ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ: ತನಿಖೆಗೆ ವಿಶೇಷ ದಳ ರಚನೆ

ಬೆಂಗಳೂರು: ಸಿಜೆ ರಾಯ್ ಆತ್ಮಹತ್ಯೆ ಪ್ರಕರಣದ ಸತ್ಯಾಸತ್ಯತೆ ಪತ್ತೆಹಚ್ಚಲು ವಿಶೇಷ ತನಿಖಾ ದಳ (ಎಸ್‌ಐಟಿ) ರಚಿಸಿ ಆದೇಶಿಸಲಾಗಿದೆ. ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಅವರ ನಿರ್ದೇಶನದ ಮೇರೆಗೆ, ಜಂಟಿ ಪೊಲೀಸ್ ಆಯುಕ್ತ ವಂಶಿ ಕೃಷ್ಣ ಅವರ ನೇತೃತ್ವದಲ್ಲಿ ಎಸ್‌ಐಟಿ ಕಾರ್ಯನಿರ್ವಹಿಸಲಿದೆ. ತನಿಖಾ ತಂಡದಲ್ಲಿ ಬೆಂಗಳೂರು ದಕ್ಷಿಣ ವಿಭಾಗದ ಡಿಸಿಪಿ ಲೋಕೇಶ್ ಜಗಲಾಸರ್, ಬೆಂಗಳೂರು ಕೇಂದ್ರ ವಿಭಾಗದ ಡಿಸಿಪಿ ಅಕ್ಷಯ್, ಹಲಸೂರು ಗೇಟ್ ಉಪ ಪೊಲೀಸ್ ಆಯುಕ್ತ ಸುಧೀರ್, ಸಿಸಿಆರ್‌ಬಿ ಉಪ ಪೊಲೀಸ್ ಆಯುಕ್ತ ರಾಮಚಂದ್ರ ಹಾಗೂ ಅಶೋಕನಗರ ಠಾಣೆ ಪೊಲೀಸ್ ಇನ್ಸ್‌ಪೆಕ್ಟರ್ ರವಿ ಸೇರಿದ್ದಾರೆ. ಐಟಿ ದಾಳಿ ಹಿನ್ನೆಲೆಯಲ್ಲಿ ಉಂಟಾದ ಒತ್ತಡವೇ ಆತ್ಮಹತ್ಯೆಗೆ ಕಾರಣ ಎಂಬ ಆರೋಪಗಳು ಕೇಳಿಬಂದಿರುವ ಹಿನ್ನೆಲೆಯಲ್ಲಿ, ಆ ಅಂಶವನ್ನೂ ಒಳಗೊಂಡಂತೆ ಸಮಗ್ರ ತನಿಖೆ ನಡೆಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ. ಮೃತರ ಮೊಬೈಲ್ ಫೋನ್ ಪರಿಶೀಲನೆ, ಹಣಕಾಸು ವ್ಯವಹಾರಗಳ ಪರಿಶೋಧನೆ…

”ಕಾನ್ಫಿಡೆಂಟ್’ ಮಾಲೀಕ ಸಿ.ಜೆ.ರಾಯ್ ಸಾವಿನ ಬಗ್ಗೆ ಹೈಕೋರ್ಟ್‌ ಮೇಲ್ವಿಚಾರಣೆಯಲ್ಲಿ ಎಸ್‌ಐಟಿ ತನಿಖೆ ನಡೆಯಲಿ’

