ಗದಗ: ಐತಿಹಾಸಿಕ ಲಕ್ಕುಂಡಿ ಗ್ರಾಮದಲ್ಲಿ ಇತ್ತೀಚೆಗೆ ಭಾರೀ ಮೌಲ್ಯದ ಚಿನ್ನಾಭರಣ ಪತ್ತೆಯಾದ ಹಿನ್ನೆಲೆಯಲ್ಲಿ, ಅಲ್ಲಿನ ಕೋಟೆ ಶ್ರೀ ವೀರಭದ್ರೇಶ್ವರ ದೇವಸ್ಥಾನದ ಎದುರು ಉತ್ಖನನ ಕಾರ್ಯ ಆರಂಭಿಸಲಾಗಿದ್ದು, ಉತ್ಖನನ ನಡೆಯುತ್ತಿರುವ ಸ್ಥಳವನ್ನು ನಿರ್ಬಂಧಿತ ಪ್ರದೇಶವಾಗಿ ಘೋಷಿಸಲಾಗಿದೆ. ಲಕ್ಕುಂಡಿಯ ವೀರಭದ್ರೇಶ್ವರ ದೇವಸ್ಥಾನದ ಎದುರಿನ ಜಾಗದಲ್ಲಿ ಜನವರಿ 16ರಿಂದ ಉತ್ಖನನ ಕಾರ್ಯ ಆರಂಭವಾಗಿದ್ದು, ಪ್ರದೇಶ ಅತ್ಯಂತ ಸೂಕ್ಷ್ಮವಾಗಿರುವ ಕಾರಣ ಸಾರ್ವಜನಿಕ ಪ್ರವೇಶಕ್ಕೆ ಸಂಪೂರ್ಣ ನಿರ್ಬಂಧ ವಿಧಿಸಲಾಗಿದೆ. ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ, ಕಮಲಾಪುರ–ಹಂಪಿ ಹಾಗೂ ಉತ್ಖನನದ ಸಹ ನಿರ್ದೇಶಕರು ಜನವರಿ 16ರಂದು ನೀಡಿದ ಪತ್ರದ ಆಧಾರದಲ್ಲಿ ಈ ಆದೇಶ ಜಾರಿಗೊಳಿಸಲಾಗಿದೆ. ಅಧಿಕೃತವಾಗಿ ನೇಮಕಗೊಂಡ ಸಿಬ್ಬಂದಿಯನ್ನು ಹೊರತುಪಡಿಸಿ, ಯಾವುದೇ ಸಾರ್ವಜನಿಕರು, ಪ್ರವಾಸಿಗರು ಅಥವಾ ಇತರ ವ್ಯಕ್ತಿಗಳು ಉತ್ಖನನ ಸ್ಥಳಕ್ಕೆ ಪ್ರವೇಶಿಸುವುದು, ಫೋಟೋಗ್ರಫಿ ಹಾಗೂ ವೀಡಿಯೋಗ್ರಫಿ ನಡೆಸುವುದು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ ಎಂದು ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ. ಈ ಕುರಿತು ಗದಗ ಜಿಲ್ಲಾಧಿಕಾರಿ ಹಾಗೂ ಲಕ್ಕುಂಡಿ…
Day: January 17, 2026
ಸ್ಥಳೀಯ ಸಂಸ್ಥೆಗಳ ಚುನಾವಣೆ: ಬಿಜೆಪಿ–ಜೆಡಿಎಸ್ ಮೈತ್ರಿಗೆ ಚರ್ಚೆ
ಬೆಂಗಳೂರು: ಮಹಾರಾಷ್ಟ್ರದಲ್ಲಿ ಬಿಜೆಪಿ ನೇತೃತ್ವದ ಮೈತ್ರಿಕೂಟ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಜಯ ಸಾಧಿಸಿದ ಬೆನ್ನಲ್ಲೇ, ಕರ್ನಾಟಕದಲ್ಲೂ ಸ್ಥಳೀಯ ಸಂಸ್ಥೆಗಳ ಚುನಾವಣೆಗಳ ಕುರಿತು ರಾಜಕೀಯ ಚಟುವಟಿಕೆಗಳು ಚುರುಕುಗೊಂಡಿವೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ನಡೆಯಲಿರುವ ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು ಬಿಜೆಪಿ–ಜೆಡಿಎಸ್ ಮೈತ್ರಿಯಾಗಿ ಎದುರಿಸುವ ಬಗ್ಗೆ ಚರ್ಚೆಗಳು ತೀವ್ರಗೊಂಡಿವೆ. ಸುಪ್ರೀಂ ಕೋರ್ಟ್ ಜೂನ್ 30ರೊಳಗೆ ಜಿಬಿಎ (ಗ್ರೇಟರ್ ಬೆಂಗಳೂರು ಅಥಾರಿಟಿ) ಚುನಾವಣೆ ನಡೆಸುವಂತೆ ಆದೇಶ ನೀಡಿರುವ ಹಿನ್ನೆಲೆ ಜೆಡಿಎಸ್ ಪಕ್ಷ ಸಭೆ ನಡೆಸಿದ್ದು, ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳುವ ಇಂಗಿತವನ್ನು ವ್ಯಕ್ತಪಡಿಸಿದೆ. ಈ ಮೂಲಕ ಆಡಳಿತಾರೂಢ ಕಾಂಗ್ರೆಸ್ ಪಕ್ಶಕ್ಕೆ ಸವಾಲೊಡ್ಡಲು ಮೈತ್ರಪಕ್ಷಗಳು ಕಾರ್ಯತಂತ್ರದಲ್ಲಿ ತೊಡಗಿವೆ. ಈ ನಡುವೆ, ಜಾತ್ಯತೀತ ದಳ ನಾಯಕರೂ ಆದ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಮಹತ್ವದ ಘೋಷಣೆ ಮಾಡಿದ್ದು, ಜಿಬಿಎ ಚುನಾವಣೆಯನ್ನು ಬಿಜೆಪಿ–ಜೆಡಿಎಸ್ ಮೈತ್ರಿಯಾಗಿ ಎದುರಿಸುವುದು ಸೂಕ್ತ ಎಂದು ಹೇಳಿದ್ದಾರೆ. ಈ ಹಿಂದೆ ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ…
