ಪ್ರಯಾಗರಾಜ್: ಮಹಾಕುಂಭ ಮೇಳಕ್ಕೆ ತೆರಳಿದ್ದ ಆಸ್ತಿಕರ ಗುಂಪು ಭೀಕರ ಅಪಘಾತದಲ್ಲಿ ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಪ್ರಯಾಗರಾಜ್ ಸಮೀಪ ಸಂಭವಿಸಿದೆ. ಮೇಜಾ ಪೊಲೀಸ್ ಠಾಣೆ ಪ್ರದೇಶದಲ್ಲಿ ಶುಕ್ರವಾರ ತಡರಾತ್ರಿ ಹೆದ್ದಾರಿಯಲ್ಲಿ ಬಸ್ ಮತ್ತು ಲೆರೊ ಕಾರು ನಡುವೆ ಡಿಕ್ಕಿ ಸಂಭವಿಸಿದೆ. ಬೊಲೆರೊ ಕಾರಿನಲ್ಲಿ ಮಹಾಕುಂಭ ಮೇಳಕ್ಕೆ ಪ್ರಯಾಣಿಸುತ್ತಿದ್ದ ಹತ್ತು ಜನರು ಈ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತರು ಛತ್ತೀಸ್ಗಢ ರಾಜ್ಯದ ಕೊರ್ಬಾ ಜಿಲ್ಲೆಯವರೆಂದು ಹೇಳಲಾಗುತ್ತಿದೆ. ಈ ಅಪಘಾತದಲ್ಲಿ ಬಸ್ನಲ್ಲಿದ್ದ 19 ಮಂದಿಗೆ ಗಾಯಗಳಾಗಿದ್ದು ಆಸ್ರತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Year: 2025
‘ಲವ್ ಜಿಹಾದ್’ಗೆ ಮಹಾ ಬ್ರೇಕ್..! ಡಿಜಿಪಿ ನೇತೃತ್ವದಲ್ಲಿ 7 ಸದಸ್ಯರ ಸಮಿತಿ ರಚನೆ
ಮುಂಬೈ: ಮಹಾರಾಷ್ಟ್ರ ಸರ್ಕಾರವು ‘ಲವ್ ಜಿಹಾದ್’ಗೆ ಕಡಿವಾಣ ಹಾಕುವ ಸಂಬಂಧ ಮಹತ್ವದ ಹೆಜ್ಜೆ ಇಟ್ಟಿದೆ. ಈ ಸಂಬಂಧ ಕಾನೂನಾನಾತ್ಮಕ ನಿರ್ಧಾರ ಕೈಗೊಳ್ಳಲು ಅಧ್ಯಯನ ಸಮಿತಿಯನ್ನು ರಚಿಸಿದೆ. ಚುನಾಯಿತ ಪ್ರತಿನಿಧಿಗಳು ಮತ್ತು ವಿವಿಧ ಸಂಘಟನೆಗಳ ಬೇಡಿಕೆಯ ಮೇರೆಗೆ, ಮಹಾರಾಷ್ಟ್ರ ಸರ್ಕಾರವು ‘ಲವ್ ಜಿಹಾದ್’ (ಅಂತರ್ಧರ್ಮ ಸಂಬಂಧಗಳಿಗೆ ಸೌಮ್ಯೋಕ್ತಿ) ಮತ್ತು ವಂಚನೆಯ ಮೂಲಕ ಬಲವಂತದ ಮತಾಂತರ ಅಥವಾ ಮತಾಂತರ ತಡೆಯುವ ಸಂಬಂಧ ಕಾನೂನು ನಿಬಂಧನೆಗಳನ್ನು ಅಧ್ಯಯನ ಮಾಡಲು ರಾಜ್ಯ ಪೊಲೀಸ್ ಮಹಾನಿರ್ದೇಶಕರ ನೇತೃತ್ವದಲ್ಲಿ ಏಳು ಸದಸ್ಯರ ಸಮಿತಿಯನ್ನು ರಚಿಸಿದೆ. ಕರ್ನಾಟಕ, ಗುಜರಾತ್ ಮತ್ತು ಮಧ್ಯಪ್ರದೇಶ ಸೇರಿದಂತೆ ಇತರ ರಾಜ್ಯಗಳ ಮಾದರಿಯಲ್ಲಿ ರಾಜ್ಯದಲ್ಲಿ ಶಾಸನವನ್ನು ಜಾರಿಗೆ ತರುವ ಬಗ್ಗೆಯೂ ಸಮಿತಿಯು ಶಿಫಾರಸು