ಮಂಗಳೂರು: ಕರಾವಳಿ ಅಭಿವೃದ್ಧಿಯತ್ತ ರಾಜ್ಯ ಸರ್ಕಾರ ಮತ್ತೊಮ್ಮೆ ದಿಟ್ಟ ಹೆಜ್ಜೆ ಇಟ್ಟಿದೆ. ಮಂಗಳೂರು ಹೊರವಲಯದ ದೇರೆಬೈಲ್‌ನ ಬ್ಲೂಬೆರ್ರಿ ಹಿಲ್ಸ್ ಬಳಿ ವಾಣಿಜ್ಯ ಕಚೇರಿ ಟೆಕ್ ಪಾರ್ಕ್ ಆಗಿ ಸಾರ್ವಜನಿಕ ಖಾಸಗಿ ಸಹಭಾಗಿತ್ವ (ಪಿಪಿಪಿ) ಮಾದರಿಲ್ಲಿ ಅಭಿವೃದ್ಧಿಪಡಿಸಲು ಸಚಿವ ಸಂಪುಟ ನಿರ್ಣಯ ಕೈಗೊಂಡಿದೆ. ರಾಜ್ಯ ಸರ್ಕಾರದ ಈ ನಿರ್ಧಾರವನ್ನು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್.ಪೂಜಾರಿ ಸ್ವಾಗತಿಸಿದ್ದಾರೆ. ಈ ಕುರಿತಂತೆ ಮಾಧ್ಯಮ ಹೇಳಿಕೆ ನೀಡಿರುವ ಪದ್ಮರಾಜ್ ಆರ್.ಪೂಜಾರಿ, ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ತಾಲೂಕಿನ ದೇರೆಬೈಲ್‌ನ ಬ್ಲೂಬೆರ್ರಿ ಹಿಲ್ಸ್ ರಸ್ತೆಯ ಸರ್ವೇ ನಂಬರ್ 129,113ರ 3.285 ಎಕರೆ ಭೂಮಿಯನ್ನು ವಾಣಿಜ್ಯ ಕಚೇರಿ ಟೆಕ್ ಪಾರ್ಕ್ ಆಗಿ ಸಾರ್ವಜನಿಕ ಖಾಸಗಿ ಸಹಭಾಗಿತ್ವ (ಪಿಪಿಪಿ) ಮಾದರಿಯಡಿಯಲ್ಲಿ ವಿನ್ಯಾಸ, ನಿರ್ಮಾಣ, ಹಣಕಾಸು, ಕಾರ್ಯಾಚರಣೆ ಮತ್ತು ವರ್ಗಾವಣೆ (ಡಿಬಿಎಫ್‌ಒಟಿ) ಆಧಾರದ ಮೇಲೆ ಅಭಿವೃದ್ಧಿಪಡಿಸಲು ಸಚಿವ ಸಂಪುಟ ನಿರ್ಣಯಿಸಿರುವುದು ಸ್ವಾಗತಾರ್ಹ ಎಂದಿದ್ದಾರೆ. ಈ ಯೋಜನೆಯಿಂದ ಕರಾವಳಿಯಲ್ಲಿ…
Year: 2025
‘ಋತುಚಕ್ರ ರಜೆ ನೀತಿ’: ಬಹುಕಾಲದ ಬೇಡಿಕೆ ಈಡೇರಿದೆ ಎಂದ ಪದ್ಮರಾಜ್
