ಬಳ್ಳಾರಿ ಗುಂಡಿನ ದಾಳಿ ‘ಪೂರ್ವಯೋಜಿತ’: ಜನಾರ್ದನ ರೆಡ್ಡಿ ಗುರಿಯಾಗಿಸಿ ದಾಳಿ ಆರೋಪ

ಬಳ್ಳಾರಿ: ನಗರದ ಬ್ಯಾನರ್ ಗಲಾಟೆ ಹಾಗೂ ಗುಂಡಿನ ದಾಳಿ ಪ್ರಕರಣ ರಾಜಕೀಯವಾಗಿ ತೀವ್ರ ತಿರುವು ಪಡೆದುಕೊಂಡಿದ್ದು, ಮಾಜಿ ಸಚಿವರಾದ ಬಿ. ಶ್ರೀರಾಮುಲು ಹಾಗೂ ಗಣಿಗಾರಿಕಾ ಉದ್ಯಮಿ ಜನಾರ್ದನ ರೆಡ್ಡಿ ಅವರು, ಈ ದಾಳಿ ಜನಾರ್ದನ ರೆಡ್ಡಿಯವರನ್ನೇ ಗುರಿಯಾಗಿಸಿಕೊಂಡು ನಡೆಸಿದ ‘ಪೂರ್ವಯೋಜಿತ ದಾಳಿ’ ಎಂದು ಗಂಭೀರ ಆರೋಪ ಮಾಡಿದ್ದಾರೆ. ನಗರದಲ್ಲಿ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಇದು ಆಕಸ್ಮಿಕ ಘಟನೆ ಅಲ್ಲ. ಜನಾರ್ದನ ರೆಡ್ಡಿಯವರ ಮನೆ ಮೇಲೆ ಪೆಟ್ರೋಲ್ ಬಾಂಬ್ ಎಸೆದು ಸಂಪೂರ್ಣವಾಗಿ ಸುಟ್ಟುಹಾಕುವ ಉದ್ದೇಶದೊಂದಿಗೆ ದಾಳಿ ನಡೆಸಲಾಗಿದೆ,” ಎಂದು ಹೇಳಿದರು. ಇದೇ ವೇಳೆ, ಕಾಂಗ್ರೆಸ್ ಶಾಸಕ ಭರತ್ ರೆಡ್ಡಿ ವಿರುದ್ಧವೂ ಅವರು ಆರೋಪ ಹೊರಿಸಿದರು. “ಕಾಂಗ್ರೆಸ್ ಕಾರ್ಯಕರ್ತರು ಕೇವಲ ಬ್ಯಾನರ್ ಕಟ್ಟಲು ಬಂದಿರಲಿಲ್ಲ. ಜನಾರ್ದನ ರೆಡ್ಡಿಯವರ ಮೇಲೆ ಗುಂಡು ಹಾರಿಸುವ ಹಾಗೂ ಮನೆಗೆ ಬೆಂಕಿ ಹಚ್ಚುವ ಉದ್ದೇಶದಿಂದಲೇ ಬಂದಿದ್ದರು. ಗುಂಡು ಗಾಳಿಗೆ ಹಾರಿಸಲ್ಪಟ್ಟಿಲ್ಲ, ಅದು ನೇರವಾಗಿ ಜನಾರ್ದನ…

