ಮಹಿಳಾ K.A.S ಅಧಿಕಾರಿಗೆ ಬೆದರಿಕೆ ಪ್ರಕರಣ: ಕಾಂಗ್ರೆಸ್ ನಾಯಕ ರಾಜೀವ್ ಗೌಡ ಬಂಧನ

ಬೆಂಗಳೂರು: K.A.S ಅಧಿಕಾರಿಗೆ ನಿಂದಿಸಿ, ಬೆದರಿಕೆ ಹಾಕಿದ ಆರೋಪದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಕಾಂಗ್ರೆಸ್ ನಾಯಕ ರಾಜೀವ್ ಗೌಡ ಅವರನ್ನು ಪೊಲೀಸರು ಕೊನೆಗೂ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಶಿಡ್ಲಘಟ್ಟದ ಪೌರಾಯುಕ್ತೆ ಅಮೃತಾ ಗೌಡ ಅವರಿಗೆ ಬೆದರಿಕೆ ಹಾಕಿದ ಆರೋಪದ ಹಿನ್ನೆಲೆಯಲ್ಲಿ ಈ ಪ್ರಕರಣ ದಾಖಲಾಗಿತ್ತು. ಪ್ರಕರಣ ದಾಖಲಾಗಿದ ಬಳಿಕ ಕಳೆದ 14 ದಿನಗಳಿಂದ ರಾಜೀವ್ ಗೌಡ ಪರಾರಿಯಾಗಿದ್ದು, ಪೊಲೀಸರು ವಿವಿಧ ರಾಜ್ಯಗಳಲ್ಲಿ ಶೋಧ ಕಾರ್ಯಾಚರಣೆ ನಡೆಸುತ್ತಿದ್ದರು. ಈ ನಡುವೆ ಅವರು ಕೇರಳ ಗಡಿಯ ಸಮೀಪದಲ್ಲಿ ಇರುವುದಾಗಿ ಖಚಿತ ಮಾಹಿತಿ ಲಭ್ಯವಾದ ಹಿನ್ನೆಲೆಯಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿ ಅವರನ್ನು ಬಂಧಿಸಿದ್ದಾರೆ. ಮಂಗಳೂರಿನ ಉದ್ಯಮಿಯೊಬ್ಬರು ರಾಜೀವ್ ಗೌಡ ಅವರಿಗೆ ಆಶ್ರಯ ನೀಡಿದ್ದರು ಎನ್ನಲಾಗಿದೆ. ಉದ್ಯಮಿಯ ಕಾರಿನಲ್ಲೇ ಅವರು ಸಂಚರಿಸುತ್ತಿದ್ದರು ಎನ್ನಲಾಗಿದ್ದು, ಈ ಅಂಶವನ್ನೂ ಪೊಲೀಸರು ತನಿಖೆಯ ಭಾಗವಾಗಿಸಿಕೊಂಡಿದ್ದಾರೆ. ಸೋಮವಾರ (ಜನವರಿ 26) ಮಂಗಳೂರಿನಿಂದ ಕೇರಳಕ್ಕೆ ತೆರಳುತ್ತಿದ್ದ ವೇಳೆ ರಾಜೀವ್ ಗೌಡ ಅವರನ್ನು ಬಂಧಿಸಲಾಗಿದೆ…