PRCI ಗವರ್ನಿಂಗ್ ಕೌನ್ಸಿಲ್ ಅಧ್ಯಕ್ಷರಾಗಿ ವಿನಯ ಕುಮಾರ್, ಉಪಾಧ್ಯಕ್ಷರಾಗಿ ಡಾ. ಟಿ.ಎಸ್.ಲತಾ ಪದಗ್ರಹಣ

ಪಬ್ಲಿಕ್ ರಿಲೇಷನ್ಸ್ ಕೌನ್ಸಿಲ್ ಆಫ್ ಇಂಡಿಯಾ (PRCI) ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ನೆರವೇರಿದೆ. ಬೆಂಗಳೂರು ಜೆ.ಪಿ.ನಗರ ಸಾಂಸ್ಕೃತಿಕ ಸಂಘದಲ್ಲಿ ಸಮಾರಂಭದಲ್ಲಿ ನೂತನ ಪದಾಧಿಕಾರಿಗಳಿಗೆ ಅಧಿಕಾರ ಹಸ್ತಾಂತರ ಮಾಡಲಾಯಿತು. ಸಮಾರಂಭದಲ್ಲಿ ಡಾ. ದೇವಾನಂದ ಗೋಪಾಲ್ (ಡಿಆರ್‌ಡಿಒ ಮಾಜಿ ವಿಜ್ಞಾನಿ) ಮುಖ್ಯ ಅತಿಥಿಯಾಗಿ, ಎಂ.ಬಿ. ಜಯರಾಮ್ (ಚೇರ್ಮನ್ ಎಮೆರಿಟಸ್ ಮತ್ತು ಮುಖ್ಯ ಮಾರ್ಗದರ್ಶಕರು) ಹಾಗೂ ಶ್ರೀಮತಿ ಗೀತಾ ಶಂಕರ್ (ರಾಷ್ಟ್ರೀಯ ಅಧ್ಯಕ್ಷರು) ಭಾಗವಹಿಸಿದ್ದರು. ಅಧ್ಯಕ್ಷರಾಗಿ ಡಾ. ಟಿ. ವಿನಯ ಕುಮಾರ್ ಅವರು ಆಡಳಿತ ಮಂಡಳಿಯ (ಗವರ್ನಿಂಗ್ ಕೌನ್ಸಿಲ್) ಹಾಗೂ ಮಂಡಳಿಯ ಉಪಾಧ್ಯಕ್ಷರಾಗಿ ಕೆಎಸ್‌ಆರ್‌ಟಿಸಿ ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿ ಡಾ. ಲತಾ ಟಿ.ಎಸ್. ಅವರು ಆಡಳಿತ ಪದಗ್ರಹಣ ಮಾಡಿದರು. ಚಿನ್ಮಯೀ ಪ್ರವೀಣ್ ಅವರು ಕಾರ್ಯದರ್ಶಿಯಾಗಿ ಪದಗ್ರಹಣ ಮಾಡಿದರು ಆಡಳಿತ ಮಂಡಳಿಯ ಹೆಚ್ಚುವರಿ ನಿರ್ದೇಶಕರಾಗಿ ಡಾ. ಬಿ.ಕೆ. ರವಿ (ಉಪಕುಲಪತಿ, ಉತ್ತರ ಬೆಂಗಳೂರು ವಿಶ್ವವಿದ್ಯಾಲಯ), ರವೀಂದ್ರನ್, ಸಿ.ಜೆ. ಸಿಂಗ್, ಆರ್.ಎನ್. ಮಹಾಪಾತ್ರ…

