ಮೈಸೂರು: ರಾಜ್ಯ ಕಾಂಗ್ರೆಸ್‌ನಲ್ಲಿ ದಿನಕ್ಕೊಂದು ರಾಜಕೀಯ ಬೆಳವಣಿಗೆ ನಡೆಯುತ್ತಿರುವ ನಡುವೆ, ಜೆಡಿಎಸ್‌ನಲ್ಲೂ ಚರ್ಚೆಗಳು ತೀವ್ರಗೊಂಡಿವೆ. ಈ ಹಿನ್ನೆಲೆಯಲ್ಲಿ ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ. ದೇವೇಗೌಡ ಅವರು ತಮ್ಮ ಪಕ್ಷ ನಿಷ್ಠೆಯನ್ನು ಸ್ಪಷ್ಟಪಡಿಸಿದ್ದು, “ನಾನು ಜೆಡಿಎಸ್‌ನಲ್ಲಿಯೇ ಇದ್ದೇನೆ. ಎಲ್ಲಿಯೂ ಹೋಗುವುದಿಲ್ಲ. ಮುಂದಿನ ಚುನಾವಣೆಯಲ್ಲೂ ಜೆಡಿಎಸ್‌ನಿಂದಲೇ ಸ್ಪರ್ಧಿಸುತ್ತೇನೆ” ಎಂದು ಹೇಳಿದ್ದಾರೆ. ನಾನು ಯಾವುದೇ ನಾಯಕರಿಗೂ ದ್ರೋಹ ಮಾಡಿಲ್ಲ ಎಂದು ಸ್ಪಷ್ಟಪಡಿಸಿದ ಅವರು, ಐದು ಬಾರಿ ಶಾಸಕನಾಗಿ ಆಯ್ಕೆಯಾಗಿದ್ದೇನೆ. ಇದರಲ್ಲಿ ಎರಡು ಬಾರಿ ಹುಣಸೂರು ಕ್ಷೇತ್ರದಿಂದ ಹಾಗೂ ಮೂರು ಬಾರಿ ಚಾಮುಂಡೇಶ್ವರಿ ಕ್ಷೇತ್ರದಿಂದ ಗೆಲುವು ಸಾಧಿಸಿದ್ದೇನೆ. ಜೆಡಿಎಸ್ ಪಕ್ಷದ ಸಂಘಟನೆಗಾಗಿ ಅನೇಕ ಕಾರ್ಯಕ್ರಮಗಳನ್ನು ನಡೆಸಿದ್ದು, ಈಗಲೂ ಪಕ್ಷದಿಂದ ದೂರ ಉಳಿದಿಲ್ಲ ಎಂದು ಹೇಳಿದರು. ಯಾರನ್ನೂ ಟೀಕಿಸದೆ, ಕ್ಷೇತ್ರದ ಅಭಿವೃದ್ಧಿ ಕೆಲಸಗಳಲ್ಲಿಯೇ ತೊಡಗಿಸಿಕೊಂಡಿದ್ದೇನೆ. ಜೆಡಿಎಸ್ ಪಕ್ಷವನ್ನು ಕಟ್ಟುವಲ್ಲಿ ನಾನು ವಹಿಸಿದ ಪಾತ್ರದ ಬಗ್ಗೆ ಹಿರಿಯ ನಾಯಕ ಹೆಚ್.ಡಿ. ದೇವೇಗೌಡ ಹಾಗೂ ಮಾಜಿ ಮುಖ್ಯಮಂತ್ರಿ…
Day: January 19, 2026
ಎಐಸಿಐಸಿ ಹೋರಾಟಕ್ಕೆ ರಾಜ್ಯದ ಸಾಥ್.. ಮಂಗಳೂರಿನಲ್ಲಿ ಮೊದಲ ಲೀಗಲ್ ಬ್ಯಾಂಕ್ ಅಸ್ತಿತ್ವಕ್ಕೆ
ಮಂಗಳೂರು: ಪ್ರದೇಶ ಕಾಂಗ್ರೆಸ್ ಪಕ್ಷ ಇದೀಗ ಹೊಸ ಮನ್ವಂತರಕ್ಕೆ ಮುನ್ನುಡಿ ಬರೆದಿದೆ. ಕೇಂದ್ರದ ವಿರುದ್ಧ ‘ಓಟ್ ಚೋರಿ’ ಅಭಿಯಾನವನ್ನು ಬಿರುಸುಗೊಳಿಸಿರುವ ಕಾಂಗ್ರೆಸ್ ಪಕ್ಷ ಇದೀಗ ತನ್ನ ಈ ಹೋರಾಟವನ್ನು ಚುರುಕುಗೊಳಿಸಲು ‘ಲೀಗಲ್ ಬ್ಯಾಂಕ್’ ಅಸ್ತಿತ್ವಕ್ಕೆ ತಂದಿದೆ. ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಅವರ ಪರಿಕಲ್ಪನೆಯಂತೆ ಕರ್ನಾಟಕದಲ್ಲಿ ‘ಲೀಗಲ್ ಬ್ಯಾಂಕ್’ ಅಸ್ತಿತ್ವಕ್ಕೆ ಬಂದಿದೆ. ಪಕ್ಷ ಸಂಘಟನೆಗೆ ಕಾನೂನು ಶಕ್ತಿ ತುಂಬುವ ಉದ್ದೇಶದಿಂದ ಈ ವ್ಯವಸ್ಥೆಯನ್ನು ಆರಂಭಿಸಲಾಗಿದ್ದು, ದಕ್ಷಿಣ ಭಾರತದಲ್ಲೇ ಮೊದಲೆಂಬಂತೆ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಘಟಕ ಈ ‘ಲೀಗಲ್ ಬ್ಯಾಂಕ್’ ಸ್ಥಾಪಿಸಿ ಗಮನಸೆಳೆದಿದೆ. ಸುಮಾರು 250 ವಕೀಲರ ತಂಡ ಈ ‘ಲೀಗಲ್ ಬ್ಯಾಂಕ್’ ನಲ್ಲಿ ಕೈಜೋಡಿಸಿರುವುದು ವಿಶೇಷ. ಕೇಂದ್ರದ ವಿರುದ್ಧ ಪರಿಣಾಮಕಾರಿ ಹೋರಾಟ ನಡೆಸಲು ಅನುಕೂಲವಾಗುವಂತೆ ಎಲ್ಲಾ ಪ್ರಾದೇಶಿಕ ಸಮಿತಿಗಳು (PCC) ಹಾಗೂ ಜಿಲ್ಲಾ ಸಮಿತಿ (PCC), ಪ್ರತೀ ವಿಧಾನಸಭಾ ಕ್ಷೇತ್ರಗಳಲ್ಲಿ ‘ಲೀಗಲ್ ಬ್ಯಾಂಕ್’ ಸ್ಥಾಪಿಸಬೇಕೆಂಬುದು…
ಬೆಳೆ ವಿಮೆ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವೀತಿಯ ಸ್ಥಾನ
ಬೆಂಗಳೂರು: 2024-25 ನೇ ಸಾಲಿನ ಮುಂಗಾರು ಹಾಗೂ ಹಿಂಗಾರು ಬೆಳೆಗಳಿಗೆ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯನ್ನು (#PMFBY) ಪರಿಣಾಮಕಾರಿಯಾಗಿ ಅನುಷ್ಠಾನ ಮಾಡುವಲ್ಲಿ, ದೊಡ್ಡ ರಾಜ್ಯಗಳ ಪಟ್ಟಿಯಲ್ಲಿ ಕರ್ನಾಟಕ ದ್ವೀತಿಯ ಸ್ಥಾನ ಪಡೆದಿರುವುದು ಹೆಮ್ಮೆಯ ಸಂಗತಿಯಾಗಿದೆ. ಬೆಳೆ ವಿಮೆ ಅನುಷ್ಠಾನ ಮಾಡುವಲ್ಲಿ ವಿವಿಧ ಆಯಾಮಗಳ ಪರಿಣಾಮಕಾರಿ ಅನುಷ್ಠಾನ ಹಾಗೂ ನೂತನ ತಂತ್ರಜ್ಞಾನಗಳ ಅಳವಡಿಕೆಯ ಮೂಲಕ ದ್ವಿತೀಯ ಸ್ಥಾನದ ಪಡೆಯುವ ಮೂಲಕ ರಾಜ್ಯ ಕೃಷಿ ಇಲಾಖೆಯ ಹಿರಿಮೆ ಹೆಚ್ಚಿಸಿದೆ.. ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ (ವಿಮಾ) ಯೋಜನೆಯನ್ನು ರಾಜ್ಯದಾದ್ಯಂತ ಪರಿಣಾಮಕಾರಿಯಾಗಿ ಜಾರಿಗೆ ತಂದು ರೈತರನ್ನು ಅನಿಶ್ಚಿತ ನಷ್ಟದಿಂದ ಪಾರು ಮಾಡುವ ದಿಶೆಯಲ್ಲಿ ನಮ್ಮ ಕೃಷಿ ಇಲಾಖೆ ಹಾಗೂ ಸ್ಥಳೀಯ ಕೃಷಿ ಅಧಿಕಾರಿಗಳು ನಿರಂತರವಾಗಿ ಶ್ರಮಿಸುತ್ತಿದ್ದಾರೆ. ಕೃಷಿ ಸಚಿವ ಎನ್.ಚಲುವರಾಯಸ್ವಾಮಿಯವರ ನೇತೃತ್ವ ಹಾಗೂ ವಿಶೇಷ ಕಾಳಜಿಯಿಂದ ರಾಜ್ಯ ಕೃಷಿ ಇಲಾಖೆ ಮಹತ್ವದ ಸಾಧನೆ ಮಾಡಿದ್ದು, ಕೇಂದ್ರ ಸರ್ಕಾರ, ರಾಜ್ಯ…
