ಆಂಧ್ರ ಪ್ರದೇಶದಲ್ಲಿ GBS ಸೋಂಕಿನ ತಲ್ಲಣ; ಇಬ್ಬರು ಬಲಿ

ಅಮರಾವತಿ: ದೇಶಾದ್ಯಂತ ಆತಂಕದ ಏಲ್ ಎಬ್ಬಿಸಿರುವ GBS (Guillain Barre Syndrome) ಸೋಂಕಿಗೆ ಆಂಧ್ರ ಪ್ರದೇಶದಲ್ಲಿ ಇಬ್ಬರು ಬಲಿಯಾಗಿದ್ದಾರೆ. ಈ ಘಟನೆಯ ನಂತರ ಮಾರಣಾಂತಿಕ ಸೋಂಕಿನ ಬಗ್ಗೆ ಸರ್ಕಾರ ತೀವ್ರ ಕಟ್ಟೆಚ್ಚರ ವಹಿಸಿದೆ. ‘ಸೋಂಕು ದೃಢಪಟ್ಟ 45 ವರ್ಷದ ಮಹಿಳೆ ಕಮಲಮ್ಮ ಎಂಬವರು ಭಾನುವಾರ ಗುಂಟೂರಿನ ಸರ್ಕಾರಿ ಜನರಲ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದರೆ, 10 ವರ್ಷದ ಬಾಲಕ ಸುಮಾರು 10 ದಿನಗಳ ಹಿಂದೆ ಶ್ರೀಕಾಕುಳಂನ ಖಾಸಗಿ ವೈದ್ಯಕೀಯ ಕಾಲೇಜಿನಲ್ಲಿ ಸಾವನ್ನಪ್ಪಿದ್ದಾರೆ ಎಂದು ಆಂಧ್ರ ಪ್ರದೇಶ ಆರೋಗ್ಯ ಸಚಿವ ಸತ್ಯ ಕುಮಾರ್ ಯಾದವ್ ಮಾಹಿತಿ ನೀಡಿದ್ದಾರೆ. ಈ ನಡುವೆ ಆಂಧ್ರ ಪ್ರದೇಶದಲ್ಲಿ ಸುಮಾರು 17 GBS ಸೋಂಕಿನ ಪ್ರಕರಣಗಳು ದಾಖಲಾಗಿವೆ ಎಂದು ಸಚಿವರು ತಿಳಿಸಿದ್ದಾರೆ.

ನುಡಿದಂತೆ ನಡೆದ ಮೋದಿ: ಯಮುನಾ ನದಿಯನ್ನು ಸ್ವಚ್ಛ ಕಾರ್ಯಕ್ಕೆ ಮುನ್ನುಡಿ

ನವದೆಹಲಿ: ದೆಹಲಿ ವಿಧಾನಸಭಾ ಚುನಾವಣೆಯ ಸಮಯದಲ್ಲಿ ನೀಡಿದ ಯಮುನೆ ಶುದ್ಧಿ ಭರವಸೆಯನ್ನು ಈಡೇರಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಪ್ರಕ್ರಿಯೆ ಆರಂಭಿಸಿದ್ದಾರೆ. ದಿಲ್ಲಿ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಯಮುನಾ ನದಿಯನ್ನು ಸ್ವಚ್ಛಗೊಳಿಸುವುದಾಗಿ ಪ್ರಧಾನಿ ನರೇಂದ್ರ ಮೋದಿ ಭರವಸೆ ನೀಡಿದ್ದರು. ಇದೀಗ ನುಡಿದಂತೆ ನಡೆಯುವ ಸಂಕಲ್ಪ ಮಾಡಿರುವ ಮೋದಿ, ರಾಜಧಾನಿಯಲ್ಲಿ ಹೊಸ ಸರ್ಕಾರ ರಚನೆಯಾಗುವ ಮೊದಲೇ ಈ ಯೋಜನೆಯ ಕೆಲಸ ಆರಂಭಕ್ಕೆ ಮುನ್ನುಡಿ ಬರೆದಿದ್ದಾರೆ. ಮೋದಿ ಅವರ ಸಲಹೆಯಂತೆ, ರಾಷ್ಟ್ರ ರಾಜಧಾನಿ ನಗರದಲ್ಲಿ ಭಾನುವಾರ ಯಮುನಾ ನದಿಯ ಶುಚಿಗೊಳಿಸುವ ಪ್ರಕ್ರಿಯೆಯನ್ನು ಪ್ರಾರಂಭಿಸಲಾಗಿದೆ. ಕಸದ ಸ್ಕಿಮ್ಮರ್‌ಗಳು, ಕಳೆ ಕೊಯ್ಲು ಯಂತ್ರಗಳು ಮತ್ತು ಡ್ರೆಡ್ಜಿಂಗ್ ಯುಟಿಲಿಟಿ ಕ್ರಾಫ್ಟ್‌ಗಳಂತಹ ಆಧುನಿಕ ಯಂತ್ರಗಳನ್ನು ಬಳಸಲಾಯಿತು. ಇದಕ್ಕೂ ಮೊದಲು, ದೆಹಲಿ ಲೆಫ್ಟಿನೆಂಟ್ ಗವರ್ನರ್ (ಎಲ್-ಜಿ) ವಿ.ಕೆ. ಸಕ್ಸೇನಾ ಅವರು ಶನಿವಾರ ಮುಖ್ಯ ಕಾರ್ಯದರ್ಶಿ ಮತ್ತು ಹೆಚ್ಚುವರಿ ಮುಖ್ಯ ಕಾರ್ಯದರ್ಶಿ (ನೀರಾವರಿ ಮತ್ತು ಪ್ರವಾಹ ನಿಯಂತ್ರಣ)…

ದೆಹಲಿ ಸುತ್ತಮುತ್ತ ಭೂಕಂಪನ ಹಿನ್ನೆಲೆ; ಎಚ್ಚರವಹಿಸಲು ಜನತೆಗೆ ಪ್ರಧಾನಿ ಸಲಹೆ

ನವದೆಹಲಿ: ದೆಹಲಿ-ಎನ್‌ಸಿಆರ್ ಸುತ್ತಮುತ್ತ ಲಘು ಭೂಕಂಪನವಾಗಿದ್ದು, ಈ ಹಿನ್ನೆಲೆಯಲ್ಲಿ ರಾಜಧಾನಿ ಸುತ್ತಮುತ್ತಲ ನಿವಾಸಿಗಳು ಶಾಂತವಾಗಿರಲು ಮತ್ತು ಸುರಕ್ಷತಾ ಮುನ್ನೆಚ್ಚರಿಕೆಗಳನ್ನು ಅನುಸರಿಸಲು ಪ್ರಧಾನಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸಾಮಾಜಿಕ ಜಾಲತಾಣ ‘X’ನಲ್ಲಿ ಪೋಸ್ಟ್ ಹಾಕಿರುವ ಪ್ರಧಾನಿ, ದೆಹಲಿ ಮತ್ತು ಹತ್ತಿರದ ಪ್ರದೇಶಗಳಲ್ಲಿ ಕಂಪನಗಳು ಅನುಭವವಾಗಿವೆ. ಎಲ್ಲರೂ ಶಾಂತವಾಗಿರಲು ಮತ್ತು ಸುರಕ್ಷತಾ ಮುನ್ನೆಚ್ಚರಿಕೆಗಳನ್ನು ಅನುಸರಿಸಲು, ಸಂಭವನೀಯ ನಂತರದ ಕಂಪನಗಳ ಬಗ್ಗೆ ಎಚ್ಚರದಿಂದಿರಲು ಒತ್ತಾಯಿಸುತ್ತಿದ್ದಾರೆ. ಅಧಿಕಾರಿಗಳು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ ಎಂದು ಬರೆದುಕೊಂಡಿದ್ದಾರೆ. <blockquote class=”twitter-tweet”><p lang=”en” dir=”ltr”>Tremors were felt in Delhi and nearby areas. Urging everyone to stay calm and follow safety precautions, staying alert for possible aftershocks. Authorities are keeping a close watch on the situation.</p>&mdash; Narendra Modi (@narendramodi) <a href=”https://twitter.com/narendramodi/status/1891299628118585688?ref_src=twsrc%5Etfw”>February 17,…

