JJM ಯೋಜನೆಯಲ್ಲೂ ಕರ್ನಾಟಕದ ಬಗ್ಗೆ ಕೇಂದ್ರದ ಮಲತಾಯಿ ಧೋರಣೆ; ಖರ್ಗೆ

ಬೆಂಗಳೂರು: ರಾಜ್ಯ ಸರ್ಕಾರಗಳ ಸಾಧನೆಯ ನೆರಳಲ್ಲಿ ಬಿಜೆಪಿಯ ಕೇಂದ್ರ ಸರ್ಕಾರ ಬೆನ್ನು ತಟ್ಟಿಕೊಳ್ಳುವುದು ಹೊಸ ವಿಷಯವೇನೂ ಅಲ್ಲ ಎಂದಿರುವ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ, ಜಲಜೀವನ್ ಮಿಷನ್ ಹೆಸರಿಗೆ ಮಾತ್ರ ಕೇಂದ್ರ ಪುರಸ್ಕೃತ ಯೋಜನೆಯಾದರೂ ವಾಸ್ತವದಲ್ಲಿ ಕರ್ನಾಟಕದ ಮಟ್ಟಿಗೆ ಕೇಂದ್ರ ತೀರಸ್ಕೃತ ಯೋಜನೆಯಾಗಿದೆ ಎನ್ನಬಹುದು ಎಂದಿದ್ದಾರೆ. ರಾಜ್ಯದಲ್ಲಿ ಪ್ರಸಕ್ತ ಸಾಲಿನವರೆಗೆ JJM ಯೋಜನೆಗಾಗಿ ಒಟ್ಟು ₹35,698,58 ಕೋಟಿ ಖರ್ಚು ಮಾಡಲಾಗಿದೆ. ಇದರಲ್ಲಿ ರಾಜ್ಯ ಸರ್ಕಾರ ಖರ್ಚು ಮಾಡಿರುವುದು ₹24,598,45 ಕೋಟಿ. ಇದುವರೆಗೂ ಕೇಂದ್ರ ಸರ್ಕಾರ ಕೊಟ್ಟಿರುವುದು ₹11, 786, 63 ಕೋಟಿ ಮಾತ್ರ. ಪ್ರಸಕ್ತ ಸಾಲಿನವರೆಗೆ ಕೇಂದ್ರ ಸರ್ಕಾರ ಬಿಡುಗಡೆಗೊಳಿಸಬೇಕಾದ ಮೊತ್ತ ₹13,004,63 ಕೋಟಿ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹಂಚಿಕೊಂಡಿದ್ದಾರೆ. ಬಿಜೆಪಿಯ ಕೇಂದ್ರ ಸರ್ಕಾರದ ಕರ್ನಾಟಕದೆಡೆಗಿನ ಮಲತಾಯಿ ಧೋರಣೆ ಹೇಗಿದೆ ಎಂದು ನೋಡುವುದಾದರೆ 2024-25ನೇ ಆರ್ಥಿಕ ಸಾಲಿನಲ್ಲಿ JJM ಯೋಜನೆಗಾಗಿ ₹3,804,41 ಕೋಟಿಯನ್ನು ಕರ್ನಾಟಕಕ್ಕೆ ಹಂಚಿಕೆ…

ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಸೂರ್ಯಕಾಂತ್ ಪ್ರಮಾಣ ವಚನ

ನವದೆಹಲಿ: ದೇಶದ 53ನೇ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾಯಮೂರ್ತಿ ಸೂರ್ಯಕಾಂತ್ ಅವರು ಸೋಮವಾರ ಪ್ರಮಾಣವಚನ ಸ್ವೀಕರಿಸಿದರು. ರಾಷ್ಟ್ರಪತಿ ಭವನದಲ್ಲಿ ನಡೆದ ಪ್ರಮಾಣವಚನ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅವರಿಗೆ ಪ್ರಮಾಣವಚನ ಬೋಧಿಸಿದರು. ಸೂರ್ಯಕಾಂತ್ ಅವರು ಹಿಂದಿಯಲ್ಲಿ ದೇವರ ಹೆಸರಿನಿಂದ ಪ್ರಮಾಣವಚನ ಪಠಿಸಿದರು. ಸಮಾರಂಭದಲ್ಲಿಉಪರಾಷ್ಟ್ರಪತಿ ಸಿ.ಪಿ ರಾಧಾಕೃಷ್ಣನ್, ಪ್ರಧಾನ ಮಂತ್ರಿ ನರೇಂದ್ರ ಮೋದಿ, ಸಚಿವರು, ಸುಪ್ರೀಂ ಕೋರ್ಟ್ ನ್ಯಾಯಾಧೀಶರು ಹಾಗೂ ಭೂತಾನ್, ಕೀನ್ಯಾ, ಮಲೇಷ್ಯಾ, ಬ್ರೆಜಿಲ್, ಮಾರಿಷಸ್, ನೇಪಾಳ ಮತ್ತು ಶ್ರೀಲಂಕಾದ ಮುಖ್ಯ ನ್ಯಾಯಮೂರ್ತಿಗಳು ಹಾಜರಿದ್ದರು. ಹರಿಯಾಣ ಮುಖ್ಯಮಂತ್ರಿ ನೈಬ್ ಸಿಂಗ್ ಸೈನಿ ಕೂಡ ಸಮಾರಂಭಕ್ಕೆ ಹಾಜರಾಗಿದ್ದರು. ನ್ಯಾಯಮೂರ್ತಿ ಸೂರ್ಯಕಾಂತ್ ಅವರ ಅಧಿಕಾರಾವಧಿ ಸುಮಾರು 14 ತಿಂಗಳು. ಅವರು ಫೆಬ್ರವರಿ 9, 2027 ರಂದು ನಿವೃತ್ತಿಗೊಳ್ಳಲಿದ್ದಾರೆ. ಇತ್ತೀಚೆಗೆ ಸಿಜೆಐ ಪೀಠವನ್ನು ಖಾಲಿ ಮಾಡಿರುವ ಭೂಷಣ್ ಆರ್. ಗವಾಯಿ ಅವರು ಅಕ್ಟೋಬರ್ 30ರಂದು ತಮ್ಮ ಉತ್ತರಾಧಿಕಾರಿಯಾಗಿ ಸೂರ್ಯಕಾಂತ್ ಅವರನ್ನು ಶಿಫಾರಸು…

ಅಮಿತ್ ಶಾ ಭೇಟಿಯಾದ ಬಿ.ವೈ.ವಿಜಯೇಂದ್ರ;

