ನವದೆಹಲಿ: ಬೆಂಬಲಬೆಲೆ ಯೋಜನೆಯಡಿ ಹೆಸರು, ಉದ್ದು, ಸೋಯಾಬಿನ್, ಸೂರ್ಯಕಾಂತಿ ಮತ್ತಿತರ ಕೃಷಿ ಉತ್ಪನ್ನಗಳ ಖರೀದಿಗೆ ತಕ್ಷಣ ಅನುಮೊದನೆ ನೀಡುವಂತೆ ಕೃಷಿ ಸಚಿವರಾದ ಎನ್ ಚಲುವರಾಯಸ್ವಾಮಿ ಕೇದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ. ನವದೆಹಲಿಯಲ್ಲಿ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವಾಲಯ ಆಯೋಜಿಸಿದ್ದ ರಾಷ್ಟ್ರೀಯ ರಬಿ ಅಭಿಯಾನ ಸಮ್ಮೇಳನದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಬೆಲೆ ಬೆಂಬಲ ಯೋಜನೆ (PSS) ಪ್ರಸ್ತುತ ಹೆಸರುಕಾಳು, ಉದ್ದು, ಸೂರ್ಯಕಾಂತಿ, ಸೋಯಾಬೀನ್ ಮತ್ತು ಶೇಂಗಾ ಬೆಲೆಗಳು ಕನಿಷ್ಠ ಬೆಂಬಲ ಬೆಲೆಗಿಂತ (MSP) ಕಡಿಮೆ ಇದೆ. ಇದರಿಂದ ರಾಜ್ಯದ ರೈತರು ತೀವ್ರ ಸಂಕಷ್ಟದಲ್ಲಿದ್ದಾರೆ. ತಕ್ಷಣವೇ ಈ ಬೆಳೆಗಳನ್ನು ಬೆಲೆ ಬೆಂಬಲ ಯೋಜನೆ ಅಡಿಯಲ್ಲಿ ಸಂಗ್ರಹಿಸಲು ಅನುಮೋದನೆ ನೀಡುವಂತೆ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವರಾದ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ಮನವಿ ಮಾಡಿದರು. ಕಳೆದ ಕೆಲವು ವರ್ಷಗಳಿಂದ ರಾಜ್ಯಕ್ಕೆ ನಿರಂತರವಾಗಿ ಬೆಂಬಲ ಮತ್ತು ಸಹಕಾರ ನೀಡುತ್ತಿರುವ…
Year: 2025
ಅಕ್ರಮ ಭೂ ಸ್ವಾಧೀನ ಪ್ರಕ್ರಿಯೆ ಕೈ ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆ
ಬೆಂಗಳೂರು: ಬಿಡದಿ, ಬೈರಮಂಗಲ ಮತ್ತು ಕಂಚುಗಾರನಹಳ್ಳಿಯಲ್ಲಿ ಭೂ ಸ್ವಾಧೀನ ಮಾಡುತ್ತಿರುವುದು ಅಕ್ರಮವಾಗಿದೆ. ಇದನ್ನು ಸರ್ಕಾರ ಕೂಡಲೇ ಕೈ ಬಿಡಬೇಕು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆಗ್ರಹಿಸಿದ್ದಾರೆ. ರೈತರ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಗ್ರೇಟರ್ ಬೆಂಗಳೂರು ಹೆಸರಲ್ಲಿ ಕಾಂಗ್ರೆಸ್ ಸರ್ಕಾರ ಬಿಡದಿ, ಬೈರಮಂಗಲ ಮತ್ತು ಕಂಚುಗಾರನಹಳ್ಳಿಯಲ್ಲಿ 9,600 ಎಕರೆ ಜಮೀನನ್ನು ಸ್ವಾಧೀನ ಮಾಡುತ್ತಿದೆ. ಈ ಪೈಕಿ 6,500 ಎಕರೆ ಕೃಷಿಭೂಮಿ ಇದೆ. ಇಲ್ಲಿ 10 ಲಕ್ಷಕ್ಕೂ ಅಧಿಕ ತೆಂಗು ಹಾಗೂ ಮಾವಿನ ಮರಗಳಿವೆ. ಪ್ರತಿ ದಿನ 6 ಲಕ್ಷ ಲೀಟರ್ ಹಾಲು ಉತ್ಪಾದನೆಯಾಗಿ ಕೆಎಂಎಫ್‌ಗೆ ತಲುಪುತ್ತಿದೆ. 3 ಸಾವಿರಕ್ಕೂ ಅಧಿಕ ರೈತರು ಹಾಗೂ ಕಾರ್ಮಿಕರು ಕೃಷಿಯನ್ನು ನಂಬಿಕೊಂಡಿದ್ದಾರೆ. ಇಷ್ಟು ಫಲವತ್ತಾದ ಜಮೀನುಗಳನ್ನು ಸ್ವಾಧೀನ ಮಾಡಿಕೊಂಡು ಸೈಟುಗಳನ್ನು ನೀಡಲಾಗುತ್ತಿದೆ ಎಂದರು. ಹೌಸಿಂಗ್ ಬೋರ್ಡ್‌ನಿಂದ 560 ಎಕರೆ ಜಮೀನು ಸ್ವಾಧೀನಕ್ಕೆ ಪಡೆದು ಸೈಟುಗಳನ್ನು ನಿರ್ಮಿಸಿದೆ. ಆದರೂ ಇಲ್ಲಿ ಯಾರೂ ಮನೆಗಳನ್ನು…
ಕಾಂಗ್ರೆಸ್ ಶಾಸಕ ಕೆ.ವೈ.ನಂಜೇಗೌಡ ಆಯ್ಕೆ ಅಸಿಂಧು; ಹೈಕೋರ್ಟ್
ಬೆಂಗಳೂರು: 2023ರ ವಿಧಾನಸಭಾ ಚುನಾವಣೆಯಲ್ಲಿ ಜಯಗಳಿಸಿದ್ದ ಮಾಲೂರು ಕ್ಷೇತ್ರದ ಕಾಂಗ್ರೆಸ್ ಶಾಸಕ ಕೆ.ವೈ.ನಂಜೇಗೌಡ ಅವರ ಆಯ್ಕೆಯನ್ನು ಹೈಕೋರ್ಟ್ ಅಸಿಂಧು ಎಂದು ಘೋಷಿಸಿದೆ. ಮಹತ್ವದ ತೀರ್ಪು ಪ್ರಕಟಿಸಿರುವ ಹೈಕೋರ್ಟ್, ಮತಗಳ ಮರು ಎಣಿಕೆ ಮಾಡುವಂತೆ ನಿರ್ದೇಶನ ನೀಡಿದೆ. 2023ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ನಂಜೇಗೌಡ ಅವರು ಬಿಜೆಪಿ ಅಭ್ಯರ್ಥಿ ಮಂಜುನಾಥಗೌಡ ಅವರ ವಿರುದ್ಧ ಕೇವಲ 248 ಮತಗಳ ಅಂತರದಿಂದ ಗೆದ್ದಿದ್ದರು. ಹೀಗಾಗಿ ಮತ ಎಣಿಕೆ ವೇಳೆ ಲೋಪವಾಗಿದೆ ಎಂದು ಬಿಜೆಪಿ ಅಭ್ಯರ್ಥಿ ಮಂಜುನಾಥಗೌಡ ಆರೋಪಿಸಿದ್ದರು. ಈ ಸಂಬಂಧದ ತಕರಾರು ಕುರಿತಂತೆ ಸುದೀರ್ಘ ವಿಚಾರಣೆ ನಡೆಸಿದ ಹೈಕೋರ್ಟ್ ಮಂಗಳವಾರ ತೀರ್ಪು ಪ್ರಕಟಿಸಿದೆ. ನಂಜೇಗೌಡ ಆಯ್ಕೆ ಅಸಿಂಧು ಕೋರಿ ಬಿಜೆಪಿ ಪರಾಜಿತ ಅಭ್ಯರ್ಥಿ ಮಂಜುನಾಥಗೌಡ ಅವರ ಮನವಿಯನ್ನು ಪುರಸ್ಕರಿಸಿರುವ ಹೈಕೋರ್ಟ್, ಜಿಲ್ಲಾ ಚುನಾವಣಾ ಅಧಿಕಾರಿ ಮತ ಎಣಿಕೆಯ ವಿಡಿಯೋ ಸಲ್ಲಿಸಿಲ್ಲ ಎಂಬ ಆರೋಪವನ್ನೂ ಗಂಭೀರವಾಗಿ ಪರಿಗಣಿಸಿದೆ. ಜಿಲ್ಲಾ ಚುನಾವಣಾಧಿಕಾರಿ ವಿರುದ್ಧ…
ಸಮೀಕ್ಷೆಯ ನೆಪದಲ್ಲಿ ಜಾತಿ-ಉಪ ಜಾತಿ ಹೆಸರಲ್ಲಿ ಸಮಾಜ ಒಡೆಯುವ ನೀಚತನ; ವಿಜಯೇಂದ್ರ ಆಕ್ರೋಶ
ಬೆಂಗಳೂರು: ಕರಡು ಜಾತಿ ಪಟ್ಟಿಯಿಂದ ಕ್ರಿಶ್ಚಿಯನ್ ಉಪಜಾತಿಗಳನ್ನು ತೆಗೆದುಹಾಕಬೇಕೆಂದು ಒತ್ತಾಯಿಸಿ, ಬಿಜೆಪಿ ನಾಯಕರ ನಿಯೋಗವು ಮಂಗಳವಾರ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿತು. ಸಾಮಾಜಿಕ ನ್ಯಾಯ ಜಾಗೃತಿ ವೇದಿಕೆಯ ಬ್ಯಾನರ್ ಅಡಿಯಲ್ಲಿ ಬಿಜೆಪಿ ಆಯೋಜಿಸಿದ್ದ ದುಂಡುಮೇಜು ಸಭೆಯಲ್ಲಿ, ಜಾತಿ ಜನಗಣತಿ (ಸಾಮಾಜಿಕ-ಆರ್ಥಿಕ, ಶೈಕ್ಷಣಿಕ ಸಮೀಕ್ಷೆ) ಕುರಿತು ಏಳು ನಿರ್ಣಯಗಳನ್ನು ಅಂಗೀಕರಿಸಲಾಯಿತು. ಸಭೆಯಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಜಗದೀಶ್ ಶೆಟ್ಟರ್, ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ವಿ. ಸೋಮಣ್ಣ, ಜೊತೆಗೆ ಪ್ರಭಾಕರ್ ಕೋರೆ, ವಿಜಯ್ ಸಂಕೇಶ್ವರ್ ಹಾಗೂ ವೀರಶೈವ-ಲಿಂಗಾಯತ ಸಮುದಾಯದ ನಾಯಕರು ಪಾಲ್ಗೊಂಡಿದ್ದರು. ಸಭೆಯ ನಿರ್ಣಯ ಪ್ರಕಾರ, ಮತಾಂತರಗೊಂಡವರಿಗೆ ಮೀಸಲು ನೀಡಲಾದ ಉಪಜಾತಿ ಸಂಕೇತಗಳನ್ನು ತಕ್ಷಣ ಹಿಂತೆಗೆದುಕೊಳ್ಳಬೇಕು. ಲಿಂಗಾಯತ ಕ್ರಿಶ್ಚಿಯನ್, ವಿಶ್ವಕರ್ಮ ಕ್ರಿಶ್ಚಿಯನ್, ದೇವಾಂಗ ಕ್ರಿಶ್ಚಿಯನ್, ಕುರುಬ ಕ್ರಿಶ್ಚಿಯನ್ ಸೇರಿ ಒಟ್ಟು 47 ಉಪಜಾತಿಗಳನ್ನು ಕರಡು ಪಟ್ಟಿಯಿಂದ ತೆಗೆದುಹಾಕಬೇಕು ಎಂದು ಒತ್ತಾಯಿಸಲಾಯಿತು. “ಈ ಉಪಜಾತಿಗಳನ್ನು…
ಜಾತಿ ಕದನ: ರಾಜಭವನ ಅಂಗಳಕ್ಕೆ ಜಿಗಿದ ಕಮಲ ನಿಯೋಗ
ಬೆಂಗಳೂರು: ಕರಡು ಜಾತಿ ಪಟ್ಟಿಯಿಂದ ಕ್ರಿಶ್ಚಿಯನ್ ಉಪಜಾತಿಗಳನ್ನು ತೆಗೆದುಹಾಕಬೇಕೆಂದು ಒತ್ತಾಯಿಸಿ, ಬಿಜೆಪಿ ನಾಯಕರ ನಿಯೋಗವು ಮಂಗಳವಾರ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿತು. ಸಾಮಾಜಿಕ ನ್ಯಾಯ ಜಾಗೃತಿ ವೇದಿಕೆಯ ಬ್ಯಾನರ್ ಅಡಿಯಲ್ಲಿ ಬಿಜೆಪಿ ಆಯೋಜಿಸಿದ್ದ ದುಂಡುಮೇಜು ಸಭೆಯಲ್ಲಿ, ಜಾತಿ ಜನಗಣತಿ (ಸಾಮಾಜಿಕ-ಆರ್ಥಿಕ, ಶೈಕ್ಷಣಿಕ ಸಮೀಕ್ಷೆ) ಕುರಿತು ಏಳು ನಿರ್ಣಯಗಳನ್ನು ಅಂಗೀಕರಿಸಲಾಯಿತು. ಸಭೆಯಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಜಗದೀಶ್ ಶೆಟ್ಟರ್, ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ವಿ. ಸೋಮಣ್ಣ, ಜೊತೆಗೆ ಪ್ರಭಾಕರ್ ಕೋರೆ, ವಿಜಯ್ ಸಂಕೇಶ್ವರ್ ಹಾಗೂ ವೀರಶೈವ-ಲಿಂಗಾಯತ ಸಮುದಾಯದ ನಾಯಕರು ಪಾಲ್ಗೊಂಡಿದ್ದರು. ಸಭೆಯ ನಿರ್ಣಯ ಪ್ರಕಾರ, ಮತಾಂತರಗೊಂಡವರಿಗೆ ಮೀಸಲು ನೀಡಲಾದ ಉಪಜಾತಿ ಸಂಕೇತಗಳನ್ನು ತಕ್ಷಣ ಹಿಂತೆಗೆದುಕೊಳ್ಳಬೇಕು. ಲಿಂಗಾಯತ ಕ್ರಿಶ್ಚಿಯನ್, ವಿಶ್ವಕರ್ಮ ಕ್ರಿಶ್ಚಿಯನ್, ದೇವಾಂಗ ಕ್ರಿಶ್ಚಿಯನ್, ಕುರುಬ ಕ್ರಿಶ್ಚಿಯನ್ ಸೇರಿ ಒಟ್ಟು 47 ಉಪಜಾತಿಗಳನ್ನು ಕರಡು ಪಟ್ಟಿಯಿಂದ ತೆಗೆದುಹಾಕಬೇಕು ಎಂದು ಒತ್ತಾಯಿಸಲಾಯಿತು. “ಈ ಉಪಜಾತಿಗಳನ್ನು…
ಯುವ ರೈತರಿಗೆ ಪಿಎಂಎಫ್ ಎಂಇ ಯೋಜನೆ ಮಾದರಿ: ಎನ್. ಚಲುವರಾಯಸ್ವಾಮಿ.