ಒಕ್ಕಲುತನದ ಹೆಸರೇ ಸ್ವಾಭಿಮಾನದ ಬದುಕಿಗೆ ದೊಡ್ಡ ಶಕ್ತಿ ; ಡಿಕೆಶಿ

ಬೆಂಗಳೂರು: ಒಕ್ಕಲುತನದ ಹೆಸರೇ ಸ್ವಾಭಿಮಾನದ ಬದುಕಿಗೆ ದೊಡ್ಡ ಶಕ್ತಿ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮ್ ಹೇಳಿದ್ದಾರೆ. ಬೆಂಗಳೂರಿನ ಅರಮನೆ ಮೈದಾನದಲ್ಲಿ ಹಮ್ಮಿಕೊಂಡಿದ್ದ “ಉದ್ಯಮಿ ಒಕ್ಕಲಿಗ ಎಕ್ಸ್‌ಪೋ- 2026” ಕಾರ್ಯಕ್ರಮದಲ್ಲಿ ಭಾಗವಹಿಸಿದ ಅವರು, ‘ಭೂಮಿ ಮಕ್ಕಳಾಗಿರುವ ನೀವು ಸಮಾಜಕ್ಕೆ ಒಳ್ಳೆಯ ಸೇವೆ ಮಾಡುತ್ತಿದ್ದೀರಿ. ಹೊಸ ಉದ್ಯಮಿಗಳಾಗಿ ನೀವು ತಯಾರಾಗುತ್ತಿದ್ದೀರಿ. ತುಂಬಾ ಜನರು ಉದ್ಯಮದಲ್ಲಿ ಯಶಸ್ವಿಯಾಗಿದ್ದಾರೆ. ರಾಜಕಾರಣ ಬಿಟ್ಟು ಬಹಳ ಜನ ಬದುಕಿನಲ್ಲಿ ಯಶಸ್ವಿಯಾಗಿದ್ದಾರೆ’ ಎಂದರು. ಎಲ್ಲಿ ಶ್ರಮವಿದೆಯೋ… ಅಲ್ಲಿ ಫಲವಿದೆ. ದೇವರು ವರನೂ ಕೊಡಲ್ಲ, ಶಾಪನೂ ಕೊಡಲ್ಲ, ಅವಕಾಶ ಮಾತ್ರ ಕೊಡುತ್ತಾನೆ. ದೇವರು ಕೊಟ್ಟ ಅವಕಾಶದಲ್ಲಿ ಸರಿಯಾಗಿ ಕೆಲಸ ಮಾಡಬೇಕು. ಉದ್ಯಮದಲ್ಲಿ ಎಲ್ಲರೂ ನಂಬಿಕೆ ಉಳಿಸಿಕೊಳ್ಳಬೇಕು. ನಂಬಿಕೆ ಉಳಿಸಿಕೊಂಡಾಗ ನಿಮಗೆ ಕ್ಲೈಂಟ್ಸ್‌ ಬರುತ್ತಾರೆ. ಶಾಲೆ ನಡೆಸ್ತಿದ್ದೀರೋ, ಕಟ್ಟಡ ಕಟ್ಟುತ್ತಿದ್ದೀರೋ, ಎಲೆಕ್ಟ್ರಿಕ್‌ ಕೆಲಸ ಮಾಡ್ತಿದ್ದೀರೋ, ಯಾವುದೇ ಉದ್ಯಮ ಮಾಡಿದರೂ ನಿಮ್ಮ ಮೇಲೆ ಕ್ಲೈಂಟ್ಸ್‌ಗೆ ನಂಬಿಕೆ ಇರಬೇಕು ಎಂದರು. ಉದ್ಯಮಿಗಳು ನೀವು ಸರ್ಕಾರಕ್ಕೂ…

ಹಿರಿಯೂರು ಬಳಿ ಕಾರು-ಲಾರಿ ಡಿಕ್ಕಿಯಾಗಿ ನಾಲ್ವರ ಸಾವು

ಚಿತ್ರದುರ್ಗ: ಹಿರಿಯೂರು ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ. ಬೀದರ್-ಶ್ರೀರಂಗಪಟ್ಟಣ ರಾಜ್ಯ ಹೆದ್ದಾರಿಯಲ್ಲಿ ಅಪಘಾತ ಸಂಭವಿಸಿದೆ. ಹಿರಿಯೂರು ತಾಲೂಕಿನ ಹಿಂಡಸಕಟ್ಟೆ ಗ್ರಾಮದಲ್ಲಿ ಕಾರಿಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ನಾಲ್ವರು ಸಾವನ್ನಪ್ಪಿದ್ದಾರೆ. ಮೃತರನ್ನು 23 ವರ್ಷದ ರಾಹುಲ್, ನಂಜುಂಡಿ ಹಾಗೂ 22 ವರ್ಷದ ವಿಶ್ವನಾಥ್, ಯಶ್ವಂತ್ ಎಂದು ಗುರುತಿಸಲಾಗಿದೆ. ಇವರೆಲ್ಲರೂ ಹಿರಿಯೂರು ಸಮೀಪದ ನಂಜಯ್ಯನಕೊಟ್ಟಿಗೆ ಗ್ರಾಮದವರು ಎನ್ನಲಾಗಿದೆ. ಅಪಘಾತದ ಸುದ್ದಿ ತಿಳಿದು ಸ್ಥಳಕ್ಕೆ ಧಾವಿಸಿದ ಹಿರಿಯೂರು ಗ್ರಾಮಾಂತರ ಠಾಣೆ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

