ಬೆಂಗಳೂರು: ಬೆಂಗಳೂರು–ಮುಂಬೈ ನಡುವೆ ಸೂಪರ್‌ಫಾಸ್ಟ್ ರೈಲು ಸಂಚಾರಕ್ಕೆ ಕೇಂದ್ರ ರೈಲ್ವೆ ಸಚಿವಾಲಯ ಅನುಮೋದನೆ ನೀಡಿದೆ. ಮೂರು ದಶಕಗಳಿಂದ ಬಾಕಿ ಉಳಿದ ಬೇಡಿಕೆ ಈಡೇರಿದಂತಾಗಿದ್ದು, ಈಗಾಗಲೇ ಉದ್ಯಾನ ಎಕ್ಸ್‌ಪ್ರೆಸ್ ಒಂದೇ ರೈಲು ಕಾರ್ಯನಿರ್ವಹಿಸುತ್ತಿತ್ತು. ಹೊಸ ಸೇವೆಯಿಂದ ಲಕ್ಷಾಂತರ ಪ್ರಯಾಣಿಕರಿಗೆ ಕಡಿಮೆ ವೆಚ್ಚದಲ್ಲಿ ಸುಗಮ ಸಂಚಾರ ಸಿಗಲಿದೆ ಎಂದು ಸಂಸದ ತೇಜಸ್ವಿ ಸೂರ್ಯ ತಿಳಿಸಿದ್ದಾರೆ. ಈ ನಿರ್ಧಾರಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರಿಗೆ ಧನ್ಯವಾದ ಅರ್ಪಿಸಿರುವ ತೇಜಸ್ವಿ, ರಾಜ್ಯ ರೈಲ್ವೆ ಸಚಿವ ವಿ.ಸೋಮಣ್ಣರಿಗೂ ಕೃತಜ್ಞತೆ ಸಲ್ಲಿಸಿದ್ದಾರೆ. I have some great news for people of Bengaluru and Mumbai. From last 30 years, our two great cities were connected by only one super fast train -Udyan Express. Even that train took…
Year: 2025
ಸುಪ್ರೀಂ ಕೋರ್ಟ್ ಆದೇಶದ ಮೇರೆಗೆ ಬಿಲ್ಡರ್‌ಗಳ ವಿರುದ್ಧ ಆರು ಪ್ರಕರಣ
ನವದೆಹಲಿ: ಸಾವಿರಾರು ಮನೆ ಖರೀದಿದಾರರನ್ನು ವಂಚಿಸಿದ ಆರೋಪ ಹೊತ್ತಿರುವ ಬಿಲ್ಡರ್‌ಗಳ ವಿರುದ್ಧ ಸಿಬಿಐ ಭಾರೀ ದಾಳಿ ನಡೆಸಿದೆ. ಸುಪ್ರೀಂ ಕೋರ್ಟ್ ನಿರ್ದೇಶನದಂತೆ, ಕೋಲ್ಕತ್ತಾ, ಬೆಂಗಳೂರು ಮತ್ತು ಮುಂಬೈ ನಗರಗಳಲ್ಲಿ ಶನಿವಾರ 12 ಸ್ಥಳಗಳಲ್ಲಿ ಶೋಧ ನಡೆಸಲಾಗಿದ್ದು, ವಿವಿಧ ದಾಖಲೆಗಳು ಹಾಗೂ ಡಿಜಿಟಲ್ ಪುರಾವೆಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಸಿಬಿಐ ತಿಳಿಸಿದೆ. ಮನೆ ಖರೀದಿದಾರರು ಸಲ್ಲಿಸಿದ್ದ ಅರ್ಜಿಗಳ ಆಧಾರದ ಮೇಲೆ ತನಿಖೆ ಆರಂಭಗೊಂಡಿದ್ದು, ಗೃಹಸಾಲದ ವಿವಾದಾತ್ಮಕ ಸಬ್ವೆನ್ಷನ್ ಯೋಜನೆ ಮೂಲಕ ಬಿಲ್ಡರ್‌ಗಳು ಮತ್ತು ಸಾಲದಾತರ ನಡುವೆ ಅಸಮರ್ಪಕ ಸಂಬಂಧವಿದೆ ಎಂದು ಸುಪ್ರೀಂ ಕೋರ್ಟ್ ಹಿಂದೆಯೇ ಗಮನಿಸಿದೆ. ಅದರಂತೆ, ಏಳು ಪ್ರಾಥಮಿಕ ವಿಚಾರಣೆಗಳನ್ನು ಸಿಬಿಐಗೆ ಒಪ್ಪಿಸಲಾಗಿತ್ತು. ಇದಕ್ಕೂ ಮೊದಲು NCR ಪ್ರದೇಶದಲ್ಲಿ 22 ಎಫ್‌ಐಆರ್‌ಗಳನ್ನು ದಾಖಲಿಸಿದ್ದ ಸಿಬಿಐ, ಇದೀಗ NCR ಹೊರಗಿನ ಯೋಜನೆಗಳನ್ನು ಒಳಗೊಂಡ ಏಳನೇ ವಿಚಾರಣೆಯ ನಂತರ, ಸುಪ್ರೀಂ ಕೋರ್ಟ್ ಸೂಚನೆಯಂತೆ ಆರು ನಿಯಮಿತ ಪ್ರಕರಣಗಳನ್ನು ದಾಖಲಿಸಿದೆ. ಇಥಾಕಾ ಎಸ್ಟೇಟ್…
ಸರ್ಕಾರಿ ಗೌರವಗಳೊಂದಿಗೆ ಸಾಹಿತಿ ಎಸ್.ಎಲ್. ಭೈರಪ್ಪ ಅಂತ್ಯಕ್ರಿಯೆ
ಮೈಸೂರು: ಹಿರಿಯ ಸಾಹಿತಿ ಡಾ. ಎಸ್.ಎಲ್. ಭೈರಪ್ಪ ಅವರ ಅಂತ್ಯಕ್ರಿಯೆ ಇಂದು ಮಧ್ಯಾಹ್ನ 12:30ಕ್ಕೆ ಚಾಮುಂಡಿ ಬೆಟ್ಟದ ತಪ್ಪಲಿನ ರುದ್ರಭೂಮಿಯಲ್ಲಿ ಸರ್ಕಾರಿ ಗೌರವಗಳೊಂದಿಗೆ ನೆರವೇರಿತು. ಬ್ರಾಹ್ಮಣ ಸಂಪ್ರದಾಯದಂತೆ ನಡೆದ ಅಂತಿಮ ವಿಧಿವಿಧಾನದಲ್ಲಿ ಪೊಲೀಸ್ ಪಡೆ ಮೂರು ಸುತ್ತು ಗಾಳಿಯಲ್ಲಿ ಗುಂಡು ಹಾರಿಸಿ ಸರ್ಕಾರಿ ಗೌರವ ಸಲ್ಲಿಸಿತು. ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ, ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ. ಮಹದೇವಪ್ಪ, ಶಾಸಕ ಟಿ.ಎಸ್. ಶ್ರೀವತ್ಸ ಸೇರಿದಂತೆ ಅನೇಕ ಗಣ್ಯರು ಭಾಗಿಯಾಗಿ ನಮನ ಸಲ್ಲಿಸಿದರು. ರಾಷ್ಟ್ರಧ್ವಜವನ್ನು ಪ್ರಹ್ಲಾದ್ ಜೋಷಿ ಹಾಗೂ ಮಹದೇವಪ್ಪ ಅವರು ಭೈರಪ್ಪರ ಪುತ್ರರಾದ ರವಿಶಂಕರ್ ಮತ್ತು ಉದಯ್ ಶಂಕರ್ ಅವರಿಗೆ ಹಸ್ತಾಂತರಿಸಿದರು. ಪುತ್ರರು ಅಂತಿಮ ವಿಧಿ ನೆರವೇರಿಸಿದ ವೇಳೆ, ಭೈರಪ್ಪರ ಇಚ್ಛೆಯಂತೆ ಉದಯೋನ್ಮುಖ ಲೇಖಕಿ ಸಹನಾ ವಿಜಯ್‌ಕುಮಾರ್ ಸಹ ಹಾಜರಿದ್ದರು. ವಿಧಿ ವಿಧಾನಗಳ ಬಳಿಕ ಪುತ್ರರ ಜೊತೆಗೂಡಿ ಅವರು ಭೈರಪ್ಪರ ಚಿತೆಗೆ ಅಗ್ನಿ ಸ್ಪರ್ಶ ಮಾಡಿದರು.