ಬೆಂಗಳೂರು: ಕಾನ್ಫಿಡೆಂಟ್ ಗ್ರೂಪ್‌ನ ಅಧ್ಯಕ್ಷರಾದ ಡಾ.ಸಿ.ಜೆ.ರಾಯ್ ಅವರ ಸಾವಿನ ಬಗ್ಗೆ ಕರ್ನಾಟಕ ಹೈಕೋರ್ಟ್‌ನ ಹಾಲಿ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ಎಸ್‌ಐಟಿ (ವಿಶೇಷ ತನಿಖಾ ತಂಡ) ರಚಿಸಬೇಕೆಂದು ಕ್ರಿಶ್ಚಿಯನ್ ಸೇವಾ ಸಂಘ ಒತ್ತಾಯಿಸಿದೆ. ಕ್ರಿಶ್ಚಿಯನ್ ಸೇವಾ ಸಂಘ (ಸಿಎಸ್‌ಎಸ್) ದಕ್ಷಿಣ ಭಾರತದಾದ್ಯಂತ ಕ್ರಿಶ್ಚಿಯನ್ನರ ಕಲ್ಯಾಣ ಮತ್ತು ಉನ್ನತಿಯನ್ನು ಪರಿಶೀಲಿಸುವ ಜಾತ್ಯತೀತ ವೇದಿಕೆಯಾಗಿದ್ದು, ಇದೀಗ ತಮ್ಮ ಸಮುದಾಯದ ಖ್ಯಾತ ಉದ್ಯಮಿ ಡಾ.ಸಿ.ಜೆ.ರಾಯ್ ಸಾವಿನ ಪ್ರಕರಣದಲ್ಲಿ ಕಾನೂನು ಹೋರಾಟದ ಅನಿವಾರ್ಯತೆಯನ್ನು ಪ್ರತಿಪಾದಿಸಿದೆ. ಈ ಪ್ರಕರಣ ಬಗ್ಗೆ ಕರ್ನಾಟಕ ಹೈಕೋರ್ಟ್‌ನ ಹಾಲಿ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ಎಸ್‌ಐಟಿ (ವಿಶೇಷ ತನಿಖಾ ತಂಡ) ರಚಿಸಬೇಕೆಂದು ಕೋರಿ ಸಿಎಂ ಸಿದ್ದರಾಮಯ್ಯ, ಗೃಹ ಸಚಿವ ಜಿ.ಪರಮೇಶ್ವರ್, ಮುಖ್ಯ ಕಾರ್ಯದರ್ಶಿ ಹಾಗೂ ಡಿಜಿಪಿಗೆ ಸಿಎಸ್‌ಎಸ್ ಅಧ್ಯಕ್ಷ ಶಾಜಿ ಟಿ ವರ್ಗೀಸ್ ಶನಿವಾರ ಮನವಿ ಸಲ್ಲಿಸಿದ್ದಾರೆ. ಕಾನ್ಫಿಡೆಂಟ್ ಗ್ರೂಪ್‌ನ ಡಾ.ಸಿ.ಜೆ. ರಾಯ್, ಕ್ರಿಶ್ಚಿಯನ್ ಉದ್ಯಮಿ, ದಾರ್ಶನಿಕ ರಿಯಲ್ ಎಸ್ಟೇಟ್ ಡೆವಲಪರ್, ಲೋಕೋಪಕಾರಿ ಮತ್ತು…

ಪ್ರತಿಭಾನ್ವಿತರಿಗೆ ತಕ್ಕ ವೇತನ ನೀಡಬೇಕು, ಉದ್ಯೋಗಿಗಳನ್ನು ಉಳಿಸಿಕೊಳ್ಳಲು ಮುಂದಾಗಬೇಕು: ಶರಣಪ್ರಕಾಶ್