ಮಾಡುವ ನಿರೀಕ್ಷೆಯಿದೆ. ಸಮಿತಿಯು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಅಲ್ಪಸಂಖ್ಯಾತರ ಅಭಿವೃದ್ಧಿ, ಕಾನೂನು ಮತ್ತು ನ್ಯಾಯಾಂಗ, ಸಾಮಾಜಿಕ ನ್ಯಾಯ ಮತ್ತು ವಿಶೇಷ ನೆರವು ಮತ್ತು ಗೃಹ ಇಲಾಖೆಗಳ ಕಾರ್ಯದರ್ಶಿಗಳನ್ನು…
AICCಉಸ್ತುವಾರಿಗಳ ಬದಲಾವಣೆ: ಬಿ.ಕೆ. ಹರಿಪ್ರಸಾದ್’ಗೆ ಮಹತ್ವದ ಹೊಣೆ
ನವದೆಹಲಿ: ಪ್ರದೇಶ ಕಾಂಗ್ರೆಸ್ ಘಟಕಗಳಿಗೆ ಹೊಸ ಅಧ್ಯಕ್ಷರನ್ನು ನೇಮಕ ಮಾಡುವ ಪ್ರಕ್ರಿಯೆ ಆರಂಭವಾಗಿದ್ದು, ಹಲವು ರಾಜ್ಯಗಳಿಗೆ ಹೊಸಬರನ್ನು ಎಐಸಿಸಿ ನೇಮಕ ಮಾಡಿದೆ. ಇದೇ ವೇಳೆ, ಪ್ರದೇಶ ಕಾಂಗ್ರೆಸ್ ಉಸ್ತುವಾರಿಗಳನ್ನು ನೇಮಕ ಮಾಡಲಾಗಿದೆ. ಕರ್ನಾಟಕದ ನಾಯಕ ಬಿ.ಕೆ. ಹರಿಪ್ರಸಾದ್ ಅವರನ್ನು ಹರಿಯಾಣಕ್ಕೆ ಉಸ್ತುವಾರಿಯಾಗಿ ನೇಮಕ ಮಾಡಲಾಗಿದೆ. ತಮಿಳುನಾಡು ಮತ್ತು ಪುದುಚೇರಿಗೆ ಗಿರಿ ಚೋಡಂಕರ್ ಅವರನ್ನು ಉಸ್ತುವಾರಿಯಾಗಿ ನೇಮಿಸಲಾಗಿದೆ. ಶುಕ್ರವಾರ ನಡೆದ ಪ್ರಮುಖ ಪುನರ್ರಚನೆಯಲ್ಲಿ 11 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಹೊಸ ಪ್ರಧಾನ ಕಾರ್ಯದರ್ಶಿಗಳು ಮತ್ತು ಉಸ್ತುವಾರಿಗಳನ್ನು AICC ನೇಮಿಸಿದೆ. ಛತ್ತೀಸ್ಗಢದ ಮಾಜಿ ಮುಖ್ಯಮಂತ್ರಿ ಭೂಪೇಶ್ ಬಾಘೇಲ್ ಅವರನ್ನು ಪಂಜಾಬ್ಗೆ ಉಸ್ತುವಾರಿ ಪ್ರಧಾನ ಕಾರ್ಯದರ್ಶಿಯಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇಮಕ ಮಾಡಿದ್ದಾರೆ. ಮಧ್ಯಪ್ರದೇಶಕ್ಕೆ ವರ್ಗಾವಣೆಗೊಂಡಿರುವ ಹರೀಶ್ ಚೌಧರಿ ಅವರ ಬದಲಿಗೆ ಬಘೇಲ್ ನೇಮಕಗೊಂಡಿದ್ದಾರೆ. ಕರ್ನಾಟಕದ ರಾಜ್ಯಸಭಾ ಸದಸ್ಯ ಸೈಯದ್ ನಾಸೀರ್ ಹುಸೇನ್ ಅವರನ್ನು ಜಮ್ಮು ಮತ್ತು ಕಾಶ್ಮೀರ…
ಸಾರ್ವಜನಿಕರ ಆಕ್ರೋಶಕ್ಕೆ ಬೆಚ್ಚಿದ BMRCL; ನಮ್ಮ ಮೆಟ್ರೋ ಪ್ರಯಾಣ ದರದಲ್ಲಿ ಇಳಿಕೆ