ಬಾಂಗ್ಲಾದೇಶದಲ್ಲಿ ಶಾಂತಿಯುತ ಪ್ರಜಾಪ್ರಭುತ್ವ ಪರಿವರ್ತನೆ ನಿರೀಕ್ಷೆ: ಭಾರತ
ನವದೆಹಲಿ: ಬಾಂಗ್ಲಾದೇಶದಲ್ಲಿ ಮುಂದಿನ ವರ್ಷ ನಡೆಯಲಿರುವ ಸಾಮಾನ್ಯ ಚುನಾವಣೆಗಳು ಮುಕ್ತ, ನ್ಯಾಯಯುತ, ವಿಶ್ವಾಸಾರ್ಹ ಹಾಗೂ ಎಲ್ಲರನ್ನೂ ಒಳಗೊಂಡ ರೀತಿಯಲ್ಲಿ ನಡೆಯಬೇಕು ಎಂಬುದು ಭಾರತದ ನಿರೀಕ್ಷೆ ಎಂದು ವಿದೇಶಾಂಗ ಸಚಿವಾಲಯ (MEA) ಶುಕ್ರವಾರ ತಿಳಿಸಿದೆ. ನವದೆಹಲಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ MEA ವಕ್ತಾರ ರಣಧೀರ್ ಜೈಸ್ವಾಲ್, “ಫೆಬ್ರವರಿ ಚುನಾವಣೆಯ ಮೂಲಕ ಸುಗಮ ಮತ್ತು ಶಾಂತಿಯುತ ಪ್ರಜಾಪ್ರಭುತ್ವ ಪರಿವರ್ತನೆ ನಡೆಯಬೇಕೆಂಬುದು ನಮ್ಮ ನಿರೀಕ್ಷೆ” ಎಂದು ಸ್ಪಷ್ಟಪಡಿಸಿದರು. ಈ ನಡುವೆ ಬಾಂಗ್ಲಾದೇಶದ ಮಧ್ಯಂತರ ಸರ್ಕಾರವು ಫೆಬ್ರವರಿ 15, 2026ರೊಳಗೆ ಚುನಾವಣೆಗಳು ನಡೆಯಲಿವೆ ಎಂದು ಘೋಷಿಸಿದ್ದು, ಯಾವುದೇ ಅಡ್ಡಿಪಡಿಸುವ ಪ್ರಯತ್ನ ಯಶಸ್ವಿಯಾಗುವುದಿಲ್ಲ ಎಂದು ಎಚ್ಚರಿಸಿದೆ. ಮಾಜಿ ಪ್ರಧಾನಿ ಶೇಖ್ ಹಸೀನಾ ನೇತೃತ್ವದ ಅವಾಮಿ ಲೀಗ್ ಸರ್ಕಾರದ ಪತನದ ನಂತರದಿಂದ ಬಾಂಗ್ಲಾದೇಶ ರಾಜಕೀಯ ಅನಿಶ್ಚಿತತೆಯಲ್ಲಿ ಸಿಲುಕಿದೆ.
ಬಿಹಾರ ಚುನಾವಣೆಯಲ್ಲಿ ಮತ ಖರೀದಿಗಾಗಿ NDAಯಿಂದ ಭಾರೀ ಹಣ ರವಾನೆ; ಪ್ರಿಯಾಂಕಾ ಆರೋಪ
ಪಾಟ್ನಾ: ಬಿಹಾರ ವಿಧಾನಸಭಾ ಚುನಾವಣೆಗೆ ಮುನ್ನ ಮತ ಖರೀದಿಸಲು ಎನ್‌ಡಿಎ ಸರ್ಕಾರವೇ ಹಣ ಹಂಚುತ್ತಿದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಆರೋಪಿಸಿದ್ದಾರೆ. ಪಾಟ್ನಾದ ಸದಾಕತ್ ಆಶ್ರಮದಲ್ಲಿ ನಡೆದ “ಶಕ್ತಿ ಅಧಿಕಾರ ಮಹಿಳಾ ಸಂವಾದ” ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, “ಮಹಿಳೆಯರ ಶಕ್ತಿಯನ್ನು ರಾಜಕೀಯ ಪಕ್ಷಗಳು ಚೆನ್ನಾಗಿ ಅರಿತಿವೆ. ಅದಕ್ಕಾಗಿ ಚುನಾವಣೆಗೂ ಮೊದಲು 10,000 