ಬೆಂಗಳೂರು: ಪ್ರತಿಭಾವಂತ ಕಾರ್ಮಿಕರಿಗೆ ಗೌರವಾನ್ವಿತ ವೇತನ ನೀಡಬೇಕಾದ ಅಗತ್ಯವಿದೆ. ಇಂಥವರನ್ನು ಉಳಿಸಿಕೊಳ್ಳಲು ಮುಂದಾಗಬೇಕು ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು, ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಶರಣಪ್ರಕಾಶ ಆರ್. ಪಾಟೀಲ್ ತಿಳಿಸಿದ್ದಾರೆ. ಭಾರತೀಯ ಕೈಗಾರಿಕಾ ಒಕ್ಕೂಟ (ಸಿಐಐ) ಶುಕ್ರವಾರ ಆಯೋಜಿಸಿದ ಎಂಎಸ್‌ಎಂಇ ಮತ್ತು ಉದ್ಯೋಗಾವಕಾಶಗಳ ಸಮಾವೇಶವನ್ನು ಉದ್ಘಾಟಿಸಿ ಸಚಿವ ಡಾ. ಪಾಟೀಲ್ ಭಾಷಣ ಮಾಡಿದರು. ಎಂಎಸ್‌ಎಂಇ ವಲಯದಲ್ಲಿ ಕಡಿಮೆ ವೇತನ ಇರುವ ಬಗ್ಗೆ ಮಾಹಿತಿ ಬಂದಿದೆ. ಬೆಂಗಳೂರಿನಂತಹ ನಗರದಲ್ಲಿ ಉದ್ಯೋಗಿಗಳು ಯೋಗ್ಯ ಜೀವನವನ್ನು ನಡೆಸಲು ಅನುವು ಮಾಡಿಕೊಡುವ ಗೌರವಾನ್ವಿತ ವೇತನವನ್ನು ಎಂಎಸ್‌ಎಂಇಗಳು ನೀಡಬೇಕು ಎಂದು ಕರೆ ನೀಡಿದರು. “ಕರ್ನಾಟಕದ ಎರಡನೇ ಮತ್ತು ಮೂರನೇ ಹಂತದ ಪ್ರದೇಶಗಳಲ್ಲಿ ಕೌಶಲ್ಯಪೂರ್ಣ ಮತ್ತು ಅರ್ಹ ಉದ್ಯೋಗಿಗಳು ಬೆಂಗಳೂರಿನಲ್ಲಿ ಉದ್ಯೋಗಗಳನ್ನು ತ್ಯಜಿಸಿ ತವರು ಸ್ಥಳಗಳಿಗೆ ಹೋಗುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿವೆ. ಕಲಬುರಗಿಯ ವ್ಯಕ್ತಿಯು ಕೇವಲ ₹20,000 ಮಾಸಿಕ ಸಂಬಳದೊಂದಿಗೆ ಬೆಂಗಳೂರಿನಲ್ಲಿ ಹೇಗೆ ಬದುಕಬಹುದು?”…

ಬೆಂಗಳೂರು ಕಂಠೀರವ ಕ್ರೀಡಾಂಗಣದಲ್ಲಿ ಬೃಹತ್ ಉದ್ಯೋಗ ಮೇಳ; ಶರಣಪ್ರಕಾಶ್

ಬೆಂಗಳೂರು: ವಿಕಲಚೇತನರನ್ನು ಸಮಾಜದ ಮುಖ್ಯವಾಹಿನಿಗೆ ತಂದು ಸಬಲೀಕರಣಗೊಳಿಸುವ ಉದ್ದೇಶದಿಂದ, ಕರ್ನಾಟಕದಲ್ಲಿ ಇದೇ ಮೊದಲ ಬಾರಿಗೆ ವಿಕಲಚೇತನರಿಗಾಗಿಯೇ ವಿಶೇಷ ಉದ್ಯೋಗ ಮೇಳವನ್ನು ಮುಂದಿನ ಮೂರು ತಿಂಗಳೊಳಗೆ ನಗರದ ಕಂಠೀರವ ಕ್ರೀಡಾಂಗಣದಲ್ಲಿ ಆಯೋಜಿಸಲಾಗುವುದು ಎಂದು ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಶರಣಪ್ರಕಾಶ್ ಆರ್. ಪಾಟೀಲ್ ತಿಳಿಸಿದ್ದಾರೆ. ಗುರುವಾರ ವಿಧಾನಸಭೆಯ ಪ್ರಶ್ನೋತ್ತರ ವೇಳೆಯಲ್ಲಿ ಬಿಜೆಪಿ ಶಾಸಕ ಗುರುರಾಜ ಶೆಟ್ಟಿ ಗಂಟಿಹೊಳೆ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಇಲಾಖೆಯ ಸಹಭಾಗಿತ್ವದಲ್ಲಿ ವಿಕಲಚೇತನರಿಗಾಗಿ ವಿಶೇಷವಾಗಿ ಉದ್ಯೋಗ ಮೇಳ ಆಯೋಜಿಸಲಾಗುತ್ತಿದ್ದು, ಇದು ರಾಜ್ಯ ಸರ್ಕಾರದ ವಿನೂತನ ಮತ್ತು ಮಹತ್ವದ ಕಾರ್ಯಕ್ರಮವಾಗಿದೆ ಎಂದು ಹೇಳಿದರು. ವಿಕಲಚೇತನರನ್ನು ಆರ್ಥಿಕವಾಗಿ ಸ್ವಾವಲಂಬಿಗಳನ್ನಾಗಿ ಮಾಡುವುದು ಹಾಗೂ ಅವರಿಗೆ ಉದ್ಯೋಗಾವಕಾಶ ಕಲ್ಪಿಸುವುದೇ ಈ ಯೋಜನೆಯ ಪ್ರಮುಖ ಉದ್ದೇಶವಾಗಿದೆ. ಪ್ರಸಕ್ತ ಸಾಲಿನಲ್ಲಿ ಕೌಶಲ್ಯಾಭಿವೃದ್ಧಿ ನಿಗಮದ ಮೂಲಕ, ಮಾರುಕಟ್ಟೆ ಬೇಡಿಕೆಗೆ…