ಬೆಂಗಳೂರು: ನಮ್ಮ ಮೆಟ್ರೋ ಪ್ರಯಾಣ ದರವನ್ನು ಮತ್ತೆ ಪರಿಷ್ಕರಿಸಲಾಗಿದೆ. ಸಾರ್ವಜನಿಕರ ಆಕ್ರೋಶಕ್ಕೆ ಮಣಿದಿರುವ ‘ನಮ್ಮ ಮೆಟ್ರೋ’ ಪ್ರಯಾಣ ದರವನ್ನು ಸ್ವಲ್ಪ ಮಟ್ಟಿಗೆ ಇಳಿಕೆ ಮಾಡಿದೆ. ಟಿಕೆಟ್ ದರ ಏರಿಕೆ ಬಗ್ಗೆ ಸಾರ್ವಜನಿಕ ವಲಯದಲ್ಲಿನ ಆಕ್ರೋಶ ಹಿನ್ನೆಲೆಯಲ್ಲಿ ದರ ಇಳಿಸುವಂತೆ ಸಿಎಂ ಸಿದ್ದರಾಮಯ್ಯ ಸಲಹೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಕ್ರಮ ಕೈಗೊಂಡಿರುವ ಬಿಎಂಆರ್ಸಿಎಲ್, ಶೇ 90 ರಿಂದ 100 ರಷ್ಟು ದರ ಹೆಚ್ಚಳ ಮಾಡಿರುವ ನಿಲ್ದಾಣಗಳ ಮಧ್ಯೆ ತಲಾ 10 ರೂಪಾಯಿಗಳಷ್ಟು ಇಳಿಕೆ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ. ಹೊಸ ದರ ಹೀಗಿದೆ: ಮೆಜೆಸ್ಟಿಕ್ನಿಂದ ವೈಟ್ಫಿಲ್ಡ್ಗೆ ಹಳೆಯ ದರ 90 ರೂ. ಹೊಸ ದರ 80 ರೂ. ಮೆಜೆಸ್ಟಿಕ್ನಿಂದ ಚಲ್ಲಘಟ್ಟಕ್ಕೆ ಹಳೆಯ 70 ರೂ. ಹೊಸ ದರ 60 ರೂ. ಮೆಜೆಸ್ಟಿಕ್ನಿಂದ ವಿಧಾನಸೌಧಕ್ಕೆ ಹಳೆಯ 20 ರೂ. ಹೊಸ ದರ 10 ರೂ. ಮೆಜೆಸ್ಟಿಕ್ನಿಂದ ಬೈಯಪ್ಪನಹಳ್ಳಿಗೆ ಹಳೆಯ 60…
ಭೀಮಾತೀರದ ಬಾಗಪ್ಪ ಹರಿಜನ ಕೊಲೆ ಪ್ರಕರಣ; ನಾಲ್ವರ ಸೆರೆ
ವಿಜಯಪುರ: ಭೀಮಾತೀರದ ಕುಖ್ಯಾತ ರೌಡಿ ಬಾಗಪ್ಪ ಹರಿಜನ ಕೊಲೆ ಪ್ರಕರಣ ಬೇಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಕ್ಷಿಪ್ರ ಕಾರ್ಯಾಚರಣೆ ನಡೆಸಿರುವ ವಿಜಯಪುರ ಗಾಂಧಿಚೌಕ ಠಾಣೆ ಪೊಲೀಸರು ಕೃತ್ಯ ನಡೆದ 24 ಗಂಟೆಗಳಲ್ಲಿ ಆರೋಪಿಗಳನ್ನು ಸೆರೆಹಿಡಿದಿದ್ದಾರೆ. ಭೀಮಾತೀರದ ಹಂತಕ ಖ್ಯಾತಿಯ ಗುಂಪಿನಲ್ಲಿ ಗುರುತಿಸಿಕೊಂಡಿದ್ದ ರೌಡಿ ಬಾಗಪ್ಪ ಹರಿಜನನನ್ನ ಫೆಬ್ರವರಿ 11 ರಾತ್ರಿ 9:45ರ ಸುಮಾರಿಗೆ ವಿಜಯಪುರದ ಮದೀನಾ ನಗರದಲ್ಲಿ ಹಂತಕರು ಬರ್ಬರ ಕೊಲೆ ಮಾಡಿದ್ದರು. ಕೃತ್ಯವನ್ನು ಸವಾಲಾಗಿ ಸ್ವೀಕರಿಸಿದ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ. ಬಾಗಪ್ಪ ಹರಿಜನ ಕೊಲೆ ಪ್ರಕರಣ ಸಂಬಂಧ ಪ್ರಕಾಶ ಅಲಿಯಾಸ್ ಪಿಂಟ್ಯಾ ಅಗರಖೇಡ್ ಸೇರಿ ಒಟ್ಟು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಪ್ರಕಾಶ್ ಅಲಿಯಾಸ್ ಪಿಂಟ್ಯಾ ಅಗರಖೇಡ್, ರಾಹುಲ್ ತಳಕೇರಿ, ಗದಿಗೆಪ್ಪ ಅಲಿಯಾಸ್ ಮನಿಕಂಠ ದನಕೊಪ್ಪ, ಸುದೀಪ್ ಕಾಂಬಳೆ ಎಂಬವರನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಲಕ್ಷ್ಮಣ ನಿಂಬರಗಿ ತಿಳಿಸಿದ್ದಾರೆ.
ಅಮೇರಿಕದಲ್ಲಿ ಅಕ್ರಮವಾಗಿ ಅಕ್ರಮವಾಗಿ ನೆಲೆಸಿರುವವರನ್ನು ವಾಪಸ್ ಕರೆಸಿಕೊಳ್ಳುತ್ತೇವೆ: ಮೋದಿ
ವಾಷಿಂಗ್ಟನ್: ಅಮೆರಿಕದಲ್ಲಿ ಭಾರತೀಯರು ಅಕ್ರಮ ವಲಸಿಗರಾಗಿ ನೆಲೆಸಿದ್ದಲ್ಲಿ ಅಂಥವರನ್ನು ಭಾರತಕ್ಕೆ ವಾಪಸ್ ಕರೆಸಿಕೊಳ್ಳುತ್ತೇವೆ ಜೊತೆಗೆ ಮಾನವ ಕಳ್ಳಸಾಗಣೆದಾರರ ವಿರುದ್ಧವೂ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಭಾರತ ಮತ್ತು ಅಮೆರಿಕ “ಯಾವಾಗಲೂ ಒಂದೇ ಅಭಿಪ್ರಾಯವನ್ನು ಹೊಂದಿವೆ, ಮತ್ತು ಅಮೆರಿಕದಲ್ಲಿ ಅಕ್ರಮವಾಗಿ ನೆಲೆಸಿರುವ ಯಾವುದೇ ಭಾರತೀಯರನ್ನು ನಾವು ಭಾರತಕ್ಕೆ ಮರಳಿ ಕರೆದೊಯ್ಯಲು ಸಂಪೂರ್ಣವಾಗಿ ಸಿದ್ಧರಿದ್ದೇವೆ” ಎಂದು ಅವರು ಗುರುವಾರ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ದ್ವಿಪಕ್ಷೀಯ ಮಾತುಕತೆಯ ನಂತರ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ಅಮೆರಿಕವು ಈ ತಿಂಗಳು ಅಮೃತಸರಕ್ಕೆ ಮಿಲಿಟರಿ ವಿಮಾನದಲ್ಲಿ ಭಾರತದಿಂದ ಸುಮಾರು 100 ಅಕ್ರಮ ವಲಸಿಗರನ್ನು ವಾಪಸ್ ಕಳುಹಿಸಿತು. ಭಾರತವು 18,000 ಅಕ್ರಮ ವಲಸಿಗರನ್ನು ವಾಪಸ್ ತೆಗೆದುಕೊಳ್ಳಲು ಒಪ್ಪಿಕೊಂಡಿದೆ ಎಂದು ವರದಿಯಾಗಿದೆ. “ದೊಡ್ಡ ಕನಸುಗಳು ಮತ್ತು ದೊಡ್ಡ ಭರವಸೆಗಳೊಂದಿಗೆ” ಅವರನ್ನು ಆಕರ್ಷಿಸಿ “ಸಾಮಾನ್ಯ ಕುಟುಂಬಗಳ ಮಕ್ಕಳನ್ನು” ಶೋಷಿಸುವ ಮಾನವ ಕಳ್ಳಸಾಗಣೆದಾರರ ವಿರುದ್ಧ ಹೋರಾಡಲು…
