ಉಡುಪಿ: ಉಡುಪಿ ಪರ್ಯಾಯ ಮಹೋತ್ಸವದಲ್ಲಿ ಕೇಸರಿ ಧ್ವಜ ನಿಶಾನೆ ತೋರಿದ ಜಿಲ್ಲಾಧಿಕಾರಿಯನ್ನು ಅಮಾನತುಗೊಳಿಸುವಂತೆ ಕಾಂಗ್ರೆಸ್ ನಾಯಕರು ಸರ್ಕಾರಕ್ಕೆ ಮನವಿ ಸಲ್ಲಿಸಿದ್ದಾರೆ. ಕಾಂಗ್ರೆಸ್ ನಾಯಕರ ಈ ನಡೆಯನ್ನು ಬಿಜೆಪಿ ಕಟುವಾಗಿ ಟೀಕಿಸಿದೆ. ನೂರಾರು ವರ್ಷಗಳ ಇತಿಹಾಸವಿರುವ ಉಡುಪಿ ಪರ್ಯಾಯ ಮಹೋತ್ಸವದ ವೇಳೆ ಜಿಲ್ಲಾಧಿಕಾರಿಗಳು ನಗರಸಭೆಯ ಆಡಳಿತಾಧಿಕಾರಿಯಾಗಿ ಹಿಂದೂ ಸಂಪ್ರದಾಯದಂತೆ ಕೇಸರಿ ಧ್ವಜ ನಿಶಾನೆ ತೋರುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದಕ್ಕೆ ಜಿಲ್ಲಾಧಿಕಾರಿಗಳನ್ನು ಅಮಾನತುಗೊಳಿಸುವಂತೆ ಉಡುಪಿ ಕಾಂಗ್ರೆಸ್ ಪಕ್ಷವು ಸರ್ಕಾರಕ್ಕೆ ಮನವಿ ಮಾಡಿಕೊಂಡಿರುವುದು ಕಾಂಗ್ರೆಸ್ಸಿನ ಹಿಂದೂ ವಿರೋಧಿ ನೀತಿಗೆ ಹಿಡಿದ ಕೈಗನ್ನಡಿಯಾಗಿದೆ ಎಂದು ಬಿಜೆಪಿ ಆರೋಪಿಸಿದೆ. ಕಾಂಗ್ರೆಸ್ ಪಕ್ಷವು ತನ್ನ ಓಲೈಕೆ ರಾಜಕಾರಣಕ್ಕಾಗಿ ಬಹುಸಂಖ್ಯಾತ ಹಿಂದೂಗಳ ಪ್ರತಿ ಆಚರಣೆಗಳಿಗೆ ನಿರಂತರ ಅಡ್ಡಗಾಲು ಹಾಕುತ್ತಿದೆ ಎಂದು ಬಿಜೆಪಿ ಆರೋಪ ಮಾಡಿದೆ. ಉಡುಪಿ ಜಿಲ್ಲಾ ಕಾಂಗ್ರೆಸ್ ನಾಯಕರು ಸಿಎಂಗೆ ಬರೆದಿದ್ದಾರೆ ಎನ್ನಲಾದ ಪತ್ರದ ಪ್ರತಿಯನ್ನು ಸಾಮಾಜಿಕ ಮಾಧ್ಯಮ X ನಲ್ಲಿ ಹಂಚಿಕೊಂಡಿರುವ ಬಿಜೆಪಿ,…
Day: January 21, 2026
ರಾಯಚೂರು ಬಳಿ ಭೀಕರ ಅಪಘಾತ; ಐವರು ದುರ್ಮರಣ
ರಾಯಚೂರು: ಸಿಂಧನೂರು ತಾಲೂಕಿನ ಕನ್ನಾರಿ ಕ್ರಾಸ್ ಬಳಿ ಲಾರಿ ಹಾಗೂ ಎರಡು ಗೂಡ್ಸ್ ವಾಹನಗಳ ನಡುವೆ ಸರಣಿ ಅಪಘಾತ ಸಂಭವಿಸಿದೆ. ಮಂಗಳವಾರ ಸಂಜೆ ಸಂಭವಿಸಿದ ಈ ಅಪಘಾತದಲ್ಲಿ ಐವರು ಮೃತಪಟ್ಟಿದ್ದಾರೆ. ಕುರಿ ಸಾಗಿಸುತ್ತಿದ್ದ ಬೊಲೆರೊ ಪಿಕಪ್ ವಾಹನ ಹಾಗೂ ಟಾಟಾ ಏಸ್ ಗೆ ನಡುವೆ ಡಿಕ್ಕಿ ಸಂಭವಿಸಿದೆ. ಈ ಭೀಕರ ಸರಣಿ ಅಪಘಾತದಲ್ಲಿ ಐವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇಬ್ಬರು ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರಾಗಿ ಅರಣ್ಯ ಸಚಿವ ಈಶ್ವರ ಬಿ ಖಂಡ್ರೆ ಆಯ್ಕೆ
ಬೆಂಗಳೂರು: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರಾಗಿ ಅರಣ್ಯ ಸಚಿವ ಈಶ್ವರ ಬಿ ಖಂಡ್ರೆ ಆಯ್ಕೆಯಾಗಿದ್ದಾರೆ. ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ವೀರಶೈವ ಲಿಂಗಾಯತ ಮಹಾಸಭಾದ ಮಹಾ ಪ್ರಧಾನ ಕಾರ್ಯದರ್ಶಿಯಾಗಿರುವ ಈಶ್ವರ ಬಿ ಖಂಡ್ರೆ ಅವರನ್ನು ಆಯ್ಕೆ ಮಾಡಲಾಗಿದೆ. ಮಂಗಳವಾರ ಬೆಂಗಳೂರಿನಲ್ಲಿ ನಡೆದ ಸಭಾದ ಕಾರ್ಯಕಾರಿಣಿ ಸಭೆಯಲ್ಲಿ ಈ ಬಗ್ಗೆ ನಿರ್ಣಯ ಕೈಗೊಳ್ಳಲಾಯಿತು ಎಂದು ಸಭಾದ ರಾಜ್ಯಾಧ್ಯಕ್ಷ ಶಂಕರ ಎಂ ಬಿದರಿ ಅವರು ತಿಳಿಸಿದ್ದಾರೆ.