ರೂ. ನೀಡಲಾಗುತ್ತಿದೆ. ನಿಮ್ಮ ಬೆಂಬಲವಿಲ್ಲದೆ ಅವರಿಗೆ ಸರ್ಕಾರ ರಚಿಸಲು ಸಾಧ್ಯವಿಲ್ಲ ಎಂಬುದನ್ನು ಅವರು ತಿಳಿದಿದ್ದಾರೆ” ಎಂದು ವ್ಯಂಗ್ಯವಾಡಿದರು. ಮಹಿಳೆಯರ ಜೀವನಮಟ್ಟ ಸುಧಾರಿಸಲು ಮಹಾಮೈತ್ರಿಕೂಟದ ಐದು ಅಂಶಗಳ ಭರವಸೆಯನ್ನು ಪ್ರಿಯಾಂಕಾ ಪ್ರಕಟಿಸಿದರು. ಇದರಲ್ಲಿ ಪ್ರತೀ ಮಹಿಳೆಗೆ ಮಾಸಿಕ 2,500 ರೂ. ಭತ್ಯೆ, ಆರೋಗ್ಯ ವಿಮೆ 25 ಲಕ್ಷ ರೂ.ವರೆಗೆ, ಭೂಹೀನ ಕುಟುಂಬಗಳಿಗೆ ಉಚಿತ ಜಮೀನು ಹಂಚಿಕೆ, ಮಹಿಳೆಯರ ಹೆಸರಿನಲ್ಲಿ ನೋಂದಣಿ, ಉದ್ಯೋಗ ಸೃಷ್ಟಿ ಮೊದಲಾದವು ಸೇರಿವೆ. ನಿತೀಶ್ ಕುಮಾರ್ ನೇತೃತ್ವದ ಸರ್ಕಾರವನ್ನು…
KRS: ಕಾವೇರಿ ಆರತಿ ವೀಕ್ಷಿಸುವ ಪ್ರವಾಸಿಗರಿಗೆ ಉಚಿತವಾಗಿ ಕಾವೇರಿ ಲಡ್ಡು ಪ್ರಸಾದ
ಮಂಡ್ಯ: ಗಂಗಾ ಆರತಿ ಮಾದರಿಯಲ್ಲಿ ದಕ್ಷಿಣ ಭಾರತದಲ್ಲಿ ಮೊದಲ ಬಾರಿಗೆ ಕಾವೇರಿ ನದಿಗೆ “ಕಾವೇರಿ ಆರತಿ” ಮಾಡುವ ಕಾರ್ಯಕ್ರಮವು ಸೆಪ್ಟೆಂಬರ್ 26ರ ಶುಕ್ರವಾರದಿಂದ ಐದು ದಿನಗಳ ಕಾಲ ಕೆಆರ್ ಎಸ್ ನಲ್ಲಿ ನೆರವೇರಲಿದೆ. ಕಾವೇರಿ ಆರತಿ ಕಾರ್ಯಕ್ರಮದ ವೀಕ್ಷಣೆಗೆ ಪ್ರತಿ ನಿತ್ಯ 8 ರಿಂದ ಹತ್ತು ಸಾವಿರಕ್ಕೂ ಅಧಿಕ ಪ್ರವಾಸಿಗರು ರಾಜ್ಯ ಹೊರರಾಜ್ಯದ ನಾನಾ ಭಾಗಗಳಿಂದ ಆಗಮಿಸಿ “ಕಾವೇರಿ ಆರತಿ”ಯನ್ನು ವೀಕ್ಷಿಸಿ ಕಣ್ತುಂಬಿಕೊಳ್ಳಲಿದ್ದಾರೆ. ಕಾವೇರಿ ಆರತಿ ವೀಕ್ಷಿಸಲು ಆಗಮಿಸುವ ಪ್ರವಾಸಿಗರಿಗೆ ಉಪಮುಖ್ಯಮಂತ್ರಿ ಹಾಗೂ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಅವರು ಲಡ್ಡು ಮಾಡಿಸಿದ್ದಾರೆ ಪ್ರತಿನಿತ್ಯ ಲಾಡು ವಿತರಣೆಗೆ ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಆಗಮಿಸುವವರಿಗೆ ಲಾಡು ವಿತರಣೆ ಮಾಡುವ ಮಾದರಿಯಲ್ಲಿ “ಕಾವೇರಿ ಆರತಿ” ವೀಕ್ಷಣೆಗೆ ಆಗಮಿಸುವ ಪ್ರವಾಸಿಗರಿಗೆ ಕಾವೇರಿ ತಾಯಿ ಪ್ರಸಾದವಾಗಿ ಲಡ್ಡನ್ನು ಉಚಿತವಾಗಿ ವಿತರಣೆ ಮಾಡಲಾಗುವುದು. ಕಾವೇರಿ ಕನ್ನಡ ನಾಡಿನ ಜೀವನದಿ. ಕೇರಳ, ತಮಿಳುನಾಡು ಹಾಗೂ ರಾಜ್ಯದ…