‘ಅಜಿತ್ ಪವಾರ್ ವಿಮಾನ ಅಪಘಾತದಲ್ಲಿ ಆಕಸ್ಮಿಕ ಸಾವು’ ಎಂದು ಪುಣೆ ಪೊಲೀಸರ ವರದಿ

ಪುಣೆ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ಸಾವಿಗೆ ಕಾರಣವಾದ ವಿಮಾನ ಅಪಘಾತಕ್ಕೆ ಸಂಬಂಧಿಸಿದಂತೆ ಪುಣೆ ಗ್ರಾಮೀಣ ಪೊಲೀಸರು ಬಾರಾಮತಿ ತಾಲೂಕು ಪೊಲೀಸ್ ಠಾಣೆಯಲ್ಲಿ ಅಪಘಾತ ಸಾವಿನ ವರದಿ (ಎಡಿಆರ್) ದಾಖಲಿಸಿದ್ದಾರೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ. ಅಪಘಾತಕ್ಕೆ ಕಾರಣವಾದ ಸಂದರ್ಭಗಳ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ನಾಗರಿಕ ವಿಮಾನಯಾನ ನಿರ್ದೇಶನಾಲಯ (ಡಿಜಿಸಿಎ) ಮತ್ತು ವಿಮಾನ ಅಪಘಾತ ತನಿಖಾ ಬ್ಯೂರೋ (ಎಎಐಬಿ) ತಂಡಗಳು ಅಪಘಾತದ ಸ್ಥಳದಲ್ಲಿದ್ದು, ಘಟನೆಯನ್ನು ಪರಿಶೀಲಿಸಲು ಮತ್ತು ದುರಂತ ಅಪಘಾತದ ಕಾರಣವನ್ನು ಕಂಡುಹಿಡಿಯಲು ಪ್ರಯತ್ನಿಸುತ್ತಿವೆ. ಪೊಲೀಸರ ಪ್ರಕಾರ, ಅಪಘಾತಕ್ಕೆ ಸಂಬಂಧಿಸಿದ ಎಲ್ಲಾ ಅಂಶಗಳನ್ನು ತನಿಖೆ ಮಾಡಲಾಗುತ್ತಿದೆ. ಕಾರ್ಯವಿಧಾನದ ಪ್ರಕಾರ, ಎಎಐಬಿ ತಂಡದ ಸಂಶೋಧನೆಗಳ ಆಧಾರದ ಮೇಲೆ ತನಿಖೆ ನಡೆಸುವ ಮಹಾರಾಷ್ಟ್ರ ಅಪರಾಧ ತನಿಖಾ ಇಲಾಖೆಗೆ (ಸಿಐಡಿ) ಎಡಿಆರ್ ಅನ್ನು ಹಸ್ತಾಂತರಿಸಲಾಗುವುದು. ಏತನ್ಮಧ್ಯೆ, ಉಪಮುಖ್ಯಮಂತ್ರಿ ಪವಾರ್ ಅವರ ಅಂತಿಮ ಪ್ರಯಾಣವು ಅವರ…