ಮಂಗಳೂರು: ಕರ್ನಾಟಕದಲ್ಲಿ ದುಡಿಯುವ ಮಹಿಳೆಯರಿಗೆ ಋತುಚಕ್ರದ ರಜೆ ಎಂದು ವರ್ಷದಲ್ಲಿ ಹನ್ನೆರಡು ದಿನ ರಜೆ ನೀಡಲು ಮುಖ್ಯಮಂತ್ರಿ ಸಿದ್ದರಾಮ್ಯನವರ ನೇತೃತ್ವದ ಸರ್ಕಾರ ಒಪ್ಪಿಗೆ ನೀಡಿರುವುದು ಅಭಿನಂದನೀಯ. ಕರ್ನಾಟಕ ರಾಜ್ಯ ಸರ್ಕಾರ ಹೆಣ್ಣು ಮಕ್ಕಳ ಪರವಾಗಿ ಐತಿಹಾಸಿಕ ನಿರ್ಣಯ ಕೈಗೊಂಡಿದೆ ಎಂದು ಪ್ರದೇಶ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಪೂಜಾರಿ ಹೇಳಿದ್ದಾರೆ. ಸಂಪುಟದ ನಿರ್ಧಾರ ಸ್ವಾಗತಿಸಿರುವ ಪದ್ಮರಾಜ್, ಸರ್ಕಾರಿ ಮತ್ತು ಖಾಸಗಿ ವಲಯದಲ್ಲಿ ದುಡಿಯುವ ಎಲ್ಲ ಮಹಿಳೆಯರಿಗೂ ತಿಂಗಳಲ್ಲಿ ಒಂದು ದಿನ ವೇತನ ಸಹಿತ ಋತುಚಕ್ರದ ರಜೆ ನೀಡುವುದರಿಂದ ಮಹಿಳೆಯರ ಆರೋಗ್ಯದ ದೃಷ್ಟಿಯಿಂದಲೂ ಇದೊಂದು ಉತ್ತಮ ನಿರ್ಧಾರ ಎಂದಿದ್ದಾರೆ. ರಾಜ್ಯಾದ್ಯಂತ ಸರ್ಕಾರಿ ಕಚೇರಿಗಳು, ಗಾರ್ಮೆಂಟ್ಸ್, ಎಂಎನ್‌ಸಿ ಮತ್ತು ಇತರೆ ಖಾಸಗಿ ಕೈಗಾರಿಕೆಗಳು ಸೇರಿದಂತೆ ಎಲ್ಲಾ ವಲಯಗಳಲ್ಲಿ ಕೆಲಸ ಮಾಡುವ ಮಹಿಳೆಯರಿಗೆ ಪ್ರತಿ ತಿಂಗಳು ಒಂದು ದಿನದ ವೇತನ ಸಹಿತ ರಜೆ ನೀತಿಯನ್ನು ಜಾರಿಗೆ ತರಲು ಸಚಿವ ಸಂಪುಟ…
ದಸರಾ ವೇಳೆ ಬಲೂನ್ ಮರುತ್ತಿದ್ದ ಬಾಲಕಿ ಮೇಲೆ ಅತ್ಯಾಚಾರ, ಕೊಲೆ, ಆರೋಪಿ ಬಂಧನ
ಮೈಸೂರು: ದಸರಾ ನಗರಿ ಮೈಸೂರಿನಲ್ಲಿ ನಡೆದ ಬಾಲಕಿ ಮೇಲಿನ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಪೊಲೀಸರು ಬೇಧಿಸಿದ್ದು, ಆರೋಪಿಯನ್ನು ಬಂಧಿಸಿದ್ದಾರೆ. ಹೊಟ್ಟೆಪಾಡಿಗಾಗಿ ಬಲೂನ್ ಮಾರಾಟದ ಕೆಲಸಕ್ಕಾಗಿ ದಸರಾ ವೇಳೆ ಮೈಸೂರಿಗೆ ಬಂದಿದ್ದ ಹಕ್ಕಿಪಿಕ್ಕಿ ಜನಾಂಗದ ಸುಮಾರು 50 ಕುಟುಂಬಗಳು ಅರಮನೆ ಮುಂಭಾಗದ ದೊಡ್ಡ ಕೆರೆ ಮೈದಾನದ ಬಳಿ ತಂಗಿದ್ದವು. ಬುಧವಾರ ಚಾಮುಂಡೇಶ್ವರಿ ದೇವಾಲಯದ ತೆಪ್ಪೋತ್ಸವ ಮುಗಿಸಿ, ಗುರುವಾರ ಬೇರೆ ಕಡೆ ತೆರಳಲು ಸಿದ್ಧತೆಯಲ್ಲಿದ್ದರು. ಬುಧವಾರ ರಾತ್ರಿ ಹೆತ್ತವರ ಜೊತೆ ಮಲಗಿದ್ದ ಬಾಲಕಿ ಬೆಳಿಗ್ಗೆ ಕಾಣೆಯಾಗಿದ್ದು, ಹುಡುಕಾಟ ನಡೆಸಿದಾಗ ಶಿಬಿರದಿಂದ ದೂರದ ಗುಂಡಿಯಲ್ಲಿ ಶವ ಪತ್ತೆಯಾಗಿದೆ. ಶವದ ಮೇಲೆ ಸರಿಯಾಗಿ ಬಟ್ಟೆಯಿರಲಿಲ್ಲದ ಕಾರಣ ಅತ್ಯಾಚಾರ ನಡೆಸಿ ಕೊಲೆಗೈದಿರುವ ಶಂಕೆ ವ್ಯಕ್ತವಾಗಿತ್ತು. ತನಿಖೆ ಕೈಗೊಂಡ ಪೊಲೀಸರು ಸಿಸಿಟಿವಿ ದೃಶ್ಯಾವಳಿ ಪರಿಶೀಲಿಸಿ ಆರೋಪಿಯ ಸುಳಿವನ್ನು ಪತ್ತೆಹಚ್ಚಿದರು. ಮೈಸೂರಿನ ಸಿದ್ದಲಿಂಗಪುರ ನಿವಾಸಿ ಕಾರ್ತಿಕ್ ಎಂದು ಆರೋಪಿಯನ್ನು ಗುರುತಿಸಿದ ಪೊಲೀಸರು ಆತನಿಗಾಗಿ ಹುಡುಕಾಟ ಆರಂಭಿಸಿದರು.…
‘ನೀರಿದ್ದರೆ ನಾಳೆ’ ಕಾರ್ಯಕ್ರಮಕ್ಕೆ ಸಿಎಂ ಚಾಲನೆ
ಬೆಂಗಳೂರು: ‘ಕೆರೆಗಳಿಗೆ ನೀರು ತುಂಬಿಸುವುದರಲ್ಲಿ ಏಷ್ಯಾದಲ್ಲೇ ಉತ್ತಮ ಕಾರ್ಯ ನಮ್ಮ ರಾಜ್ಯದಲ್ಲಿ ಆಗುತ್ತಿದೆ’ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಆಯೋಜಿಸಿದ್ದ “ನೀರಿದ್ದರೆ ನಾಳೆ” ಕಾರ್ಯಕ್ರಮವನ್ನು ಉದ್ಘಾಟಿಸಿ, ಮಾತನಾಡಿದ ಅವರು, ನಾಗರಿಕತೆ ಬೆಳೆದದ್ದು – ಉಳಿದಿರುವುದು ನೀರಿನಿಂದಲೇ. ಜನರಲ್ಲಿ ನೀರಿನ ಬಳಕೆ, ನೀರಿನ ಮೌಲ್ಯ ಮತ್ತು ಅಂತರ್ಜಲ ವೃದ್ಧಿ ಬಗ್ಗೆ ಸಚಿವ ಬೋಸರಾಜು ಅವರು ಇಲಾಖೆಯ ವತಿಯಿಂದ ಉತ್ತಮ ಕಾರ್ಯಕ್ರಮಗಳನ್ನು ರೂಪಿಸುತ್ತಿದ್ದಾರೆ. ಇದು ಆರೋಗ್ಯಕರ ಸಂಗತಿ ಎಂದರು. ರಾಜ್ಯದಲ್ಲಿ 37 ಲಕ್ಷ ಬೋರ್ ವೆಲ್ ಗಳ ಮೂಲಕ ಅಂತರ್ಜಲ ಬಳಕೆ ಆಗುತ್ತಿದೆ. ದಾಖಲೆಗಳಲ್ಲಿ ಇಲ್ಲದ ಲಕ್ಷಾಂತರ ಅನಧಿಕೃತ ಬೋರ್ ವೆಲ್ ಗಳೂ ಇವೆ. ರಾಷ್ಟ್ರೀಯ ಸರಾಸರಿಗಿಂತ ಶೇ.8 ರಷ್ಟು ಹೆಚ್ಚಿನ ಬಳಕೆ ಆಗುತ್ತಿದೆ ಎನ್ನುವ ವರದಿಗಳಿವೆ ಎಂದು ಗಮನಸೆಳೆದರು. 144 ತಾಲ್ಲೂಕುಗಳನ್ನು ಹೊರತು ಪಡಿಸಿ ಉಳಿದ ತಾಲ್ಲೂಕುಗಳಲ್ಲಿ ನೀರಿನ ಅಂತರ್ಜಲದ ಪ್ರಮಾಣ ಕೊರತೆ…
RSS ಹಿರಿಯ ನಾಯಕ ಕೃ.ನರಹರಿ ವಿಧಿವಶ
ಈ ಹಿಂದೆ ರಾಷ್ಟ್ರೀಯ ಸ್ವಯಂಸೇವಕ ಸಂಘದ ಕ್ಷೇತ್ರೀಯ ಕಾರ್ಯವಾಹರಾಗಿ, ರಾಷ್ಟ್ರೀಯ ಶೈಕ್ಷಿಕ ಮಹಾಸಂಘದ ಅಖಿಲ ಭಾರತೀಯ ಅಧ್ಯಕ್ಷರಾಗಿ, ವಿಧಾನ ಪರಿಷತ್ ಸದಸ್ಯರಾಗಿ, ದಿ ಮಿಥಿಕ್ ಸೊಸೈಟಿಯ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದ ಶ್ರೀ ಕೃ. ನರಹರಿ ಅವರು ತಮ್ಮ 93 ವರ್ಷ ವಯಸ್ಸಿನಲ್ಲಿ ಗುರುವಾರ ಬೆಳಗ್ಗೆ 4.30ರ ಸುಮಾರಿಗೆ ಇಹಲೋಕ ತ್ಯಜಿಸಿದ್ದಾರೆ. ನರಹರಿ ಅವರ ನಿಧಾನಕ್ಕೆ ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಕಾರ್ಯವಾಹ ದತ್ತಾತ್ರೇಯ ಹೊಸಬಾಳೆ ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ. ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯರೂ, ಕರ್ನಾಟಕ ವಿಧಾನ ಪರಿಷತ್ತಿನ ಮಾಜಿ ಸದಸ್ಯ ಹಾಗೂ ಪ್ರಸಿದ್ಧ ಶಿಕ್ಷಣ ತಜ್ಞರೂ ಆಗಿದ್ದ ಕೃ. ನರಹರಿ ವಿಧಿವಶರಾಗಿದ್ದಾರೆ. ನಿಧನದಿಂದಾಗಿ ಒಂದು ಸಮಾಜಸಮರ್ಪಿತ ಜೀವನ ಅಂತ್ಯಗೊಂಡಿದೆ ಎಂದವರು ಸಂತಾಪ ಸೂಚಿಸಿದ್ದಾರೆ.