‘ಗಾಂಧೀಜಿ ಬಗ್ಗೆ ಮಾತನಾಡುವ ನೈತಿಕ ಹಕ್ಕು ಕಾಂಗ್ರೆಸ್‌ಗೆ ಇಲ್ಲ’; ಹೆಚ್ಡಿಕೆ

ಬೆಂಗಳೂರು: VB G-RAM-G ಯೋಜನೆ ಕುರಿತು ಕಾಂಗ್ರೆಸ್ ಪಕ್ಷವು ಸುಳ್ಳು ಮಾಹಿತಿಯನ್ನು ಹರಡುತ್ತಿದೆ ಎಂದು ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವ ಎಚ್.ಡಿ. ಕುಮಾರಸ್ವಾಮಿ ಆರೋಪಿಸಿದರು. ಈ ಕುರಿತು ದಾಖಲೆಗಳೊಂದಿಗೆ ಬಹಿರಂಗ ಸಾರ್ವಜನಿಕ ಚರ್ಚೆಗೆ ಬರಲು ಕರ್ನಾಟಕದ ಕಾಂಗ್ರೆಸ್ ನಾಯಕರಿಗೆ ಅವರು ಶನಿವಾರ ಸವಾಲು ಹಾಕಿದ್ದಾರೆ. MGNREGA ರದ್ದುಪಡಿಸಿ ಕೇಂದ್ರ ಸರ್ಕಾರ VB G-RAM-G ಜಾರಿಗೆ ತಂದಿದೆ ಎಂಬ ಆರೋಪವನ್ನು ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮಾಡಿದ್ದ ಹಿನ್ನೆಲೆಯಲ್ಲಿ ಕುಮಾರಸ್ವಾಮಿ ಈ ಪ್ರತಿಕ್ರಿಯೆ ನೀಡಿದರು. ಈ ವಿಷಯದ ಬಗ್ಗೆ ಕೇಂದ್ರ ಸಚಿವರ ಆಹ್ವಾನಕ್ಕೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಅಗತ್ಯವಿದ್ದರೆ ಚರ್ಚೆಯ ಜೊತೆಗೆ ದೊಡ್ಡ ಆಂದೋಲನಕ್ಕೂ ಸಿದ್ಧ ಎಂದು ಹೇಳಿದ್ದರು. ಬೆಂಗಳೂರಿನಲ್ಲಿ ವಿರೋಧ ಪಕ್ಷದ ನಾಯಕ ಆರ್. ಅಶೋಕ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರೊಂದಿಗೆ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕುಮಾರಸ್ವಾಮಿ, ಪ್ರಧಾನಿ…

ಮಲೆಯಾಳಿ ಭಾಷಾ ಮಸೂದೆಗೆ ಕರ್ನಾಟಕದ ಬಲವಾದ ಆಕ್ಷೇಪ

ಬೆಂಗಳೂರು: ಕೇರಳ ವಿಧಾನಸಭೆಯಲ್ಲಿ ಮಂಡನೆಯಾಗಿರುವ ಮಲೆಯಾಳಿ ಭಾಷಾ ಮಸೂದೆಯಿಂದ ಗಡಿಭಾಗದ ಜಿಲ್ಲೆಗಳಲ್ಲಿ, ವಿಶೇಷವಾಗಿ ಕಾಸರಗೋಡಿನಲ್ಲಿ ನೆಲೆಸಿರುವ ಕನ್ನಡಿಗರ ಮೇಲಾಗುವ ದುಷ್ಪರಿಣಾಮಗಳ ಕುರಿತು ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರಿಗೆ ಸಿಎಂ ಸಿದ್ದರಾಮಯ್ಯ ಪತ್ರ ಬರೆದು, ಮಸೂದೆಯ ಪುನರ್ ಪರಿಶೀಲನೆಗೆ ಒತ್ತಾಯಿಸಿದ್ದಾರೆ. ಪರಸ್ಪರ ಗೌರವ, ಒಕ್ಕೂಟ ವ್ಯವಸ್ಥೆಯೊಳಗಿನ ಸಹಕಾರ ಮತ್ತು ಸಾಂವಿಧಾನಿಕ ಜವಾಬ್ದಾರಿಯ ಭಾವನೆಯಿಂದ ನಾನು ನಿಮಗೆ ಈ ಪತ್ರವನ್ನು ಬರೆಯುತ್ತಿದ್ದೇನೆ. ಈ ಮೌಲ್ಯಗಳು ಕರ್ನಾಟಕ ಮತ್ತು ಕೇರಳ ರಾಜ್ಯಗಳ ನಡುವಿನ ಸಂಬಂಧವನ್ನು ದೀರ್ಘಕಾಲದಿಂದ ಮಾರ್ಗದರ್ಶನ ಮಾಡುತ್ತಿದೆ. ಈ ಎರಡು ರಾಜ್ಯಗಳು ಕೇವಲ ಭೌಗೋಳಿಕವಾಗಿ ಮಾತ್ರವಲ್ಲ, ಆಳವಾದ ಸಾಂಸ್ಕೃತಿಕ, ಸಾಮಾಜಿಕ ಮತ್ತು ಮಾನವೀಯ ಬಂಧಗಳಿಂದ ಬೆಸೆದುಕೊಂಡಿವೆ ಎಂದು ಸಿದ್ದರಾಮಯ್ಯ ಗಮನಸೆಳೆದಿದ್ದಾರೆ. ಈ ಸಂದರ್ಭದಲ್ಲಿ, ಪ್ರಸ್ತಾಪಿತ ಮಲಯಾಳಂ ಭಾಷಾ ಮಸೂದೆಯ ಬಗ್ಗೆ ನನಗಿರುವ ಗಂಭೀರ ಕಳವಳವನ್ನು ತಮ್ಮೊಂದಿಗೆ ಹಂಚಿಕೊಳ್ಳಲು ಬಯಸುತ್ತೇನೆ. ಈ ಮಸೂದೆಯು ಕನ್ನಡ ಮಾಧ್ಯಮದ ಶಾಲೆಗಳಲ್ಲೂ, ವಿಶೇಷವಾಗಿ ಕಾಸರಗೋಡಿನಂತಹ…

ಹಾವೇರಿಯಲ್ಲಿ ಕ್ಯಾನ್ಸರ್, ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ: ಸಿಎಂ ಘೋಷಣೆ

ಬೆಂಗಳೂರು: ಉತ್ತರ ಕರ್ನಾಟಕದ ಹೆಬ್ಬಾಗಿಲು ಎಂದೇ ಗುರುತಿಸಲ್ಪಟ್ಟಿರುವ ಹಾವೇರಿ ಜಿಲ್ಲೆಯಲ್ಲಿ ಕ್ಯಾನ್ಸರ್ ಆಸ್ಪತ್ರೆ, ಟ್ರಾಮಾ ಸೆಂಟರ್ ಹಾಗೂ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಸ್ಥಾಪಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ. ರಾಜ್ಯದಲ್ಲಿ ಆರೋಗ್ಯ ಮೂಲಸೌಕರ್ಯವನ್ನು ಬಲಪಡಿಸುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗುತ್ತಿದ್ದು, ಪ್ರಸ್ತುತ ಕರ್ನಾಟಕದಲ್ಲಿ ಒಟ್ಟು 71 ವೈದ್ಯಕೀಯ ಕಾಲೇಜುಗಳಿದ್ದು, ಅವುಗಳಲ್ಲಿ 22 ಸರ್ಕಾರಿ ವೈದ್ಯಕೀಯ ಕಾಲೇಜುಗಳಾಗಿವೆ ಎಂದು ಅವರು ಮಾಹಿತಿ ನೀಡಿದರು. ವಿಜಯಪುರ ಜಿಲ್ಲೆ ಸೇರಿದಂತೆ ರಾಜ್ಯದ ಇತರೆ ಜಿಲ್ಲೆಗಳಲ್ಲಿಯೂ ಹಂತ ಹಂತವಾಗಿ ವೈದ್ಯಕೀಯ ಕಾಲೇಜುಗಳು, ಟ್ರಾಮಾ ಸೆಂಟರ್‌ಗಳು ಹಾಗೂ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳನ್ನು ಸ್ಥಾಪಿಸುವ ಯೋಜನೆ ಇದೆ ಎಂದು ಮುಖ್ಯಮಂತ್ರಿ ಸ್ಪಷ್ಟಪಡಿಸಿದರು. ಈ ಮೂಲಕ ರಾಜ್ಯದ ಜನತೆಗೆ ಉನ್ನತ ಮಟ್ಟದ ಆರೋಗ್ಯ ಸೇವೆಗಳನ್ನು ಸ್ಥಳೀಯವಾಗಿ ಒದಗಿಸುವುದು ಸರ್ಕಾರದ ಮುಖ್ಯ ಉದ್ದೇಶವಾಗಿದ್ದು, ವಿಶೇಷವಾಗಿ ಉತ್ತರ ಕರ್ನಾಟಕ ಭಾಗದ ಆರೋಗ್ಯ ಸೇವೆಗಳ ಕೊರತೆಯನ್ನು ನೀಗಿಸಲು ಕ್ರಮ ಕೈಗೊಳ್ಳಲಾಗುತ್ತಿದೆ…