2026ರ ಸಿಇಟಿ: ಜ.17ರಿಂದ ಅರ್ಜಿ ಸಲ್ಲಿಕೆ ಅವಕಾಶ

ಬೆಂಗಳೂರು: 2026ನೇ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ)ಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಈಗಿನಿಂದಲೇ ಸಿದ್ಧತೆ ಆರಂಭಿಸಿದ್ದು, ಜನವರಿ 17ರಿಂದ ಆನ್‌ಲೈನ್ ಅರ್ಜಿ ಪ್ರಕ್ರಿಯೆ ಆರಂಭಿಸಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ ಹಾಗೂ ಉನ್ನತ ಶಿಕ್ಷಣ ಸಚಿವ ಡಾ. ಶರಣ ಪ್ರಕಾಶ ಪಾಟೀಲ ತಿಳಿಸಿದ್ದಾರೆ. ಈ ಬಾರಿಯ ಪ್ರಮುಖ ವಿಶೇಷತೆಯಾಗಿ, ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಹೆಸರು, ಜನ್ಮ ದಿನಾಂಕ, ವಿಳಾಸ ಸೇರಿದಂತೆ ವೈಯಕ್ತಿಕ ವಿವರಗಳನ್ನು ಆಧಾರ್ ಅಥವಾ ಡಿಜಿಲಾಕರ್ ಮೂಲಕ ಪ್ರಾಮಾಣೀಕರಿಸುವ ವ್ಯವಸ್ಥೆ ಜಾರಿಗೆ ತರಲಾಗಿದೆ. ಇದರಿಂದ ಅರ್ಜಿ ಸಲ್ಲಿಕೆಯ ವೇಳೆ ಹೆಸರು ಹಾಗೂ ಇತರೆ ಮಾಹಿತಿಗಳಲ್ಲಾಗುತ್ತಿದ್ದ ತಪ್ಪುಗಳನ್ನು ತಪ್ಪಿಸಬಹುದಾಗಿದೆ ಎಂದು KEA ಸ್ಪಷ್ಟಪಡಿಸಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ವೃತ್ತಿಪರ ಶಿಕ್ಷಣ ಕೋರ್ಸ್‌ಗಳಿಗೆ ಪ್ರವೇಶಕ್ಕಾಗಿ ಕಳೆದ ಮೂರು ದಶಕಗಳಿಂದ ಸಿಇಟಿಯನ್ನು ಯಶಸ್ವಿಯಾಗಿ ನಡೆಸಿಕೊಂಡು ಬರುತ್ತಿರುವ ಹೆಗ್ಗಳಿಕೆ KEAಗೆ ಇದೆ ಎಂದು ಹೇಳಿದರು.…

ಕನಿಷ್ಠ ವೇತನಕ್ಕಾಗಿ ಆಶಾ ಕಾರ್ಯಕರ್ತೆಯರಿಂದ ಶನಿವಾರ ಪ್ರತಿಭಟನೆ

ಬೆಂಗಳೂರು: ಸರ್ಕಾರ ಕೊಟ್ಟ ಮಾತನ್ನು ಉಳಿಸಿಕೊಳ್ಳಬೇಕು ಎಂದು ಒತ್ತಾಯಿಸಿ ರಾಜ್ಯದ ಆಶಾ ಕಾರ್ಯಕರ್ತೆಯರು ಶನಿವಾರ ಬೆಂಗಳೂರಿನ ಫ್ರೀಡಂ ಪಾರ್ಕ್’ನಲ್ಲಿ ಪ್ರತಿಭಟನೆ ನಡೆಸಲಿದ್ದಾರೆ. ಬಾಕಿ ವೇತನ ಬಿಡುಗಡೆ ಮಾಡಬೇಕು ಹಾಗೂ ರೂ.10,000 ಕನಿಷ್ಠ ವೇತನ ನಿಗದಿಗೆ ಆಗ್ರಹಿಸಿ ಈ ಹೋರಾಟ ನಡೆಯಲಿದೆ ಎಂದು ಆಶಾ ಸಂಘಟನೆ ನಾಯಕಿ ಟಿ.ಸಿ.ರಮಾ ತಿಳಿಸಿದ್ದಾರೆ. ಆಶಾ, ಕಾರ್ಯಕರ್ತೆಯರಿಗೆ ನಾಲ್ಕೈದು ತಿಂಗಳಿಂದ ಬಾಕಿ ಇರುವ ವೇತನ ಮತ್ತು ಮಾನ್ಯ ಮುಖ್ಯಮಂತ್ರಿಗಳು 2025 ಜನವರಿಯಲ್ಲಿ ಎಲ್ಲಾ ಆಶಾ ಕಾರ್ಯಕರ್ತೆಯರಿಗೆ ತಿಂಗಳಿಗೆ ಕನಿಷ್ಠ ರೂ.10,000 ಏಪ್ರಿಲ್ 2025 ರಿಂದ ಅನ್ವಯವಾಗುತ್ತದೆ ಎಂದು ಭರವಸೆ ನೀಡಿದ್ದರು. ಸರ್ಕಾರ ಕೊಟ್ಟ ಮಾತನ್ನು ಉಳಿಸಿಕೊಳ್ಳಬೇಕು. ಈಎರಡು ಪ್ರಮುಖ ಬೇಡಿಕೆಯೊಂದಿಗೆ ಬೆಂಗಳೂರು ಜಿಲ್ಲಾಮಟ್ಟದ ಪ್ರತಿಭಟನೆ ನಡೆಯಲಿದೆ ಎಂದು ಟಿ.ಸಿ.ರಮಾ ತಿಳಿಸಿದ್ದಾರೆ.

ಬಳ್ಳಾರಿ ಘಟನೆ: ಗುಂಪುಘರ್ಷಣೆ ತನಿಖೆಗೆ ಸೂಚನೆ – ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಬಳ್ಳಾರಿಯಲ್ಲಿ ಮಾಜಿ ಸಚಿವ ಜನಾರ್ಧನ ರೆಡ್ಡಿಯವರ ನಿವಾಸದ ಸಮೀಪ ನಡೆದ ಗುಂಪುಘರ್ಷಣೆ ಹಾಗೂ ಗೋಲಿಬಾರ್ ಪ್ರಕರಣದ ಕುರಿತು ಸಮಗ್ರ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಮಂಗಳವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಘಟನೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ ಎಂಬ ಯುವಕ ಮೃತಪಟ್ಟಿರುವುದು ಅತ್ಯಂತ ದುಃಖಕರ ಸಂಗತಿ ಎಂದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ತನಿಖೆ ಆರಂಭಿಸಲಾಗಿದ್ದು, ಘಟನೆಯಲ್ಲಿ ಬಳಸಲಾದ ಗನ್ ಯಾರಿಗೆ ಸೇರಿದ್ದು, ಹೇಗೆ ಬಳಸಲಾಗಿದೆ ಎಂಬ ಎಲ್ಲ ಅಂಶಗಳನ್ನು ಪರಿಶೀಲಿಸಿ ವರದಿ ನೀಡುವಂತೆ ಸೂಚಿಸಲಾಗಿದೆ ಎಂದು ಹೇಳಿದರು. ಸತೀಶ್ ರೆಡ್ಡಿಯವರು ಗಾಳಿಯಲ್ಲಿ ಗುಂಡು ಹಾರಿಸಲು ಯತ್ನಿಸಿದ ವೇಳೆ ಅದು ತಪ್ಪಾಗಿ ರಾಜಶೇಖರ್‌ಗೆ ತಗುಲಿರುವ ಸಾಧ್ಯತೆಯೂ ಇದೆ. ಈ ಎಲ್ಲ ಅಂಶಗಳನ್ನು ತನಿಖೆಯ ಮೂಲಕ ಸ್ಪಷ್ಟಪಡಿಸಲಾಗುವುದು ಎಂದು ಮುಖ್ಯಮಂತ್ರಿ ಹೇಳಿದರು. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ…

ಬೆಂಗಳೂರಿನಿಂದ ಕನ್ಯಾಕುಮಾರಿವರೆಗೆ ಸೈಕಲ್ ಸವಾರಿ: ಶಾಸಕ ಎಸ್. ಸುರೇಶ್ ಕುಮಾರ್ ಸಾಧನೆಗೆ ಪ್ರಧಾನಿ ಮೋದಿ ಶ್ಲಾಘನೆ

ಬೆಂಗಳೂರು: ಬೆಂಗಳೂರಿನಿಂದ ಕನ್ಯಾಕುಮಾರಿವರೆಗೆ ಸೈಕಲ್ ಸವಾರಿ ಕೈಗೊಂಡಿರುವ ಶಾಸಕ ಎಸ್. ಸುರೇಶ್ ಕುಮಾರ್ ಅವರ ಸಾಧನೆ ಶ್ಲಾಘನೀಯ ಹಾಗೂ ಸ್ಫೂರ್ತಿದಾಯಕವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಪ್ರಶಂಸಿಸಿದ್ದಾರೆ. ಸಾಮಾಜಿಕ ಜಾಲತಾಣ X ನಲ್ಲಿ ಪೋಸ್ಟ್ ಮಾಡಿದ ಪ್ರಧಾನಿ ಮೋದಿ, ಆರೋಗ್ಯ ಸಂಬಂಧಿತ ಹಿನ್ನಡೆಗಳನ್ನು ಮೀರಿಸಿ ಸುರೇಶ್ ಕುಮಾರ್ ಅವರು ಈ ಸಾಧನೆಯನ್ನು ಸಾಧಿಸಿರುವುದು ಅವರ ದೃಢ ಸಂಕಲ್ಪ ಮತ್ತು ಅಚಲ ಮನೋಭಾವವನ್ನು ಪ್ರತಿಬಿಂಬಿಸುತ್ತದೆ ಎಂದು ಹೇಳಿದ್ದಾರೆ. ಈ ಪ್ರಯತ್ನವು ಫಿಟ್ನೆಸ್ ಮತ್ತು ಆರೋಗ್ಯದ ಮಹತ್ವದ ಕುರಿತು ಮಹತ್ವದ ಸಂದೇಶವನ್ನು ನೀಡುತ್ತದೆ ಎಂದೂ ಅವರು ಅಭಿಪ್ರಾಯಪಟ್ಟಿದ್ದಾರೆ. ಪ್ರಧಾನಮಂತ್ರಿ ಅವರು ದೂರವಾಣಿ ಮೂಲಕ ಶಾಸಕರೊಂದಿಗೆ ಮಾತನಾಡಿ, ಈ ವಿಶಿಷ್ಟ ಪ್ರಯತ್ನಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ.