ಹಿರಿಯೂರು ಬಳಿ ಕಾರು-ಲಾರಿ ಡಿಕ್ಕಿಯಾಗಿ ನಾಲ್ವರ ಸಾವು

ಚಿತ್ರದುರ್ಗ: ಹಿರಿಯೂರು ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ. ಬೀದರ್-ಶ್ರೀರಂಗಪಟ್ಟಣ ರಾಜ್ಯ ಹೆದ್ದಾರಿಯಲ್ಲಿ ಅಪಘಾತ ಸಂಭವಿಸಿದೆ. ಹಿರಿಯೂರು ತಾಲೂಕಿನ ಹಿಂಡಸಕಟ್ಟೆ ಗ್ರಾಮದಲ್ಲಿ ಕಾರಿಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ನಾಲ್ವರು ಸಾವನ್ನಪ್ಪಿದ್ದಾರೆ. ಮೃತರನ್ನು 23 ವರ್ಷದ ರಾಹುಲ್, ನಂಜುಂಡಿ ಹಾಗೂ 22 ವರ್ಷದ ವಿಶ್ವನಾಥ್, ಯಶ್ವಂತ್ ಎಂದು ಗುರುತಿಸಲಾಗಿದೆ. ಇವರೆಲ್ಲರೂ ಹಿರಿಯೂರು ಸಮೀಪದ ನಂಜಯ್ಯನಕೊಟ್ಟಿಗೆ ಗ್ರಾಮದವರು ಎನ್ನಲಾಗಿದೆ. ಅಪಘಾತದ ಸುದ್ದಿ ತಿಳಿದು ಸ್ಥಳಕ್ಕೆ ಧಾವಿಸಿದ ಹಿರಿಯೂರು ಗ್ರಾಮಾಂತರ ಠಾಣೆ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

‘ಗಾಂಧೀಜಿ ಬಗ್ಗೆ ಮಾತನಾಡುವ ನೈತಿಕ ಹಕ್ಕು ಕಾಂಗ್ರೆಸ್‌ಗೆ ಇಲ್ಲ’; ಹೆಚ್ಡಿಕೆ

ಬೆಂಗಳೂರು: VB G-RAM-G ಯೋಜನೆ ಕುರಿತು ಕಾಂಗ್ರೆಸ್ ಪಕ್ಷವು ಸುಳ್ಳು ಮಾಹಿತಿಯನ್ನು ಹರಡುತ್ತಿದೆ ಎಂದು ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವ ಎಚ್.ಡಿ. ಕುಮಾರಸ್ವಾಮಿ ಆರೋಪಿಸಿದರು. ಈ ಕುರಿತು ದಾಖಲೆಗಳೊಂದಿಗೆ ಬಹಿರಂಗ ಸಾರ್ವಜನಿಕ ಚರ್ಚೆಗೆ ಬರಲು ಕರ್ನಾಟಕದ ಕಾಂಗ್ರೆಸ್ ನಾಯಕರಿಗೆ ಅವರು ಶನಿವಾರ ಸವಾಲು ಹಾಕಿದ್ದಾರೆ. MGNREGA ರದ್ದುಪಡಿಸಿ ಕೇಂದ್ರ ಸರ್ಕಾರ VB G-RAM-G ಜಾರಿಗೆ ತಂದಿದೆ ಎಂಬ ಆರೋಪವನ್ನು ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮಾಡಿದ್ದ ಹಿನ್ನೆಲೆಯಲ್ಲಿ ಕುಮಾರಸ್ವಾಮಿ ಈ ಪ್ರತಿಕ್ರಿಯೆ ನೀಡಿದರು. ಈ ವಿಷಯದ ಬಗ್ಗೆ ಕೇಂದ್ರ ಸಚಿವರ ಆಹ್ವಾನಕ್ಕೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಅಗತ್ಯವಿದ್ದರೆ ಚರ್ಚೆಯ ಜೊತೆಗೆ ದೊಡ್ಡ ಆಂದೋಲನಕ್ಕೂ ಸಿದ್ಧ ಎಂದು ಹೇಳಿದ್ದರು. ಬೆಂಗಳೂರಿನಲ್ಲಿ ವಿರೋಧ ಪಕ್ಷದ ನಾಯಕ ಆರ್. ಅಶೋಕ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರೊಂದಿಗೆ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕುಮಾರಸ್ವಾಮಿ, ಪ್ರಧಾನಿ…