ಚಿಕ್ಕಮಗಳೂರು: ಕೃಷಿ ಕುಟುಂಬದ ಯುವಕರು, ಉದ್ಯೋಗಕ್ಕಾಗಿ ಅಲೆದಾಡುವ ಬದಲು, ಬೇರೆಯವರ ಎದುರು ಕೆಲಸಕ್ಕೆ ಅವಲಂಬಿತರಾಗಿರುವವರಿಗೆ ಕಿರು ಉದ್ದಿಮೆ ಮಾದರಿಯಾಗಿದೆ ಹಾಗೂ ಸಹಕಾರಿಯಾಗಲಿದೆ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದ್ದಾರೆ. ಚಿಕ್ಕಮಗಳೂರು ಜಿಲ್ಲಾ ಪಂಚಾಯ್ತಿ ಸಭಾಂಗಣದಲ್ಲಿ ಇಂದು ನಡೆದ ಪ್ರಧಾನಮಂತ್ರಿಗಳ ಕಿರು ಆಹಾರ ಸಂಸ್ಕರಣ ಉದ್ದಿಮೆಗಳ ನಿಯಮಬದ್ಧಗೊಳಿಸುವುಕೆ ಯೋಜನೆ ಕುರಿತು ಅರಿವು ಮೂಡಿಸುವ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು. ವಿದ್ಯೆಗೂ ವೃತ್ತಿಗೂ ಸಂಬಂಧವಿಲ್ಲ. ಶಿಕ್ಷಣ ಜ್ಞಾನಕಷ್ಟೇ ದಾರಿಯಾಗಿದೆ. ಸಾಮನ್ಯ ರೈತ ಕೃಷಿಯಲ್ಲಿ ತೊಡಗುವುದಕ್ಕೂ, ವಿದ್ಯಾವಂತರಾದವರೂ ತೊಡಗುವುದಕ್ಕೂ ವ್ಯತ್ಯಾಸವಿದೆ ಎಂದರು. ಕಿರು ಉದ್ದಿಮೆ ನಡೆಸುವ ರೈತರಿಗೆ, ಹಾಗೂ ಯುವ ಸಮುದಾಯಕ್ಕೆ ದೊಡ್ಡ ಪ್ರಮಾಣದಲ್ಲಿ ಸಬ್ಸಿಡಿಯನ್ನು ಕಾಂಗ್ರೆಸ್ ಸರ್ಕಾರ ನೀಡುತ್ತಿದೆ. ಒಟ್ಟು 15 ಲಕ್ಷ ರೂಪಾಯಿ ಸಬ್ಸಡಿಯಲ್ಲಿ 9 ಲಕ್ಷ ಸಬ್ಸಡಿಯನ್ನು ರಾಜ್ಯ ಸರ್ಕಾರ ಭರಿಸಿದರೆ, 6 ಲಕ್ಷ ರೂಪಾಯಿ ಸಬ್ಸಿಡಿಯನ್ನು ಮಾತ್ರ ಕೇಂದ್ರ ಸರ್ಕಾರ ಭರಿಸುತ್ತಿದೆ. ಇದು ದೇಶದಲ್ಲಿ ನಮ್ಮ ಕರ್ನಾಟಕ ರಾಜ್ಯದಲ್ಲಿ…
ಟ್ರಂಪ್ ಆಪ್ತ ‘ಚಾರ್ಲಿ ಕಿರ್ಕ್’ ಹತ್ಯೆ; ರಾಜಕೀಯ ಸೇಡಿನ ಶಂಕೆ
ಒರೆಮ್ (ಉತಾಹ್): ಅಮೆರಿಕದಲ್ಲಿ ಯುವ ರಿಪಬ್ಲಿಕನ್‌ರನ್ನು ಒಗ್ಗೂಡಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಸಂಪ್ರದಾಯವಾದಿ ಕಾರ್ಯಕರ್ತ ಹಾಗೂ ಅಮೆರಿಕಾ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಆಪ್ತ ಮಿತ್ರ ಚಾರ್ಲಿ ಕಿರ್ಕ್ (31) ಆಗಂತುಕರ ಗುಂಡಿಗೆ ಬಲಿಯಾಗಿದ್ದಾರೆ. ಭಾರತೀಯ ಕಾಲಮಾನ ಪ್ರಕಾರ ಗುರುವಾರ ರಾತ್ರಿ ಉತಾಹ್‌ನ ಒರೆಮ್‌ನ ಕಾಲೇಜೊಂದರ ಕಾರ್ಯಕ್ರಮದಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಅವರು ಬಲಿಯಾಗಿದ್ದಾರೆ. ಈ ಘಟನೆ ಅಮೆರಿಕದಲ್ಲಿ ಆತಂಕ ಸೃಷ್ಟಿಸಿದೆ. ಪದೇಪದೆ ಇಂತಹ ದಾಳಿ ನಡೆಯುತ್ತಿರುವುದು ದುರದೃಷ್ಟಕರ ಎಂದು ನಾಯಕರು ಹೇಳಿದ್ದಾರೆ. “ಇದು ನಮ್ಮ ರಾಜ್ಯಕ್ಕೂ ರಾಷ್ಟ್ರಕ್ಕೂ ಕಪ್ಪು ದಿನ. ನಿಜಕ್ಕೂ ರಾಜಕೀಯ ದುರುದ್ದೇಶಪೂರಿತ ಹತ್ಯೆ” ಎಂದು ಉತಾಹ್ ಗವರ್ನರ್ ಸ್ಪೆನ್ಸರ್ ಕಾಕ್ಸ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಘಟನೆ ಸಂಬಂಧ ಯಾರನ್ನೂ ಬಂಧಿಸಲಾಗಿಲ್ಲ. ಆರಂಭದಲ್ಲಿ ಒಬ್ಬರನ್ನು ವಶಕ್ಕೆ ಪಡೆದಿದ್ದೇವೆ ಎಂದು FBI ನಿರ್ದೇಶಕ ಕಾಶ್ ಪಟೇಲ್ ತಿಳಿಸಿದ್ದಾರೆ. ಆದರೆ ವಿಚಾರಣೆ ನಂತರ ಅವರನ್ನು ಬಿಡುಗಡೆ…
EDಯಿಂದ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಬಂಧನ
ಬೆಂಗಳೂರು: ಬೇಲೆಕೇರಿ ಬಂದರಿನಿಂದ ಅಕ್ರಮ ಕಬ್ಬಿಣದ ಅದಿರು ರಫ್ತು ಮಾಡಿದ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ ಸತೀಶ್ ಕೃಷ್ಣ ಸೈಲ್ ಅವರನ್ನು ಜಾರಿ ನಿರ್ದೇಶನಾಲಯ ಮಂಗಳವಾರ ಬಂಧಿಸಿದೆ. ಈ ಪ್ರಕರಣದಲ್ಲಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಸೈಲ್ ಅವರಿಗೆ ಏಳು ವರ್ಷಗಳ ಜೈಲು ಶಿಕ್ಷೆ ವಿಧಿಸಿತ್ತು. ಸಾವಿರಾರು ಟನ್ ಕಬ್ಬಿಣದ ಅದಿರನ್ನು ಬಂದರಿನಿಂದ ಕಳವು ಮಾಡಿ ಅಕ್ರಮವಾಗಿ ಸಾಗಿಸಲಾಗಿತ್ತು ಎಂಬುದು ಆರೋಪ ಬಗ್ಗೆ ಇಡಿ ಕೂಡಾ ಇಸಿಐಆರ್ ದಾಖಲಿಸಿಕೊಂಡು ತನಿಖೆ ನಡೆಸುತ್ತಿತ್ತು. ವಿಚಾರಣೆಗೆ ಹಾಜರಾಗುವಂತೆ ಸೈಲ್ ಅವರಿಗೆ ಸಮನ್ಸ್ ಜಾರಿ ಮಾಡಿತ್ತು. ಮಂಗಳವಾರ ಶಾಂತಿನಗರ ಕಚೇರಿಗೆ ಹಾಜರಾದ ಸೈಲ್ ತನಿಖೆಗೆ ಸಹಕರಿಸದ ಹಿನ್ನೆಲೆಯಲ್ಲಿ ಅಧಿಕಾರಿಗಳು ಬಂಧಿಸಿದ್ದಾರೆ ಎನ್ನಲಾಗಿದೆ.