ದೀನ ದಯಾಳ ಉಪಾಧ್ಯಾಯರು ಆದರ್ಶದ ದೀಪಸ್ತಂಭ: ದತ್ತಾತ್ರೇಯ ಹೊಸಬಾಳೆ
ಬೆಂಗಳೂರು: ಸಾವಿರಾರು ಜನರನ್ನು ಪ್ರೇರೇಪಿಸಿದ ರಾಷ್ಟ್ರಪುರುಷ ದೀನದಯಾಳ ಉಪಾಧ್ಯಾಯರು. ತಮ್ಮ ವ್ಯಕ್ತಿತ್ವ, ಕರ್ತೃತ್ವ, ಸಾಧನೆ, ಚಿಂತನೆಯ ಮೂಲಕ ದೀನ ದಯಾಳ ಉಪಾಧ್ಯಾಯರು ಆಧಾರ ದೀಪಸ್ತಂಭವಾಗಿದ್ದಾರೆ. ಅವರ ಬದುಕು ಗಂಗಾಪ್ರವಾಹವಿದ್ದಂತೆ. ಅದರಲ್ಲಿ ನಮ್ಮ ಪಾತ್ರ ಎಷ್ಟು ಎನ್ನುವುದು ಮುಖ್ಯ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಕಾರ್ಯವಾಹ ದತ್ತಾತ್ರೇಯ ಹೊಸಬಾಳೆ ಹೇಳಿದರು. ರಾಷ್ಟ್ರೀಯ ಸ್ವಯಂಸೇವಕ ಸಂಘ ಬೆಂಗಳೂರು ಮಹಾನಗರ ವತಿಯಿಂದ ಜೆಪಿನಗರದ ಆರ್ ವಿ ಡೆಂಟಲ್ ಕಾಲೇಜಿನಲ್ಲಿ ನಡೆದ ಪಂಡಿತ್ ದೀನದಯಾಳ ಉಪಾಧ್ಯಾಯ ಅವರ 109ನೇ ವರ್ಷದ ಜಯಂತಿಯ ನಿಮಿತ್ತ ಸಂಸ್ಮರಣಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಸ್ವಯಂಸೇವಕ ಎಂಬ ವಿಶೇಷವಾದ ಕಲ್ಪನೆ ಇಂದು ಸಹಜವಾಗಿದೆ. ಯಾವ ಸಂಘವೂ ಯಾರನ್ನೂ ನಿರ್ಮಾಣ ಮಾಡುವುದಿಲ್ಲ, ಬದಲಾಗಿ ಇರುವವರನ್ನು ಸೇರಿಸಿ ಸಂಘಟನೆ ರೂಪುಗೊಳ್ಳುತ್ತದೆ. ಆದರೆ ರಾಷ್ಟ್ರೀಯ ಸ್ವಯಂಸೇವಕ ಸಂಘ ಸ್ವಯಂಸೇವಕರ ನಿರ್ಮಾಣ ಮಾಡುವ ಸಂಘಟನೆ. ಅಂತಹ ಶ್ರೇಷ್ಠ, ಆದರ್ಶ, ಪ್ರೇರಣಾದಾಯಿ ಸ್ವಯಂಸೇವಕ ದೀನ ದಯಾಳ…
ಮಂಗಳೂರು ದಸರಾ ನಾಡಿನ ಹೆಮ್ಮೆ; ಸಚಿವ ರಾಮಲಿಂಗಾ ರೆಡ್ಡಿ
ಮಂಗಳೂರು: ನಾಡಿನ ಮಹಾಉತ್ಸವವಾಗಿರುವ ಮೈಸೂರು ದಸರಾದಷ್ಟೇ ಮಂಗಳೂರು ದಸರಾ ವೈಭವಯುತವಾಗಿ ನಡೆಯುತ್ತಿದೆ. ಕೇಂದ್ರದ ಮಾಜಿ ಸಚಿವ ಬಿ.ಜನಾರ್ದನ ಪೂಜಾರಿ ಮಾರ್ಗದರ್ಶನದಲ್ಲಿ ನಡೆಯುತ್ತಿರುವ ಈ ದಸರಾ ನಾಡಿನ ಹೆಮ್ಮೆಯ ಉತ್ಸವವಾಗಿ ರೂಪುಗೊಂಡಿದೆ ಎಂದು ರಾಜ್ಯ ಧಾರ್ಮಿಕ ದತ್ತಿ ಹಾಗೂ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಹೇಳಿದರು. ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದಲ್ಲಿ ‘ಮಂಗಳೂರು ದಸರಾ-2025’ ಮಹೋತ್ಸವ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು. ಜನಾರ್ಧನ ಪೂಜಾರಿ ಒಬ್ಬ ಅಪ್ರತಿಮ ಸಂಘಟಕ. ರಾಜಕೀಯ ನಾಯಕರಿಗೂ ಅವರು ಮಾರ್ಗದರ್ಶಕ. ಅವರ ನೇತೃತ್ವದಲ್ಲೇ ನಡೆಯುತ್ತಿರುವ ಮಂಗಳೂರು ದಸರಾವು ವರ್ಷದಿಂದ ವರ್ಷಕ್ಕೆ ವೈಭವನ್ನು ಹೆಚ್ಚಿಸಿಕೊಳ್ಳುತ್ತಿರುವುದು ಹೆಮ್ಮೆಯ ಸಂಗತಿ ಎಂದರು. ಕೇಂದ್ರದ ಮಾಜಿ ಸಚಿವ, ಕುದ್ರೋಳಿ ಕ್ಷೇತ್ರದ ಅಭಿವೃದ್ಧಿಯ ರೂವಾರಿ ಜನಾರ್ದನ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು. ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಮಾತನಾಡಿ, ಮಂಗಳೂರು ದಸರಾ ಮಹೋತ್ಸವ ವೈಭವಯುತವಾಗಿ ನಡೆಯುತ್ತಿದ್ದು, ಮುಂದಿನ ವರ್ಷದಿಂದ ಮೈಸೂರು,…
ತುಮಕೂರು ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ; ನಿತಿನ್ ಗಡ್ಕರಿ ಜೊತೆ ಸೋಮಣ್ಣ ಚರ್ಚೆ
ನವದೆಹಲಿ: ಕೇಂದ್ರ ರೈಲ್ವೇ ಮತ್ತು ಜಲ ಶಕ್ತಿ ರಾಜ್ಯ ಸಚಿವ ವಿ ಸೋಮಣ್ಣ ನವರು ಕೇಂದ್ರ ಸಾರಿಗೆ ಮತ್ತು ರಾಷ್ಟ್ರೀಯ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿಯಾಗಿ, ತುಮಕೂರು ಜಿಲ್ಲೆಯ ವಿವಿಧ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳ ಬಗ್ಗೆ ಚರ್ಚಿಸಿದರು ಈ ವೇಳೆ, ಸ್ಮಾರ್ಟ್ ಸಿಟಿ ತುಮಕೂರು ನಗರದ ಬೈಪಾಸ್ ನಿರ್ಮಾಣ ಹಂತ 02ರ ಮಲ್ಲಸಂದ್ರ (NH-73) ಯಿಂದ ವಸಂತನರಸಾಪುರ (NH-48) ದವರೆಗೆ ರಾಷ್ಟ್ರೀಯ ಹೆದ್ದಾರಿಯ ಕಾಮಗಾರಿಯ ಕಾರ್ಯಸಾಧ್ಯತೆಯನ್ನು (Alignment) ಮರುಪರಿಶೀಲಿಸಲು ಅಥವಾ ತಾಂತ್ರಿಕ ತಜ್ಞರ ತಂಡವನ್ನು ನಿಯೋಜಿಸಲು ಸಂಬಂಧಪಟ್ಟವರಿಗೆ ನಿರ್ದೇಶಿಸಲು ಸಚಿವರಲ್ಲಿ ಕೋರಲಾಯಿತು ಎಂದು ಸಚಿವ ವಿ ಸೋಮಣ್ಣ ತಿಳಿಸಿದ್ದಾರೆ. ತುಮಕೂರು – ಕೊರಟಗೆರೆ – ಮಧುಗಿರಿ – ಪಾವಗಡ – ರಾಯದುರ್ಗ – ಬಳ್ಳಾರಿ (225 ಕಿಮೀ) ರಸ್ತೆಯನ್ನು ರಾಷ್ಟ್ರೀಯ ಹೆದ್ದಾರಿಯಾಗಿ ಮೇಲ್ದರ್ಜೆಗೇರಿಸಲು ಅನುಮೋದನೆ ನೀಡಬೇಕೆಂದು ಮನವಿ ಮಾಡಿರುವುದಾಗಿ ವಿ ಸೋಮಣ್ಣ ಮಾಹಿತಿ ಹಂಚಿಕೊಂಡಿದ್ದಾರೆ.…
ಮಂಗಳೂರು ದಸರಾದಲ್ಲಿ ಮುದ್ದು ಶಾರದೆ ಕಲರವ
ಮಂಗಳೂರು: ಶೃಂಗೇರಿ ಶಾರದಾ ಪೀಠದ ವೈಭವ, ವೀಣೆಯ ನುಡಿಸುತ್ತಾ ಮುಗುಳ್ನಗುವ ಕಂದಮ್ಮಗಳು, ಕೈಯೊಲು ತಾವರೆ, ಪುಸ್ತಿಕೆಗಳಿಂದ ಶೋಭಿಸುವ ವಿದ್ಯಾಧಿದೇವತೆ. ಈ ಮಧ್ಯೆ ನವರೂಪಗಳಲ್ಲಿ ಶೋಭಿಸುವ ನವದುರ್ಗೆಯರು. ಇದು ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ನಡೆಯುತ್ತಿರುವ ಮಂಗಳೂರು ದಸರಾ ಮಹೋತ್ಸವದಲ್ಲಿ ಬುಧವಾರ ನಡೆದ ಮುದ್ದು ಶಾರದೆ ಮತ್ತು ನವದುರ್ಗೆಯರ ಸ್ಪರ್ಧೆಯ ಝಲಕ್. ಪಿ.ಕೆ.ಲೋಹಿತ್ ಸ್ಮರಣಾರ್ಥ ಪಿ.ಕೆ ದೂಜ ಪೂಜಾರಿ ಗ್ರೂಪ್ಸ್ ಪ್ರಾಯೋಜಕತ್ವದಲ್ಲಿ ಆಭರಣ ಜುವೆಲರ್ಸ್ ಮತ್ತು ಅದಿರಾ ಪ್ರಾಪರ್ಟಿಸ್ ಸಹಕಾರದೊಂದಿಗೆ ಈ ಸ್ಪರ್ಧೆ ಆಯೋಜಿಸಲಾಗಿತ್ತು. ಈ ಸ್ಪರ್ಧೆಯಲ್ಲಿ ನೂರಾರು ಮಂದಿ ಪುಟಾಣಿಗಳು ಮುದ್ದು ಶಾರದೆ, ನವದುರ್ಗೆಯರಾಗಿ ಶೋಭಿಸಿದರು. ಉದ್ಘಾಟನೆ: ಕ್ಷೇತ್ರಾಡಳಿತ ಸಮಿತಿ ಅಧ್ಯಕ್ಷ ಜೈರಾಜ್ ಎಚ್. ಸೋಮಸುಂದರಂ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕೋಶಾಧಿಕಾರಿ ಪದ್ಮರಾಜ್ ಆರ್. ಪೂಜಾರಿ, ಉಪಾಧ್ಯಕ್ಷೆ ಊರ್ಮಿಳಾ ರಮೇಶ್, ಟ್ರಸ್ಟಿ ಕೃತಿನ್ ಧೀರಜ್ ಅಮೀನ್, ಅಭಿವೃದ್ಧಿ ಸಮಿತಿ ಸದಸ್ಯ ವಾಸುದೇವ ಕೋಟ್ಯಾನ್ , ಪಿ.ಕೆ. ಪೂಜಾರಿ…