ನವದೆಹಲಿ: ಬಿಹಾರ ವಿಧಾನಸಭಾ ಚುನಾವಣೆಯಲ್ಲಿ NDA ಪ್ರಚಂಡ ಗೆಲುವು ಸಾಧಿಸಿರುವ ಹಿನ್ನೆಲೆಯಲ್ಲಿ ರಾಷ್ಟ್ರೀಯ ಬಿಜೆಪಿಯನ್ನು ಪಕ್ಷದ ಕರ್ನಾಟಕ ಪ್ರದೇಶ ಘಟಕ ಅಭಿನಂಧಿಸಿದೆ. ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಅಮಿತ್ ಷಾ ಅವರನ್ನು ಅವರನ್ನು ಭೇಟಿ ಮಾಡಿದ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅಭಿನಂಧಿಸಿದರು. ಈ ಕುರಿತಂತೆ ಮಾಹಿತಿ ಹಂಚಿಕೊಂಡಿರುವ ವಿಜಯೇಂದ್ರ, ರಾಷ್ಟ್ರ ರಾಜಕಾರಣಕ್ಕೆ ಸ್ಪಷ್ಟ ದಿಕ್ಸೂಚಿ ಎಂದು ವಿಶ್ಲೇಷಿಸಲಾಗಿದ್ದ ಬಿಹಾರ ಚುನಾವಣೆಯನ್ನು ಅತ್ಯಂತ ಸಮರ್ಥವಾಗಿ ನಿಭಾಯಿಸಿ, NDA ಮಿತ್ರಕೂಟ ಐತಿಹಾಸಿಕ ದಿಗ್ವಿಜಯ ಸಾಧಿಸುವಲ್ಲಿ ಮಹತ್ವದ ಪಾತ್ರವಹಿಸಿ ಚುನಾವಣಾ ನೈಪುಣ್ಯತೆ ಮೆರೆದ ಮಾನ್ಯ ಅಮಿತ್ ಶಾ ಜಿ ಅವರು ಬಿಜೆಪಿಗೆ ಕಾರ್ಯಕರ್ತರಿಗೆ ಪ್ರೇರಣಾಶೀಲ ನಾಯಕರಾಗಿದ್ದಾರೆ ಎಂದು ಬಣ್ಣಿಸಿದ್ದಾರೆ. ಇಂದಿನ ಅವರ ಭೇಟಿಯ ಸಂದರ್ಭದಲ್ಲಿ ಕರ್ನಾಟಕದ ರಾಜಕಾರಣದ ಪ್ರಸ್ತುತ ವಿದ್ಯಮಾನಗಳ ಮಾಹಿತಿ ನೀಡಲಾಯಿತು.ಪಕ್ಷ ಸಂಘಟನೆ ಇನ್ನಷ್ಟು ಚುರುಕುಗೊಳಿಸುವ ನಿಟ್ಟಿನಲ್ಲಿ ಅಗತ್ಯ ಮಾರ್ಗದರ್ಶನ ಪಡೆಯಲಾಯಿತು ಎಂದವರು ತಿಳಿಸಿದ್ದಾರೆ.

ಕದನ ವಿರಾಮ ಉಲ್ಲಂಘನೆಗೆ ಇಸ್ರೇಲ್ ಎದಿರೇಟು; ವೈಮಾನಿಕ ದಾಳಿ, 20ಕ್ಕೂ ಹೆಚ್ಚು ಮಂದಿ ಸಾವು

ಗಾಜಾ: ಕದನ ವಿರಾಮ ಉಲ್ಲಂಘನೆಯಿಂದಾಗಿ ಪಶಿಮ ದಂಡೆ ಮತ್ತೊಮ್ಮೆ ಪ್ರಕ್ಷುಬ್ಧಗೊಂಡಿದೆ. ಉತ್ತರ ಮತ್ತು ಮಧ್ಯ ಗಾಜಾದಾದ್ಯಂತ ಇಸ್ರೇಲ್ ನಡೆಸಿದ ಡ್ರೋನ್, ಕ್ಷಿಪಣಿ ದಾಳಿಯಲ್ಲಿ ಕನಿಷ್ಠ 24 ಪ್ಯಾಲೆಸ್ಟೀನಿಯನ್ನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿವೆ. ಇಸ್ರೇಲ್ ವೈಮಾನಿಕ ದಾಳಿಯಲ್ಲಿ ಭಾರೀ ಮಾರಣಹೋಮವೇ ನಡೆದಿದ್ದು ಜೊತೆಗೆ ಮಕ್ಕಳು ಸೇರಿದಂತೆ 54 ಜನರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕಳೆದ, ಅಕ್ಟೋಬರ್ ನಲ್ಲಿ ಅಮೆರಿಕ ಮಧ್ಯಸ್ಥಿಕೆಯಲ್ಲಿ ಇಸ್ರೇಲ್ ಮತ್ತು ಹಮಾಸ್ ನಡುವೆ ಕದನ ವಿರಾಮ ಜಾರಿಗೆ ಬಂದಿತ್ತು. ಆದರೆ ಭಯೋತ್ಪಾದಕ” ದಾಳಿಯ ಪರಿಣಾಮವಾಗಿ ತಾನು ವೈಮಾನಿಕ ದಾಳಿ ಮಾಡಬೇಕಾಯಿತು ಎಂದು ಇಸ್ರೇಲ್​ ಮಿಲಿಟರಿ ಹೇಳಿದೆ.

