ರಾಜ್ಯದಲ್ಲಿ ಡ್ರಗ್ಸ್ ವಿರುದ್ಧ ಬಿಜೆಪಿ ಸಮರ; ಸಿಎಂ ತವರಿನಿಂದ ಅಭಿಯಾನ

ಬೆಂಗಳೂರು: ಯುವಜನತೆಯ ಭವಿಷ್ಯ ಹಾಳು ಮಾಡುತ್ತಿರುವ ಡ್ರಗ್ಸ್‌ ಮಾಫಿಯಾ ತಡೆಗಟ್ಟಲು ಬಿಜೆಪಿಯು ಬೃಹತ್ ಜಾಗೃತಿ ಹೋರಾಟವನ್ನು ಸಿಎಂ ತವರು ಜಿಲ್ಲೆ ಮೈಸೂರಿನಿಂದ ಆರಂಭಿಸಲಿದೆ ಎಂದು ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಘೋಷಿಸಿದ್ದಾರೆ. ಗಂಧದ ನಾಡು ಎಂದು ಖ್ಯಾತಿ ಹೊಂದಿದ್ದ ಕರುನಾಡು ಕಾಂಗ್ರೆಸ್ ಆಡಳಿತದಲ್ಲಿ ಡ್ರಗ್ಸ್ ಬೀಡಾಗಿದೆ. ನೆರೆ ರಾಜ್ಯದ ಪೊಲೀಸರು ಕರ್ನಾಟಕ ರಾಜ್ಯಕ್ಕೆ ಬಂದು ಡ್ರಗ್ಸ್‌ ಫ್ಯಾಕ್ಟರಿ ಮೇಲೆ ದಾಳಿ ಮಾಡುವ ಪರಿಸ್ಥಿತಿ ರಾಜ್ಯದಲ್ಲಿ ತಲೆದೋರಿದೆ. ಡ್ರಗ್ಸ್ ಮಾಫಿಯಾ ಜೊತೆಗೆ ಸಚಿವರ ಆಪ್ತರ ನಂಟು ಬೆಳಕಿಗೆ ಬಂದಿದೆ ಎಂದವರು ಆರೋಪಿಸಿದ್ದಾರೆ. ಸಮಾಜಘಾತುಕರನ್ನು ಹಾಗೂ ಅಪರಾಧಿಗಳನ್ನು ಪೋಷಿಸುವ ಸಿದ್ದರಾಮಯ್ಯ ಸರ್ಕಾರದ ಆಡಳಿತ ವೈಖರಿಯಿಂದ ಇಂದು ರಾಜ್ಯದ ಮೂಲೆ ಮೂಲೆಗೂ ಡ್ರಗ್ಸ್ ಘಾಟು ಹಬ್ಬಿದೆ ಎಂದು ವಿಜಯೇಂದ್ರ ವ್ಯಾಖ್ಯಾನಿಸಿದ್ದಾರೆ. ಡ್ರಗ್ಸ್‌ ದಂಧೆಯನ್ನು ಮಟ್ಟ ಹಾಕಿ, ಯುವಜನತೆಯನ್ನು ಇವುಗಳಿಂದ ರಕ್ಷಿಸಲು ರಾಜ್ಯ ಸರ್ಕಾರ ವಿಫಲವಾದ ಹಿನ್ನೆಲೆಯಲ್ಲಿ, ಜವಾಬ್ದಾರಿಯುತ ಪ್ರತಿಪಕ್ಷವಾಗಿ, ರಾಜ್ಯದ ಜನತೆಯ ಧ್ವನಿಯಾಗಿ…

ಮಹಿಳಾ ಅಧಿಕಾರಿಗೆ ಕಾಂಗ್ರೆಸ್ ನಾಯಕ ಧಮ್ಕಿ; ‘ಮೌನ’ ಸಮ್ಮತಿ ಇದೆಯೇ? ಎಂದು ಸಿಎಂಗೆ ವಿಜಯೇಂದ್ರ ಪ್ರಶ್ನೆ

ಬೆಂಗಳೂರು: ರಾಜ್ಯವನ್ನು ಗೂಂಡಾರಾಜ್ಯವನ್ನಾಗಿ ಪರಿವರ್ತಿಸಿರುವ ಈ ಕಾಂಗ್ರೆಸ್ ಸರ್ಕಾರದಲ್ಲಿ ಕಾನೂನು-ಸುವ್ಯವಸ್ಥೆ ಸಂಪೂರ್ಣ ಕುಸಿದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಿಸಿದ್ದಾರೆ. ಶಿಡ್ಲಘಟ್ಟದಲ್ಲಿ ಮಹಿಳಾ ಅಧಿಕಾರಿಗೆ ಕಾಂಗ್ರೆಸ್ ನಾಯಕ ಧಮ್ಕಿ ಹಾಕಿರುವ ಘಟನೆಯನ್ನು ವಿಜಯೇಂದ್ರ ಖಂಡಿಸಿದ್ದಾರೆ. ಕಾಂಗ್ರೆಸ್ ಮುಖಂಡರುಗಳು ಇದಕ್ಕೆ ತಕ್ಕಂತೆ ಪುಡಿರೌಡಿಗಳಂತೆ ವರ್ತಿಸುತ್ತಿರುವುದು ಆ ಪಕ್ಷದ ಸಂಸ್ಕೃತಿಗೆ ಕನ್ನಡಿ ಹಿಡಿದಿದೆ. ಶಿಡ್ಲಘಟ್ಟದ ಕಾಂಗ್ರೆಸ್ ಮುಖಂಡ ನಿಯಮಬಾಹಿರವಾಗಿ ಕೃತ್ಯ ಎಸಗಿರುವುದು ಮಾತ್ರವಲ್ಲದೆ ಒಬ್ಬ ಕರ್ತವ್ಯ ನಿರತ ಮಹಿಳಾ ಅಧಿಕಾರಿಯ ಮೇಲೆ ಹೀಗೆ ಅಸಭ್ಯ ಪುಂಡನಂತೆ ವರ್ತಿಸುತ್ತಿರುವುದು ಅಕ್ಷಮ್ಯ. ‘ಈ ಮುಖಂಡನ ಈ ‘ಗೂಂಡಾ ವರ್ತನೆ’ಗೂ ಕೂಡ ಬಳ್ಳಾರಿಯ ಪ್ರಕರಣದಲ್ಲಿ ವಹಿಸಿದಂತೆ ಇದಕ್ಕೂ ನಿಮ್ಮ ‘ಮೌನ’ ಸಮ್ಮತಿ ಇದೆಯೇ? ಅಥವಾ ಅವರ ವಿರುದ್ಧ ಕಾನೂನು ಕ್ರಮಕ್ಕೆ ಆದೇಶಿಸುತ್ತೀರಾ?’ ಎಂದು ಸಿಎಂ ಸಿದ್ದರಾಮಯ್ಯ ಹಾಗೂ ಗೃಹ ಸಚಿವ ಪರಮೇಶ್ವರ್ ಅವರನ್ನು ವಿಜಯೇಂದ್ರ ಪ್ರಶ್ನಿಸಿದ್ದಾರೆ. ಅಧಿಕಾರ ಮದದಿಂದ ಜನಸಾಮಾನ್ಯರ, ಪ್ರಾಮಾಣಿಕ ಅಧಿಕಾರಿಗಳ ಮೇಲೆ…