‘ಸರ್ಕಾರದ ಬೊಕ್ಕಸ ಖಾಲಿ ಎಂದು ಬಿಜೆಪಿ ಸುಳ್ಳು ಹಂಚುತ್ತಾ ತಿರುಗುತ್ತಿದೆ’: ಸಿದ್ದರಾಮಯ್ಯ ಕಿಡಿ

ಹುಬ್ಬಳ್ಳಿ: ಕೊಳೆಗೇರಿ ಜನರೂ ಮುಖ್ಯವಾಹಿನಿಗೆ ಬರಬೇಕು. ಇದಕ್ಕಾಗಿ ಇಷ್ಟು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ ಮಾಡುತ್ತಿದ್ದೇವೆ. ನಮ್ಮ ಗ್ಯಾರಂಟಿ ಯೋಜನೆಗಳು ಇರುವುದೇ ಬಡವರನ್ನು ಮುಖ್ಯವಾಹಿನಿಗೆ ತರಲು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಅರ್ಹ ಫಲಾನುಭವಿಗಳಿಗೆ ನೂತನ ಮನೆಯ ಹಕ್ಕುಪತ್ರ ವಿತರಣಾ ಸಮಾರಂಭದಲ್ಲಿ ಮಾತನಾಡಿದ ಸಿಎಂ, ‘ನಾನು ಮೊದಲ ಬಾರಿ ಮುಖ್ಯಮಂತ್ರಿ ಆಗಿದ್ದಾಗ ನಮ್ಮ ಕಾಂಗ್ರೆಸ್ ಸರ್ಕಾರ 14,58,000 ಮನೆಗಳನ್ನು ಕಟ್ಟಿ ವಸತಿ ಕ್ರಾಂತಿ ಮಾಡಿದ್ದೆವು. ಎರಡನೇ ಬಾರಿ ಮುಖ್ಯಮಂತ್ರಿ ಆದ ಬಳಿಕ 2024 ರಲ್ಲಿ 36,789 ಮನೆಗಳನ್ನು ಮೊದಲನೇ ಹಂತದಲ್ಲಿ ವಿತರಿಸಿದ್ದ ನಮ್ಮ ಸರ್ಕಾರವು, ಈಗ ಎರಡನೇ ಹಂತದಲ್ಲಿ 45 ಸಾವಿರ ಮನೆಗಳನ್ನು ಹಂಚುತ್ತಿದೆ’ ಎಂದರು. ನಾವು ಹೇಳಿದ್ದನ್ನೆಲ್ಲಾ ಮಾಡಿ ನುಡಿದಂತೆ ನಡೆದಿದ್ದೇವೆ. ಅವರು ಹೇಳಿದ್ದನ್ನು ಮಾಡದೆ ನಮ್ಮ ಬಗ್ಗೆ ಸುಳ್ಳು ಹೇಳಿಕೊಂಡು ತಿರುಗುತ್ತಿದ್ದಾರೆ. ವಿದೇಶದಿಂದ ಕಪ್ಪು ಹಣ ತಂದು ಎಲ್ಲರ ಖಾತೆಗೆ 15 ಲಕ್ಷ…

18ನೇ ರೋಜ್‌ಗಾರ್ ಮೇಳ: 61,000ಕ್ಕೂ ಹೆಚ್ಚು ಮಂದಿಗೆ ನೇಮಕಾತಿ ಪತ್ರ ವಿತರಿಸಿದ ಮೋದಿ

ನವದೆಹಲಿ: ಯುವಜನರನ್ನು ಉದ್ಯೋಗ ಮತ್ತು ಸ್ವಯಂ ಉದ್ಯೋಗದ ಅವಕಾಶಗಳೊಂದಿಗೆ ಸಂಪರ್ಕಿಸುವುದು ಕೇಂದ್ರ ಸರ್ಕಾರದ ಪ್ರಮುಖ ಆದ್ಯತೆಯಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಶನಿವಾರ 18ನೇ ರೋಜ್‌ಗಾರ್ ಮೇಳದಲ್ಲಿ ವಿವಿಧ ಕೇಂದ್ರ ಸರ್ಕಾರಿ ಇಲಾಖೆಗಳು ಮತ್ತು ಸಂಸ್ಥೆಗಳಿಗೆ ಆಯ್ಕೆಯಾದ 61,000ಕ್ಕೂ ಹೆಚ್ಚು ಯುವಕರಿಗೆ ಅವರು ನೇಮಕಾತಿ ಪತ್ರಗಳನ್ನು ವಿತರಿಸಿದರು. ದೇಶದಾದ್ಯಂತ 45 ಸ್ಥಳಗಳಲ್ಲಿ ನಡೆದ ಕಾರ್ಯಕ್ರಮವನ್ನು ವರ್ಚುವಲ್ ಮೂಲಕ ಉದ್ದೇಶಿಸಿ ಮಾತನಾಡಿದ ಪ್ರಧಾನಿ, “2026ರ ಆರಂಭವು ಹೊಸ ಸಂತೋಷಗಳ ಆರಂಭವನ್ನು ಸೂಚಿಸುತ್ತದೆ. ವಸಂತ ಪಂಚಮಿಯ ನಂತರ ನಿಮ್ಮ ಜೀವನದಲ್ಲೂ ಹೊಸ ವಸಂತ ಆರಂಭವಾಗುತ್ತಿದೆ” ಎಂದು ಹೇಳಿದರು. ನೇಮಕಾತಿ ಪತ್ರಗಳನ್ನು ರಾಷ್ಟ್ರ ನಿರ್ಮಾಣದ ಆಹ್ವಾನ ಪತ್ರ ಹಾಗೂ ‘ವಿಕ್ಷಿತ್ ಭಾರತ’ದ ಸಂಕಲ್ಪ ಪತ್ರ ಎಂದು ಅವರು ವರ್ಣಿಸಿದರು. ಗೃಹ ವ್ಯವಹಾರಗಳು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಹಣಕಾಸು ಸೇವೆಗಳು, ಉನ್ನತ ಶಿಕ್ಷಣ ಸೇರಿದಂತೆ ವಿವಿಧ ಸಚಿವಾಲಯಗಳಿಗೆ ಹೊಸದಾಗಿ ಆಯ್ಕೆಯಾದ…

ವಿಶ್ವಾಸಘಾತುಕತೆ ಮಹಾರಾಷ್ಟ್ರಕ್ಕೆ ಹೊಸದಲ್ಲ, ಅದು ಇತಿಹಾಸದ ಶಾಪ; ಬಿಜೆಪಿ ಬಗ್ಗೆ ಉದ್ಧವ್ ಕೆಂಡ

ಮುಂಬೈ: ಶಿವಸೇನಾ ಸಂಸ್ಥಾಪಕ ಬಾಳಾಸಾಹೇಬ್ ಠಾಕ್ರೆ ಅವರ ಜನ್ಮ ಶತಮಾನೋತ್ಸವದ ಆರಂಭದ ಹಿನ್ನೆಲೆಯಲ್ಲಿ ಶಿವಸೇನಾ (ಯುಬಿಟಿ) ಮುಖ್ಯಸ್ಥ ಉದ್ಧವ್ ಠಾಕ್ರೆ ಶುಕ್ರವಾರ ಏಕನಾಥ್ ಶಿಂಧೆ ಬಣ ಹಾಗೂ ಬಿಜೆಪಿಯ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ವಿಶ್ವಾಸಘಾತುಕತೆ ಮಹಾರಾಷ್ಟ್ರಕ್ಕೆ ಹೊಸದಲ್ಲ, ಅದು ಇತಿಹಾಸದ ಶಾಪ ಎಂದು ಅವರು ಹೇಳಿದರು. “ಬಿರುಗಾಳಿಗಳು ನಮ್ಮನ್ನು ಹೆದರಿಸುವುದಿಲ್ಲ. ನಾವು ಅವುಗಳಲ್ಲೇ ಬೆಳೆದಿದ್ದೇವೆ,” ಎಂದು ಹೇಳಿದ ಠಾಕ್ರೆ, ಶತ್ರುಗಳು ನೇರವಾಗಿ ಗೆಲ್ಲಲು ಸಾಧ್ಯವಾಗದಾಗ ದೇಶದ್ರೋಹಿಗಳ ಸಹಾಯವನ್ನು ಪಡೆದುಕೊಳ್ಳುತ್ತಾರೆ ಎಂದು ಆರೋಪಿಸಿದರು. ಕೇಸರಿ ಧ್ವಜವನ್ನು ಒಳಗಿನಿಂದ ದ್ರೋಹ ಮಾಡದೇ ಇದ್ದಿದ್ದರೆ, ಮಹಾರಾಷ್ಟ್ರ ಇತಿಹಾಸವನ್ನೇ ಮರುಬರೆಯುತ್ತಿತ್ತು ಎಂದು ಅವರು ಅಭಿಪ್ರಾಯಪಟ್ಟರು. ಇತ್ತೀಚಿನ ಚುನಾವಣೆಗಳಲ್ಲಿ ಹಣದ ಶಕ್ತಿಯನ್ನು ಹಿಂದೆಂದೂ ಕಾಣದ ರೀತಿಯಲ್ಲಿ ಬಳಸಲಾಗಿದೆ ಎಂದು ಆರೋಪಿಸಿದ ಅವರು, “ಹಣದಿಂದ ಮತಗಳನ್ನು ಖರೀದಿಸಬಹುದು, ಆದರೆ ಹೃದಯಗಳನ್ನು ಖರೀದಿಸಲು ಸಾಧ್ಯವಿಲ್ಲ” ಎಂದು ಹೇಳಿದರು. ಕೇಂದ್ರದ ನಾಯಕತ್ವವನ್ನು ಉಲ್ಲೇಖಿಸಿ, “ಇಬ್ಬರು ವ್ಯಾಪಾರಿಗಳು ಪಕ್ಷದವರನ್ನೇ…