ಭೂಸ್ವಾಧೀನ ಲೋಪಗಳ ಬಗ್ಗೆ ತನಿಖೆ: ಸರ್ಕಾರದಿಂದ ಕಠಿಣ ಕ್ರಮದ ಸೂಚನೆ

ಬೆಂಗಳೂರು: ನೀರಾವರಿ ಇಲಾಖೆ ಹಾಗೂ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಸಂಬಂಧಿಸಿದ ಭೂಸ್ವಾಧೀನ ಪ್ರಕರಣಗಳಲ್ಲಿ ನಡೆದಿದೆ ಎನ್ನಲಾದ ಗಂಭೀರ ಅಕ್ರಮಗಳ ಕುರಿತು ಸಮಗ್ರ ತನಿಖೆ ನಡೆಸುವ ನಿರ್ಧಾರವನ್ನು ರಾಜ್ಯ ಸರ್ಕಾರ ಕೈಗೊಂಡಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಶನಿವಾರ ಭೂಸ್ವಾಧೀನ ಪ್ರಕರಣಗಳ ಪರಿಶೀಲನಾ ಸಭೆಯ ನಂತರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, “ಕಳೆದ ಹಲವು ವರ್ಷಗಳಿಂದ ಬೇಜವಾಬ್ದಾರಿಯಾಗಿ ನಡೆಸಲಾದ ಕಾನೂನು ಕ್ರಮಗಳು, ನಿರ್ಲಕ್ಷ್ಯ ಮತ್ತು ಅನಿಶ್ಚಿತತೆಯಿಂದ ಸರ್ಕಾರಕ್ಕೆ ಸುಮಾರು ₹5 ಲಕ್ಷ ಕೋಟಿ ರೂ.ಗಳಷ್ಟು ನಷ್ಟ ಉಂಟಾಗುವ ಆತಂಕವಿದೆ,” ಎಂದು ಎಚ್ಚರಿಸಿದರು. “ಕರ್ತವ್ಯದಲ್ಲಿ ನಿರ್ಲಕ್ಷ್ಯ ತೋರಿದ ಅಧಿಕಾರಿಗಳನ್ನು ಅಮಾನತುಗೊಳಿಸಲಾಗುವುದು. ಪ್ರಕರಣಗಳನ್ನು ತಪ್ಪಾಗಿ ವಹಿಸಿದ ವಕೀಲರನ್ನು ಕೂಡ ತೆಗೆದುಹಾಕಲಾಗುವುದು,” ಎಂದು ಅವರು ಸ್ಪಷ್ಟಪಡಿಸಿದರು. ಈ ಕುರಿತು ಈಗಾಗಲೇ ವಿಶೇಷ ಪರಿಶೀಲನಾ ತಂಡ ಕಾರ್ಯಾರಂಭ ಮಾಡಿಕೊಂಡಿದ್ದು, 10–15 ದಿನಗಳೊಳಗೆ ಪ್ರಾಥಮಿಕ ವರದಿ ಸಲ್ಲಿಸುವ ನಿರೀಕ್ಷೆಯಿದೆ. ಅವಶ್ಯಕತೆ ಕಂಡುಬಂದಲ್ಲಿ ವಿಶೇಷ ತನಿಖಾ…

