ಬೆಂಗಳೂರು ಕಂಠೀರವ ಕ್ರೀಡಾಂಗಣದಲ್ಲಿ ಬೃಹತ್ ಉದ್ಯೋಗ ಮೇಳ; ಶರಣಪ್ರಕಾಶ್

ಬೆಂಗಳೂರು: ವಿಕಲಚೇತನರನ್ನು ಸಮಾಜದ ಮುಖ್ಯವಾಹಿನಿಗೆ ತಂದು ಸಬಲೀಕರಣಗೊಳಿಸುವ ಉದ್ದೇಶದಿಂದ, ಕರ್ನಾಟಕದಲ್ಲಿ ಇದೇ ಮೊದಲ ಬಾರಿಗೆ ವಿಕಲಚೇತನರಿಗಾಗಿಯೇ ವಿಶೇಷ ಉದ್ಯೋಗ ಮೇಳವನ್ನು ಮುಂದಿನ ಮೂರು ತಿಂಗಳೊಳಗೆ ನಗರದ ಕಂಠೀರವ ಕ್ರೀಡಾಂಗಣದಲ್ಲಿ ಆಯೋಜಿಸಲಾಗುವುದು ಎಂದು ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಶರಣಪ್ರಕಾಶ್ ಆರ್. ಪಾಟೀಲ್ ತಿಳಿಸಿದ್ದಾರೆ. ಗುರುವಾರ ವಿಧಾನಸಭೆಯ ಪ್ರಶ್ನೋತ್ತರ ವೇಳೆಯಲ್ಲಿ ಬಿಜೆಪಿ ಶಾಸಕ ಗುರುರಾಜ ಶೆಟ್ಟಿ ಗಂಟಿಹೊಳೆ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಇಲಾಖೆಯ ಸಹಭಾಗಿತ್ವದಲ್ಲಿ ವಿಕಲಚೇತನರಿಗಾಗಿ ವಿಶೇಷವಾಗಿ ಉದ್ಯೋಗ ಮೇಳ ಆಯೋಜಿಸಲಾಗುತ್ತಿದ್ದು, ಇದು ರಾಜ್ಯ ಸರ್ಕಾರದ ವಿನೂತನ ಮತ್ತು ಮಹತ್ವದ ಕಾರ್ಯಕ್ರಮವಾಗಿದೆ ಎಂದು ಹೇಳಿದರು. ವಿಕಲಚೇತನರನ್ನು ಆರ್ಥಿಕವಾಗಿ ಸ್ವಾವಲಂಬಿಗಳನ್ನಾಗಿ ಮಾಡುವುದು ಹಾಗೂ ಅವರಿಗೆ ಉದ್ಯೋಗಾವಕಾಶ ಕಲ್ಪಿಸುವುದೇ ಈ ಯೋಜನೆಯ ಪ್ರಮುಖ ಉದ್ದೇಶವಾಗಿದೆ. ಪ್ರಸಕ್ತ ಸಾಲಿನಲ್ಲಿ ಕೌಶಲ್ಯಾಭಿವೃದ್ಧಿ ನಿಗಮದ ಮೂಲಕ, ಮಾರುಕಟ್ಟೆ ಬೇಡಿಕೆಗೆ…