ಮೈಸೂರಿನಲ್ಲಿ ಒಂದೇ ಕುಟುಂಬದ ನಾಲ್ವರು ಸಾವಿಗೆ ಶರಣು

ಮೈಸೂರು: ಕುಟುಂಬದ ನಾಲ್ವರು ಸಾವಿಗೆ ಶರಣಾಗಿರುವ ದಾರುಣ ಘಟನೆ ಮೈಸೂರಿನ ವಿಶ್ವೇಶ್ವರಯ್ಯನಗರದ ಅಪಾರ್ಟ್ಮೆಂಟ್​​ನಲ್ಲಿ ನಡೆದಿದೆ. ಚೇತನ್​​ (45), ರೂಪಾಲಿ (43), ಪ್ರಿಯಂವಧಾ (62) ಹಾಗೂ ಕುಶಾಲ್ ​(15) ಮೃತ ದುರ್ದೈವಿಗಳು. ತನ್ನ ಕುಟುಂಬ ಸದಸ್ಯರಿಗೆ ವಿಷ ವುಣಿಸಿ ನಂತರ ಚೇತನ್ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಅನುಮಾನ ವ್ಯಕ್ತವಾಗಿದೆ. ಚೇತನ್ ಆತ್ಮಹತ್ಯೆಗೂ ಮುನ್ನ ಡೆತ್​ನೋಟ್ ಬರೆದಿಟ್ಟಿದ್ದಾರೆ ಎನ್ನಲಾಗಿದ್ದು, ಹಣಕಾಸಿನ ಸಮಸ್ಯೆ ಬಗ್ಗೆ ಅದರಲ್ಲಿ ಬರೆಯಲಾಗಿದೆ ಎನ್ನಲಾಗಿದೆ. ವಿದ್ಯಾರಣ್ಯಪುರಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದ್ದು, ಮೈಸೂರು ನಗರ ಪೊಲೀಸ್ ಕಮಿಷನರ್​ ಸೀಮಾ ಲಾಟ್ಕರ್, ಸೇರಿದಂತೆ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ದೆಹಲಿ ಸುತ್ತಮುತ್ತ ಲಘು ಭೂಕಂಪನ; ಜನರಲ್ಲಿ ಆತಂಕ

ನವದೆಹಲಿ: ರಾಷ್ಟ್ರ ರಾಜಧಾನಿ ಸುತ್ತಮುತ್ತ ಇಂದು ಬೆಳಿಗ್ಗೆ ಭೂಕಂಪನದ ಅನುಭವವಾಗಿದೆ. ದೆಹಲಿ-ಎನ್​ಸಿಆರ್​ನಲ್ಲಿ ಲಘು ಕಂಪನವಾಗಿದ್ದು, ಕಂಪನದ ಪ್ರಮಾಣವು 4.0 ತೀವ್ರತೆಯಷ್ಟಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸೋಮವಾರ ನಸುಕಿನ ಜಾವ ದೆಹಲಿ, ನೋಯ್ಡಾ, ಗಾಜಿಯಾಬಾದ್ ಮತ್ತು ಗುರುಗ್ರಾಮ ಸೇರಿದಂತೆ ಹಲವು ಪ್ರದೇಶಗಳಲ್ಲಿ ಭೂಕಂಪನದ ಅನುಭವವಾಗಿದೆ. ಸೋಮವಾರ ಬೆಳಗ್ಗೆ 5.36 ಸುಮಾರಿಗೆ ಭೂಮಿ ಕಂಪಿಸಿದ್ದು ನಿದ್ದೆಯಲ್ಲಿದ್ದವರೂ ಎಚ್ಚರಗೊಂಡು ಏಕಾಏಕಿ ಮನೆಗಳಿಂದ ಹೊರಗೆ ಓಡಿ ಬಂದಿದ್ದಾರೆ.