“You are Great”: ನರೇಂದ್ರ ಮೋದಿ ಅವರನ್ನು ಹಾಡಿ ಹೊಗಳಿದ ಟ್ರಂಪ್
ವಾಷಿಂಗ್ಟನ್: ಭಾರತದ ಪ್ರಧಾನಿ ನರೇಂದ್ರ ಮೋದಿ ಅವರನ್ನು “ನೀವೊಬ್ಬರು ಶ್ರೇಷ್ಠರು” ಎಂದು ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬಣ್ಣಿಸಿದ್ದಾರೆ. ಗುರುವಾರ ಡೊನಾಲ್ಡ್ ಟ್ರಂಪ್ ಅವರು ನರೇಂದ್ರ ಮೋದಿ ಅವರನ್ನು ಶ್ವೇತಭವನದಲ್ಲಿ ಭೇಟಿಯಾದಾಗ ತಮ್ಮ ‘ಅವರ್ ಜರ್ನಿ ಟುಗೆದರ್’ ಪುಸ್ತಕದ ಸಹಿ ಮಾಡಿದ ಪ್ರತಿಯನ್ನು ಉಡುಗೊರೆಯಾಗಿ ನೀಡಿದರು. ಟ್ರಂಪ್ ಅವರು ತಮ್ಮ ಓವಲ್ ಕಚೇರಿಯಲ್ಲಿ ಪ್ರಧಾನಿ ಮೋದಿ ಅವರನ್ನು ಆತ್ಮೀಯ ಅಪ್ಪುಗೆಯೊಂದಿಗೆ ಸ್ವಾಗತಿಸಿದರು. “ನಿಮ್ಮನ್ನು ಶ್ವೇತಭವನದಲ್ಲಿ ಮತ್ತೆ ನೋಡಲು ನನಗೆ ಸಂತೋಷವಾಗಿದೆ” ಎಂದು ಮೋದಿ ಅವರು ಅಧ್ಯಕ್ಷ ಟ್ರಂಪ್ ಬಳಿ ಹೇಳಿದರು. “ನಾವು ನಿಮ್ಮನ್ನು ಕಳೆದುಕೊಂಡಿದ್ದೇವೆ, ನಾವು ನಿಮ್ಮನ್ನು ತುಂಬಾ ಕಳೆದುಕೊಂಡಿದ್ದೇವೆ” ಎಂದ ಟ್ರಂಪ್ ಮೋದಿ “ನಿಮ್ಮನ್ನು ಮತ್ತೆ ನೋಡಲು ಸಂತೋಷವಾಗಿದೆ” ಎಂದ ಸನ್ನಿವೇಶ ಗಮನಸೆಳೆಯಿತು. ಬಳಿಕ ಜಂಟಿ ಸುದ್ದಿಗೋಷ್ಠಿಯಲ್ಲಿ ಟ್ರಂಪ್ ಅವರು, ತಾಜ್ ಮಹಲ್ಗೆ ಭೇಟಿ ನೀಡಿದಾಗ 2020 ರ ಭಾರತಕ್ಕೆ ಐತಿಹಾಸಿಕ ಪ್ರವಾಸದ ಸ್ಮರಣೀಯ ಫೋಟೋವನ್ನು…
ಚೀನಾ ಗಡಿ ತಂಟೆ: ಅಮೆರಿಕಾ ಮಧ್ಯಸ್ಥಿಕೆ ಬೇಡ ಎಂದ ಭಾರತ
ವಾಷಿಂಗ್ಟನ್: ಚೀನಾದೊಂದಿಗಿನ ಗಡಿ ಘರ್ಷಣೆಯನ್ನು ಕೊನೆಗೊಳಿಸಲು ಮಧ್ಯಸ್ಥಿಕೆ ವಹಿಸಲು “ಸಹಾಯ” ಮಾಡುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಪ್ರಸ್ತಾಪವನ್ನು ಭಾರತ ತಿರಸ್ಕರಿಸಿದೆ. “ನಮ್ಮ ಯಾವುದೇ ನೆರೆಹೊರೆಯವರೊಂದಿಗೆ ನಮಗೆ ಯಾವುದೇ ಸಮಸ್ಯೆಗಳಿದ್ದರೂ, ಈ ಸಮಸ್ಯೆಗಳನ್ನು ನಿಭಾಯಿಸಲು ನಾವು ಯಾವಾಗಲೂ ದ್ವಿಪಕ್ಷೀಯ ವಿಧಾನವನ್ನು ಅಳವಡಿಸಿಕೊಂಡಿದ್ದೇವೆ” ಎಂದು ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ ಅವರು ಅಮೆರಿಕಾದ ಪ್ರಸ್ತಾಪಕ್ಕೆ ಸ್ಪಷ್ಟ ಉತ್ತರ ನೀಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಅಮೇರಿಕ ಅಧ್ಯಕ್ಷ ಟ್ರಂಪ್ ಅವರ ಭೇಟಿ ಸಂದರ್ಭದಲ್ಲಿ ಭಾರತದ ಈ ದಿಟ್ಟ ಉತ್ತರ ಚೀನಾ ಜೊತೆಗಿನ ಗಡಿ ವಿಚಾರ ಕುರಿತ ನಿಲುವನ್ನು ಸ್ಪಷ್ಟಪಡಿಸಿದಂತಾಗಿದೆ. ಮಾತುಕತೆಗಳ ನಂತರ ಪ್ರಧಾನಿಯೊಂದಿಗೆ ಜಂಟಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅಧ್ಯಕ್ಷ ಟ್ರಂಪ್, “ನಾನು ಭಾರತವನ್ನು ನೋಡುತ್ತೇನೆ, ಗಡಿಯಲ್ಲಿನ ಘರ್ಷಣೆಗಳು ಸಾಕಷ್ಟು ಕೆಟ್ಟದಾಗಿವೆ ಮತ್ತು ಅವು ಮುಂದುವರಿಯುತ್ತವೆ ಎಂದು ನಾನು ಭಾವಿಸುತ್ತೇನೆ” ಎಂದು ಹೇಳಿದ್ದರು. “ಸಹಾಯ ಮಾಡಲು ಸಾಧ್ಯವಾದರೆ, ಸಹಾಯ ಮಾಡಲು…
ಒಂದೆಡೆ KWIN City, ಗ್ಲೋಬಲ್ ಹಬ್ ಎಂದು ಬೊಬ್ಬಿಡುತ್ತಿರುವ ಸರ್ಕಾರ; ಮತ್ತೊಂದೆಡೆ ಯಮಕಿಂಕರರ ತಾಣದಂತಿರುವ ಆಸ್ಪತ್ರೆ!
ಬೆಂಗಳೂರು: KWIN City, ಲಕ್ಷಾಂತರ ಕೋಟಿ ಬಂಡವಾಳ ಹೂಡಿಕೆ, ಗ್ಲೋಬಲ್ ಹಬ್, ಪ್ರಗತಿಯಮರುಕಲ್ಪನೆ ಎಂದು ಕಾಂಗ್ರೆಸ್ ಸರ್ಕಾರ ಬೆಂಗಳೂರಿನಲ್ಲಿ ಬೊಬ್ಬೆ ಹೊಡೆಯುತ್ತಿರುವ ಈ ಸಂದರ್ಭದಲ್ಲಿ, ನಮ್ಮ ಉತ್ತರ ಕರ್ನಾಟಕದ ಆಸ್ಪತ್ರೆಗಳ ದುಸ್ಥಿತಿ ಅನಾವರಣವಾಗಿದೆ. ವಿಧಾನಸಭೆಯ ಪ್ರತಿಪಕ್ಷ ಉಪನಾಯಕ ಅರವಿಂದ ಬೆಲ್ಲದ್ ಅವರು ಈ ಕುರಿತಂತೆ ವೀಡಿಯೋವೊಂದನ್ನು ಸಾಮಾಜಿಕ ಜಾಲತಾಣ ‘X’ನಲ್ಲಿ ಪೋಸ್ಟ್ ಮಾಡಿದ್ದು, ಆಸ್ಪತ್ರೆಗಳ ಅವ್ಯವಸ್ಥೆಗೆ ಹೊಣೆಗಾರರಾಗಿರುವ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರ ರಾಜೀನಾಮೆಗೆ ಆಗ್ರಹಿಸಿದ್ದಾರೆ. ಈಗಾಗಲೇ ನೂರಾರು ಬಾಣಂತಿಯರು ಇದೇ ಆಸ್ಪತ್ರೆಯಲ್ಲಿ ಸಾವನ್ನಪ್ಪಿದರೂ, ಇನ್ನೂ ಎಚ್ಚೆತ್ತಿಲ್ಲದಿರವುದು ನಮ್ಮ ಉತ್ತರ ಕರ್ನಾಟಕದೆಡೆಗಿನ ಈ ನಿರ್ಲಜ್ಜ ಕಾಂಗ್ರೆಸ್ ಸರ್ಕಾರದ ಅಸಡ್ಡೆಯನ್ನು ಈ ಘಟನೆ ಎತ್ತಿ ತೋರಿಸಿದೆ ಎಂದು ಅರವಿಂದ್ ಬೆಲ್ಲದ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಳ್ಳಾರಿಯ BMC&R ಆಸ್ಪತ್ರೆಯ ಎಮರ್ಜೆನ್ಸಿ ವಾರ್ಡಿನಲ್ಲಿ ವೈದ್ಯರು ಮೊಬೈಲ್ ಟಾರ್ಚ್ ಹಿಡಿದುಕೊಂಡು ಚಿಕಿತ್ಸೆ ನೀಡುವಂತಹ ಪರಿಸ್ಥಿತಿಯನ್ನು ಈ ಬೇಜವಾಬ್ದಾರಿ ಸರ್ಕಾರ ತಂದಿಟ್ಟಿದೆ. ಈ…
ಸ್ನೇಹ ಹಸ್ತ: ಅಮೆರಿಕಾ NSA ಜೊತೆಗಿನ ಮೋದಿ ಸಭೆ ಫಲಪ್ರದ
ವಾಷಿಂಗ್ಟನ್: ಅಮೆರಿಕಾ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ಅಲ್ಲಿನ ರಾಷ್ಟ್ರೀಯ ಭದ್ರತಾ ಸಲಹೆಗಾರ ಮೈಕೆಲ್ಗ್ವಾಲ್ಟ್ಜ್ ಅವರನ್ನು ಭೇಟಿಯಾಗಿ ನಡೆಸಿದ ಮಾತುಕತೆ ಗಮನಸೆಳೆದಿದೆ. ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವ ನರೇಂದ್ರ ಮೋದಿ, ಎನ್ಎಸ್ಎ ಜತೆಗಿನ ಸಭೆ ಫಲಪ್ರದವಾಗಿದೆ ಎಂದಿದ್ದಾರೆ. ಮೈಕೆಲ್ಗ್ವಾಲ್ಟ್ಜ್ ಅವರು ಯಾವಾಗಲೂ ಭಾರತದ ಉತ್ತಮ ಸ್ನೇಹಿತ. ರಕ್ಷಣೆ, ತಂತ್ರಜ್ಞಾನ ಮತ್ತು ಭದ್ರತೆ ಭಾರತ-ಯುಎಸ್ಎ ಬಾಂಧವ್ಯದ ಪ್ರಮುಖ ಅಂಶಗಳಾಗಿವೆ ಮತ್ತು ಈ ವಿಷಯಗಳ ಬಗ್ಗೆ ನಾವು ಅದ್ಭುತವಾದ ಚರ್ಚೆಯನ್ನು ನಡೆಸಿದ್ದೇವೆ ಎಂದು ಮೋದಿ ಅವರು ಸಾಮಾಜಿಕ ಜಾಲತಾಣ ‘X’ನಲ್ಲಿ ಪೋಸ್ಟ್ ಹಾಕಿದ್ದಾರೆ. AI, ಸೆಮಿಕಂಡಕ್ಟರ್ಗಳು, ಬಾಹ್ಯಾಕಾಶ ಮತ್ತು ಹೆಚ್ಚಿನ ಕ್ಷೇತ್ರಗಳಲ್ಲಿ ಸಹಕಾರಕ್ಕಾಗಿ ಬಲವಾದ ಸಾಮರ್ಥ್ಯವಿದೆ ಎಂದವರು ತಿಳಿಸಿದ್ದಾರೆ. Had a fruitful meeting with NSA @michaelgwaltz. He has always been a great friend of India. Defence, technology and security are…