ಅಯ್ಯಪ್ಪ ಭಕ್ತರ ವಾಹನ ಅಪಘಾತ; ನಾಲ್ವರು ಸಾವು

ತುಮಕೂರು: ನಿಂತಿದ್ದ ಲಾರಿಗೆ ಕ್ರೂಸರ್ ವಾಹನ ಡಿಕ್ಕಿ ಹೊಡೆದ ಪರಿಣಾಮ ಸಂಭವಿಸಿದ ಭೀಕರ ಅಪಘಾತದಲ್ಲಿ ನಾಲ್ವರು ಅಯ್ಯಪ್ಪ ಭಕ್ತರು ಸಾವನ್ನಪ್ಪಿರುವ ಘಟನೆ ತುಮಕೂರು ಬಳಿ ಸಂಭವಿಸಿದೆ. ಜಿಲ್ಲೆಯ ಕೋರಾ ಸಮೀಪದ ವಸಂತನರಸಾಪುರ ಕೈಗಾರಿಕಾ ಪ್ರದೇಶದ ಬಳಿ ಭೀಕರ ಅಪಘಾತ ಸಂಭವಿಸಿ ನಾಲ್ವರು ಅಯ್ಯಪ್ಪ ಭಕ್ತರು ಸ್ಥಳದಲ್ಲೇ ಸಾವನ್ನಪ್ಪಿದರೆ, ಏಳು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಮೃತರನ್ನು ಕೊಪ್ಪಳ ಜಿಲ್ಲೆ ಯಲಬುರ್ಗಾ ಮೂಲದ ನಿವಾಸಿಗಳು ಎಂದು ಗುರುತಿಸಲಾಗಿದೆ. ಸಾಕ್ಷಿ (7), ವೆಂಕಟೇಶಪ್ಪ (30), ಮಾರತಪ್ಪ (35) ಹಾಗೂ ಗವಿಸಿದ್ದಪ್ಪ (40) ಎಂದು ಗುರುತಿಸಲಾಗಿದೆ. ಶಬರಿಮಲೆ ಅಯ್ಯಪ್ಪ ದರ್ಶನ ಮುಗಿಸಿಕೊಂಡು ವಾಪಸ್ ಆಗುತ್ತಿದ್ದ ವೇಳೆ ಭಕ್ತರಿದ್ದ ಕ್ರೂಸರ್ ವಾಹನ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದಿರಬಹುದು ಎನ್ನಲಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು,ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

‘ಕುಮಾರಸ್ವಾಮಿಗಿಂತ ಹೆಚ್ಚು ಆಡಳಿತ ಅನುಭವ ಇದೆ’: ಡಿ.ಕೆ. ಶಿವಕುಮಾರ್

ಬೆಂಗಳೂರು: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರ ಕುರಿತು ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ. “ನನಗೆ ಕುಮಾರಸ್ವಾಮಿಗಿಂತ ರಾಜಕೀಯದಲ್ಲಿ ಹೆಚ್ಚು ಅನುಭವವಿದೆ. ನಾನು ಮುಖ್ಯಮಂತ್ರಿಯಾಗಿರದಿರಬಹುದು, ಆದರೆ ಅವರಿಗಿಂತ ಉತ್ತಮ ಆಡಳಿತ ಅನುಭವ ನನಗಿದೆ” ಎಂದು ಅವರು ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಶಿವಕುಮಾರ್, “ನಾನು ಬಹಳ ಕಾಲದಿಂದ ಸಚಿವನಾಗಿ ಕೆಲಸ ಮಾಡುತ್ತಿದ್ದೇನೆ. ಆಡಳಿತ ಎಂದರೇನು, ಹೇಗೆ ಕಾರ್ಯನಿರ್ವಹಿಸಬೇಕು, ಯಾರನ್ನು ಕರೆಯಬೇಕು, ಯಾರನ್ನು ಕರೆಯಬಾರದು ಎಂಬುದು ನನಗೆ ಚೆನ್ನಾಗಿ ಗೊತ್ತಿದೆ. ಕುಮಾರಸ್ವಾಮಿ ಅವರಿಂದ ನಾನು ಏನನ್ನೂ ಕಲಿಯಬೇಕೆಂದು ಬಯಸುವುದಿಲ್ಲ” ಎಂದು ಹೇಳಿದರು. ಪಕ್ಷದ ಜವಾಬ್ದಾರಿಗಳ ಕುರಿತು ಮಾತನಾಡಿದ ಅವರು, “ನಾನು ಕಾಂಗ್ರೆಸ್ಸಿಗನಾಗಿ ಪಕ್ಷಕ್ಕಾಗಿ ಕೆಲಸ ಮಾಡಬೇಕಿದೆ. ಈ ಹಿಂದೆ ಅಸ್ಸಾಂಗೆ ಹೋಗಿದ್ದೆ. ಎಐಸಿಸಿ ಪತ್ರಿಕಾ ಪ್ರಕಟಣೆಯಲ್ಲಿ ಮತ್ತೆ ಅಸ್ಸಾಂಗೆ ಹೋಗುವಂತೆ ಸೂಚಿಸಲಾಗಿದೆ. ಆದ್ದರಿಂದ ಪಕ್ಷದ ಸೂಚನೆಯಂತೆ ಅಲ್ಲಿಗೆ ತೆರಳುತ್ತೇನೆ” ಎಂದು ಸ್ಪಷ್ಟಪಡಿಸಿದರು. #WATCH | Bengaluru:…

ಭಾಷಾ ಅಲ್ಪಸಂಖ್ಯಾತರ ಮೂಲಭೂತ ಹಕ್ಕನ್ನು ದಮನ; ಸಿದ್ದರಾಮಯ್ಯ ಆರೋಪ

ಬೆಂಗಳೂರು: ಕೇರಳದ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಲಿಕೆಯನ್ನು ಕಡ್ಡಾಯಗೊಳಿಸುವ ಕೇರಳ ಸರ್ಕಾರದ ಪ್ರಸ್ತಾಪಿತ ಮಲೆಯಾಳಿ ಭಾಷಾ ಮಸೂದೆ-2025 ಸಂವಿಧಾನ ಖಾತರಿ ಮಾಡಿರುವ ಭಾಷಾ ಸ್ವಾತಂತ್ರ್ಯದ ಮೇಲಿನ ಪ್ರಹಾರವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಆಕ್ಷೇಪಿಸಿದ್ದಾರೆ. ಇಂತಹದ್ದೊಂದು ಕಾನೂನು ಜಾರಿಗೆ ಬಂದರೆ ಕೇರಳದ ಗಡಿಜಿಲ್ಲೆಗಳಲ್ಲಿ ಮುಖ್ಯವಾಗಿ ಕಾಸರಗೋಡಿನಲ್ಲಿ ವಾಸಿಸುತ್ತಿರುವ ಕನ್ನಡಿಗರು ಮಾತೃಭಾಷೆಯನ್ನು ಕಲಿಯುವ ಅವಕಾಶದಿಂದ ವಂಚಿತರಾಗಲಿದ್ದಾರೆ. ಭಾಷಾ ಅಲ್ಪಸಂಖ್ಯಾತರ ಮೂಲಭೂತ ಹಕ್ಕನ್ನು ದಮನ ಮಾಡುವ ಇಂತಹ ನಡೆಯನ್ನು ಕೇರಳದ ಕಮ್ಯುನಿಸ್ಟ್ ಸರ್ಕಾರದಿಂದ ನಾವು ನಿರೀಕ್ಷಿಸಿರಲಿಲ್ಲ ಎಂದು ಪ್ರತಿಕ್ರಿಯಿಸಿದ್ದಾರೆ. ಕಾಸರಗೋಡು ಇಂದು ಆಡಳಿತಾತ್ಮಕವಾಗಿ ಕೇರಳ ರಾಜ್ಯಕ್ಕೆ ಸೇರಿದ್ದರೂ ಅದು ಭಾವನಾತ್ಮಕವಾಗಿ ಕರ್ನಾಟಕ ರಾಜ್ಯಕ್ಕೆ ಸೇರಿದ್ದಾಗಿದೆ. ಅಲ್ಲಿನ ಜನ ಕನ್ನಡ ಭಾಷೆ, ಸಂಸ್ಕೃತಿ, ಸಾಹಿತ್ಯದ ಜೊತೆ ಮಿಳಿತವಾಗಿದ್ದಾರೆ. ಅವರು ಕರ್ನಾಟಕದ ಕನ್ನಡಿಗರಿಗಿಂತ ಕಡಿಮೆ ಕನ್ನಡಿಗರೇನಲ್ಲ. ಅವರ ಹಿತವನ್ನು ರಕ್ಷಿಸುವುದು ನಮ್ಮ ಸರ್ಕಾರದ ಕರ್ತವ್ಯವಾಗಿದೆ. ವೈವಿಧ್ಯತೆಯಲ್ಲಿ ಏಕತೆಯನ್ನು ಕಾಣುವ ಭಾರತದ…