ಭಾರೀ ನಿರೀಕ್ಷೆ ಹುಟ್ಟಿಸಿದ ‘ದಿ ಡೆವಿಲ್’ ಟೀಸರ್

ನಟ ದರ್ಶನ್ ಜನ್ಮದಿನದ ಸಂಭ್ರಮದ ನಡುವೆಯೇ ಅವರ ಹೊಸ ಸಿನಿಮಾ ‘ದಿ ಡೆವಿಲ್’ ಟೀಸರ್​ ರಿಲೀಸ್ ಆಗಿದೆ. ಮಿಲನ ಪ್ರಕಾಶ್ ಅವರು ನಿರ್ದೇಶನ ಮಾಡುತ್ತಿರುವ ಈ ಸಿನಿಮಾದ ಟೀಸರ್​ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು ಅಭಿಮಾನಿಗಳ ಮೆಚ್ಚುಗೆಗೆ ಪಾತ್ರವಾಗಿದೆ. ‘ಕಾಟೇರ’ ಸಿನಿಮಾದ ಬಿಗ್ ಸಕ್ಸಸ್ ನಂತರ ದರ್ಶನ್ ಶುರು ಮಾಡಿದ ಸಿನಿಮಾ ‘ದಿ ಡೆವಿಲ್’ ಭಾರೀ ನಿರೀಕ್ಷೆಯನ್ನು ಹುಟ್ಟುಹಾಕಿದೆ. ಆದರೆ, ದರ್ಶನ್ ಅವರು ಕೊಲೆ ಪ್ರಕರಣದಲ್ಲಿ ಆರೋಪಿ ಆಗಿ ಜೈಲು ಸೇರಿದ್ದರು. ಹಾಗಾಗಿ ಹಲವು ತಿಂಗಳ ಕಾಲ ‘ದಿ ಡೆವಿಲ್’ ಚಿತ್ರೀಕರಣಕ್ಕೆ ಬ್ರೇಕ್ ಬಿದ್ದಿತ್ತು. ಇದೀಗ ಟೀಸರ್ ಬಿಡುಗಡೆಯಾಗಿದ್ದು ಅಭಿಮಾನಿಗಳು ಖುಷಿಪಟ್ಟಿದ್ದಾರೆ.

ಒಂದು ಧರ್ಮಕ್ಕಷ್ಟೇ ಸೀಮಿತವಿಲ್ಲದೆ ಇಡೀ ಸಮಾಜಕ್ಕಾಗಿ RSS ಕೆಲಸ ಮಾಡುತ್ತಿದೆ: ಸರಸಂಘಚಾಲಕ್

ಕೋಲ್ಕತ್ತಾ: ಕೇವಲ ಒಂದು ಧರ್ಮಕ್ಕಷ್ಟೇ ಸೀಮಿತವಿಲ್ಲದೆ ಇಡೀ ಸಮಾಜಕ್ಕಾಗಿ ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS ಸಂಘಟನಾ ಕೆಲಸ ಮಾಡುತ್ತಿದೆ ಎಂದು ಸರಸಂಘಚಾಲಕ್ ಮೋಹನ್ ಭಾಗವತ್ ಹೇಳಿದ್ದಾರೆ. ಒಗ್ಗಟ್ಟಿನ ಹಿಂದೂ ಸಮಾಜಕ್ಕಾಗಿ ಸಂಘಟನೆಯನ್ನು ರಚಿಸುವುದು ಸಂಘದ ಮುಖ್ಯ ಉದ್ದೇಶವಾಗಿದೆ ಎಂದವರು ತಿಳಿಸಿದ್ದಾರೆ. ಪಶ್ಚಿಮ ಬಂಗಾಳದ ಪಶ್ಚಿಮ ಬುರ್ದ್ವಾನ್ ಜಿಲ್ಲೆಯ ಬುರ್ದ್ವಾನ್‌ನಲ್ಲಿ ನಡೆದ ಬೃಹತ್ ಸಮಾವೇಶದಲ್ಲಿ ಮಾತನಾಡಿದ ಅವರು, ಹಿಂದೂ ಸಮಾಜದ ಏಕತೆಗೆ ಏಕೆ ಒತ್ತು ನೀಡಲಾಗುತ್ತದೆ ಎಂದರು. ಭಾರತವು ಕೇವಲ ಭೌಗೋಳಿಕವಲ್ಲ, ಅದರ ಗಾತ್ರವು ಕಾಲಾನಂತರದಲ್ಲಿ ಬದಲಾಗುತ್ತದೆ. ಭಾರತವು ತನ್ನದೇ ಆದ ಸ್ವಭಾವವನ್ನು ಹೊಂದಿದೆ. ಆ ಸ್ವಭಾವದೊಂದಿಗೆ ಬದುಕಲು ಸಾಧ್ಯವಿಲ್ಲ ಎಂದು ಭಾವಿಸಿದವರು ತಮ್ಮದೇ ಆದ ದೇಶವನ್ನು ಮಾಡಿಕೊಂಡರು. ದೇಶದಿಂದ ಬೇರ್ಪಡದವರು ಭಾರತದ ಸ್ವಭಾವವನ್ನು ಬಯಸಿದ್ದರು ಎಂದು ಭಾಗವತ್ ಹೇಳಿದರು. ಹಿಂದೂಗಳು ಪ್ರಪಂಚದ ವೈವಿಧ್ಯತೆಯನ್ನು ಸ್ವೀಕರಿಸುವ ಮೂಲಕ ವರ್ಷಗಳಿಂದ ಮುಂದುವರೆದಿದ್ದಾರೆ ಎಂದ ಅವರು, ಈ ಮೂಲಕ ಒಗ್ಗಟ್ಟು ಪ್ರದರ್ಶಿಸುತ್ತಿದ್ದಾರೆ…