ಕಾರ್ಮಿಕ ಮುಖಂಡ ಎಚ್‌.ವಿ. ಅನಂತ ಸುಬ್ಬರಾವ್ ನಿಧನಕ್ಕೆ ಸಿಎಂ ಸಂತಾಪ

ಬೆಂಗಳೂರು: ಭಾರತ ಕಮ್ಯುನಿಸ್ಟ್ ಪಕ್ಷದ ಹಿರಿಯ ನಾಯಕ ಹಾಗೂ ಜನಪ್ರಿಯ ಕಾರ್ಮಿಕ ಮುಖಂಡರಾದ ಎಚ್‌.ವಿ. ಅನಂತ ಸುಬ್ಬರಾವ್ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ. ಸುದೀರ್ಘ ನಾಲ್ಕು ದಶಕಗಳ ಕಾಲ ಕಾರ್ಮಿಕ ಮುಖಂಡರಾಗಿ ಅನೇಕ ಚಳವಳಿಗಳನ್ನು ಮುನ್ನಡೆಸಿದ್ದ ಹೋರಾಟಗಾರ ಅನಂತ ಸುಬ್ಬರಾವ್ ನನಗೂ ಆತ್ಮೀಯರಾಗಿದ್ದರು. ಅವರ ದಣಿವರಿಯದ ಹೋರಾಟದ ಛಲ ಮತ್ತು ಸೈದ್ಧಾಂತಿಕ‌ ಬದ್ಧತೆ ಹೋರಾಟಗಾರರಿಗೆ ಒಂದು ಮಾದರಿ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಅವರ ನಿರ್ಗಮನದಿಂದ ಸಮಾಜಕ್ಕೆ, ಮುಖ್ಯವಾಗಿ ಕಾರ್ಮಿಕ ವರ್ಗಕ್ಕೆ ತುಂಬಲಾರದ ನಷ್ಟವಾಗಿದೆ ಎಂದಿರುವ ಸಿಎಂ, ಮೃತರ ಆತ್ಮಕ್ಕೆ ಚಿರಶಾಂತಿ ಲಭಿಸಲಿ, ಅವರ ಕುಟುಂಬವರ್ಗಕ್ಕೆ ನೋವು ಭರಿಸುವ ಶಕ್ತಿ ಸಿಗಲಿ ಎಂದು ಪ್ರಾರ್ಥಿಸಿದ್ದಾರೆ.

ಮೂರು ವರ್ಷಗಳಲ್ಲಿ 5542 ಕೋಟಿ ರೂಪಾಯಿ ವಿಮೆ ಪರಹಾರ ವಿತರಣೆ: ಎನ್.ಚಲುವರಾಯಸ್ವಾಮಿ

ಬೆಂಗಳೂರು: ಕೃಷಿ ಸಚಿವನಾಗಿ ಅಧಿಕಾರ ವಹಿಸಿಕೊಂಡ ನಂತರ ನಿರಂತರವಾಗಿ ಅಧಿಕಾರಿಗಳ ಸಭೆ ಮಾಡುವುದರೊಂದಿಗೆ ರೈತರೊಂದಿಗೆ ಹಾಗು ಜನಪ್ರತಿನಿಧಿಗಳೊಂದಿಗೆ ವಿಮೆ ಪರಿಹಾರ ಸುಧಾರಣೆ ತರಲು ಚರ್ಚಿಸಿ ಆಯಾ ಹಂಗಾಮಿನ ವಿಮೆ ಪರಿಹಾರವನ್ನು ಅದೇ ವಾರ್ಷಿಕ ವರ್ಷದ ಅವಧಿಯಲ್ಲಿ ಒದಗಿಸುವಂತೆ ಕ್ರಮ ಜರುಗಿಸಲಾಗಿದೆ ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿಯವರು ವಿಧಾನಸಭೆಯಲ್ಲಿ ಉತ್ತರ ನೀಡಿದರು. ಕಲ್ಬುರ್ಗಿ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ್ ಕೇಳಿದ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದ ಕೃಷಿ ಸಚಿವರು, ಕಳೆದ ಮೂರು ವರ್ಷಗಳಲ್ಲಿ ಬಿತ್ತನೆ ಮಾಡಿದ ಕೆಲವೇ ದಿನಗಳಲ್ಲಿ ಅಧಿಕ ಮಳೆಯಿಂದ ಶೇ 5೦ ಕ್ಕೂ ಹೆಚ್ಚು ಬೆಳೆ ಹಾನಿ ಆದ ಸಂದರ್ಭದಲ್ಲಿ ತಕ್ಷಣವೇ ರೈತರಿಗೆ ಮಿಡ್ ಸೀಸನ್ ಅಡ್ವೈಸರಿ ನಿಯಾಮಾವಳಿ ಪ್ರಕಾರ ವಿಮೆ ಪರಿಹಾರವನ್ನು ನೀಡಿ ರೈತರ ನೇರವಿಗೆ ನಮ್ಮ ಸರ್ಕಾರ ಧಾವಿಸಿದೇ ಎಂದು ಸಚಿವರು ಉತ್ತರಿಸಿದರು. ವಿಶೇಷವಾಗಿ ಕಪ್ & ಕ್ಯಾಪ್…

600ಕ್ಕೂ ಹೆಚ್ಚು ಜಿಟಿಸಿಸಿ ವಿದ್ಯಾರ್ಥಿಗಳಿಗೆ ಉದ್ಯೋಗ ನೀಡಲಿರುವ ರ‍್ಯಾಂಗ್‌ಸನ್ಸ್‌ ಏರೋಸ್ಪೇಸ್, ​​ಎಕ್ಸೈಡ್ ಎನರ್ಜಿ; ಒಪ್ಪಂದಕ್ಕೆ ಸಹಿ

ಬೆಂಗಳೂರು, ಜ. 28: ಭಾರತದ ಪ್ರಮುಖ ಏರೋಸ್ಪೇಸ್ ಕಂಪನಿಗಳಲ್ಲಿ ಒಂದಾದ ರ‍್ಯಾಂಗ್‌ಸನ್ಸ್‌ ಏರೋಸ್ಪೇಸ್ ಮತ್ತು ಪ್ರಮುಖ ಬ್ಯಾಟರಿ ತಯಾರಕರಾದ ಎಕ್ಸೈಡ್ ಎನರ್ಜಿ ಕಂಪನಿಯು ಜಿಟಿಟಿಸಿಯಲ್ಲಿ ತರಬೇತಿ ಪಡೆದಿರುವ 600ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಉದ್ಯೋಗ ನೀಡಲಿದೆ. ಈ ಕುರಿತು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು, ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಶರಣಪ್ರಕಾಶ ಆರ್. ಪಾಟೀಲ್ ಅವರ ಸಮ್ಮುಖದಲ್ಲಿ ರಾಜಾಜಿನಗರ ಜಿಟಿಟಿಸಿ ಕ್ಯಾಂಪಸ್‌ನಲ್ಲಿ ಬುಧವಾರ ಒಪ್ಪಂದಕ್ಕೆ ಸಹಿ ಹಾಕಲಾಯಿತು. ಟ್ಯೂಬ್‌ಗಳು ಮತ್ತು ನಾಳಗಳು, ಉಪಗ್ರಹ ಸಂವಹನ ವ್ಯವಸ್ಥೆಗಳು, ಉಷ್ಣ ನಿರ್ವಹಣಾ ಪರಿಹಾರಗಳು, AI-ಚಾಲಿತ ಸಾಫ್ಟ್‌ವೇರ್ ಮತ್ತು ರಕ್ಷಣಾ ಮತ್ತು ಏರೋಸ್ಪೇಸ್‌ಗಾಗಿ ಎಂಬೆಡೆಡ್ ಸಿಸ್ಟಮ್‌ಗಳನ್ನು ತಯಾರಿಸುವ ರ‍್ಯಾಂಗ್‌ಸನ್ಸ್‌ ಏರೋಸ್ಪೇಸ್‌, ಈಗ ಜಿಟಿಟಿಸಿ ವಿದ್ಯಾರ್ಥಿಗಳನ್ನು ನೇಮಿಸಿಕೊಳ್ಳುತ್ತಿದೆ ಎಂದು ಮಾನವ ಸಂಪನ್ಮೂಲ ಅಧಿಕಾರಿ ಸಂದೇಶ್‌ ಪಿ ಸತೀಶ್‌ ತಿಳಿಸಿದ್ದಾರೆ. “ವೆಲ್ಡಿಂಗ್, ಸಿಎನ್‌ಸಿ, ಸೆಟ್ಟಿಂಗ್ ಮತ್ತು ಪ್ರೋಗ್ರಾಮಿಂಗ್, ಲೇಸರ್ ಕಟಿಂಗ್, ಫಿಟ್ಟಿಂಗ್, ಶೀಟ್…

