಯೋಗಿಗಳಿಗೆ ಔತಣಕೂಟ ಆಯೋಜಿಸಿದ್ದರು ಎಂದು ಸಂಸದ ಜಗದೀಶ್ ಶೆಟ್ಟರ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೈಕಮಾಂಡ್ ಸೂಚನೆ ಹಿನ್ನೆಲೆಯಲ್ಲಿ ಬಿಹಾರ ಚುನಾವಣೆಗೆ ಹಣವನ್ನು ಸಂಗ್ರಹಿಸುವ ಉದ್ದೇಶವನ್ನು ಸಿದ್ದರಾಮಯ್ಯ ಈಡೇರಿಸಬೇಕಿದೆ. ಈ ಊದೇಶಕ್ಕಾಗಿ ಅವರು ಮಂತ್ರಿಗಳಿಗೆ ಔತಣಕೂಟವನ್ನು ಆಯೋಜಿಸಿದ್ದ ಪ್ರತಿಯೊಬ್ಬರಲ್ಲೂ ಚುನಾವಣೆಗೆ ಹಣ ನೀಡುವಂತೆ ಕೇಳಿಕೊಂಡಿದ್ದಾರೆ ಎಂದು ಬಾಂಬ್ ಸಿಡಿಸಿದರು. ಕರ್ನಾಟಕವನ್ನು ಚುನಾವಣೆಗೆ ಎಟಿಎಂ ಆಗಿ ಕಾಂಗ್ರೆಸ್ ಹೈಕಮಾಡ್ ಮಾಡಿಕೊಂಡಿದೆ ಎಂದು ಅವರು ದೂರಿದರು. ಸಿಎಂ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸುವಲ್ಲಿ ವಿಫಲರಾಗಿದ್ದಾರೆ ಎಂದು ಆರೋಪಿಸಿದ ಅವರು, ಕಾಂಗ್ರೆಸ್ ರಾಜ್ಯ ಘಟಕದಲ್ಲಿ ಆಂತರಿಕ ಕಚ್ಚಾಟ ಹೆಚ್ಚಿದ್ದು, ಸಿಎಂ ಸ್ಥಾನದ ಬಗ್ಗೆ ಪಕ್ಷದ ಹೈಕಮಾಂಡ್ ತೀರ್ಮಾನ ತೆಗೆದುಕೊಳ್ಳಲಿದೆ ಎಂದು ಶೆಟ್ಟರ್ ವಿಶ್ಲೇಷಿಸಿದರು.

ಭಾರತದ ಸುಸ್ಥಿರ ಯೋಜನೆಗಳಿಗೆ ಇಐಬಿ ಗ್ಲೋಬಲ್‌ನಿಂದ ₹5,200 ಕೋಟಿ ಅನುದಾನ

ನವದೆಹಲಿ: ಯುರೋಪಿಯನ್ ಇನ್ವೆಸ್ಟ್‌ಮೆಂಟ್ ಬ್ಯಾಂಕ್‌ನ ಅಭಿವೃದ್ಧಿ ವಿಭಾಗವಾದ EIB ಗ್ಲೋಬಲ್ ಭಾರತದಲ್ಲಿ ಶುದ್ಧ ನೀರು, ಸುಸ್ಥಿರ ನಗರ ಸಾರಿಗೆ ಮತ್ತು ಹವಾಮಾನ ಕ್ರಮವನ್ನು ಉತ್ತೇಜಿಸಲು ₹5,200 ಕೋಟಿ ಮೌಲ್ಯದ ಮೂರು ಹೊಸ ಹಣಕಾಸು ಪ್ಯಾಕೇಜ್‌ಗಳನ್ನು ಘೋಷಿಸಿದೆ. ಈ ಹೂಡಿಕೆಗಳಲ್ಲಿ, ನಾಗಪುರ ಮತ್ತು ಪುಣೆ ಮೆಟ್ರೋ ವಿಸ್ತರಣೆ ಯೋಜನೆಗಳಿಗೆ ₹3,040 ಕೋಟಿ ಸಾಲವನ್ನು ಒದಗಿಸಲಾಗಿದ್ದು, ಇದು ಎರಡು ನಗರಗಳಲ್ಲಿನ ಹಸಿರು ಸಾರಿಗೆ ವ್ಯವಸ್ಥೆಯನ್ನು ಬಲಪಡಿಸಲು ಮತ್ತು ಟ್ರಾಫಿಕ್ ದಟ್ಟಣೆ ಹಾಗೂ ಮಾಲಿನ್ಯವನ್ನು ತಗ್ಗಿಸಲು ನೆರವಾಗಲಿದೆ. EIB ಗ್ಲೋಬಲ್ ಪ್ರಕಟಣೆಯ ಪ್ರಕಾರ, “ನಾಗಪುರ ಮೆಟ್ರೋ ಕಾರ್ಯಾರಂಭದಿಂದ ಸಾರಿಗೆ ವಲಯದ CO₂ ಹೊರಸೂಸುವಿಕೆಯಲ್ಲಿ ಸುಮಾರು 22% ಇಳಿಕೆಯನ್ನು ಸಾಧಿಸುವ ನಿರೀಕ್ಷೆಯಿದೆ. ಪುಣೆ ಮೆಟ್ರೋ ಜಾಲವು 100 ಮಿಲಿಯನ್‌ಗಿಂತಲೂ ಹೆಚ್ಚು ಪ್ರಯಾಣಿಕರಿಗೆ ಸುರಕ್ಷಿತ ಮತ್ತು ಹಸಿರು ಪ್ರಯಾಣದ ಅವಕಾಶ ಒದಗಿಸುತ್ತದೆ,” ಎಂದು ಹೇಳಲಾಗಿದೆ. ಇದಲ್ಲದೆ, ಉತ್ತರಾಖಂಡದಲ್ಲಿ ನೀರು ಸರಬರಾಜು ಮತ್ತು ನೈರ್ಮಲ್ಯ ಸೇವೆಗಳನ್ನು…