ರೈಲು ನಿಲ್ದಾಣದಲ್ಲಿನ ಕಾಲ್ತುಳಿತ: ರೈಲ್ವೆ ಸಚಿವರ ರಾಜೀನಾಮೆಗೆ ಕಾಂಗ್ರೆಸ್ ಆಗ್ರಹ

ನವದೆಹಲಿ: ರಾಷ್ಟ್ರ ರಾಜಧಾನಿಯ ರೈಲು ನಿಲ್ದಾಣದಲ್ಲಿನ ಕಾಲ್ತುಳಿತ ಘಟನೆಯ ನೈತಿಕ ಹೊಣೆ ಹೊತ್ತು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ರಾಜೀನಾಮೆ ನೀಡಬೇಕು ಎಂದು ಕಾಂಗ್ರೆಸ್ ಒತ್ತಾಯಿಸಿದೆ. ಶನಿವಾರ ರಾತ್ರಿ ಸಂಭವಿಸಿದ ಕಾಲ್ತುಳಿತದಲ್ಲಿ 18 ಮಂದಿ ಸಾವನ್ನಪ್ಪಿದ್ದಾರೆ. ಈ ಘಟನೆ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಕಾಂಗ್ರೆಸ್ ವಕ್ತಾರೆ ಸುಪ್ರಿಯಾ ಅವರು ಶ್ರಿನಾಟೆ, ವೈಷ್ಣವ್ ರಾಜೀನಾಮೆಗೆ ಆಗ್ರಹಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸರಿಯಾದ ವ್ಯವಸ್ಥೆ ಇಲ್ಲದಿರುವುದರಿಂದಾಗಿ ಈ ದುರ್ಘಟನೆ ಸಂಭವಿಸಿದೆ ಎಂದು ಆರೋಪಿಸಿದರು. ಈ ಘಟನೆಯ ನೈತಿಕ ಹೊಣೆ ಹೊತ್ತು ವೈಷ್ಣವ್ ರಾಜೀನಾಮೆ ನೀಡದಿದ್ದರೆ, ರೈಲು ನಿಲ್ದಾಣದಲ್ಲಿ ದುರಾವಸ್ಥೆಯಿಂದಾಗಿ ಅವರನ್ನು ಸಚಿವ ಸ್ಥಾನದಿಂದ ವಜಾಗೊಳಿಸಬೇಕು ಎಂದು ಆಗ್ರಹಿಸಿದರು.