ಪಂಚಾಯತ್‌ಗಳ ಅವಧಿ ಮುಗಿಯುವ ಮುನ್ನ ಅನುದಾನ ಬಿಡುಗಡೆ ಮಾಡಲಿ: ಕೇಂದ್ರಕ್ಕೆ ಪ್ರಿಯಾಂಕ್ ಖರ್ಗೆ ಮನವಿ

ಬೆಂಗಳೂರು: ಪಂಚಾಯತಿ ಮಟ್ಟದ ಆಡಳಿತವನ್ನು ಉಳಿಸಿಕೊಳ್ಳಲು ಹಾಗೂ ಅವುಗಳ ಅವಧಿ ಮುಗಿಯುವ ಮೊದಲೇ ನಿರ್ಣಾಯಕ ಯೋಜನೆಗಳನ್ನು ಪೂರ್ಣಗೊಳಿಸಲು ಕೇಂದ್ರ ಸರ್ಕಾರವು ಸಕಾಲಕ್ಕೆ ಅನುದಾನಗಳನ್ನು ಬಿಡುಗಡೆ ಮಾಡುವುದು ಅತ್ಯಗತ್ಯವಾಗಿದೆ. ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಗ್ರಾಮ ಪಂಚಾಯತಿಗಳ ಪ್ರಸ್ತುತ ಅವಧಿ 2026ರ ಜನವರಿ-ಫೆಬ್ರವರಿ ತಿಂಗಳಿನಲ್ಲಿ ಮುಕ್ತಾಯಗೊಳ್ಳಲಿದ್ದು, ಅನುದಾನದ ಕೊರತೆಯಿಂದಾಗಿ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ಸಾಧ್ಯವಾಗುತ್ತಿಲ್ಲ. ಕರ್ನಾಟಕವು ಗ್ರಾಮೀಣ ವಿಕೇಂದ್ರೀಕರಣದಲ್ಲಿ ನಿರಂತರವಾಗಿ ಮುಂಚೂಣಿಯಲ್ಲಿದೆ ಮತ್ತು ಪಂಚಾಯತಿ ಮಟ್ಟದ ಆಡಳಿತವನ್ನು ಉಳಿಸಿಕೊಳ್ಳಲು ಹಾಗೂ ಅವುಗಳ ಅವಧಿ ಮುಗಿಯುವ ಮೊದಲೇ ನಿರ್ಣಾಯಕ ಯೋಜನೆಗಳನ್ನು ಪೂರ್ಣಗೊಳಿಸಲು ಕೇಂದ್ರ ಸರ್ಕಾರವು ಸಕಾಲಕ್ಕೆ ಅನುದಾನಗಳನ್ನು ಬಿಡುಗಡೆ ಮಾಡುವುದು ಅತ್ಯಗತ್ಯವಾಗಿದೆ ಎಂದಿದ್ದಾರೆ. ಈ ಕುರಿತು ಕರ್ನಾಟಕದ ಗ್ರಾಮ ಪಂಚಾಯತಿಗಳಿಗೆ ಕೇಂದ್ರ ಸರ್ಕಾರದಿಂದ ಬಾಕಿ ಇರುವ 15ನೇ ಹಣಕಾಸು ಆಯೋಗದ ಅನುದಾನವನ್ನು ತಕ್ಷಣ ಬಿಡುಗಡೆ ಮಾಡಲು ಗಮನಹರಿಸಬೇಕೆಂದು ಕೇಂದ್ರ ಪಂಚಾಯತ್ ರಾಜ್ ಸಚಿವರಾದ ರಾಜೀವ್ ರಂಜನ್ ಸಿಂಗ್…

ಮಂಗಳೂರಿನ ವೆನ್ಲಾಕ್, ಧಾರವಾಡ, ನೆಲಮಂಗಲ ಸಾರ್ವಜನಿಕ ಆಸ್ಪತ್ರೆಗಳಲ್ಲಿಸುಧಾರಿತ ಆಹಾರ ಪದ್ಧತಿ ಜಾರಿಗೆ

ಬೆಂಗಳೂರು: ಸರ್ಕಾರಿ ಆಸ್ಪತ್ರೆಗಳ ರೋಗಿಗಳಿಗೆ ಪೌಷ್ಟಿಕ, ಗುಣಮಟ್ಟದ ಆಹಾರ ಪೂರೈಕೆಗೆ ನಮ್ಮ ಆದ್ಯತೆ ಎಂದು ಅರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ನಮ್ಮ ಸರ್ಕಾರದ ಪ್ರಮುಖ ಆಶಯವಾದ ‘ಸಶಕ್ತ ಮತ್ತು ಆರೋಗ್ಯವಂತ ಕರ್ನಾಟಕ’ ನಿರ್ಮಾಣದ ನಿಟ್ಟಿನಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಮತ್ತೊಂದು ಮಹತ್ವದ ಹೆಜ್ಜೆ ಇರಿಸಿದೆ ಎಂದಿರುವ ಅವರು, ರಾಜ್ಯದ ಪ್ರಮುಖ ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವ ರೋಗಿಗಳಿಗೆ ಅತ್ಯುತ್ತಮ ದರ್ಜೆಯ ಆಹಾರವನ್ನು ಒದಗಿಸುವ ಉದ್ದೇಶದಿಂದ ಇಸ್ಕಾನ್ (ISKCON) ಸಂಸ್ಥೆಯ ಮೂಲಕ ಪೌಷ್ಟಿಕ ಆಹಾರ ಪೂರೈಸಲು ಅಧಿಕೃತ ಆದೇಶ ಹೊರಡಿಸಲಾಗಿದೆ ಎಂದು ತಿಳಿಸಿದ್ದಾರೆ. ಈ ಕುರಿತಂತೆ ಅವರು ಮಾಧ್ಯಮದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಮಂಗಳೂರಿನ ವೆನ್ಲಾಕ್ ಜಿಲ್ಲಾ ಆಸ್ಪತ್ರೆ, ಧಾರವಾಡ ಜಿಲ್ಲಾ ಆಸ್ಪತ್ರೆ ಹಾಗೂ ಬೆಂಗಳೂರಿನ ಯಲಹಂಕ, ಕೆ.ಆರ್. ಪುರ ಮತ್ತು ನೆಲಮಂಗಲ ಸಾರ್ವಜನಿಕ ಆಸ್ಪತ್ರೆಗಳಲ್ಲಿ ಈ ಸುಧಾರಿತ ಆಹಾರ ಪದ್ಧತಿಯನ್ನು ಜಾರಿಗೆ ತರಲಾಗುತ್ತಿದೆ. ರೋಗಿಗಳ…