ತೆಲುಗು ನಟ ವಿಜಯ್ ದೇವರಕೊಂಡ ಅವರ ಕಾರು ಅಪಘಾತ
ಹೈದರಾಬಾದ್: ಟಾಲಿವುಡ್ ನಟ ವಿಜಯ್ ದೇವರಕೊಂಡ ಅವರ ಕಾರು ಅಪಘಾತವಾಗಿದೆ. ಗದ್ವಾಲ್ ಜಿಲ್ಲೆಯ ಉಂಡವೆಲ್ಲಿ ಬಳಿಯ ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಸೋಮವಾರ ನಟ ವಿಜಯ್ ದೇವರಕೊಂಡ ಅವರ ಕಾರು, ಅಪಘಾತಕ್ಕೀಡಾಗಿದೆ. ಪುಟ್ಟಪರ್ತಿಯಿಂದ ಹೈದರಾಬಾದ್‌ಗೆ ಮರಳುತ್ತಿದ್ದಾಗ ಅವರಿದ್ದ ಕಾರಿಗೆ ಮತ್ತೊಂದು ಕಾರು ಡಿಕ್ಕಿಯಾಗಿದೆ ಎನ್ನಲಾಗಿದ್ದು, ನಟನಿಗೆ ಯಾವುದೇ ಹಾನಿಯಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಬಿಹಾರ ವಿಧಾನಸಭಾ ಚುನಾವಣೆ; ನವೆಂಬರ್ 6 ಮತ್ತು 11 ರಂದು ಮತದಾನ
ನವದೆಹಲಿ: ಬಿಹಾರ ವಿಧಾನಸಭೆ ಚುನಾವಣೆ ಘೋಷಣೆಯಾಗಿದೆ. ಮತದಾನ ದಿನಾಂಕವನ್ನು ಕೇಂದ್ರ ಚುನಾವಣಾ ಆಯೋಗ ಘೋಷಿಸಿದೆ. ನವೆಂಬರ್ 6 ಮತ್ತು 11 ರಂದು ಎರಡು ಹಂತದಲ್ಲಿ ಮತದಾನ ನಡೆಯಲಿದೆ ಎಂದು ನವದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತ ಜ್ಞಾನೇಶ್ ಕುಮಾರ್ ಘೋಷಿಸಿದರು. 243 ಕ್ಷೇತ್ರಗಳ ಪೈಕಿ, 121 ಕ್ಷೇತ್ರಗಳಿಗೆ ಮೊದಲ ಹಂತದಲ್ಲಿ ಹಾಗೂ 122 ಕ್ಷೇತ್ರಗಳಿಗೆ ಎರಡನೇ ಹಂತದ ಮತದಾನ ನಡೆಯಲಿದೆ. ನವೆಂಬರ್ 14ರಂದು ಮತಗಳ ಎಣಿಕೆ ನಡೆಯಲಿದೆ ಎಂದವರು ವಿವರಿಸಿದ್ದಾರೆ.
‘ಲಿಂಗಾಯತ ಧರ್ಮದ ವಿಷಯದಲ್ಲಿ ಜನರು ಸ್ವಯಂ ನಿಲುವೇ ನನ್ನ ನಿಲುವು’: ಸಿದ್ದರಾಮಯ್ಯ
ಕೊಪ್ಪಳ: ಮೇಲ್ಜಾತಿಗಳನ್ನು ತುಳಿಯಲು ಸಮೀಕ್ಷೆ ನಡೆಸಲಾಗುತ್ತಿದೆ ಎಂಬ ಕೇಂದ್ರ ಸಚಿವ ಸೋಮಣ್ಣ ಅವರ ಆರೋಪ ಬಾಲಿಶವಾದುದ್ದು. ಜನರ ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯನ್ನು ನಡೆಸದಿದ್ದರೆ, ಸಮಾಜದಲ್ಲಿ ಜನರ ಸ್ಥಿತಿಗತಿ ಬಗ್ಗೆ ಅರಿಯಲು ಸಾಧ್ಯವಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ. ಕೊಪ್ಪಳದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಸೋಮಣ್ಣ ಮಾತಿಗೆ ತಮ್ಮದೇ ಶೈಲಿಯಲ್ಲಿ ಪ್ರತಿಕ್ರಿಯಿಸಿದರು. ಈ ಸಮೀಕ್ಷೆಯಲ್ಲಿ ಯಾವ ಜಾತಿಯವರನ್ನು ತುಳಿಯುವ ಪ್ರಶ್ನೆಯಿಲ್ಲ. ಸಮಸಮಾಜ ನಿರ್ಮಾಣವನ್ನು ವಿರೋಧಿಸುವವರು ಇಂತಹ ಹೇಳಿಕೆಗಳನ್ನು ನೀಡುವ ಮೂಲಕ ಜನರ ದಾರಿ ತಪ್ಪಿಸುತ್ತಿದ್ದಾರೆ. ಈಗಾಗಲೇ 1.10 ಕೋಟಿ ಕುಟುಂಬಗಳ ಸಮೀಕ್ಷಾ ಕಾರ್ಯ ಮುಗಿದಿದ್ದು, ನಿನ್ನೆವರೆಗೆ ಶೇ.63 ರಷ್ಟು ಸರ್ವೇ ಕಾರ್ಯ ಪ್ರಗತಿಯಾಗಿದೆ. ಮಂಗಳವಾರ ಸಂಜೆವರೆಗೆ ಸಮೀಕ್ಷೆಯ ಪ್ರಗತಿಯನ್ನು ಪರಿಶೀಲಿಸಿ, ಸಮೀಕ್ಷೆ ಅವಧಿ ವಿಸ್ತರಣೆ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದರು. ಕೊಪ್ಪಳ ಜಿಲ್ಲೆಯಲ್ಲಿ ಶೇ.97 ರಷ್ಟು ಸಮೀಕ್ಷೆ ಪೂರ್ಣಗೊಂಡಿದ್ದು, ಇದು ಒಳ್ಳೆಯ ಬೆಳವಣಿಗೆ. ಸಮಾಜದಲ್ಲಿ…
GST ಪರಿಷ್ಕೃತ ಸ್ಲ್ಯಾಬ್ 5% & 18%: ಗ್ರಾಹಕರೂ ಖುಶ್, ವರ್ತಕರೂ ಜೋಶ್
ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಜಿಎಸ್‌ಟಿ ವ್ಯವಸ್ಥೆಯಲ್ಲಿ ದೊಡ್ಡ ಬದಲಾವಣೆ ತಂದಿದೆ. ಹಲವು ವರ್ಷಗಳಿಂದ ಜಾರಿಯಲ್ಲಿದ್ದ ಸಂಕೀರ್ಣ ತೆರಿಗೆ ಸ್ಲ್ಯಾಬ್‌ಗಳನ್ನು ಸರಳಗೊಳಿಸಿ ಈಗ ಕೇವಲ 5% ಮತ್ತು 18% ಎಂಬ ಎರಡು ಸ್ಲ್ಯಾಬ್‌ಗಳನ್ನು ಮಾತ್ರ ಜಾರಿಗೆ ತಂದಿದೆ. ಸರ್ಕಾರದ ಈ ಕ್ರಮವು ದೇಶದ ಅಭಿವೃದ್ಧಿಗೆ ಬರೆದ ಮುನ್ನುಡಿಯಾಗಿದೆ ಎಂದು ತಜ್ಞರು ಪ್ರತಿಪಾದಿಸಿದ್ದಾರೆ. ವ್ಯಾಪಾರಿಗಳಿಗೆ ಸೌಲಭ್ಯ, ಗ್ರಾಹಕರಿಗೆ ರಿಯಾಯಿತಿ, ಕೈಗಾರಿಕೆಗಳಿಗೆ ಉತ್ಸಾಹ ನೀಡುವುದು ಈ ನಿರ್ಧಾರದ ಉದ್ದೇಶ ಇದರಿಂದಾಗಿ ದೇಶದ ವಿವಿಧ ರಾಜ್ಯಗಳಲ್ಲಿ ಪ್ರಗತಿಯ ಶಕೆ ಆರಂಭವಾದಂತಾಗಿದೆ. ವ್ಯಾಪಾರ ವಲಯದಲ್ಲಂತೂ ಸಂತಸ ಮನೆಮಾಡಿದೆ. ಕರ್ನಾಟಕ: ಸಾಂಪ್ರದಾಯಿಕ ಕೈಗಾರಿಕೆಗಳಿಗೆ ಹೊಸ ಚೈತನ್ಯ ಕರ್ನಾಟಕದ ಮೈಸೂರು ರೇಷ್ಮೆ, ಚನ್ನಪಟ್ಟಣ ಆಟಿಕೆಗಳು, ಧಾರವಾಡ ಪೇಡಾ, ಮೈಸೂರು ಪಾಕ್ ಮೊದಲಾದ ಉತ್ಪನ್ನಗಳು ಈಗ ಕಡಿಮೆ ತೆರಿಗೆ ದರಕ್ಕೆ ಒಳಪಟ್ಟಿವೆ. ಇದರಿಂದ ಸಾಂಪ್ರದಾಯಿಕ ಉದ್ಯಮಗಳು ಸ್ಪರ್ಧಾತ್ಮಕ ಬೆಲೆಗೆ ಉತ್ಪಾದನೆ ಮಾಡಬಹುದಾಗಿದೆ. ನಂಜನಗೂಡು…
ಜಾತಿ ಗಣತಿ ದಿನೇ ದಿನೇ ಗೊಂದಲ; ವಿಜಯೇಂದ್ರ ಟೀಕೆ
ಮೈಸೂರು: “ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ಹೆಸರಿನಲ್ಲಿ ಸರ್ಕಾರ ನಡೆಸುತ್ತಿರುವ ಜಾತಿ ಗಣತಿ ದಿನೇ ದಿನೇ ಗೊಂದಲ ಸೃಷ್ಟಿಸುತ್ತಿದೆ. ಇದು ಎಲ್ಲಾ ಸಮುದಾಯಗಳಲ್ಲಿಯೂ ಅಶಾಂತಿ ಉಂಟುಮಾಡಿದೆ,” ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಸರ್ಕಾರವು ಯಾವುದೇ ಸೂಕ್ತ ಸಿದ್ಧತೆ ಇಲ್ಲದೆ ಆತುರದಲ್ಲಿ ಈ ಸಮೀಕ್ಷೆ ಪ್ರಾರಂಭಿಸಿರುವುದು ಸ್ಪಷ್ಟವಾಗಿದೆ. ಇದರ ಪರಿಣಾಮವಾಗಿ ಜನರಲ್ಲಿ ಗೊಂದಲ ಹೆಚ್ಚಾಗಿದೆ,” ಎಂದರು. “ಕಾಂಗ್ರೆಸ್ ಪಕ್ಷದೊಳಗೆ ಅಕ್ಟೋಬರ್ ಅಥವಾ ನವೆಂಬರ್ ಕ್ರಾಂತಿಯ ಬಗ್ಗೆ ಚರ್ಚೆಗಳು ನಡೆಯುತ್ತಿವೆ. ರಾಜ್ಯದಲ್ಲಿ ಸಂಭವನೀಯ ರಾಜಕೀಯ ಕ್ರಾಂತಿ ಮತ್ತು ಈ ಜಾತಿ ಗಣತಿಯ ನಡುವೆ ಯಾವುದೇ ಸಂಬಂಧವಿದೆಯೇ ಎಂಬ ಪ್ರಶ್ನೆ ಈಗ ಎಲ್ಲೆಡೆ ಕೇಳಿಬರುತ್ತಿದೆ,” ಎಂದು ವಿಜಯೇಂದ್ರ ಅಭಿಪ್ರಾಯಪಟ್ಟರು. ಗಣತಿ ಕಾರ್ಯದಲ್ಲಿ ವಿಕಲಚೇತನರನ್ನು ಸೇರಿಸಿರುವ ಬಗ್ಗೆ ಟೀಕೆ ವ್ಯಕ್ತಪಡಿಸಿದ ಅವರು, “ರಾಜ್ಯ ಸರ್ಕಾರ ಮತ್ತು ಮುಖ್ಯಮಂತ್ರಿ ಏಕೆ ಇಷ್ಟೊಂದು ಆತುರದಲ್ಲಿದ್ದಾರೆ ಎಂಬುದು…