ಕುಡ್ಲದ ‘ಪಾತಕ ಲೋಕ’ ಮಟ್ಟಹಾಕಿದ್ದ ಪೋಲೀಸ್ ಕಥೆ ಅಂದು.. ಆ ಪಾತಕ ಜಗತ್ತಿನ ಜೊತೆ ಇದೀಗ ಹೊಸತೊಂದು ಸಿನಿ ಕಥೆಯ ಝಲಕ್
ತುಳುನಾಡಿನ ಭೂಗತ ಇತಿಹಾಸ ಕರಾವಳಿಗಷ್ಟೇ ಸೀಮಿತವಲ್ಲ. ಮುಂಬೈ ಸಹಿತ ಅಂತಾರಾಷ್ಟ್ರೀಯ ಮಟ್ಟದಲ್ಲೂ ಚಾಚಿಕೊಂಡದ್ದು ಕರಾಳ ಸತ್ಯ. ಅದರಲ್ಲೂ ಮಂಗಳೂರು ಸುತ್ತಮುತ್ತಲ ಪಾತಕ ಸಾಮ್ರಾಜ್ಯದ ಘಟನಾವಳಿಗಳು ರೋಮಾಂಚನ. ಪ್ರತಿಯೊಂದು ಕೃತ್ಯವೂ ಕರಾಳತೆಯ ಸನ್ನಿವೇಶವನ್ನು ಹುಟ್ಟುಹಾಕಿತ್ತು. ಆದರೆ ಖಡಕ್ ಪೋಲೀಸ್ ಅಧಿಕಾರಿಗಳ ಖದರ್ ಕುಡ್ಲದ ಕೆಲವು ಪುಂಡರ ಗ್ಯಾಂಗನ್ನು ಮಟ್ಟ ಹಾಕಿತ್ತು. ಇದೀಗ ಆ ಭೂಗತ ಜಗತ್ತು ಮತ್ತು ಖಾಕಿ ಖಾದರ್ ಸನ್ನಿವೇಶಗಳನ್ನು ನೆನಪಿಸುವ ಕಥೆಯು ಬೆಳ್ಳಿತೆರೆಯಲ್ಲಿ ಪ್ರತಿಧ್ವನಿಸಲಿದೆ. ಏನಿದು ಕಥಾಹಂದರ? ಕುಡ್ಲದ ಪಾತಕ ಲೋಕವನ್ನು ಸಿಡಿಗುಂಡಿನ ಚಂಡಮದ್ದಳೆ ಎಂಬುದಾಗಿ ಹೆಸರಾಂತ ಪತ್ರಕರ್ತ ರವಿಬೆಳಗೆರೆ ಬಣ್ಣಿಸಿದ್ದರು. ಕುಡ್ಲ ಅಂದರೆ ತುಳುನಾಡಿನ ರಾಜಧಾನಿ. ಈ ತುಳುನಾಡು ಒಂದು ಕಾಲದಲ್ಲಿ ಪಾತಕ ಲೋಕದ ಹೆಡ್ ಕ್ವಾಟ್ರಾಸ್! ಏಳು ಕಡಲಾಚೆ ಕುಳಿತು ಭೂಗತ ಜಗತ್ತನ್ನು ಆಳಿದವರೆಲ್ಲ ಇಲ್ಲಿಂದಲೇ ಫೀಲ್ಡ್ ಗೆ ಎಂಟ್ರಿ ಕೊಟ್ಟವರು. ಎಕ್ಕೂರು, ಎಮ್ಮೆಕೆರೆ, ಬೋಳಾರ, ಮಠದ ಕಣಿ, ಬಳ್ಳಾಲ್ ಬಾಗ್, ಬರ್ಕೆ,…