‘ಸಿದ್ದರಾಮಯ್ಯ ನಮ್ಮ ನಾಯಕರು, ಅವರ ಹೆಸರು ದುರ್ಬಳಕೆ ಬೇಡಿ’ ಎಂದ ಶಿವಕುಮಾರ್

ಬೆಂಗಳೂರು: ‘ಸಿದ್ದರಾಮಯ್ಯ ನಮ್ಮ ಪಕ್ಷದ ನಾಯಕರು. ಅದರಲ್ಲಿ ಯಾವುದೇ ಪ್ರಶ್ನೆ ಇಲ್ಲ. ದಿನಬೆಳಗಾದರೆ ಅವರ ಹೆಸರನ್ನು ದುರ್ಬಳಕೆ ಮಾಡಿಕೊಳ್ಳುವುದು ಬೇಡ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕೆಪಿಸಿಸಿ ಕಚೇರಿ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ಪಕ್ಷಕ್ಕೆ ಅನಿವಾರ್ಯ ಎಂಬ ಹೇಳಿಕೆ ಬಗ್ಗೆ ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯಿಸಿದರು. ಸಿದ್ದರಾಮಯ್ಯ ಅವರು ನಮ್ಮ ನಾಯಕರು. ಅವರು ಎಲ್ಲಾ ಚುನಾವಣೆಗೂ ಬೇಕು. ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯ್ತಿ, ವಿಧಾನ ಸಭೆ, ಸಂಸತ್ ಚುನಾವಣೆ ಎಲ್ಲದಕ್ಕೂ ಬೇಕು. ಅವರನ್ನು ಪಕ್ಷ ಎರಡು ಬಾರಿ ಸಿಎಂ ಮಾಡಿದೆ. ಸಿದ್ದರಾಮಯ್ಯ ಅವರು ಎರಡನೇ ಬಾರಿಗೆ ಸಿಎಂ ಆಗಿ ಉತ್ತಮ ಕೆಲಸ ಮಾಡುತ್ತಿದ್ದು, ಅವರ ಹೆಸರು ಮಾಧ್ಯಮಗಳಿಗೆ ಆಹಾರವಾಗುವಂತೆ ಗೊಂದಲದ ಹೇಳಿಕೆ ಬೇಡ ಎಂದು ಡಿಕೆಶಿ ಹೇಳಿದರು. ಪಕ್ಷದಲ್ಲಿ ಗೊಂದಲದ ಹೇಳಿಕೆ ಯಾಕೆ ಎಂದು ಕೇಳಿದಾಗ, “ಯಾವುದೇ ಗೊಂದಲ ಇಲ್ಲ. ಕಾಂಗ್ರೆಸ್ ಪಕ್ಷ…

ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸಿದ್ಧರಾಗಿ: ಕಾಂಗ್ರೆಸ್ ಕಾರ್ಯಕರ್ತರಿಗೆ ಡಿಕೆಶಿ ಕರೆ

ಬೆಂಗಳೂರು: ಯಾವುದೇ ಕ್ಷಣದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಯಬಹುದು. ಹೀಗಾಗಿ ಪಕ್ಷದ ನಾಯಕರು ಹಾಗೂ ಕಾರ್ಯಕರ್ತರು ಸಜ್ಜಾಗಬೇಕು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಕರೆ ನೀಡಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಹಿರಿಯ ನಾಯಕರು ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾಧ್ಯಮಗೋಷ್ಠಿ ಉದ್ದೇಶಿಸಿ ಮಾತನಾಡಿದ ಶಿವಕುಮಾರ್, ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸುವ ವಿಚಾರವಾಗಿ ನ್ಯಾಯಾಲಯದಿಂದ ಸಧ್ಯದಲ್ಲೇ ಸೂಚನೆ ಬರುವ ಸಾಧ್ಯತೆ ಇದೆ. ಇನ್ನು ಬೆಂಗಳೂರು ನಗರ ಪಾಲಿಕೆ ಚುನಾವಣೆಯನ್ನು ನಡೆಸಬೇಕಾಗಿದ್ದು ಗ್ರೇಟರ್ ಬೆಂಗಳೂರು ವಿಚಾರವಾಗಿ ಅಭಿಪ್ರಾಯ ಸಂಗ್ರಹಕ್ಕೆ ಮುಂದಾಗಿದ್ದೇವೆ. ಯಾವುದೇ ಕ್ಷಣದಲ್ಲಿ ಈ ಚುನಾವಣೆಗಳು ಘೋಷಣೆಯಾಗಬಹುದು. ಇದಕ್ಕೆ ನಾವೆಲ್ಲರೂ ಸಿದ್ಧತೆ ಮಾಡಿಕೊಳ್ಳಬೇಕು ಎಂದರು. “ಈ ಚುನಾವಣೆಗಳ ಸಿದ್ಧತೆಗಾಗಿ ಕಾರ್ಯಾಧ್ಯಕ್ಷರ ನೇತೃತ್ವದಲ್ಲಿ ಉಪಾಧ್ಯಕ್ಷರುಗಳನ್ನು ಸೇರಿಸಿಕೊಂಡು ವಿಭಾಗವಾರು ಸಮಿತಿ ರಚಿಸಲಿದ್ದೇವೆ. ಈ ಸಮಿತಿ ಮಾರ್ಚ್ ಒಳಗಾಗಿ ರಾಜ್ಯ ಪ್ರವಾಸ ಮಾಡಿ ಎಲ್ಲಾ ಕಡೆ ಸಮನ್ವಯತೆ ಸಾಧಿಸಿ ತಯಾರಿ ಮಾಡಿಕೊಳ್ಳಬೇಕು. ಎಲ್ಲೆಲ್ಲಿ ನಾಯಕರ ಮಧ್ಯೆ ಹೊಂದಾಣಿಕೆ…