‘ಭೂತ್ ಬಾಂಗ್ಲಾ’; ಹಾಸ್ಯ ಮತ್ತು ಭಯದ ಸಮತೋಲನದ ಮನರಂಜನೆ

ಮುಂಬೈ: ನಟ ಅಕ್ಷಯ್ ಕುಮಾರ್ ಅಭಿನಯದ ಬಹುನಿರೀಕ್ಷಿತ ಹಾರರ್–ಹಾಸ್ಯ ಚಿತ್ರ ‘ಭೂತ್ ಬಾಂಗ್ಲಾ’ ಮೇ 15, 2026ರಂದು ದೇಶಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ ಎಂದು ನಿರ್ಮಾಪಕರು ಪ್ರಕಟಿಸಿದ್ದಾರೆ. ಈ ಚಿತ್ರದ ವಿಶೇಷತೆ ಎಂದರೆ, 14 ವರ್ಷಗಳ ನಂತರ ನಿರ್ದೇಶಕ ಪ್ರಿಯದರ್ಶನ್ ಮತ್ತು ನಟ ಅಕ್ಷಯ್ ಕುಮಾರ್ ಮತ್ತೆ ಒಂದಾಗಿರುವುದು. ಹಾರರ್–ಹಾಸ್ಯ ಪ್ರಕಾರದಲ್ಲಿ ತಮ್ಮದೇ ಶೈಲಿಯಿಂದ ಗುರುತಿಸಿಕೊಂಡಿರುವ ಈ ಜೋಡಿ, ಮತ್ತೊಮ್ಮೆ ಹಾಸ್ಯ ಮತ್ತು ಭಯದ ಸಮತೋಲನದ ಮನರಂಜನೆ ನೀಡಲು ಸಜ್ಜಾಗಿದೆ. ಬುಧವಾರ ಸಾಮಾಜಿಕ ಜಾಲತಾಣಗಳಲ್ಲಿ ಚಿತ್ರದ ಪೋಸ್ಟರ್ ಬಿಡುಗಡೆ ಮಾಡಿದ ನಿರ್ಮಾಪಕರು, “ಬಂಗಲೆ ಸೆ ಏಕ್ ಖಬರ್ ಆಯಿ ಹೈ! 2026 ಮೇ 15ರಂದು ಚಿತ್ರಮಂದಿರಗಳ ಬಾಗಿಲು ತೆರೆಯಲಿದೆ” ಎಂದು ಬರೆದು ಬಿಡುಗಡೆ ದಿನಾಂಕ ಘೋಷಿಸಿದರು. ಚಿತ್ರದಲ್ಲಿ ಟಬು, ಪರೇಶ್ ರಾವಲ್, ರಾಜ್‌ಪಾಲ್ ಯಾದವ್, ಜಿಶು ಸೇನ್‌ಗುಪ್ತಾ, ಅಸ್ರಾನಿ ಹಾಗೂ ವಾಮಿಕಾ ಗಬ್ಬಿ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಚಿತ್ರದ…