“ಯಾವುದೇ ಆಪತ್ತು ಬಂದರೂ NDA ಮೈತ್ರಿ ಮುರಿಯದು”: ದೇವೇಗೌಡ

ಬೆಂಗಳೂರು: “ರಾಷ್ಟ್ರೀಯ ಜನತಾ ದಳ (ಎಸ್) ಪಕ್ಷ ಹಾಗೂ ಎನ್‌ಡಿಎ ಮೈತ್ರಿ ಅಟಲ್‌! ಯಾವುದೇ ಸಂದರ್ಭದಲ್ಲೂ ಮೈತ್ರಿಯನ್ನು ಮುರಿಯುವ ಪ್ರಶ್ನೆ ಬರುವುದಿಲ್ಲ” ಎಂದು ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್‌.ಡಿ. ದೇವೇಗೌಡ ಘೋಷಿಸಿದ್ದಾರೆ. ಜೆಡಿಎಸ್ ರಜತ ಮಹೋತ್ಸವದ ಅಂಗವಾಗಿ ನಡೆದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ‘ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್‌ ಶಾ ಅವರ ನಾಯಕತ್ವದ ಮೇಲೆ ನಮಗೆ ಸಂಪೂರ್ಣ ವಿಶ್ವಾಸವಿದೆ. ನಮ್ಮ ಕಾರ್ಯಕರ್ತರು ಇದನ್ನು ಎಂದಿಗೂ ಮರೆಯಬಾರದು’ ಎಂದರು. ‘ಉತ್ತರದಲ್ಲಿ ಜೆಡಿ(ಯು), ದಕ್ಷಿಣದಲ್ಲಿ ಜೆಡಿ(ಎಸ್)’ ಎಂದು ಘೋಷಿಸಿದ ದೇವೇಗೌಡ, ‘ಅಲ್ಲಿ ನಿತೀಶ್‌ ಕುಮಾರ್ ಇದ್ದಾರೆ, ಇಲ್ಲಿ ಕುಮಾರಸ್ವಾಮಿ ಇದ್ದಾರೆ’ ಎಂದು ಪಕ್ಷದ ಬಲವನ್ನು ಹಿರಿಮೆಗೇರಿಸಿದರು. ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ಸಿದ್ದರಾಮಯ್ಯ ಅವರು “ಜೆಡಿಎಸ್‌ನಲ್ಲಿ ಇದ್ದಿದ್ದರೆ ನಾನು ಮುಖ್ಯಮಂತ್ರಿಯಾಗಲಿಲ್ಲ” ಎಂಬ ಹೇಳಿಕೆಯನ್ನು ಕಟುವಾಗಿ ತಳ್ಳಿ ಹಾಕಿದ ಗೌಡರು, “ನಾನು ಸ್ವತಃ…

ವರ್ಗಾವಣೆ ಕಿರುಕುಳಕ್ಕೆ ಬೇಸತ್ತು ವರುಣಾದಲ್ಲಿ ಮಹಿಳಾ ಅಧಿಕಾರಿ ಆತ್ಮಹತ್ಯೆಗೆ ಯತ್ನ; ಬಿಜೆಪಿ ಗರಂ

ಬೆಂಗಳೂರು: ವರ್ಗಾವಣೆ ಕಿರುಕುಳಕ್ಕೆ ಬೇಸತ್ತು ವರುಣಾದಲ್ಲಿ ಮಹಿಳಾ ಅಧಿಕಾರಿ ಆತ್ಮಹತ್ಯೆಗೆ ಯತ್ನಿಸಿರುವ ಪ್ರಕರಣದಲ್ಲಿ ಸಿಎಂ ಪುತ್ರ ಯತೀಂದ್ರ ಅವರ ಕೈವಾಡವಿರುವ ಬಗ್ಗೆ ಪ್ರತಿಪಕ್ಷ ಬಿಜೆಪಿ ಸಂಶಯ ವ್ಯಕ್ತಪಡಿಸಿದೆ. ಸಿಎಂ ಸ್ವಕ್ಷೇತ್ರದಲ್ಲೇ ಅಧಿಕಾರಿಗಳಿಗೆ ಇಷ್ಟು ಕಿರುಕುಳ ಇರುವಾಗ ಉಳಿದಕಡೆ ಏನು ಕಥೆ ಎಂದು ಬಿಜೆಪಿ ಪ್ರಶ್ನಿಸಿದೆ. ವರ್ಗಾವಣೆ ಕಿರುಕುಳಕ್ಕೆ ಬೇಸತ್ತು ಸಿಎಂ @siddaramaiah ಸ್ವಕ್ಷೇತ್ರ ವರುಣಾದಲ್ಲೇ ಮಹಿಳಾ ಅಧಿಕಾರಿ ಸರ್ಕಾರಿ ಕಛೇರಿಯೊಳಗೆ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಈ ಕಿರುಕುಳದ ಹಿಂದೆ ವರ್ಗಾವಣೆ ಕಿಂಗ್ ಪಿನ್ ವರುಣಾ ಉಸ್ತುವಾರಿ ಯತೀಂದ್ರ ಸಿದ್ದರಾಮಯ್ಯನವರ ಕೈವಾಡ ಶಂಕೆ ಮೂಡುತ್ತಿದೆ. ಸಿಎಂ ಸ್ವಕ್ಷೇತ್ರದಲ್ಲೇ ಅಧಿಕಾರಿಗಳಿಗೆ ಇಷ್ಟು ಕಿರುಕುಳ… pic.twitter.com/HPsBKWbvFG — BJP Karnataka (@BJP4Karnataka) November 22, 2025 ಸಾಮಾಜಿಕ ಮಾಧ್ಯಮ ‘X’ ನಲ್ಲಿ ಪೋಸ್ಟ್ ಹಾಕಿರುವ ಬಿಜೆಪಿ, ವರ್ಗಾವಣೆ ಕಿರುಕುಳಕ್ಕೆ ಬೇಸತ್ತು ಸಿಎಂ ಸಿದ್ದರಾಮಯ್ಯರ ಸ್ವಕ್ಷೇತ್ರ ವರುಣಾದಲ್ಲೇ ಮಹಿಳಾ ಅಧಿಕಾರಿ ಸರ್ಕಾರಿ ಕಛೇರಿಯೊಳಗೆ ಆತ್ಮಹತ್ಯೆಗೆ…

ಮಹಾಯೋಗಿ ಶ್ರೀ ಶಿವಶರಣ ಮಲ್ಲಪ್ಪತಾತ ಚರಿತ್ರೆ ಸಿನಿಮಾ ಚಿತ್ರೀಕರಣ ಆರಂಭ

ಸಿಂದಿಗೇರಿ: ಕುರುಗೋಡು ತಾಲೂಕಿನ ಸಿಂದಿಗೇರಿ ಗ್ರಾಮದಲ್ಲಿ ದಾತ್ರಿ ರಂಗಸಂಸ್ಥೆ ಸಿರಿಗೇರಿ ವತಿಯಿಂದ ಆಯೋಜಿಸಿದ್ದ ಕಲಾ ತಂಡದಿಂದ ಶರಣ ಹರಳಯ್ಯ ಜೀವನ ಆಧಾರಿತ ನಾಟಕ ಪ್ರದರ್ಶನ, ಸಿಂದಿಗೇರಿ ಗ್ರಾಮದ ವಿದ್ಯಾರ್ಥಿನಿಯರಿಂದ ನೃತ್ಯ ಪ್ರದರ್ಶನದೊಂದಿಗೆ ಶ್ರೀ ಶಿವಶರಣ ಮಲ್ಲಪ್ಪತಾತನವರ ಚಲನಚಿತ್ರ ಉದ್ಘಾಟನೆ ಗಮನಸೆಳೆಯಿತು. ಸಿಂದಿಗೇರಿ ಗ್ರಾಮದ ಧಾರ್ಮಿಕ ಹಾಗೂ ಸಾಂಸ್ಕ್ರತಿಕ ಜೀವನದಲ್ಲಿ ಅಚ್ಚಳಿಯದ ಗುರುತು ಬರೆದಿದ್ದ, ಗುಳ್ಯo ಶ್ರೀ ಶಿವಶರಣ ಗಾದಿಲಿಂಗಪ್ಪ ತಾತ ನವರ ಪರಮ ಶಿಷ್ಯರಾದ ಮಹಾಯೋಗಿ ಶ್ರೀ ಶಿವಶರಣ ಮಲ್ಲಪ್ಪತಾತನವರ ಮಹಿಮೆಯನ್ನು ಚಿತ್ರಿಸುವ ಮಹಾಯೋಗಿ ಶ್ರೀ ಶಿವಶರಣ ಮಲ್ಲಪ್ಪತಾತನವರ ಚರಿತ್ರೆ ಸಿಂದಿಗೇರಿ, ಬೈಲೂರು ಎಂಬ ಚಲನಚಿತ್ರದ ಚಿತ್ರಿಕರಣ ಉದ್ಘಾಟನಾ ಕಾರ್ಯಕ್ರಮದ ವೇಳೆ ಸಿಂದಿಗೇರಿ, ಬೈಲೂರು ಗ್ರಾಮಸ್ಥರು ಹಾಗೂ ಸರ್ವ ಭಕ್ತ ವೃಂದ ಸಹಾಯ, ಸಹಕಾರದಿಂದ ಈ ಕಾರ್ಯಕ್ರಮದಲ್ಲಿ ಗ್ರಾಮದ ಹಿರಿಯರು, ಭಕ್ತರು, ಗಣ್ಯರು ಭಾಗವಹಿಸಿದರು. ಪೂಜಾ ವಿಧಿ, ದೀಪಪ್ರಜ್ವಲನ ಮತ್ತು ಪ್ರಾರ್ಥನೆಯೊಂದಿಗೆ ಕಾರ್ಯಕ್ರಮ ಆರಂಭಗೊಂಡು ನಂತರ ಚಿತ್ರ…