ಕೇಂದ್ರದಿಂದ ರಾಜ್ಯಕ್ಕೆ ಎಲೆಕ್ಟ್ರಿಕ್ ಬಸ್ ಗಿಫ್ಟ್ ಎಂದ ಬಿಜೆಪಿಗೆ ಟಾಂಗ್.. ಬಸ್ ಕೊಡುಗೆಯ ಇತಿಹಾಸ ತೆರೆದಿಟ್ಟ ಕಾಂಗ್ರೆಸ್
ಬೆಂಗಳೂರು: ಎಲೆಕ್ಟ್ರಿಕ್ ಬಸ್ಸುಗಳನ್ನು ಖಾಸಗಿಯವರಿಂದ ಬಾಡಿಗೆಗೆ ಪಡೆದು ಸಾರಿಗೆ ಸಂಸ್ಥೆಗಳಿಗೆ ನೀಡಿರುವುದನ್ನು ಕೇಂದ್ರ ಸರ್ಕಾರ ಬಸ್ ಖರೀದಿ ಮಾಡಿ ಸಾರಿಗೆ ಸಂಸ್ಥೆಗಳಿಗೆ ನೀಡಿದೆ ಎಂದು ತಪ್ಪಾಗಿ ಅರ್ಥೈಸಿ ಬೊಬ್ಬೆ ಹೊಡೆಯುವುದನ್ನು ಬಿಟ್ಟು ಬಾಡಿಗೆ/ಲೀಸ್ ಮತ್ತು ಖರೀದಿಯ ವ್ಯತ್ಯಾಸವನ್ನಾದರೂ ತಿಳಿಯಬೇಡವೇ? ಒಂದಷ್ಟಾದರೂ ಸಾಮಾನ್ಯ ಜ್ಞಾನ ಬೆಳೆಸಿಕೊಳ್ಳಿ, ನಿಮ್ಮ ಮಾಹಿತಿಗಾಗಿ ಓದಿಕೊಳ್ಳಿ ಎಂದು ಕಾಂಗ್ರೆಸ್ ಪಕ್ಷ ಟಾಂಗ್ ಕೊಟ್ಟಿದೆ. PM e-Drive / PM e-Seva ಯೋಜನೆಗಳಡಿಯಲ್ಲಿ ಸಾರಿಗೆ ಸಂಸ್ಥೆಗಳಿಗೆ 5250 ಎಲೆಕ್ಟ್ರಿಕ್ ಬಸ್ಸುಗಳನ್ನು ಕೇಂದ್ರ ಸರ್ಕಾರ ಖರೀದಿಸಿ ನೀಡಿದೆ ಎಂಬ ಭ್ರಮೆಯಲ್ಲಿ ತಪ್ಪು ಮಾಹಿತಿಯೊಂದಿಗೆ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡು ಸಂಭ್ರಮಿಸಿದ ವಾಸ್ತವ ಸತ್ಯ ಏನೆಂದರೆ, ವಿನಿಮ್ಮ ಕೇಂದ್ರ ಸರ್ಕಾರ ಎಲೆಕ್ಟ್ರಿಕ್ ಬಸ್ಸುಗಳನ್ನು ಖರೀದಿಸಲು ಖಾಸಗಿ ಕಂಪನಿಗಳಿಗೆ ಅಂದರೆ ಒಲೆಕ್ಟ್ರಾ, ಜೆ.ಬಿ.ಎಂ, ಟಾಟಾ, ಸ್ವಿಪ್ಟ್ ಮೊಬಿಲಿಟಿ ಅವರಿಗೆ ಅನುದಾನ ನೀಡಿ, ಖಾಸಗಿಯವರು ಸಾರಿಗೆ ಸಂಸ್ಥೆಗಳಿಗೆ ಆ ಬಸ್ಸುಗಳನ್ನು ಬಾಡಿಗೆಗೆ/ಲೀಸ್ ಆಧಾರದಲ್ಲಿ…