ರಾಜ್ಯದ ಆಡಳಿತ ಯಂತ್ರ ಕೋಮಾ ಸ್ಥಿತಿಯಲ್ಲಿದ್ದು, ಜನರ ಸಮಸ್ಯೆಗಳನ್ನು ಕೇಳುವವರಿಲ್ಲದ ಸ್ಥಿತಿ: ಬಿಜೆಪಿ ಟೀಕೆ

ಬೆಂಗಳೂರು: ಸಿಎಂ ಸ್ಥಾನಕ್ಕಾಗಿ ನಡೆಯುತ್ತಿರುವ ಕಚ್ಚಾಟದಿಂದಾಗಿ ಆಡಳಿತ ಯಂತ್ರ ನಿಷ್ಕ್ರಿಯವಾಗಿದೆ ಎಂದು ವಿಧಾನಸಭೆ ಪ್ರತಿಪಕ್ಷದ ನಾಯಕರಾದ ಆರ್. ಅಶೋಕ್ ಲೇವಡಿ ಮಾಡಿದ್ದಾರೆ. ಶಾಸಕರ ಕಚೇರಿ ಮುಂಭಾಗ ಆಯೋಜಿಸಿದ್ದ ” ವಂದೇ ಮಾತರಂ ಸಂಭ್ರಮಾಚರಣೆ” ಕಾರ್ಯಕ್ರಮದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೂಡಲೇ ಕಾಂಗ್ರೆಸ್‌ ಹೈಕಮಾಂಡ್‌ ಯಾರು ಮುಖ್ಯಮಂತ್ರಿ ಎಂದು ಸ್ಪಷ್ಟವಾಗಿ ತಿಳಿಸಲಿ ಎಂದು ಆಗ್ರಹಿಸಿದರು. ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ನಡುವೆ ಕಾದಾಟ ನಡೆಯುತ್ತಿರುವುದರಿಂದ ಸರ್ಕಾರ ಸತ್ತುಹೋಗಿದೆ. ಡಿ.ಕೆ.ಶಿವಕುಮಾರ್‌ ಅವರನ್ನು ಸಿಎಂ ಪದವಿಯಲ್ಲಿ ಕೂರಿಸಬೇಕು ಎಂದು ಅವರ ಪರ ಶಾಸಕರು ಹೋರಾಟ ಮಾಡುತ್ತಿದ್ದಾರೆ. ಈ ಹೋರಾಟ ಅಂತಿಮ ಹಂತಕ್ಕೆ ಬಂದಿದೆ. ರಾಹುಲ್‌ ಗಾಂಧಿ ಮತ್ತು ಮಲ್ಲಿಕಾರ್ಜುನ ಖರ್ಗೆ ತೀರ್ಮಾನ ನೀಡಿಲ್ಲವೆಂದರೆ ಸರ್ಕಾರ ನಡೆಯುವುದಿಲ್ಲ. ಅಧಿಕಾರಿಗಳು ಕೆಲಸ ಮಾಡುವುದಿಲ್ಲ. ಆಡಳಿತಯಂತ್ರ ಕೋಮಾದಲ್ಲಿದೆ ಎಂದರು. ಸಾರ್ವಜನಿಕರು, ರೈತ ಸಮುದಾಯ, ವಿದ್ಯಾರ್ಥಿಗಳು ಎದುರಿಸುತ್ತಿರುವ ಹತ್ತಾರು ಸಮಸ್ಯೆಗಳನ್ನು ಬಗೆಹರಿಸಬೇಕೆಂಬ ಕಾಳಜಿ ಕಾಂಗ್ರೆಸ್‌ ಹೈಕಮಾಂಡ್‌ಗೆ ಇಲ್ಲ…

ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾಗಿ ದೇವೇಗೌಡ, ರಾಜ್ಯಾಧ್ಯಕ್ಷರಾಗಿ ಕುಮಾರಸ್ವಾಮಿ ಮುಂದುವರಿಕೆ

ಬೆಂಗಳೂರು: ಜನತಾ ದಳ (ಎಸ್) ಪಕ್ಷದ ರಾಷ್ಟ್ರೀಯ ನೇತೃತ್ವದಲ್ಲಿ ಬದಲಾವಣೆ ಇಲ್ಲ. ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ರಾಷ್ಟ್ರೀಯ ಅಧ್ಯಕ್ಷರಾಗಿ, ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ರಾಜ್ಯ ಘಟಕದ ಅಧ್ಯಕ್ಷರಾಗಿ ಒಮ್ಮತದಿಂದ ಮರು ಆಯ್ಕೆಗೊಂಡಿದ್ದಾರೆ. ಜೆಪಿ ಭವನದಲ್ಲಿ ಶುಕ್ರವಾರ ನಡೆದ ಜೆಡಿಎಸ್ ರಾಷ್ಟ್ರೀಯ ಮಂಡಳಿ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ. ರಾಷ್ಟ್ರೀಯ ಮಟ್ಟದಲ್ಲಿ ಹಾಗೂ ಕರ್ನಾಟಕದಲ್ಲೂ ಸಂಘಟನೆ ವಿಸ್ತರಣೆ ಅಗತ್ಯವಾಗಿರುವ ಈ ಸಂದರ್ಭದಲ್ಲಿ, ದೇವೇಗೌಡ–ಕುಮಾರಸ್ವಾಮಿ ನೇತೃತ್ವ ಮುಂದುವರಿಯಬೇಕೆಂಬ ಅಭಿಪ್ರಾಯ ಪ್ರತಿನಿಧಿಗಳ ನಡುವೆ ನಿರ್ಮಾಣವಾಯಿತು ಎಂದು ಪಕ್ಷದ ಪ್ರಕಟಣೆ ತಿಳಿಸಿದೆ. ಸಭೆಯಲ್ಲಿ ವಿವಿಧ ರಾಜ್ಯಗಳ ಜೆಡಿಎಸ್ ಪ್ರತಿನಿಧಿಗಳು, ರಾಜ್ಯದ ಶಾಸಕರು, ಎಂಎಲ್ಸಿಗಳು, ಜಿಲ್ಲಾಧ್ಯಕ್ಷರು ಸೇರಿದಂತೆ ಅನೇಕ ಪ್ರಮುಖರು ಭಾಗವಹಿಸಿದ್ದರು.